Homeಕರ್ನಾಟಕಮಂಗಳೂರಿನಲ್ಲಿ ವಲಸೆ ಕಾರ್ಮಿಕನ ಗುಂಪು ಹತ್ಯೆ; ಎಸ್‌ಐಟಿ ತನಿಖೆಗೆ ಸಿಪಿಐಎಂ ಆಗ್ರಹ

ಮಂಗಳೂರಿನಲ್ಲಿ ವಲಸೆ ಕಾರ್ಮಿಕನ ಗುಂಪು ಹತ್ಯೆ; ಎಸ್‌ಐಟಿ ತನಿಖೆಗೆ ಸಿಪಿಐಎಂ ಆಗ್ರಹ

- Advertisement -
- Advertisement -

ಮಂಗಳೂರು ನಗರದ ಹೊರವಲಯದ ಕುಡುಪು ಎಂಬಲ್ಲಿ ನಿನ್ನೆ ಎಪ್ರಿಲ್ 27 ರಂದು ಕ್ರಿಕೆಟ್ ಆಡುತ್ತಿದ್ದ ಗುಂಪೊಂದು ಅಲ್ಲಿದ್ದ ವಲಸೆ ಕಾರ್ಮಿಕನೋರ್ವನನ್ನು ಥಳಿಸಿ ಹತ್ಯೆ ಗೈದಿರುವ ಆತಂಕಕಾರಿ ಕೃತ್ಯ ಬೆಳಕಿಗೆ ಬಂದಿದೆ. ಪ್ರಕರಣದ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸಬೇಕು ಎಂದು ಸಿಪಿಐಎಂ ಆಗ್ರಹಿಸಿದೆ.

“ಘಟನೆ ನಡೆದು ಒಂದು ದಿನ ಕಳೆದಿದ್ದರೂ ಪೊಲೀಸ್ ಇಲಾಖೆ ಈ ಕುರಿತು ಯಾವುದೇ ಅಧಿಕೃತ ಮಾಹಿತಿ ನೀಡುತ್ತಿಲ್ಲ. ಇದು ಹಲವು ಅನುಮಾನಗಳಿಗೆ ಕಾರಣವಾಗುತ್ತಿದೆ. ಗುಂಪು ಹಲ್ಲೆ, ಹತ್ಯೆಯಲ್ಲಿ ಭಾಗಿಯಾಗಿರುವ ರಾಜಕಿಯ ಹಿನ್ನಲೆಯ ಕೆಲವು ಪ್ರಭಾವಿಗಳನ್ನು ರಕ್ಷಿಸುವ, ಪ್ರಕರಣದ ತೀವ್ರತೆಯನ್ನು ತಗ್ಗಿಸುವ, ಪ್ರಕರಣವನ್ನು ದುರ್ಬಲಗೊಳಿಸುವ ಯತ್ನವೂ ಪ್ರಭಾವಿ ರಾಜಕಾರಣಿಗಳಿಂದ, ಸ್ಥಳೀಯ ಜನಪ್ರತಿನಿಧಿಗಳಿಂದ ನಡೆಯುತ್ತಿರುವ ಕುರಿತು ಅನುಮಾನಗಳು ಸಾರ್ವಜನಿಕ ವಲಯದಿಂದ ವ್ಯಕ್ತವಾಗುತ್ತಿದೆ. ರಾಜ್ಯ ಸರಕಾರ ಈ ಕುರಿತು ಗಮನ ಹರಿಸಬೇಕು, ಖುದ್ದು ಮುಖ್ಯಮಂತ್ರಿಗಳು ಈ ಗುಂಪು ಹಲ್ಲೆ, ಹತ್ಯೆ ಪ್ರಕರಣವನ್ನು ಗಂಭೀರಾವಗಿ ಪರಿಗಣಿಸಿ ಉತ್ತಮ ಹಿನ್ನಲೆಯ ಅಧಿಕಾರಿಗಳ ತಂಡವನ್ನು ತನಿಖೆಗೆ ನೇಮಿಸಬೇಕು” ಎಂದು ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಒತ್ತಾಯಿಸಿದೆ.

