Homeಮುಖಪುಟಸಿಪಿಐ(ಎಂ) ಸಂಸದರಿಗೆ 'ಫ್ಯಾಸಿಸಂ ವಿರೋಧಿ' ಸಭೆಗೆ ತೆರಳಲು ಅನುಮತಿ ನಿರಾಕರಿಸಿದ ಕೇಂದ್ರ ಸರ್ಕಾರ!

ಸಿಪಿಐ(ಎಂ) ಸಂಸದರಿಗೆ ‘ಫ್ಯಾಸಿಸಂ ವಿರೋಧಿ’ ಸಭೆಗೆ ತೆರಳಲು ಅನುಮತಿ ನಿರಾಕರಿಸಿದ ಕೇಂದ್ರ ಸರ್ಕಾರ!

- Advertisement -
- Advertisement -

ದಕ್ಷಿಣ ಅಮೆರಿಕ ಖಂಡದ ವೆನಿಜುವೆಲಾ ದೇಶದ ಸರ್ಕಾರ ಆಯೋಜಿಸಿದ್ದ ‘ಫ್ಯಾಸಿಸಂ ವಿರೋಧಿ ವಿಶ್ವ ಸಂಸದೀಯ ವೇದಿಕೆ’ಯಲ್ಲಿ ಪಾಲ್ಗೊಳ್ಳಲು ಸಿಪಿಐ(ಎಂ) ರಾಜ್ಯಸಭಾ ಸಂಸದ ವಿ. ಶಿವದಾಸನ್‌ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಅನುಮತಿ ನಿರಾಕರಿಸಿದೆ. ನವೆಂಬರ್ 4 ಮತ್ತು 5 ರಂದು ಕ್ಯಾರಕಾಸ್‌ನಲ್ಲಿ ನಡೆಯಲಿರುವ ‘ಫ್ಯಾಸಿಸಂ ವಿರೋಧಿ ವಿಶ್ವ ಸಂಸದೀಯ ವೇದಿಕೆ’ಯಲ್ಲಿ ವಿಶ್ವದಾದ್ಯಂತ 300 ಸಂಸದರು ಭಾಗವಹಿಸುವ ನಿರೀಕ್ಷೆಯಿದೆ.

ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ಅನುಮತಿಯ ನಂತರ ಗೃಹ ಸಚಿವಾಲಯ (ಎಂಎಚ್‌ಎ) ಒಪ್ಪಿಗೆ ನೀಡಿದ ಹೊರತಾಗಿಯೂ ವಿದೇಶಾಂಗ ಸಚಿವಾಲಯ ಅನುಮತಿ ನಿರಾಕರಿಸಲಾಗಿದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರುವ ಸಂಸದ ಶಿವದಾಸನ್, “ಎಫ್‌ಸಿಆರ್‌ಎ ಅನುಮತಿ ನೀಡಿದ್ದು ಇದರಿಂದ ಸರ್ಕಾರಕ್ಕೆ ಬೇರೆ ಯಾವುದೂ ಸಮಸ್ಯೆ ಇಲ್ಲ ಎಂದು ತೋರಿಸುತ್ತದೆ. ಆದರೂ, ಯಾವುದೇ ಕಾರಣ ಉಲ್ಲೇಖಿಸದೆ, ವಿದೇಶಾಂಗ ಸಚಿವಾಲಯ ತನ್ನ ಅನುಮತಿ ನಿರಾಕರಣೆ ಪತ್ರದಲ್ಲಿ ‘ರಾಜಕೀಯ ದೃಷ್ಟಿ ಕೋನದಿಂದ ಅನುಮತಿ ನಿರಾಕರಿಸಲಾಗಿದೆ’ ಎಂದು ಹೇಳಿದೆ” ಎಂದು ಹೇಳಿದ್ದಾರೆ.

