Homeಸಿನಿಮಾಕ್ರೀಡೆಜನ್ಮದಿನ ವಿಶೇಷ: ಸಚಿನ್‌ ಅವರ ಅತ್ಯುತ್ತಮ 10 ಇನ್ನಿಂಗ್ಸ್‌ಗಳು

ಜನ್ಮದಿನ ವಿಶೇಷ: ಸಚಿನ್‌ ಅವರ ಅತ್ಯುತ್ತಮ 10 ಇನ್ನಿಂಗ್ಸ್‌ಗಳು

- Advertisement -
- Advertisement -

ಕ್ರಿಕೆಟ್ ಜಗತ್ತಿನಲ್ಲಿ ಹಲವಾರು ಕ್ರಿಕೆಟಿಗರು ಮಿನುಗಿ ಮರೆಯಾಗಿದ್ದಾರೆ. ಆದರೆ, ಕೆಲವರು ಮಾತ್ರ ಅಭಿಮಾನಿಗಳ ಎದೆಯಲ್ಲಿ ದೇವರ ರೀತಿಯಲ್ಲಿ ತಮ್ಮ ಶಾಶ್ವತ ಪ್ರಭಾವವನ್ನು ಹಾಗೆಯೇ ಉಳಿಸಿ ಹೋಗುವಲ್ಲಿ ಯಶಸ್ವಿಯಾಗಿದ್ದಾರೆ. ಅಂತಹ ಕೆಲವೇ ಕೆಲವು ಶ್ರೇಷ್ಟ ಕ್ರಿಕೆಟಿಗರ ಪೈಕಿ ಸಚಿನ್ ರಮೇಶ್ ತೆಂಡೂಲ್ಕರ್ ಒಬ್ಬರು.

ಸಚಿನ್ ತೆಂಡೂಲ್ಕರ್ ಅವರ ಉಲ್ಲೇಖವಿಲ್ಲದೆ ಕ್ರಿಕೆಟ್ ಬಗೆಗಿನ ಯಾವುದೇ ಚರ್ಚೆ ಅಪೂರ್ಣವೇ ಸರಿ. ತಮ್ಮ 23 ವರ್ಷಗಳ ಸುದೀರ್ಘ ವೃತ್ತಿಜೀವನದಲ್ಲಿ, ಸಚಿನ್ ಭಾರತೀಯ ತಂಡದ ಕೆಲವು ಅತ್ಯುತ್ತಮ ಪ್ರತಿಭೆಗಳ ಜೊತೆಗೆ ಆಡಿದ್ದಾರೆ ಅಲ್ಲದೆ, ಹತ್ತಾರು ದಾಖಲೆಗಳನ್ನು ನಿರ್ಮಿಸಿದ್ದಾರೆ. ಕ್ರಿಕೆಟ್ ದೇವರು ಎನಿಸಿಕೊಂಡಿದ್ದಾರೆ.

ವಿನೋದ್ ಕಾಂಬ್ಲಿ, ಮೊಹಮ್ಮದ್ ಅಜರುದ್ದೀನ್, ರಾಹುಲ್ ದ್ರಾವಿಡ್, ಸೌರವ್ ಗಂಗೂಲಿ, ಅನಿಲ್ ಕುಂಬ್ಳೆ, ಎಂ.ಎಸ್.ಧೋನಿ ಮತ್ತು ವಿರಾಟ್ ಕೊಹ್ಲಿ ಅವರೊಂದಿಗೆ ಆಡಿದ್ದ ಸಚಿನ್ ತಾವೊಬ್ಬರೇ ಅನೇಕ ಇನ್ನಿಂಗ್ಸ್‌ಗಳಲ್ಲಿ ತಂಡವನ್ನು ಗೆಲುವಿನ ದಡ ಸೇರಿಸಿದ್ದಾರೆ. ಆ ನಿಟ್ಟಿನಲ್ಲಿ ಅವರೊಬ್ಬ ಬ್ಯಾಟಿಂಗ್ ಮಾಂತ್ರಿಕನೇ ಸರಿ.

