ಕಳೆದ ತಿಂಗಳು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ಗೆ ದಾಖಲಾಗಿದ್ದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರಿಗೆ ವೆಂಟಿಲೇಟರ್ ಸಹಾಯದಿಂದ ಚಿಕಿತ್ಸೆ (ಉಸಿರಾಟದ ಬೆಂಬಲ) ನೀಡಲಾಗುತ್ತಿದೆ ಎಂದು ಪಕ್ಷವು ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಯೆಚೂರಿ ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದ್ದು, ತೀವ್ರ ಉಸಿರಾಟದ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಿಪಿಐ(ಎಂ) ತನ್ನ ಹೇಳಿಕೆ ಬಿಡುಗಡೆ ಮಾಡಿದೆ.
Comrade Sitaram Yechury’s health condition pic.twitter.com/NDPl8HE8K0
— CPI (M) (@cpimspeak) September 10, 2024
“ಅವರು ಉಸಿರಾಟದ ಬೆಂಬಲದಲ್ಲಿದ್ದಾರೆ. ವೈದ್ಯರ ತಜ್ಞ ವೈದ್ಯ ತಂಡವು ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ, ಈ ಸಮಯದಲ್ಲಿ ಸ್ಥಿತಿ ಗಂಭೀರವಾಗಿದೆ” ಎಂದು ಪಕ್ಷವು ತನ್ನ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದೆ.
ತೀವ್ರ ಜ್ವರದಿಂದ ಬಳಲುತ್ತಿದ್ದ ಯೆಚೂರಿ ಅವರನ್ನು ಆಗಸ್ಟ್ 19 ರಂದು ಏಮ್ಸ್‌ನ ತುರ್ತು ವಿಭಾಗಕ್ಕೆ ದಾಖಲಿಸಲಾಗಿತ್ತು. ನ್ಯುಮೋನಿಯಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾದ ಸಮಸ್ಯೆ ಏನೂ ಇಲ್ಲ ಎನ್ನಲಾಗಿತ್ತು. ಇತ್ತೀಚೆಗೆ ಅವರು ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.
ಇದನ್ನೂ ಓದಿ; ಮಣಿಪುರದಲ್ಲಿ ತೀವ್ರಗೊಂಡ ಗಲಭೆ; ಡ್ರೋನ್, ರಾಕೆಟ್ ದಾಳಿಯ ನಡುವೆ ಮೂರು ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ


