Homeಸಿನಿಮಾಕ್ರೀಡೆಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್

ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್

- Advertisement -
- Advertisement -

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಇಂದು ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಗೆ ವಿದಾಯ ಘೋಷಿಸಿದ್ದಾರೆ. ಈ ಬಗ್ಗೆ ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ತಮ್ಮ ಟ್ವಿಟರ್‌ ಖಾತೆಯಲ್ಲಿ ಪತ್ರವನ್ನು ಹಂಚಿಕೊಂಡಿರುವ ಅವರು ಅಭಿಮಾನಿಗಳ “ಪ್ರೀತಿ ಮತ್ತು ಬೆಂಬಲ” ಕ್ಕಾಗಿ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ. “ಇಷ್ಟು ವರ್ಷಗಳಿಂದ ನಿಮ್ಮೆಲ್ಲರ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ನಿಮ್ಮ ಆಶೀರ್ವಾದ ಮತ್ತು ಬೆಂಬಲದೊಂದಿಗೆ ನನ್ನ 2ನೇ ಇನ್ನಿಂಗ್ಸ್‌ಗಾಗಿ ಎದುರು ನೋಡುತ್ತಿದ್ದೇನೆ” ಎಂದು ಮಿಥಾಲಿ ಟ್ವೀಟ್ ಮಾಡಿದ್ದಾರೆ.

ಮಹಿಳಾ ODIಗಳಲ್ಲಿ (One Day International) ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿಯಾಗಿ ಮಿಥಾಲಿ ನಿವೃತ್ತಿಯಾಗಿದ್ದಾರೆ. ಅವರು 232 ಪಂದ್ಯಗಳಲ್ಲಿ ದೇಶವನ್ನು ಪ್ರತಿನಿಧಿಸಿದ್ದಾರೆ, 50.68 ಸರಾಸರಿಯಲ್ಲಿ 7805 ರನ್ ಗಳಿಸಿದ್ದಾರೆ. ಮಿಥಾಲಿ ರಾಜ್ ಈ ಹಿಂದೆ ಟಿ20 ಅಂತರಾಷ್ಟ್ರೀಯ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದ್ದರು.

ಇದನ್ನೂ ಓದಿ: IPL: ಪಂದ್ಯ ಸೋತರೂ ಶೇನ್ ವಾರ್ನ್ ನೆನೆದು ಕ್ರಿಕೆಟ್ ಪ್ರಿಯರ ಮನಗೆದ್ದ RCB

ಮಿಥಾಲಿ ಅವರು ಜೂನ್ 1999 ರಲ್ಲಿ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮೊದಲು ಪಾದಾರ್ಪಣೆ ಮಾಡಿದ್ದರು. ಈ ವರ್ಷದ ಆರಂಭದಲ್ಲಿ ನ್ಯೂಜಿಲೆಂಡ್‌ನಲ್ಲಿ ನಡೆದ ಐಸಿಸಿ ಮಹಿಳಾ ವಿಶ್ವಕಪ್‌ನಲ್ಲಿ ಭಾರತ ತಂಡದ ನಾಯಕತ್ವ ವಹಿಸಿದ್ದರು, ಅಲ್ಲಿ ಭಾರತ ಸೆಮಿಫೈನಲ್‌ಗೆ ಅರ್ಹತೆ ಪಡೆಯಲು ವಿಫಲವಾಗಿತ್ತು.

Mithali Raj wins Sportstar Aces female cricketer of the decade - Sportstar
PC:AP

ಇವರ ನಾಯಕತ್ವದಲ್ಲಿ ಭಾರತವು 2017 ರ ಐಸಿಸಿ ಮಹಿಳಾ ವಿಶ್ವಕಪ್‌ನ ಫೈನಲ್‌ಗೆ ತಲುಪಿತು. ಅಲ್ಲಿ ಇಂಗ್ಲೆಂಡ್ ವಿರುದ್ಧ ಸೋಲು ಅನುಭವಿಸಿದ್ದರು. 2005 ರಲ್ಲಿ ಐಸಿಸಿ ಮಹಿಳಾ ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ ಸೋತಾಗಲೂ ಮಿಥಾಲಿ ತಂಡವನ್ನು ಮುನ್ನಡೆಸಿದ್ದರು.

ಮಿಥಾಲಿ 12 ಟೆಸ್ಟ್ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ, 699 ರನ್ ಗಳಿಸಿದ್ದಾರೆ. 89 ಟಿ-20 ಪಂದ್ಯಗಳಲ್ಲಿ ಗಳಲ್ಲಿ 2364 ರನ್ ಗಳಿಸಿಸಿದ್ದಾರೆ. ತಮ್ಮ ಎರಡು ದಶಕಗಳ ಸುದೀರ್ಘ ವೃತ್ತಿಜೀವನದಲ್ಲಿ ಅವರು 8 ಅಂತರಾಷ್ಟ್ರೀಯ ಶತಕಗಳು ಮತ್ತು 85 ಅರ್ಧಶತಕಗಳನ್ನು ಗಳಿಸಿದ್ದಾರೆ.


ಇದನ್ನೂ ಓದಿ: ಪಾಕ್ ಕ್ರಿಕೆಟ್ ನಾಯಕಿಯ ಪುಟ್ಟ ಮಗುವಿನೊಂದಿಗೆ ಭಾರತೀಯ ತಂಡದ ಪ್ರೀತಿಯ ಕ್ಷಣಗಳು: ಎಲ್ಲೆಡೆ ಅಭಿಮಾನದ ಮಹಾಪೂರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...