ಭಾರತದಲ್ಲಿ ಅಭಿಮಾನಿಗಳ ಪಾಲಿಗೆ ಸಚಿನ್ ಕ್ರಿಕೆಟ್ ದೇವರು. ಅವರನ್ನು ಪ್ರಪಂಚಾದ್ಯಂತ ಪ್ರೀತಿಸುವವರಿದ್ದಾರೆ, ಆರಾಧಿಸುವವರಿದ್ದಾರೆ, ಅನೇಕ ಯುವಕರಿಗೆ ಈಗಲೂ ಅವರೇ ಸ್ಫೂರ್ತಿ ಮತ್ತು ಮಾದರಿ. ಸಚಿನ್ ಎಂಬ ಬ್ಯಾಟಿಂಗ್ ಮಾಂತ್ರಿಕ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿ ಇಂದಿಗೆ 9 ವರ್ಷಗಳೇ ಆಗಿವೆ. ಆದರೂ, ಅವರ ಸಾಧನೆಯನ್ನು ಮಾತ್ರ ಈ ವರೆಗೆ ಭಾರತದ ಜನ ಈವರೆಗೆ ಮರೆತಿಲ್ಲ. ಇಂದು ಅವರ ಹುಟ್ಟುಹಬ್ಬ ಈ ದಿನದ ನೆನಪಿನಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ಅವರ ಶ್ರೇಷ್ಠ 10 ಇನ್ನಿಂಗ್ಸ್‌ಗಳ ಪಟ್ಟಿ ಇಲ್ಲಿದೆ.

  1. 141 v\s ಪಾಕಿಸ್ತಾನ-ರಾವಲ್ಪಿಂಡಿ, 2004ರಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಸಚಿನ್ ಕೇವಲ 135 ಎಸೆತಗಳಲ್ಲಿ ಸ್ಫೋಟಕ 141 ರನ್ ಗಳನ್ನು ಬಾರಿಸಿದ್ದರು. ಸಚಿನ್ ಅಬ್ಬರದ ನಡುವೆಯೂ ಈ ಪಂದ್ಯದಲ್ಲಿ ಪಾಕಿಸ್ತಾನ ಕೇವಲ 12 ರನ್‌ಗಳಿಂದ ಗೆಲುವು ಸಾಧಿಸಿತ್ತು. ಭಾರತ ಈ ಪಂದ್ಯದಲ್ಲಿ ಸೋತರೂ ಸಹ ಸಚಿನ್ ತೆಂಡೂಲ್ಕರ್ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಲಾಗಿತ್ತು.

2. 118 v/s ಪಾಕಿಸ್ತಾನ ಶಾರ್ಜಾ, 1996 ರಲ್ಲಿ ಶಾರ್ಜಾ ಅಂಗಳದಲ್ಲಿ ನಡೆದಿದ್ದ ಪಂದ್ಯದಲ್ಲಿ ಸಚಿನ್ ಭರ್ಜರಿ 118 ರನ್ ಗಳಿಸುವ ಮೂಲಕ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಏಕದಿನ ಕ್ರಿಕೆಟ್‌ನಲ್ಲಿ ಭಾರತ 300 ಕ್ಕೂ ಅಧಿಕ ರನ್ ಗಳಿಸಿದ ಮೊದಲ ಪಂದ್ಯ ಇದಾಗಿದೆ.

3. 84 v\s ನ್ಯೂಜಿಲೆಂಡ್ ಈಡನ್ ಪಾರ್ಕ್, 1994ರಲ್ಲಿ ಸಚಿನ್ ತೆಂಡೂಲ್ಕರ್ ತಮ್ಮ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ ಆರಂಭಿಕ ಬ್ಯಾಟ್ಸ್ಮನ್ ಆಗಿ ಕಣಕ್ಕಿಳಿದ ಪಂದ್ಯ ಇದು. ನವಜೋತ್ ಸಿಂಗ್ ಸಿಧು ಅನುಪಸ್ಥಿತಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಸಚಿನ್ ತಾವು ಆರಂಭಿಕ ಓವರ್ಗಳಲ್ಲೇ ಬೌಲರ್ಗಳನ್ನು ದಂಡಿಸಬಲ್ಲೆ ಎಂದು ಈ ಪಂದ್ಯದ ಮೂಲಕ ಸಾಭೀತುಪಡಿಸಿದ್ದರು. ಕೇವಲ 43 ಎಸೆತಗಳಿಂದ 84 ರನ್ ಗಳಿಸುವ ಮೂಲಕ ಭಾರತದ ಶಾಶ್ವತ ಆರಂಭಿಕ ಆಟಗಾರನಾಗಿ ಸ್ಥಾನಪಡೆದರು.

