Homeಮುಖಪುಟಒಂದು ರಾಷ್ಟ್ರ, ಒಂದು ಚುನಾವಣೆ ಕಲ್ಪನೆ 'ಪ್ರಜಾಪ್ರಭುತ್ವ ವಿರೋಧಿ': ಸಿಪಿಐ(ಎಂ)

ಒಂದು ರಾಷ್ಟ್ರ, ಒಂದು ಚುನಾವಣೆ ಕಲ್ಪನೆ ‘ಪ್ರಜಾಪ್ರಭುತ್ವ ವಿರೋಧಿ’: ಸಿಪಿಐ(ಎಂ)

- Advertisement -
- Advertisement -

ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಗೆ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ಪತ್ರ ಬರೆದಿದ್ದು, ಏಕಕಾಲಕ್ಕೆ ಚುನಾವಣೆ ನಡೆಸುವ ಕುರಿತ ಪ್ರಸ್ತಾವನೆಯು ‘ಪ್ರಜಾಪ್ರಭುತ್ವ ವಿರೋಧಿ’ ಮತ್ತು ಸಂವಿಧಾನದ ಪ್ರಕಾರ ಒಕ್ಕೂಟ ವ್ಯವಸ್ಥೆಯ ಮೂಲಭೂತ ತತ್ವಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದ್ದಾರೆ.

ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತ ಉನ್ನತ ಮಟ್ಟದ ಸಮಿತಿಗೆ ಅವರು ಬರೆದ ಪತ್ರದಲ್ಲಿ, ಸಮಿತಿಗೆ ಸಿಪಿಐ(ಎಂ) ವಿರೋಧವನ್ನು ವ್ಯಕ್ತಪಡಿಸಿದ್ದು, ಸಮಿತಿಯ ಕಾರ್ಯಸೂಚಿ ಮತ್ತು ಉದ್ದೇಶವು ಪೂರ್ವ ನಿರ್ಧಾರಿತವಾಗಿದೆ. ಸಿಪಿಐ(ಎಂ) ಒಂದು ರಾಷ್ಟ್ರ, ಒಂದು ಚುನಾವಣೆ ಕಲ್ಪನೆ ಬಗ್ಗೆ ಪ್ರಸ್ತಾವನೆ ಸಲ್ಲಿಸಿದಾಗಿನಿಂದಲೂ ತನ್ನ ವಿರೋಧ ವ್ಯಕ್ತಪಡಿಸಿದೆ. ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆಯನ್ನು ಹೇರಲು ಪ್ರಯತ್ನಿಸುತ್ತಿರುವುದಕ್ಕೆ ಪಕ್ಷದ ಬಲವಾದ ಆಕ್ಷೇಪಣೆಯನ್ನು ಉಲ್ಲೇಖಿಸಿದ ಅವರು, ಪ್ರಸ್ತಾವನೆಯು ಸಂವಿಧಾನದ ತತ್ವಗಳು ಮತ್ತು ಆತ್ಮಕ್ಕೆ ವಿರುದ್ಧವಾಗಿದೆ ಎಂದು ಯೆಚೂರಿ ಹೇಳಿದ್ದಾರೆ.