ಕುಡುಪು ಮೈದಾನದ ಸಮೀಪ ಬಂದಿದ್ದ ವಲಸೆ ಕಾರ್ಮಿಕನನ್ನು ಆತನ ಧರ್ಮದ ಗುರುತಿನ ಕಾರಣಕ್ಕೆ ಕಲ್ಲು, ದೊಣ್ಣೆ, ಬ್ಯಾಟುಗಳಿಂದ ಅಲ್ಲಿದ್ದ ಗುಂಪು ಹಲ್ಲೆ ನಡೆಸಿ ಕೊಂದು ಹಾಕಿದೆ ಎಂದು ಎಲ್ಲೆಡೆ ಪುಕಾರು ಹಬ್ಬಿದೆ. ನತದೃಷ್ಟ ವಲಸೆ ಕಾರ್ಮಿಕ ದೇಶ ವಿರೋಧಿ ಘೋಷಣೆ ಕೂಗಿದ್ದಾನೆ ಎಂಬ ವದಂತಿಯನ್ನೂ ದುಷ್ಕರ್ಮಿಗಳ ಗುಂಪು ಹರಿಯಬಿಟ್ಟಿದೆ. ಆ ಮೂಲಕ ತಮ್ಮ ಗಂಭೀರ ದುಷ್ಕೃತ್ಯವನ್ನು ದೇಶ ಪ್ರೇಮದ ಲೇಬಲ್ ಅಂಟಿಸಿ ಸಮರ್ಥಿಸಿಕೊಳ್ಳುವ ಹೀನ ಯತ್ನವೂ ನಡೆಯುತ್ತಿದೆ ಎಂದು ಸ್ಥಳೀಯ ಹೋರಾಟಗಾರರು ಆರೋಪಿಸಿದ್ದಾರೆ.

ಮಾಜಿ ಕಾರ್ಪೊರೇಟರ್ ಓರ್ವರ ಪತಿ ಈ ಗುಂಪನ್ನು ಹಲ್ಲೆ ನಡೆಸಲು ಪ್ರಚೋದಿಸಿದ್ದಾರೆ ಎಂಬ ಕುರಿತೂ ಸ್ಥಳೀಯರು ಮಾತಾಡಿಕೊಳ್ಳುತ್ತಿದ್ದಾರೆ. ಹತ್ಯೆಯ ತರುವಾಯ ಸ್ಥಳೀಯ ಜನಪ್ರತಿನಿಧಿಗಳೂ ಮಧ್ಯಪ್ರವೇಶಿಸಿ ಪ್ರಕರಣದ ತೀವ್ರತೆಯನ್ನು ತಗ್ಗಿಸುವ, ಕೆಲವರನ್ನು ಬಚಾವ್ ಮಾಡುವ ಯತ್ನ ನಡೆಸುತ್ತಿರುವ ಆರೋಪಗಳೂ ಕೇಳಿಬರುತ್ತಿದೆ. ಮಂಗಳೂರು ಪೊಲೀಸರು ಯಾವುದೇ ಅಧಿಕೃತ ಮಾಹಿತಿಯನ್ನು ಘಟನೆ ನಡೆದು ಒಂದು ದಿನ ಕಳೆದರೂ ನೀಡದಿರುವುದು ಪ್ರಕರಣದ ಕುರಿತು ಅನುಮಾನಗಳನ್ನು ಹೆಚ್ಚಿಸಿದೆ.

ಮಂಗಳೂರು ನಗರದಲ್ಲಿ ಈ ರೀತಿ ಗುಂಪು ಹಲ್ಲೆ, ಹತ್ಯೆ ನಡೆಯುವುದು ಕರಾವಳಿ ಜಿಲ್ಲೆಗಳು ಅಪಾಯದ ಗಡಿದಾಟುತ್ತಿರುವುದರ ಸಂಕೇತ, ಪೆಹಲ್ಗಾಮ್ ದುರಂತದ ಬೆನ್ನಲ್ಲೆ ಈ ಘಟನೆ ನಡೆದಿರುವುದು ಆಘಾತಕಾರಿ ವಿದ್ಯಾಮಾನ‌. ವಲಸೆ ಕಾರ್ಮಿಕರು, ಅವರ ಧರ್ಮದ ಹಾಗೂ ವಿವಿಧ ಗುರುತಿನ ಕಾರಣಕ್ಕೆ ‘ದೇಶಪ್ರೇಮ’ದ ಲೇಬಲ್ ಅಡಿ ದುಷ್ಕರ್ಮಿಗಳು ಬಹಿರಂಗವಾಗಿ ಹೊಡೆದು ಹಾಕುವುದು ಅನಾಗರಿಕತೆಯ ಪರಮಾವಧಿ. ಇದರ ಸಾಮಾಜಿಕ ಪರಿಣಾಮಗಳು ಸರಿಪಡಿಸಲಾಗಷ್ಟು ಗಂಭೀರವಾಗಿರುತ್ತದೆ ಎಂದು ಸಿಪಿಐಎಂ ಸಿಪಿಐಎಂ ಘಟನೆಯನ್ನು ಖಂಡಿಸಿದೆ.