ಕಳೆದ ತಿಂಗಳು ವಿದೇಶಾಂಗ ಸಚಿವಾಲಯಕ್ಕೆ ಕಳುಹಿಸಲಾದ ಆಮಂತ್ರಣ ಪತ್ರದಲ್ಲಿ ವೆನಿಜುವೆಲಾದ ಉಪಾಧ್ಯಕ್ಷ ಪೆಡ್ರೊ ಇನ್‌ಫಾಂಟೆ ಅವರು ಕಾರ್ಯಕ್ರಮಕ್ಕಾಗಿ ಸಂಸದ ವಿ. ಶಿವದಾಸನ್‌ಗೆ ಪ್ರಯಾಣಿಸಲು ಅನುಕೂಲ ಮಾಡಿಕೊಟ್ಟ ಭಾರತ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದರು. ಸಿಪಿಐ(ಎಂ)

ಸಚಿವಾಲಯದ ಈ ಕ್ರಮದ ವಿರುದ್ಧ ತಮ್ಮ ಪ್ರತಿಭಟನೆಯನ್ನು ದಾಖಲಿಸಿರುವ ಶಿವದಾಸನ್, ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಅವರು, ಫ್ಯಾಸಿಸಂ ವಿರುದ್ಧದ ಸಂಸದೀಯ ವೇದಿಕೆಯಲ್ಲಿ ಭಾಗವಹಿಸಲು ನಿರಾಕರಿಸಿರುವ ಬಗ್ಗೆ ಅಘಾತ ವ್ಯಕ್ತಪಡಿಸಿದ್ದು, ಇದು ತನ್ನ ಹಕ್ಕುಗಳ ಮೇಲಿನ ದಾಳಿ ಎಂದು ಪ್ರತಿಪಾದಿಸಿದ್ದಾರೆ.

ಭಾರತ ಮತ್ತು ವೆನಿಜುವೆಲಾ ದೇಶದ ನಡುವೆ ಉತ್ತಮ ಸಂಬಂಧವಿದೆ. ಭಾರತದಲ್ಲಿ ಇತ್ತೀಚೆಗೆ ರೂಪುಗೊಂಡ ಅಂತರರಾಷ್ಟ್ರೀಯ ಸೌರ ಒಕ್ಕೂಟ ಸೇರಿದಂತೆ ಅನೇಕ ಬಹು-ಪಕ್ಷೀಯ ವೇದಿಕೆಗಳಲ್ಲಿ ವೆನಿಜುವೆಲಾ ದೇಶ ಭಾಗವಹಿಸಿದೆ. ಪರಿಸ್ಥಿತಿ ಹೀಗಿರುವಾಗ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಕಾರ್ಯಕ್ರಮಕ್ಕೆ ಹಾಜರಾಗಲು ಅನುಮತಿ ನಿರಾಕರಿಸಿದ್ದು ಆಶ್ಚರ್ಯಕರವಾಗಿದೆ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ. ಅಷ್ಟೆ ಅಲ್ಲದೆ, ಭಾರತದಂತೆ ವೆನಿಜುವೆಲಾ ಕೂಡ ಅಲಿಪ್ತ ಚಳವಳಿಯ ಸದಸ್ಯ ರಾಷ್ಟ್ರವಾಗಿದೆ ಎಂದು ಅವರು ಹೇಳಿದ್ದಾರೆ.

“ಈ ಕಾರ್ಯಕ್ರಮವು ವಿವಿಧ ದೇಶಗಳ ಸಂಸದರ ಸಭೆಯಾಗಿದೆ. ಪ್ರಸ್ತುತ ಜಾಗತಿಕ ರಾಜಕೀಯ ಪರಿಸ್ಥಿತಿಯಲ್ಲಿನ ಪ್ರಮುಖ ಬೆದರಿಕೆಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ವೆನಿಜುವೆಲಾದ ಸಂಸತ್ತು ಆಹ್ವಾನಿಸಿದೆ” ಎಂದು ಸಂಸದ ಶಿವದಾಸನ್ ಹೇಳಿದ್ದಾರೆ.

