Homeಕರ್ನಾಟಕಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟ ಸಿಪಿ ಯೋಗೇಶ್ವರ್; ಡಿಕೆಶಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟ ಸಿಪಿ ಯೋಗೇಶ್ವರ್; ಡಿಕೆಶಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ

- Advertisement -
- Advertisement -

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಇಂದು ರಾಜೀನಾಮೆ ನೀಡಿದ ಮಾಜಿ ಸಚಿವ ಸಿಪಿ ಯೋಗೇಶ್ವರ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷ ಸೇರಿದರು.

ಎಚ್‌ಡಿ ಕುಮಾರಸ್ವಾಮಿ ಅವರಿಂದ ತೆರವಾದ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ‘ಟಿಕೆಟ್’ ಮೇಲೆ ಕಣ್ಣಿಟ್ಟಿದ್ದ ಮಾಜಿ ಸಚಿವ ಸಿಪಿ ಯೋಗೇಶ್ವರ್, ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ಸುದ್ದಿ ಖಚಿತವಾಗುತ್ತಿದ್ದಂತೆಯೇ ಬಿಜೆಪಿ ನಾಯಕರ ವಿರುದ್ಧ ಮುನಿಸಿಕೊಂಡಿದ್ದರು. ತಮ್ಮ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಅವರು ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದರು.

ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಸಿಪಿ ಯೋಗೇಶ್ವರ್, “ನನ್ನ ರಾಜಕೀಯ ಜೀವನ ಪ್ರಾರಂಭಿಸಿದ್ದು ಡಿಕೆ ಶಿವಕುಮಾರ್ ನೇತೃತ್ವದಲ್ಲಿ, ಇಂದು ಮತ್ತೆ ಕಾಂಗ್ರೆಸ್ ಸೇರಿದ್ದೇನೆ. ನನ್ನ ಮುಂದಿನ ರಾಜಕೀಯ ಜೀವನ ಕಾಂಗ್ರೆಸ್‌ನಲ್ಲೆ. ಕಳೆದ ಹಲವಾರು ದಿನಗಳಿಂದ ನಡೆದ ರಾಜಕೀಯ ಬೆಳವಣಿಗೆ ಗಮನಿಸಿದರೆ, ನಾವು ಕಟ್ಟಿದ ಮನೆಯಲ್ಲಿ ನಾವೇ ವಾಸಿಸಲು ಸಾಧ್ಯವಿಲ್ಲ ಎನ್ನುವ ಪರಿಸ್ಥಿತಿ ಇದೆ” ಎಂದು ಬಿಜೆಪಿ ನಾಯಕರ ವಿರುದ್ಧದ ತಮ್ಮ ಅಸಮಾಧಾನ ಹೊರಹಾಕಿದರು.

“ಬಿಜೆಪಿ ಜೊತೆಗೆ ಜೆಡಿಎಸ್ ಸೇರಿದ ಬಳಿಕ ಅಲ್ಲಿ ನನ್ನ ರಾಜಕೀಯ ಬೆಳವಣಿಗೆಗೆ ಪೂರಕ ವಾತಾವರಣ ಇಲ್ಲ ಎಂದು ಅರಿವಾಯಿತು. ಸ್ವಯಂ ಪ್ರೇರಣೆಯಿಂದ, ಯಾವುದೇ ಆಕಾಂಕ್ಷೆ ಹಾಗೂ ಒತ್ತಡ ಇಲ್ಲದೆ ಕಾಂಗ್ರೆಸ್ ಸೇರಿದ್ದೇನೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಬಳಿ ಮಾತನಾಡಿ ಆಶೀರ್ವಾದ ಪಡೆದಿದ್ದೇನೆ” ಎಂದರು.

“ಕಾಂಗ್ರೆಸ್ ಸರ್ಕಾರದ ಕ್ರಿಯಾಶೀಲ ಅಭಿವೃದ್ಧಿ ಯೋಜನೆಗಳು ಸಾಕಷ್ಟು ಜಾರಿಯಲ್ಲಿವೆ. ಜನಸಾಮಾನ್ಯರ ಪರವಾಗಿರುವ ಕೆಲಸದಲ್ಲಿ ನಾನೂ ಕೂಡ ಕೈಜೋಡಿಸಬೇಕು ಎಂಬ ಕಾರಣಕ್ಕೆ ಕಾಂಗ್ರೆಸ್ ಸೇರಿದ್ದೇನೆ. ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿಯಲ್ಲಿ ನಾನೂ ಪಾಲುದಾರನಾಗಬೇಕು ಎಂದು ನಿರ್ಧರಿಸಿದ್ದೇನೆ” ಎಂದು ಹೇಳಿದರು.