‘ಮುಸ್ಲಿಂ’ ಎಂಬ ಕಾರಣಕ್ಕೆ ವಲಸೆ ಕಾರ್ಮಿಕನ ಗುಂಪು ಹತ್ಯೆ ಖಚಿತ

ಕುಡುಪುವಿನಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾದ ಘಟನೆ ತಿರುವು ಪಡೆದುಕೊಂಡಿದ್ದು, ಗುಂಪಿನಿಂದ ಹಲ್ಲೆಗೊಳಗಾಗಿ ಹತ್ಯೆಯಾಗಿರುವುದನ್ನು ಪೊಲೀಸರು ಖಚಿತಪಡಿಸಿಕೊಂಡಿರುವುದಾಗಿ ಈದಿನ.ಕಾಂ ವರದಿ ಮಾಡಿದೆ.

ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಗುಂಪು ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಸುಮಾರು 15 ಮಂದಿ ಆರೋಪಿಗಳನ್ನು ತಡರಾತ್ರಿ ಬಂಧಿಸಿರುವುದಾಗಿ ವರದಿಯಾಗಿದೆ. ಆದರೆ, ಈ ಬಗ್ಗೆ ಇನ್ನೂ ಕೂಡ ಮಂಗಳೂರು ನಗರ ಪೊಲೀಸರು ಅಧಿಕೃತ ಮಾಹಿತಿ ನೀಡಿಲ್ಲ. ವಶಕ್ಕೆ ತೆಗೆದುಕೊಂಡ ಆರೋಪಿಗಳಿಂದ ಘಟನೆಯ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವುದಾಗಿ ತಿಳಿದು ಬಂದಿದೆ. ಅಲ್ಲದೇ, ‘ಮುಸ್ಲಿಂ’ ಎಂಬ ಕಾರಣಕ್ಕಾಗಿಯೇ ವಲಸೆ ಕಾರ್ಮಿಕನ ಮೇಲೆ ಹಲ್ಲೆ ಮಾಡಿ, ಹತ್ಯೆಗೈದಿರುವುದಾಗಿ ಪೊಲೀಸರ ತನಿಖೆಯ ವೇಳೆ ಖಚಿತವಾಗಿದೆ ಎಂದು ತಿಳಿದು ಬಂದಿದೆ.

ಘಟನೆಯ ಬಗ್ಗೆ ಹೆಚ್ಚು ಮಾಹಿತಿ ನೀಡಲು ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಿರುವುದಾಗಿ ತಿಳಿದು ಬಂದಿದೆ.

ಧರ್ಮದ ಆಧಾರದ ಮೇಲೆ ಚಿಕಿತ್ಸೆ ನಿರಾಕರಿಸುವ ಪೋಸ್ಟ್ ಹಂಚಿಕೊಂಡ ವೈದ್ಯೆ; ವಿರೋಧದ ಬಳಿಕ ಡಿಲೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಯೂಟ್ಯೂಬ್‌ನಿಂದ ರಾಹುಲ್ ಗಾಂಧಿ ಭಾಷಣ ಪ್ರದರ್ಶನದ ಮನವಿ ತಿರಸ್ಕರಿಸಿದ ಪುಣೆ ನ್ಯಾಯಾಲಯ

ಲಂಡನ್‌ನಲ್ಲಿ ನಡೆದ ಭಾಷಣದಲ್ಲಿ ಬಲಪಂಥೀಯ ನಾಯಕ ವಿನಾಯಕ ಸಾವರ್ಕರ್ ಅವರನ್ನು ಮಾನನಷ್ಟ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ, ಯೂಟ್ಯೂಬ್...

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...