“ಪ್ರಪಂಚದಾದ್ಯಂತ ಬಲಪಂಥೀಯ ಮತ್ತು ನವ-ಫ್ಯಾಸಿಸ್ಟ್ ಪಕ್ಷಗಳ ಬೆಳವಣಿಗೆಯನ್ನು ಅನೇಕ ಪ್ರಜಾಪ್ರಭುತ್ವಗಳು ಸಾಮಾಜಿಕ ರಚನೆಗೆ ಬೆದರಿಕೆ ಎಂದು ಗುರುತಿಸಿವೆ. ಪ್ರಜಾಪ್ರಭುತ್ವದ ಬಗ್ಗೆ ಕಾಳಜಿ ಹೊಂದಿರುವ ಅನೇಕ ಸರ್ಕಾರಗಳು ಮತ್ತು ಪಕ್ಷಗಳು ಈ ಬೆದರಿಕೆಯನ್ನು ಎದುರಿಸಲು ಒಗ್ಗೂಡುತ್ತಿವೆ. ನಾನು ಈ ಪ್ರಯತ್ನಗಳಿಗೆ ಸೇರಲು ಮತ್ತು ಅಂತಹ ಉಪಕ್ರಮವನ್ನು ಬಲಪಡಿಸಲು ಬಯಸುತ್ತೇನೆ” ಎಂದು ಅವರು ಹೇಳಿದ್ದಾರೆ.

“ಎಡ ರಾಜಕೀಯ ಚಿಂತನೆ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಪಕ್ಷವನ್ನು ಪ್ರತಿನಿಧಿಸುವ ನಾನು ಈ ವಿಷಯದ ಬಗ್ಗೆ ನನ್ನ ಅಭಿಪ್ರಾಯಗಳನ್ನು ಮುಂದಿಡಲು ಮತ್ತು ಬಲಪಂಥೀಯ, ನವ-ಫ್ಯಾಸಿಸ್ಟ್ ಬೆದರಿಕೆಯ ವಿರುದ್ಧ ಹೋರಾಟವನ್ನು ಬಲಪಡಿಸಲು ಇದು ನನಗೆ ಒಂದು ಅವಕಾಶವಾಗಿದೆ” ಎಂದು ಅವರು ಹೇಳಿದ್ದಾರೆ.

ಅಕ್ಟೋಬರ್ 25 ರಂದು, ವೆನಿಜುವೆಲಾದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಡೆಲ್ಸಿ ರೋಡ್ರಿಗಸ್ ಅವರು ಭಾರತಕ್ಕೆ ಭೇಟಿ ನೀಡಿದ್ದರು. ಅವರ ಈ ಭೇಟಿಯ ಸಮಯದಲ್ಲಿ, ರೋಡ್ರಿಗಸ್ ಅವರು ಹಣಕಾಸು ಸಚಿವರು, ವಿದೇಶಾಂಗ ಸಚಿವರು ಮತ್ತು ಇಂಧನ ಸಚಿವರು ಸೇರಿದಂತೆ ಪ್ರಮುಖ ಭಾರತೀಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದರು.

ಇದನ್ನೂ ಓದಿ: ವಕ್ಫ್ ಸ್ವತ್ತುಗಳನ್ನು ರಾಷ್ಟ್ರೀಕರಣಗೊಳಿಸಲು ಪ್ರಧಾನಿಗೆ ಪತ್ರ ಬರೆದ ಶಾಸಕ ಯತ್ನಾಳ್‌

ವಕ್ಫ್ ಸ್ವತ್ತುಗಳನ್ನು ರಾಷ್ಟ್ರೀಕರಣಗೊಳಿಸಲು ಪ್ರಧಾನಿಗೆ ಪತ್ರ ಬರೆದ ಶಾಸಕ ಯತ್ನಾಳ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...