4) 155 v\s ಆಸ್ಟ್ರೇಲಿಯಾ-ಚೆನ್ನೈ, 1998 ರ ಬಾರ್ಡರ್-ಗವಾಸ್ಕರ್ ಟ್ರೋಫಿಯ ನಿರ್ಣಾಯಕ ಟೆಸ್ಟ್‌ ಪಂದ್ಯದಲ್ಲಿ ಸಚಿನ್ 155 ರನ್ ಗಳಿಸಿದ್ದರು. ಈ ಪಂದ್ಯದಲ್ಲಿ ಭಾರತ 418/4 ರನ್ಗೆ ಡಿಕ್ಲೇರ್ ಮಾಡಿಕೊಂಡಿತ್ತು. ಈ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿತು, ಸಚಿನ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

5) 98 v\s ಪಾಕಿಸ್ತಾನ-ಸೆಂಚುರಿಯನ್, 2003 ವಿಶ್ವಕಪ್ನಲ್ಲಿ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಸಚಿನ್ ಬಾರಿಸಿದ್ದ ಸಿಡಿಲಬ್ಬರದ 98 ರನ್‌ಗಳನ್ನು ಈಗಲೂ ಅವರ ಅಭಿಮಾನಿಗಳು ಮರೆಯಲು ಸಾಧ್ಯವಿಲ್ಲ. ಸಚಿನ್ ವೃತ್ತಿ ಬದುಕಿನ ಅದ್ಭುತ ಇನ್ನಿಂಗ್ಸ್ ಎಂದು ಈ ಪಂದ್ಯವನ್ನು ಬಣ್ಣಿಸಲಾಗುತ್ತದೆ. ಪಾಕ್ ನೀಡಿದ 273 ರನ್‌ಗಳ ಬೃಹತ್ ಮೊತ್ತ ಬೆನ್ನಿಟ್ಟಿದ ಭಾರತದ ಪರ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದ ಸಚಿನ್, ಈ ಪಂದ್ಯದಲ್ಲಿ ಪಾಕಿಸ್ತಾನದ ಮಾರಕ ಬೌಲರ್‌ಗಳಾದ ವಾಸಿಂ ಅಕ್ರಂ, ವಕಾರ್ ಯೂನಿಸ್ ಮತ್ತು ಶೋಯಬ್ ಅಖ್ತರ್ ಬೆವರಿಳಿಸಿದ್ದರು.

6) 175 v/s ಆಸ್ಟ್ರೇಲಿಯಾ-ಹೈದರಾಬಾದ್, 2009ರ ವೇಳೆ ಭಾರತೀಯ ಕ್ರಿಕೆಟ್ ವಲಯದಲ್ಲಿ ಸಚಿನ್ ನಿವೃತ್ತಿ ಹೊಂದುವುದು ಉತ್ತಮ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಆದರೆ, ಅದೇ ವರ್ಷ ಆಸ್ಟ್ರೇಲಿಯಾ ವಿರುದ್ದ ಹೈದರಾಬಾದ್ ಅಂಗಳದಲ್ಲಿ ಅಬ್ಬರಿಸಿದ್ದ ದಂತಕಥೆ ಸಚಿನ್ ಕಾಂಗರೂಗಳ ವಿರುದ್ಧ ಕೇವಲ 141 ಎಸೆತಕ್ಕೆ ಸ್ಫೋಟಕ 175 ರನ್ ಬಾರಿಸಿದ್ದರು. ಆಸ್ಟ್ರೇಲಿಯಾ ನೀಡಿದ 359 ರನ್‌ಗಳ ಬೃಹತ್ ಮೊತ್ತ ಬೆನ್ನಟ್ಟಿದ ಭಾರತಕ್ಕೆ ಸಚಿನ್ ಅದ್ಭುತ ಅಡಿಪಾಯ ಹಾಕಿದ್ದರು. ಆದರೆ, ಬೇರೆ ಆಟಗಾರರಿಂದ ಉತ್ತಮ ಸಾಥ್ ಸಿಗದ ಕಾರಣ ಈ ಪಂದ್ಯದಲ್ಲಿ ಭಾರತ ಸೋಲನುಭವಿಸಿತ್ತು.