ನಿಮಗೆ ಪಕ್ಷ ನಿಷ್ಠೆ ಇಲ್ಲ ಎಂದು ಆರ್‌ ಅಶೋಕ್ ಹೇಳಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ನಾನು ಎಲ್ಲಿರುತ್ತೇನೋ ಅಷ್ಟು ದಿನ ನಿಷ್ಠೆಯಿಂದ ಇರುತ್ತೇನೆ” ಎಂದು ಹೇಳಿದರು. “ಡಿಕೆ ಶಿವಕುಮಾರ್, ಸುರೇಶ್ ನಾವೆಲ್ಲರೂ ಒಟ್ಟಿಗೆ ರಾಜಕೀಯ ಆರಂಭ ಮಾಡಿದ್ದೇವೆ. ಒಮ್ಮೆ ಅವರ ಸೋಲಿಗೆ ನಾನೂ ಕಾರಣ ಆಗಿದ್ದೇನೆ, ಮುಂದೆ ಅವರ ಗೆಲುವಿಗೆ ಶ್ರಮಿಸುತ್ತೇನೆ” ಎಂದರು.

ಯೋಗೇಶ್ವರ್ ಅವರನ್ನು ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಂಡ ಬಳಿಕ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, “ಯೋಗೇಶ್ವರ್ ರಾಜಕಾರಣ ಶುರು ಮಾಡಿದ್ದೇ ಕಾಂಗ್ರೆಸ್‌ನಿಂದ; ಅವರು ಬಿಜೆಪಿ ಸೇರಿದಂತೆ ಹಲವು ಪಕ್ಷಗಳನ್ನು ನೋಡಿದ್ದಾರೆ. ಸಹಜವಾಗಿಯೇ ಅವರು ಕಳೆದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿದ್ದಾರೆ. ರಾಜಕೀಯದಲ್ಲಿ ಅನೇಕ ಭೀನ್ನಾಭಿಪ್ರಾಯ ಬರುತ್ತವೆ. ಅವರು ಇಂದು ಯಾವುದೇ ಷರತ್ತಿಲ್ಲದೆ ಪಕ್ಷಕ್ಕೆ ಸೇರಿದ್ದಾರೆ” ಎಂದರು.

“ನಮ್ಮ ಪಕ್ಷದ ನಾಯಕರ ಸಂಘಟನೆ ಬಳಿಕ ಜೆಡಿಎಸ್ ಮತ್ತು ಬಿಜೆಪಿಯಿಂದ ಹಲವು ನಾಯಕರು ಕಾಂಗ್ರೆಸ್ ಸೇರಿದ್ದಾರೆ. ಈಗ ಪಕ್ಷ ಸೇರಿರುವ ನಾಯಕರು ಯಾವುದೇ ರೀತಿಯ ಮುಜುಗರಕ್ಕೆ ಒಳಗಾಗುವುದಿಲ್ಲ; ನಮ್ಮ ನಾಯಕರು ನಿಮ್ಮನ್ನು ಗೌರವಿಸುತ್ತಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತಗೆದುಕೊಂಡು ಕೆಲಸ ಮಾಡುತ್ತೇವೆ. ನಮ್ಮ ಸರ್ಕಾರ ಸುಭದ್ರವಾಗಿದೆ; ಐದು ವರ್ಷದ ನಂತರವೂ ನಮ್ಮದೇ ಸರ್ಕಾರ ಇರುತ್ತದೆ. ಚನ್ನಪಟ್ಟಣಕ್ಕೆ ವಿಶೇಷ ಆದ್ಯತೆ ಕೊಡುತ್ತೇವೆ” ಎಂದು ಇಂದು ಕಾಂಗ್ರೆಸ್ ಸೇರಿದ ಚನ್ನಪಟ್ಟಣ ಮುಖಂಡರುಗಳಿಗೆ ಭರವಸೆ ನೀಡಿದರು.

“ಈಗಾಗಲೇ ಯೋಗೇಶ್ವರ್ ತಮ್ಮ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಕಾಂಗ್ರೆಸ್ ಸೇರಿದ್ದಾರೆ. ಅಭ್ಯರ್ಥಿ ಯಾರಾಗಬೇಕು ಎಂದು ಹೈಕಮಾಂಡ್ ನಿರ್ಧರಿಸುತ್ತದೆ. ನಾವು ಎರಡು ಹೆಸರುಗಳನ್ನು ಅವರಿಗೆ ಕಳುಹಿಸಿಕೊಡುತ್ತೇವೆ. ಒಮ್ಮತದ ಅಭ್ಯರ್ಥಿ ನಾಳೆ ಬೆಳಿಗ್ಗೆ ಚನ್ನಪಟ್ಟಣದಲ್ಲಿ ನಾಮಪತ್ರ ಸಲ್ಲಿಸುತ್ತಾರೆ” ಎಂದರು.

ಇದನ್ನೂ ಓದಿ; ಜಾತಿಗಣತಿ ವರದಿ ವಿರುದ್ಧ ವೀರಶೈವ-ಲಿಂಗಾಯತ ಮಹಾಸಭೆ ನಿರ್ಣಯ : ಸಚಿವರು, ಶಾಸಕರಿಂದ ಸಹಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...