Homeಕರ್ನಾಟಕ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಕೂಗುತ್ತಿದ್ದ ಅಭಿಮಾನಿಯನ್ನು ತಡೆದ ಪೊಲೀಸ್: ಸಾಮಾಜಿಕ ಮಾಧ್ಯಮದಲ್ಲಿ ಟೀಕೆ

‘ಪಾಕಿಸ್ತಾನ್ ಜಿಂದಾಬಾದ್’ ಎಂದು ಕೂಗುತ್ತಿದ್ದ ಅಭಿಮಾನಿಯನ್ನು ತಡೆದ ಪೊಲೀಸ್: ಸಾಮಾಜಿಕ ಮಾಧ್ಯಮದಲ್ಲಿ ಟೀಕೆ

- Advertisement -
- Advertisement -

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಪಾಕಿಸ್ತಾನಿ ಕ್ರಿಕೆಟ್ ತಂಡದ ಅಭಿಮಾನಿಯೊಬ್ಬರು “ಪಾಕಿಸ್ತಾನ್ ಜಿಂದಾಬಾದ್” ಎಂದು ಕೂಗಿದ್ದಾರೆ. ಈ ವೇಳೆ ಭದ್ರತೆಗೆ ನಿಯೋಜಿಸಿದ್ದ ಪೊಲೀಸ್‌ ಅಧಿಕಾರಿಯೊಬ್ಬರು ಘೋಷಣೆ ಕೂಗುವುದನ್ನು ನಿಲ್ಲಿಸುವಂತೆ ಹೇಳಿದ್ದಾರೆ, ಆಗ ಇಬ್ಬರ ಮಧ್ಯೆ ವಾಗ್ವಾದ ನಡೆದಿದೆ. ಈ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ.

ಪಾಕಿಸ್ತಾನದ ಅಭಿಮಾನಿಯೊಬ್ಬರು “ಪಾಕಿಸ್ತಾನ್ ಜಿಂದಾಬಾದ್” ಎಂದು ಕೂಗುವುದನ್ನು ಪೊಲೀಸ್ ಅಧಿಕಾರಿಯೊಬ್ಬರು ತಡೆದ ವಿಡಿಯೋ ಆನ್‌ಲೈನ್‌ನಲ್ಲಿ ಟೀಕೆಗೆ ಗುರಿಯಾಗಿದೆ.

ಎಕ್ಸ್‌ ಖಾತೆಯಲ್ಲಿ ಹರಿದಾಡುತ್ತಿರುವ 45 ಸೆಕೆಂಡುಗಳ ವೀಡಿಯೋದಲ್ಲಿ, ಪಾಕ್‌ ಅಭಿಮಾನಿ ಜಿಂದಾಬಾದ್‌ ಘೋಷಣೆ ಕೂಗಲು ಪೊಲೀಸ್‌ ಅಧಿಕಾರಿ ತಡೆಯೊಡ್ಡಿದ್ದಾರೆ. ಆಗ ಪಾಕ್‌ ಅಭಿಮಾನಿ, ”ನಾನು ಪಾಕಿಸ್ತಾನದವನು, ಪಾಕಿಸ್ತಾನ್‌ ಜಿಂದಾಬಾದ್‌ ಅನ್ನದೇ ಇನ್ನೇನು ಹೇಳಬೇಕು? “ಭಾರತ್ ಮಾತಾ ಕಿ ಜೈ” ಅನ್ನುವಾಗ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಯಾಕೆ ಹೇಳಬಾರದು?” ಎಂದು ಅಧಿಕಾರಿಯನ್ನ ಪ್ರಶ್ನಿಸಿದ್ದಾರೆ.

ಇದಕ್ಕೆ ಪೋಲೀಸ್ ಅಧಿಕಾರಿ ಹೇಳುತ್ತಾರೆ: ”ಭಾರತ್ ಮಾತಾ ಕೀ ಜೈ ಒಳ್ಳೆಯದು, ಆದರೆ ಪಾಕಿಸ್ತಾನ್ ಜಿಂದಾಬಾದ್ ಒಳ್ಳೆಯದಲ್ಲ” ಎನ್ನುತ್ತಾರೆ.

”ಪಾಕಿಸ್ತಾನ ಆಡುತ್ತಿದೆ, ಇನ್ನೇನು ಜಪ ಮಾಡಬೇಕೆಂದು?” ಎಂದು ಅಭಿಮಾನಿ ಕೇಳುತ್ತಾನೆ.

ಬಳಿಕ ಅಧಿಕಾರಿಯ ನಡೆಯನ್ನ ವೀಡಿಯೋ ಮಾಡಿಕೊಂಡಿದ್ದಾನೆ. ಪೊಲೀಸ್‌ ಅಧಿಕಾರಿ ಯಾವುದೇ ಪ್ರತಿಕ್ರಿಯೆ ನೀಡದೇ ಮುಂದೆ ಸಾಗುತ್ತಿದ್ದಂತೆ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಲು ಶುರು ಮಾಡಿದ್ದಾನೆ.

ಈ ವೀಡಿಯೋ ಎಕ್ಸ್‌ನಲ್ಲಿ ಹರಿದಾಡುತ್ತಿದ್ದಂತೆ, ನೆಟ್ಟಿಗರು ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ”ಒಬ್ಬ ಪಾಕಿಸ್ತಾನಿ ತನ್ನ ದೇಶಕ್ಕಾಗಿ ಹುರಿದುಂಬಿಸಲು ಅವಕಾಶ ನೀಡದಿರುವುದು ನಾಚಿಕೆಗೇಡಿನ ಸಂಗತಿ. ಪಾಕಿಸ್ತಾನದ ಒಬ್ಬ ಅಭಿಮಾನಿ ತನ್ನ ದೇಶದ ಪರ ಘೋಷಣೆ ಕೂಗಲು ಬಿಡುತ್ತಿಲ್ಲವೆನ್ನೋದು ಖಂಡನೀಯ. ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿ ಇದನ್ನು ಗಮನಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಭಾರತದಿಂದ 41 ರಾಜತಾಂತ್ರಿಕರನ್ನು ವಾಪಾಸು ಕರೆಸಿಕೊಂಡ ಕೆನಡಾ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತೆಯರಿಗೆ ಸಹಾಯವಾಣಿ ಆರಂಭಿಸಿದ ಎಸ್‌ಐಟಿ

0
ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತರಿಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಹಾಯವಾಣಿ ತೆರೆದಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಸ್‌ಐಟಿ ಮುಖ್ಯಸ್ಥ ಬಿ.ಕೆ ಸಿಂಗ್, "ಹಾಸನ ಜಿಲ್ಲೆಯಲ್ಲಿ ನಡೆದ ಲೈಂಗಿಕ ದೌರ್ಜನ್ಯ...