7) 200 v/s ದಕ್ಷಿಣ ಆಫ್ರಿಕಾ-ಗ್ವಾಲಿಯರ್, 2010 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಪಂದ್ಯಗಳಲ್ಲಿ ದ್ವಿಶತಕ ಬಾರಿಸುವ ಮೂಲಕ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹಿರಿಮೆಗೆ ಸಚಿನ್ ಪಾತ್ರವಾದರು. ಕೇವಲ 147 ಎಸೆತಗಳನ್ನು ಎದುರಿಸಿದ್ದ ಸಚಿನ್ ದಕ್ಷಿಣ ಆಫ್ರಿಕಾ ಬೌಲರ್‌ಗಳ ಪಾಲಿಗೆ ಅಂದು ಕಂಟಕವಾಗಿ ಪರಿಣಮಿಸಿದ್ದರು. ಈ ಪಂದ್ಯದಲ್ಲಿ ಭಾರತ ಕೇವಲ 3 ವಿಕೆಟ್ ಕಳೆದುಕೊಂಡು 401 ಗಳಿಸಿ ಗೆಲುವಿನ ನಗೆ ಬೀರಿತ್ತು.

8) 139 v/s ಆಸ್ಟ್ರೇಲಿಯಾ-ಇಂದೋರ್‌ನಲ್ಲಿ, 2001 ಕ್ರಿಕೆಟ್ ಜತ್ತಿನಲ್ಲಿ ಸಚಿನ್ ಬಹು ಎತ್ತರಕ್ಕೆ ಬೆಳೆದಿದ್ದ ದಿನಗಳವು. ಏಕದಿನ ಪಂದ್ಯಗಳಲ್ಲಿ 10,000 ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಸಚಿನ್ ಪಾತ್ರರಾಗಿದ್ದರು. ಇದೇ ಪಂದ್ಯದಲ್ಲಿ 10 ಸಾವಿರ ರನ್ ಮೈಲುಗಲ್ಲಿನ ಜೊತೆಗೆ ಅವರು ಆಸ್ಟ್ರೇಲಿಯಾ ವಿರುದ್ಧ ತಮ್ಮ ತಮ್ಮ 28 ನೇ ಏಕದಿನ ಶತಕವನ್ನೂ ಪೂರೈಸಿದ್ದರು. ಕೇವಲ 125 ಎಸೆತಗಳಲ್ಲಿ 139 ರನ್ ಗಳಿಸುವ ಮೂಲಕ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.

9) 143 v/s ಆಸ್ಟ್ರೇಲಿಯಾ-ಶಾರ್ಜಾ, 1998ರಲ್ಲಿ ಶಾರ್ಜಾದಲ್ಲಿ ನಡೆದ ಈ ಪಂದ್ಯವನ್ನು ಭಾಗಶಃ ಯಾರೂ ಮರೆತಿರಲು ಸಾಧ್ಯವೇ ಇಲ್ಲ. ಇದು ಸಚಿನ್ ಜೀವನದ ಶ್ರೇಷ್ಠ ಇನ್ನಿಂಗ್ಸ್‌ಗಳಲ್ಲೊಂದಾಗಿದ್ದು, ಇನ್ನೂ ಈ ಪಂದ್ಯವನ್ನು ಶಾರ್ಜಾ ಅಂಗಳದಲ್ಲಿ ನಡೆದ ಐತಿಹಾಸಿಕ ಪಂದ್ಯ ಎಂದೇ ಪರಿಗಣಿಸಲಾಗುತ್ತದೆ. ಈ ಪಂದ್ಯವನ್ನು ಗೆಲ್ಲಲು ಭಾರತ ಅಗತ್ಯವಾದ 285 ರನ್ ಗಳಿಸುವಲ್ಲಿ ವಿಫಲವಾದರೂ, ಸಚಿನ್ ಅವರ ಅದ್ಭುತ ಸ್ಕೋರ್ 143 ಭಾರತ ಫೈನಲ್‌ನಲ್ಲಿ ಸ್ಥಾನ ಪಡೆಯಲು ತಂಡಕ್ಕೆ ಸಹಾಯ ಮಾಡಿತು. ಇಂದಿನ ಟೀಮ್ ಇಂಡಿಯಾ ಕೋಚ್ ರವಿಶಾಸ್ತ್ರಿ ಇದನ್ನು ಸಚಿನ್ ಅವರ ಅತ್ಯುತ್ತಮ ಇನ್ನಿಂಗ್ಸ್ ಎಂದು ಬಣ್ಣಿಸಿದರು.

