ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಇಂದು ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಗೆ ವಿದಾಯ ಘೋಷಿಸಿದ್ದಾರೆ. ಈ ಬಗ್ಗೆ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ತಮ್ಮ ಟ್ವಿಟರ್ ಖಾತೆಯಲ್ಲಿ ಪತ್ರವನ್ನು ಹಂಚಿಕೊಂಡಿರುವ ಅವರು ಅಭಿಮಾನಿಗಳ “ಪ್ರೀತಿ ಮತ್ತು ಬೆಂಬಲ” ಕ್ಕಾಗಿ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ. “ಇಷ್ಟು ವರ್ಷಗಳಿಂದ ನಿಮ್ಮೆಲ್ಲರ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ನಿಮ್ಮ ಆಶೀರ್ವಾದ ಮತ್ತು ಬೆಂಬಲದೊಂದಿಗೆ ನನ್ನ 2ನೇ ಇನ್ನಿಂಗ್ಸ್‌ಗಾಗಿ ಎದುರು ನೋಡುತ್ತಿದ್ದೇನೆ” ಎಂದು ಮಿಥಾಲಿ ಟ್ವೀಟ್ ಮಾಡಿದ್ದಾರೆ.
ಮಹಿಳಾ ODIಗಳಲ್ಲಿ (One Day International) ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿಯಾಗಿ ಮಿಥಾಲಿ ನಿವೃತ್ತಿಯಾಗಿದ್ದಾರೆ. ಅವರು 232 ಪಂದ್ಯಗಳಲ್ಲಿ ದೇಶವನ್ನು ಪ್ರತಿನಿಧಿಸಿದ್ದಾರೆ, 50.68 ಸರಾಸರಿಯಲ್ಲಿ 7805 ರನ್ ಗಳಿಸಿದ್ದಾರೆ. ಮಿಥಾಲಿ ರಾಜ್ ಈ ಹಿಂದೆ ಟಿ20 ಅಂತರಾಷ್ಟ್ರೀಯ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದ್ದರು.
ಇದನ್ನೂ ಓದಿ: IPL: ಪಂದ್ಯ ಸೋತರೂ ಶೇನ್ ವಾರ್ನ್ ನೆನೆದು ಕ್ರಿಕೆಟ್ ಪ್ರಿಯರ ಮನಗೆದ್ದ RCB
Thank you for all your love & support over the years!
I look forward to my 2nd innings with your blessing and support. pic.twitter.com/OkPUICcU4u— Mithali Raj (@M_Raj03) June 8, 2022
ಮಿಥಾಲಿ ಅವರು ಜೂನ್ 1999 ರಲ್ಲಿ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮೊದಲು ಪಾದಾರ್ಪಣೆ ಮಾಡಿದ್ದರು. ಈ ವರ್ಷದ ಆರಂಭದಲ್ಲಿ ನ್ಯೂಜಿಲೆಂಡ್‌ನಲ್ಲಿ ನಡೆದ ಐಸಿಸಿ ಮಹಿಳಾ ವಿಶ್ವಕಪ್‌ನಲ್ಲಿ ಭಾರತ ತಂಡದ ನಾಯಕತ್ವ ವಹಿಸಿದ್ದರು, ಅಲ್ಲಿ ಭಾರತ ಸೆಮಿಫೈನಲ್‌ಗೆ ಅರ್ಹತೆ ಪಡೆಯಲು ವಿಫಲವಾಗಿತ್ತು.
ಇವರ ನಾಯಕತ್ವದಲ್ಲಿ ಭಾರತವು 2017 ರ ಐಸಿಸಿ ಮಹಿಳಾ ವಿಶ್ವಕಪ್‌ನ ಫೈನಲ್‌ಗೆ ತಲುಪಿತು. ಅಲ್ಲಿ ಇಂಗ್ಲೆಂಡ್ ವಿರುದ್ಧ ಸೋಲು ಅನುಭವಿಸಿದ್ದರು. 2005 ರಲ್ಲಿ ಐಸಿಸಿ ಮಹಿಳಾ ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ ಸೋತಾಗಲೂ ಮಿಥಾಲಿ ತಂಡವನ್ನು ಮುನ್ನಡೆಸಿದ್ದರು.
ಮಿಥಾಲಿ 12 ಟೆಸ್ಟ್ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ, 699 ರನ್ ಗಳಿಸಿದ್ದಾರೆ. 89 ಟಿ-20 ಪಂದ್ಯಗಳಲ್ಲಿ ಗಳಲ್ಲಿ 2364 ರನ್ ಗಳಿಸಿಸಿದ್ದಾರೆ. ತಮ್ಮ ಎರಡು ದಶಕಗಳ ಸುದೀರ್ಘ ವೃತ್ತಿಜೀವನದಲ್ಲಿ ಅವರು 8 ಅಂತರಾಷ್ಟ್ರೀಯ ಶತಕಗಳು ಮತ್ತು 85 ಅರ್ಧಶತಕಗಳನ್ನು ಗಳಿಸಿದ್ದಾರೆ.
ಇದನ್ನೂ ಓದಿ: ಪಾಕ್ ಕ್ರಿಕೆಟ್ ನಾಯಕಿಯ ಪುಟ್ಟ ಮಗುವಿನೊಂದಿಗೆ ಭಾರತೀಯ ತಂಡದ ಪ್ರೀತಿಯ ಕ್ಷಣಗಳು: ಎಲ್ಲೆಡೆ ಅಭಿಮಾನದ ಮಹಾಪೂರ


