Homeಮುಖಪುಟಕೋಲ್ಕತ್ತಾ ಬಿಜೆಪಿ ರ್ಯಾಲಿಯಲ್ಲಿ ಘರ್ಷಣೆ: ಗೋ ಬ್ಯಾಕ್ ಘೋಷಣೆಗಳೊಂದಿಗೆ ಕಲ್ಲು ತೂರಾಟ

ಕೋಲ್ಕತ್ತಾ ಬಿಜೆಪಿ ರ್ಯಾಲಿಯಲ್ಲಿ ಘರ್ಷಣೆ: ಗೋ ಬ್ಯಾಕ್ ಘೋಷಣೆಗಳೊಂದಿಗೆ ಕಲ್ಲು ತೂರಾಟ

- Advertisement -
- Advertisement -

ಕೋಲ್ಕತ್ತಾದಲ್ಲಿ ಇಂದು ನಡೆದ ಬಿಜೆಪಿ ರ್ಯಾಲಿಯಲ್ಲಿ ಘರ್ಷಣೆ ಭುಗಿಲೆದ್ದಿದೆ. ಬಿಜೆಪಿ ಕಾರ್ಯಕರ್ತರ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು ಹಿಂಸಾಚಾರಕ್ಕೆ ಕಾರಣವಾಗಿದೆ. ಭಾರೀ ಪೊಲೀಸ್ ಭದ್ರತೆಯೂ ನಡುವೆಯು ಕೆಲವರು ಗೋ ಬ್ಯಾಕ್ ಘೋಷಣೆ ಕೇಳಿಬಂದಿದ್ದು ಎರಡೂ ಕಡೆಯಿಂದ ಕಲ್ಲು ತೂರಾಟ ನಡೆದಿದೆ.

ಎಎನ್‌ಐ ಪ್ರಕಟಿಸಿದ ವಿಡಿಯೋದಲ್ಲಿ ಕಾಣುವಂತೆ ಒಂದು ಕಡೆ ಬಿಜೆಪಿ ಕಾರ್ಯಕರ್ತರ ಮೆರವಣಿಗೆ ನಡೆಯುತ್ತಿರುವಾಗಿ ಇನ್ನೊಂದು ಕಡೆಯಿಂದ ತೃಣಮೂಲ ಕಾಂಗ್ರೆಸ್ ಬಾವುಟ ಹಿಡಿದಿರುವ ಯುವಕರು ಗೋ ಬ್ಯಾಕ್ ಬಿಜೆಪಿ ಘೋಷಣೆ ಕೂಗಿದ್ದಾರೆ. ಆಗ ಅವರ ಮೇಲೆ ಕಲ್ಲು ತೂರಾಟ ನಡೆದಿದೆ. ಕುಪಿತಗೊಂಡ ಅವರು ಆ ಕಡೆಯಿಂದ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ನಂತರ ಬಿಜೆಪಿ ಕಾರ್ಯಕರ್ತರು ಅವರನ್ನು ಅಟ್ಟಿಸಿಕೊಂಡು ಓಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಕೋಲ್ಕತ್ತಾದಲ್ಲಿ ಇಂದು ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ದೇಬಶ್ರೀ ಚೌಧುರಿ, ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಮತ್ತು ಇತ್ತೀಚೆಗೆ ಟಿಎಂಸಿ ತೊರೆದು ಬಿಜೆಪಿ ಸೇರ್ಪಡೆಯಾದ ಸುವೇಂದು ಅಧಿಕಾರಿ ಭಾಗವಹಿಸಿದ್ದರು. ಅದಕ್ಕೂ ಮುನ್ನ ಈ ಘಟನೆ ನಡೆದಿದೆ.

ಘಟನೆ ನಂತರ ದಕ್ಷಿಣ ಕೋಲ್ಕತ್ತಾದ ಮುಡಿಯಾಲಿ ಪ್ರದೇಶದ ಬಳಿ ಮಮತಾ ಬ್ಯಾನರ್ಜಿವರ ನಿವಾಸದ ಬಳಿ ಭಾರೀ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ ಎನ್ನಲಾಗಿದೆ. ಪಶ್ಚಿಮ ಬಂಗಾಳ ಚುನಾವಣೆಯ ಕಾರಣದಿಂದ ರಾಜ್ಯದಲ್ಲಿ ಟಿಎಂಸಿ ಮತ್ತು ಬಿಜೆಪಿ ನಡುವೆ ಹಲವು ಘರ್ಷಣೆಗಳು ವರದಿಯಾಗುತ್ತಿವೆ.

ಇನ್ನೊಂದೆಡೆ ನಂದಿಗ್ರಾಮದಲ್ಲಿ ಬೃಹತ್ ರ್ಯಾಲಿ ನಡೆಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮದಿಂದಲೇ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.


ಇದನ್ನೂ ಓದಿ: ಪ.ಬಂಗಾಳ ಚುನಾವಣೆ: ನಂದಿಗ್ರಾಮದಿಂದ ಸ್ಪರ್ಧಿಸುವುದಾಗಿ ಮಮತಾ ಬ್ಯಾನರ್ಜಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...