10) 114 v/s ಆಸ್ಟ್ರೇಲಿಯಾ-ಪರ್ತ್- ಅದು 1992 ರ ಸಮಯ. ಸಚಿನ್ ತನ್ನ ಮೊದಲ ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಿದ್ದಾಗ ಅವರ ವಯಸ್ಸು ಕೇವಲ 19. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಮೊದಲು ಬ್ಯಾಟ್ ಮಾಡಿ 346 ರನ್ ಗಳಿಸಿತ್ತು. ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ಭಾರತದ ಪರ ಮಾಸ್ಟರ್ ಬ್ಲಾಸ್ಟರ್ ಸಚಿನ್ ಕೇವಲ 161 ಎಸೆತಗಳಲ್ಲಿ 114 ರನ್ ಗಳಿಸಿದರು. ವೇಗದ ಬೌಲರ್‌ಗಳಿಗೆ ನೆರವಾಗುವ ಪಿಚ್‌ನಲ್ಲಿ ಆಸ್ಟ್ರೇಲಿಯಾ ಬೌಲರ್‌ಗಳನ್ನು ಸಚಿನ್ ಎದುರಿಸಿದ ಪರಿ ನಿಜಕ್ಕೂ ಅಚ್ಚರಿ ಎಂದು ಈಗಲೂ ಈ ಪಂದ್ಯವನ್ನು ಬಣ್ಣಿಸಲಾಗುತ್ತದೆ. ಈ ಪಂದ್ಯದಲ್ಲಿ ಭಾರತ ಸೋಲನುಭವಿಸಿದರೂ ಸಚಿನ್ ಇನ್ನಿಂಗ್ಸ್ ಮಾತ್ರ ಈಗಲೂ ದಾಖಲೆಯಾಗಿ ಉಳಿದಿದೆ.

ಭಾರತದ ಕ್ರಿಕೆಟ್ ತಂಡದ ನಾಯಕನಾಗಿಯೂ ಸೇವೆ ಸಲ್ಲಿಸಿರುವ ಸಚಿನ್ ಏಕದಿನ ಮತ್ತು ಟೆಸ್ಟ್ ಕ್ರಿಕೆಟ್‌ನಲ್ಲಿ 10,000 ರನ್‌ಗಳ ಮೈಲುಗಲ್ಲು ಸ್ಥಾಪಿಸಿದ ಮೊದಲ ವ್ಯಕ್ತಿ, ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 30,000 ರನ್ ಪೂರೈಸಿದ ಮೊದಲ ಕ್ರಿಕೆಟಿಗ. ಅಲ್ಲದೆ ಶತಕಗಳ ಶತಕ ಬಾರಿಸಿದ ಮೊದಲ ಆಟಗಾರ ಎಂಬ ಹಿರಿಮೆಗೂ ಪಾತ್ರರಾಗಿದ್ದಾರೆ. ಕ್ರಿಕೆಟ್‌ ದೇವರು ಎಂದೇ ಮನೆ ಮಾತಾಗಿದ್ದಾರೆ.


ಇದನ್ನೂ ಓದಿ: ಟಿ-20 ವನಿತೆಯರ ಕ್ರಿಕೆಟ್ ನಲ್ಲಿ ದಾಖಲೆ ಬರೆದ ನಾಯಕಿ ಹರ್ಮನ್ ಪ್ರೀತ್ ಕೌರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...