ಸಂವಿಧಾನದ ಪೀಠಿಕೆಯನ್ನು ಉಲ್ಲೇಖಿಸಿದ ಅವರು, ಚುನಾಯಿತ ಪ್ರತಿನಿಧಿಗಳು ಜನರಿಗೆ ಮತ್ತು ಕಾರ್ಯಾಂಗಕ್ಕೆ ಹೊಣೆಗಾರರಾಗಿದ್ದಾರೆ ಅಥವಾ ಚುನಾವಣೆಯ ಪರಿಣಾಮವಾಗಿ ಅಧಿಕಾರ ವಹಿಸಿಕೊಳ್ಳುವ ಸರ್ಕಾರವು ಶಾಸಕಾಂಗಕ್ಕೆ ಜವಾಬ್ದಾರರಾಗಿರುತ್ತಾರೆ. ನಮ್ಮ ಸಂವಿಧಾನದ ಈ ಅಂಶಗಳನ್ನು ತಿರುಚಲಾಗುವುದಿಲ್ಲ, ದುರ್ಬಲಗೊಳಿಸುವುದನ್ನು ಬಿಟ್ಟುಬಿಡುವುದಿಲ್ಲ ಎಂದು ನಾವು ನಂಬುತ್ತೇವೆ. ಅಂತಹ ಪ್ರಸ್ತಾಪವು ಅಂತರ್ಗತವಾಗಿ ಪ್ರಜಾಪ್ರಭುತ್ವ ವಿರೋಧಿಯಾಗಿದೆ ಮತ್ತು ನಮ್ಮ ಒಕ್ಕೂಟ ವ್ಯವಸ್ಥೆಯ ಮೂಲಭೂತ ತತ್ವಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದ ಅವರು, 2018ರಲ್ಲಿ ಕಾನೂನು ಆಯೋಗಕ್ಕೆ ಸಲ್ಲಿಸಿದ ಟಿಪ್ಪಣಿಯನ್ನು ಉಲ್ಲೇಖಿಸಿದ್ದಾರೆ.

ಸಮಿತಿಯ ಅಕ್ಟೋಬರ್ 18, 2023ರ ಪತ್ರವು ಏಕಕಾಲದಲ್ಲಿ ಚುನಾವಣೆಗಳನ್ನು ಆಯೋಜಿಸಲು ಸೂಕ್ತವಾದ ಕಾನೂನು ತಿದ್ದುಪಡಿ ಮತ್ತು ಆಡಳಿತಾತ್ಮಕ ಚೌಕಟ್ಟನ್ನು ನಿರ್ಮಿಸಲು ಶಿಫಾರಸುಗಳನ್ನು ಮಾಡುವುದು ಸಮಿತಿಯ ಕಾರ್ಯವಾಗಿದೆ ಎಂದು ಹೇಳಿದೆ. ಇದರಿಂದ ಏಕಕಾಲಿಕ ಚುನಾವಣೆಯ ಬಗ್ಗೆ ನಿರ್ಧಾರವನ್ನು ಈಗಾಗಲೇ ತೆಗೆದುಕೊಳ್ಳಲಾಗಿದೆ ಮತ್ತು ಈಗ ಅದರ ಅನುಷ್ಠಾನದ ಪ್ರಶ್ನೆಯಾಗಿದೆ ಎಂಬುವುದು ತಿಳಿದು ಬರುತ್ತದೆ ಎಂದು ಹೇಳಿದ್ದಾರೆ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳನ್ನು ಒಟ್ಟಿಗೆ ನಡೆಸಲು ಸಂವಿಧಾನಕ್ಕೆ ತಿದ್ದುಪಡಿ ಮಾಡಬೇಕಾಗುತ್ತದೆ. ಸಂವಿಧಾನದ ಅಡಿಯಲ್ಲಿ, ಒಂದು ಸರ್ಕಾರವು ಅವಿಶ್ವಾಸ ನಿರ್ಣಯದ ವೇಳೆ ಶಾಸಕಾಂಗದ ವಿಶ್ವಾಸವನ್ನು ಕಳೆದುಕೊಂಡರೆ ರಾಜೀನಾಮೆ ನೀಡಬೇಕು. ಪರ್ಯಾಯ ಸರ್ಕಾರ ರಚಿಸಲಾಗದಿದ್ದರೆ, ಸದನವನ್ನು ವಿಸರ್ಜಿಸಿ ಮಧ್ಯಂತರ ಚುನಾವಣೆಗೆ ಹೋಗಬೇಕಿದೆ. ಲೋಕಸಭೆ ಅಥವಾ ಶಾಸಕಾಂಗದ ಜೀವಿತಾವಧಿಯನ್ನು ವಿಸ್ತರಿಸುವ ಯಾವುದೇ ಪ್ರಯತ್ನವು ಸಂವಿಧಾನ ವಿರೋಧಿ ಮಾತ್ರವಲ್ಲದೆ ಪ್ರಜಾಪ್ರಭುತ್ವ ವಿರೋಧಿಯೂ ಆಗಿರುತ್ತದೆ ಎಂದು ಸಿಪಿಐ(ಎಂ) ಹೇಳಿದೆ.

ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ಸಂವಿಧಾನದ ಅಡಿಯಲ್ಲಿ ಅಸ್ತಿತ್ವದಲ್ಲಿರುವ ಚೌಕಟ್ಟನ್ನು ಗಮನದಲ್ಲಿಟ್ಟುಕೊಂಡು ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವ ಕುರಿತು ಪರಿಶೀಲಿಸಿ ಶಿಫಾರಸುಗಳನ್ನು  ಮಾಡಲು ಮಾಜಿ ರಾಷ್ಟ್ರಪತಿ ಕೋವಿಂದ್‌ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಸಂವಿಧಾನ, ಜನಪ್ರತಿನಿಧಿ ಕಾಯಿದೆ-1950 ಮತ್ತು ಅದರ ಅಡಿಯಲ್ಲಿ ರಚಿಸಲಾದ ನಿಯಮಗಳು ಮತ್ತು ಇತರ ಕಾನೂನುಗಳಿಗೆ ನಿರ್ದಿಷ್ಟ ತಿದ್ದುಪಡಿಗಳನ್ನು ಪರಿಶೀಲಿಸಲು ಮತ್ತು ತಿದ್ದುಪಡಿ ಕುರಿತ ಶಿಫಾರಸ್ಸಿಗೆ ಸಮಿತಿ ರಚಿಸಲಾಗಿದೆ.

ಸೆ.1ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು  ಮಾಜಿ ರಾಷ್ಟ್ರಪತಿ ಕೋವಿಂದ್ ಅವರ ಜೊತೆ ನಡೆಸಿದ ಸಭೆಯ ಬಳಿಕ ಏಕಕಾಲದಲ್ಲಿ ಸಂಸತ್ತಿಗೆ ಮತ್ತು ವಿಧಾನಸಭೆ ಚುನಾವಣೆಗಳನ್ನು ನಡೆಸುವ ಬಗ್ಗೆ ಪರಿಶೀಲಿಸಲು ಕೋವಿಂದ್ ಅವರ ನೇತೃತ್ವದ ಸಮಿತಿ ರಚಿಸಿದ್ದರು.

ಸರ್ಕಾರದ ಸೆ.1ರ ಅಧಿಸೂಚನೆಯಲ್ಲಿ ಕೋವಿಂದ್ ಅವರನ್ನು ಹೊರತುಪಡಿಸಿ, ಸಮಿತಿಯಲ್ಲಿ ಅಮಿತ್‌ ಶಾ, ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಮತ್ತು ಮಾಜಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್, ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎನ್.ಕೆ. ಸಿಂಗ್, ಹಿರಿಯ ವಕೀಲ ಹರೀಶ್ ಸಾಳ್ವೆ, ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಸುಭಾಷ್ ಕಶ್ಯಪ್ ಮತ್ತು ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ ಇತರ ಸದಸ್ಯರಾಗಿದ್ದರು. ಅಧೀರ್ ರಂಜನ್ ಚೌದರಿ ಸಮಿತಿಯ ಭಾಗವಾಗಲು ನಿರಾಕರಿಸಿದ್ದರು.

ಇದನ್ನು ಓದಿ: ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧಿಗಳನ್ನು ಬಿಡುಗಡೆ ಮಾಡಿದ್ದ ಗುಜರಾತ್‌ ಸರಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...