Homeಮುಖಪುಟ2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

- Advertisement -
- Advertisement -

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ ಮುನ್ಸೂಚನೆಯಾಗಿದೆ ಎಂದು ಎಚ್ಚರಿಸಿದೆ. ಜನಗಣತಿಯನ್ನು ಸಾಂಪ್ರದಾಯಿಕ ಜನಸಂಖ್ಯಾ ದತ್ತಾಂಶ ಸಂಗ್ರಹಣೆಯ ಮಿತಿಯಿಂದ ಹೊರತಂದು, ವ್ಯಕ್ತಿಗತ ಗುರುತುಗಳ ಮೂಲಕ ಪೌರತ್ವ, ಮತದಾರರ ಪಟ್ಟಿ ಹಾಗೂ ಇತರ ಸರ್ಕಾರಿ ದತ್ತಾಂಶಗಳೊಂದಿಗೆ ಸಂಯೋಜಿಸಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ ಎಂದು ಪಕ್ಷ ಆರೋಪಿಸಿದೆ.

ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ ಅವರು ಈ ಕುರಿತು ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ ಮುಂಬರುವ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಜನ್ಮಸ್ಥಳ ಮತ್ತು ಧರ್ಮದ ವಿವರಗಳನ್ನು ಸೇರಿಸಲಾಗುತ್ತಿದ್ದು, ಇದರ ಮೂಲಕ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) ಪ್ರಕ್ರಿಯೆಯನ್ನು ಹಿಂಬಾಗಿಲ ಮೂಲಕ ಜಾರಿಗೆ ತರಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ ಎಂದು ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆರೋಪಿಸಿದ್ದಾರೆ. ಎನ್‌ಪಿಆರ್‌ನಲ್ಲಿ ಸಂಗ್ರಹಿಸಿದ ವಿವರಗಳನ್ನು ಆಧರಿಸಿ ಎನ್‌ಆರ್‌ಸಿ ಪಟ್ಟಿಯನ್ನು ಸಿದ್ಧಪಡಿಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯದ 2018-19ರ ವರದಿಯಲ್ಲೇ ಉಲ್ಲೇಖಿಸಲಾಗಿದೆ ಎಂಬುದನ್ನು ಅವರು ಬೆಟ್ಟುಮಾಡಿದ್ದಾರೆ.

ಜನಗಣತಿ ಪ್ರಶ್ನಾವಳಿಯಲ್ಲಿ ಆಧಾರ್, ಮತದಾರರ ಗುರುತಿನ ಚೀಟಿ, ಪಾಸ್‌ಪೋರ್ಟ್, ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಗಳಂತಹ ಸೂಕ್ಷ್ಮ ವೈಯಕ್ತಿಕ ವಿವರಗಳನ್ನು ಕೇಳಲಾಗುತ್ತಿದೆ. ಇವುಗಳಲ್ಲಿ ಕೆಲವು ಐಚ್ಛಿಕ ಎಂದು ಹೇಳಲಾಗಿದ್ದರೂ, ಸರ್ಕಾರಿ ಎಣಿಕೆದಾರರು ಪ್ರಶ್ನಿಸಿದಾಗ ಸಾರ್ವಜನಿಕರು ಈ ವಿವರಗಳನ್ನು ನೀಡಲು ಒತ್ತಡಕ್ಕೆ ಒಳಗಾಗುತ್ತಾರೆ ಎಂದು ಸಿಪಿಐ(ಎಂ) ಕಳವಳ ವ್ಯಕ್ತಪಡಿಸಿದೆ. ಈ ದತ್ತಾಂಶವನ್ನು ಸರ್ಕಾರಿ ಯೋಜನೆಗಳು ಹಾಗೂ ಮತದಾರರ ಪಟ್ಟಿಗಳೊಂದಿಗೆ ಲಿಂಕ್ ಮಾಡುವ ಸಾಧ್ಯತೆಯಿದೆ ಎಂದು ಪಕ್ಷ ಎಚ್ಚರಿಸಿದೆ.

