Homeಮುಖಪುಟಸಿಪಿಎಂ ಕಾರ್ಯಕರ್ತನ ಹತ್ಯೆ: 9 ಮಂದಿ ಆರೆಸ್ಸೆಸ್ ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ

ಸಿಪಿಎಂ ಕಾರ್ಯಕರ್ತನ ಹತ್ಯೆ: 9 ಮಂದಿ ಆರೆಸ್ಸೆಸ್ ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ

- Advertisement -
- Advertisement -

ತಿರುವನಂತಪುರಂ: ಕೇರಳದ ಕಣ್ಣೂರು ಜಿಲ್ಲೆಯಲ್ಲಿ 2005ರಲ್ಲಿ ಅಂದರೆ 19 ವರ್ಷಗಳ ಹಿಂದೆ ನಡೆದ ಸಿಪಿಐ(ಎಂ) ಕಾರ್ಯಕರ್ತ ರಿಜಿತ್‌ ಶಂಕರನ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಕಾರ್ಯಕರ್ತರಿಗೆ ತಲಶ್ಶೇರಿ ನ್ಯಾಯಾಲಯ ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

ಕನ್ನಪುರಂ ಚುಂಡಾದ 25 ವರ್ಷದ ಸಿಪಿಐ(ಎಂ) ಸದಸ್ಯ ರಿಜಿತ್ ಅವರನ್ನು ಅಕ್ಟೋಬರ್ 3, 2005ರಂದು ಚುಂಡಾದ ದೇವಸ್ಥಾನದ ಬಳಿ ಹೊಂಚು ಹಾಕಿ ಹತ್ಯೆ ಮಾಡಲಾಗಿತ್ತು.

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ನಡುವಿನ ರಾಜಕೀಯ ಉದ್ವಿಗ್ನತೆಯ ಅವಧಿಯಲ್ಲಿ ಈ ದಾಳಿ ನಡೆದಿತ್ತು. ರಿಜಿತ್ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಆರ್‌ಎಸ್‌ಎಸ್ ಕಾರ್ಯಕರ್ತರ ಗುಂಪು ಶಸ್ತ್ರಾಸ್ತ್ರಗಳನ್ನು ಹೊಂದಿದ್ದು, ಬಾವಿಯ ಬಳಿ ಅವನು ಮತ್ತು ಅವನ ಸ್ನೇಹಿತರ ಮೇಲೆ ಹಲ್ಲೆ ನಡೆಸಿತು. ರಿಜಿತ್ ಗಾಯಗೊಂಡು ಸಾವನ್ನಪ್ಪಿದರೆ, ಅವನ ಮೂವರು ಸ್ನೇಹಿತರು ಹಲ್ಲೆಯಲ್ಲಿ ತೀವ್ರ ಗಾಯಗೊಂಡಿದ್ದರು.

ಜನವರಿ 4ರಂದು ತಲಶ್ಶೇರಿಯ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಆರೋಪಿಗಳು ತಪ್ಪಿತಸ್ಥರೆಂದು ತೀರ್ಪು ನೀಡಿತ್ತು. ಆರಂಭದಲ್ಲಿ ಆರೋಪಿಗಳೆಂದು ಹೆಸರಿಸಲಾದ 10 ಮಂದಿಯಲ್ಲಿ ಒಬ್ಬರು ಪ್ರಕರಣದ ವಿಚಾರಣೆಯ ಸಮಯದಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಸುಧಾಕರನ್ (57), ಜಯೇಶ್ (41), ರಂಜಿತ್ (44), ಅಜೀಂದ್ರನ್ (51), ಅನಿಲ್‌ಕುಮಾರ್ (52), ರಾಜೇಶ್ (46), ಶ್ರೀಕಾಂತ್ (47), ಅವರ ಸಹೋದರ ಶ್ರೀಜಿತ್ (43), ಮತ್ತು ಭಾಸ್ಕರನ್ ( 67) ಎಂಬವರು ಈ ಪ್ರಕರಣದ ಅಪರಾಧಿಗಳಾಗಿದ್ದಾರೆ.

ಸೆಕ್ಷನ್ 302 (ಕೊಲೆ), ಸೆಕ್ಷನ್ 307 (ಕೊಲೆ ಯತ್ನ), ಸೆಕ್ಷನ್ 143 (ಕಾನೂನುಬಾಹಿರ ಸಭೆ), ಸೆಕ್ಷನ್ 147 (ಗಲಭೆ), ಸೆಕ್ಷನ್ 341 (ತಪ್ಪಾದ ಸಂಯಮ) ಮತ್ತು ಸೆಕ್ಷನ್ 324 ಸೇರಿದಂತೆ ಭಾರತೀಯ ದಂಡ ಸಂಹಿತೆಯ ಹಲವಾರು ಸೆಕ್ಷನ್‌ಗಳ ಅಡಿಯಲ್ಲಿ ನ್ಯಾಯಾಲಯ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.

ಪತ್ರಕರ್ತ ಯತಿರಾಜ್ ವಿರುದ್ಧ ಎಫ್‌ಐಆರ್‌; ಮಾದರ ಚನ್ನಯ್ಯ ಸ್ವಾಮೀಜಿ ನಡೆಗೆ ಮಾದಿಗ ಸಮುದಾಯದಿಂದಲೇ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...