Homeಕರ್ನಾಟಕಸಿಎಂ ಭೇಟಿಯಾದ ಸಿ.ಪಿ ಯೋಗೇಶ್ವರ್ : ಇಂದೇ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಸಿಎಂ ಭೇಟಿಯಾದ ಸಿ.ಪಿ ಯೋಗೇಶ್ವರ್ : ಇಂದೇ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

- Advertisement -
- Advertisement -

ವಿಧಾನಸಭೆಯ ಉಪಚುನಾವಣೆಯಲ್ಲಿ ಬಹಳ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿರುವ ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಹಂಚಿಕೆ ಜಟಾಪಟಿ ತಾರ್ಕಿಕ ಅಂತ್ಯ ಕಾಣುವ ಲಕ್ಷಣ ಕಂಡು ಬರುತ್ತಿದೆ.

ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿ.ಪಿ ಯೋಗೇಶ್ವರ್ ಇಂದು (ಅ.23) ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.

ಯೋಗೇಶ್ವರ್ ಇಂದು ಬೆಳಿಗ್ಗೆ 11 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಯೋಗೇಶ್ವರ್ ಇಂದು ಬೆಳಿಗ್ಗೆ ಮೊದಲು ಸದಾಶಿವನಗರದಲ್ಲಿರುವ ಡಿ.ಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಅಲ್ಲಿಂದ ಡಿಕೆಶಿ ತಮ್ಮ ಕಾರಿನಲ್ಲೇ ಯೋಗೇಶ್ವರ್‌ನ್ನು ಸಿಎಂ ನಿವಾಸ ಕಾವೇರಿಗೆ ಕರೆದುಕೊಂಡು ಹೋಗಿದ್ದಾರೆ. ಸಿಎಂ ಮನೆಯಲ್ಲಿ ಸಚಿವ ಝಮೀರ್ ಅಹ್ಮದ್, ಮಾಜಿ ಸಂಸದ ಡಿ.ಕೆ ಸುರೇಶ್, ಶಾಸಕ ರವಿಕುಮಾರ್ ಗಣಿಗ ಇದ್ದರು.

ನಿನ್ನೆ(ಅ.22) ಬೆಂಬಲಿಗರ ಸಭೆ ನಡೆಸಿದ್ದ ಯೋಗೇಶ್ವರ್, ಇನ್ನೆರಡು ದಿನ ಕಾದು ನೋಡುವುದಾಗಿ ಹೇಳಿದ್ದರು. ಬಿಜೆಪಿ ಟಿಕೆಟ್ ಕೊಟ್ಟರೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು. ಇಂದು ಏಕಾಏಕಿ ಕಾಂಗ್ರೆಸ್‌ ಸೇರ್ಪಡೆಗೆ ಮುಂದಾಗಿದ್ದಾರೆ.

ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾದರೆ ಕುಮಾರಸ್ವಾಮಿಗೆ ಅಭ್ಯರ್ಥಿ ಘೋಷಣೆ ಮಾಡಲು ಸುಲಭವಾಗಲಿದೆ. ಆದರೆ, ಮೈತ್ರಿ ನಾಯಕರು ಸೇರಿ ಜೆಡಿಎಸ್‌-ಬಿಜೆಪಿಯಲ್ಲಿ ಯಾವ ಪಕ್ಷದಿಂದ ಅಭ್ಯರ್ಥಿ ಕಣಕ್ಕಿಳಿಸಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ. ಕುಮಾರಸ್ವಾಮಿ ಜೆಡಿಎಸ್‌ನಿಂದಲೇ ಅಭ್ಯರ್ಥಿ ಹಾಕುವಂತೆ ಪಟ್ಟು ಹಿಡಿದು ಕುಳಿತಂತಿದೆ. ಯೋಗೇಶ್ವರ್ ಕಾಂಗ್ರೆಸ್ ಅಭ್ಯರ್ಥಿಯಾದರೆ ಸಿಎಂ, ಡಿಸಿಎಂ ಸೇರಿದಂತೆ ಘಟಾನುಘಟಿಗಳು ಪ್ರಚಾರ ಕಣಕ್ಕೆ ಧುಮುಕುವ ಸಾಧ್ಯತೆ ಇದೆ. ಇದು ಇನ್ನಷ್ಟು ಜಿದ್ದಾಜಿದ್ದಿನ ಸ್ಪರ್ಧೆಗೆ ಕಾರಣವಾಗಬಹುದು.

ಇದನ್ನೂ ಓದಿ : ಜಾತಿಗಣತಿ ವರದಿ ವಿರುದ್ಧ ವೀರಶೈವ-ಲಿಂಗಾಯತ ಮಹಾಸಭೆ ನಿರ್ಣಯ : ಸಚಿವರು, ಶಾಸಕರಿಂದ ಸಹಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...