ಇದರೊಂದಿಗೆ, ಲೋಕಸಭೆ ಮತ್ತು ವಿಧಾನಸಭೆ ಕ್ಷೇತ್ರಗಳ ಪುನರ್ವಿಂಗಡಣೆಗೆ ಜನಗಣತಿ ಆಧಾರವಾಗುವುದರಿಂದ, ಜನಸಂಖ್ಯಾ ನಿಯಂತ್ರಣವನ್ನು ಯಶಸ್ವಿಯಾಗಿ ಜಾರಿಗೆ ತಂದ ರಾಜ್ಯಗಳು ರಾಜಕೀಯ ಪ್ರಾತಿನಿಧ್ಯವನ್ನು ಕಳೆದುಕೊಳ್ಳುವ ಮೂಲಕ ಶಿಕ್ಷೆಗೆ ಒಳಗಾಗಬಾರದು ಎಂದು ಸಿಪಿಐ(ಎಂ) ಪ್ರತಿಪಾದಿಸಿದೆ. ಅಲ್ಲದೆ, ಪರಿಶಿಷ್ಟ ಜಾತಿ ಮತ್ತು ಪಂಗಡಗಳನ್ನು ಹೊರತುಪಡಿಸಿ ಇತರ ಜಾತಿಗಳ ಎಣಿಕೆಯಲ್ಲಿ ಸೂಕ್ತ ವರ್ಗೀಕರಣ ಇಲ್ಲದಿರುವುದು ಹಾಗೂ ವಿಕಲಚೇತನರ 21 ವರ್ಗಗಳ ಪೈಕಿ ಕೇವಲ 9 ವರ್ಗಗಳನ್ನು ಮಾತ್ರ ಪರಿಗಣಿಸಿರುವುದನ್ನೂ ಪಕ್ಷ ಪ್ರಶ್ನಿಸಿದೆ. ಈ ಹಿನ್ನೆಲೆಯಲ್ಲಿ ತಕ್ಷಣವೇ ಸರ್ವಪಕ್ಷ ಸಭೆ ಕರೆಯಬೇಕು, ವೈಯಕ್ತಿಕ ಹಾಗೂ ಪೋಷಕರ ಸೂಕ್ಷ್ಮ ವಿವರಗಳನ್ನು ಪ್ರಶ್ನಾವಳಿಯಿಂದ ತೆಗೆದುಹಾಕಬೇಕು ಮತ್ತು ಜನಗಣತಿ ದತ್ತಾಂಶವನ್ನು ಇತರ ಡೇಟಾಬೇಸ್‌ಗಳೊಂದಿಗೆ ಸಂಯೋಜಿಸದಂತೆ ಕಟ್ಟುನಿಟ್ಟಿನ ನಿಯಮ ರೂಪಿಸಬೇಕು ಎಂದು ಸಿಪಿಐ(ಎಂ) ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...

ಹನೂರ್ ‘ಶೂಟೌಟ್’: ದಾಖಲೆಗಳನ್ನು ಬಿಡುಗಡೆ ಮಾಡಿದ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ಸಿಬಿಐ ತನಿಖೆಗೆ ಆಗ್ರಹ 

ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ನಡೆದ ಮೂವರ ಸಾವು ಮತ್ತು ಗುಂಡಿನ ಚಕಮಕಿ ಪ್ರಕರಣ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಆಗಸ್ಟ್ 15ರಂದು ಹನೂರಿನ ಮರಿಯಮಂಗಲ ಬಿಟ್ ಅರಣ್ಯ...

ಬಿಜೆಪಿ MLC ರವಿಕುಮಾರ್‌ ವಿರುದ್ಧ ಜಾಮೀನು ರಹಿತ ವಾರಂಟ್‌

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ವಿರುದ್ಧ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ವಿಚಾರಣೆಗೆ ಹಾಜರಾಗದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಬೆಂಗಳೂರಿನ...

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....