Homeಮುಖಪುಟರಾಮ ಮಂದಿರ ಉದ್ಘಾಟನೆಯಲ್ಲಿ ಭಾಗವಹಿಸುವುದಿಲ್ಲ: ಬೃಂದಾ ಕಾರಟ್

ರಾಮ ಮಂದಿರ ಉದ್ಘಾಟನೆಯಲ್ಲಿ ಭಾಗವಹಿಸುವುದಿಲ್ಲ: ಬೃಂದಾ ಕಾರಟ್

- Advertisement -
- Advertisement -

ಅಯೋಧ್ಯೆಯಲ್ಲಿ ಮುಂದಿನ ವರ್ಷದ ಜನವರಿ 22ರಂದು ನಡೆಯಲಿರುವ ರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಮ್ಯೂನಿಷ್ಟ್ ಪಾರ್ಟಿ ಆಫ್ ಇಂಡಿಯಾ ಸಿಪಿಐ(ಎಂ) ಭಾಗವಹಿಸುವುದಿಲ್ಲ ಎಂದು ಪಕ್ಷದ ಹಿರಿಯ ನಾಯಕಿ ಬೃಂದಾ ಕಾರಟ್ ಹೇಳಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿರುವ ಅವರು, “ನಮ್ಮ ಪಕ್ಷವು ಧಾರ್ಮಿಕ ನಂಬಿಕೆಗಳನ್ನು ಗೌರವಿಸಲಿದೆ” ಎಂದಿದ್ದು, “ಧರ್ಮದೊಂದಿಗೆ ರಾಜಕೀಯ ಬೆರೆಸುವುದು ಸರಿಯಲ್ಲ” ಎಂದು ಬಿಜೆಪಿಗೆ ಕಿವಿಮಾತು ಹೇಳಿದ್ದಾರೆ. “ಬಿಜೆಪಿ ರಾಮ ಮಂದಿರ ಉದ್ಘಾಟನೆಯನ್ನು ಸಂಪೂರ್ಣವಾಗಿ ರಾಜಕೀಯಗೊಳಿಸುತ್ತಿದೆ” ಎಂದು ಅವರು ಆರೋಪಿಸಿದ್ದಾರೆ.

ರಾಮ ಮಂದಿರ ಉದ್ಘಾಟನೆ ಹೆಸರಲ್ಲಿ ಬಿಜೆಪಿ ಶೋ ಆಫ್ : ಕಪಿಲ್ ಸಿಬಲ್

ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಅವರು ರಾಮ ಮಂದಿರ ಉದ್ಘಾಟನೆ ಹೆಸರಿನಲ್ಲಿ ಬಿಜೆಪಿ ಶೋ ಆಫ್ ಮಾಡ್ತಿದೆ ಎಂದು ಹೇಳಿದ್ದಾರೆ. ಬಿಜೆಪಿಯವರು ರಾಮನ ಗುಣಲಕ್ಷಣಗಳ ಬಗ್ಗೆ ಮಾತನಾಡ್ತಾರೆ. ಆದರೆ, ಅವರು ಅದಕ್ಕೆ ತದ್ವಿರುದ್ದವಾಗಿ ನಡೆದುಕೊಳ್ತಾರೆ ಎಂದು ಕಪಿಲ್ ಸಿಬಲ್ ವಾಗ್ದಾಳಿ ನಡೆಸಿದ್ದಾರೆ.

ರಾಮ ನನ್ನ ಹೃದಯಲ್ಲಿದ್ದಾನೆ. ಆತ ನನಗೆ ಸದಾ ಮಾರ್ಗದರ್ಶನ ನೀಡುತ್ತಿರುತ್ತಾನೆ. ಅದನ್ನು ಹೇಳಿಕೊಂಡು ತಿರುಗಾಡುವ ಆಗತ್ಯವಿಲ್ಲ. ರಾಮನ ಹೆಸರಿನಲ್ಲಿ ಏನೇನು ನಡೆಯುತ್ತಿದೆಯೋ ಅದರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಸಿಬಲ್ ಹೇಳಿದ್ದಾರೆ.

ಜನವರಿ 22ರಂದು ರಾಮ ಮಂದಿರಲ್ಲಿ ರಾಮನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನಡೆಯಲಿದೆ. ಅದಕ್ಕೂ ಮುನ್ನ ಯೋಜಿತ ಕಾರ್ಯಕ್ರಮಗಳು ಪ್ರಾರಂಭಗೊಂಡಿವೆ. ಮಕ್ಕಳು ರಾಮ-ಸೀತೆಯ ವೇಷ ತೊಟ್ಟು ಅಯೋಧ್ಯೆಯ ಮನೆ ಮನೆಗೆ ತೆರಳಿ ಕಾರ್ಯಕ್ರಮಕ್ಕೆ ಆಹ್ವಾನಿಸಲು ಪ್ರಾರಂಭಿಸಿದ್ದಾರೆ.

ಎರಡು ದಿನಗಳ ಕಾಲ ನಡೆದ ಬಿಜೆಪಿಯ ಪದಾಧಿಕಾರಿಗಳ ಸಭೆಯಲ್ಲಿ, ರಾಮಮಂದಿರ ನಿರ್ಮಾಣಕ್ಕಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ವಿಶ್ವ ಹಿಂದೂ ಪರಿಷತ್ ಆಯೋಜಿಸುವ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಗೆ ಸೂಚಿಸಲಾಗಿದೆ.

ಇದನ್ನೂ ಓದಿ : ‘ಹಿಂದೂ’ ಎಂಬುವುದು ಒಂದು ವಂಚನೆಯಾಗಿದೆ: ಸ್ವಾಮಿ ಪ್ರಸಾದ್ ಮೌರ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...