Homeಮುಖಪುಟಕ್ರಿಕೆಟಿಗ ಶ್ರೀಶಾಂತ್ ವಿರುದ್ಧ ಪ್ರಕರಣ ದಾಖಲು

ಕ್ರಿಕೆಟಿಗ ಶ್ರೀಶಾಂತ್ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಮಾಜಿ ಕ್ರಿಕೆಟಿಗ, ಮಾಜಿ ಬಿಗ್‌ ಬಾಸ್‌ ಸ್ಪರ್ಧಿ ಎಸ್ ಶ್ರೀಶಾಂತ್ ಮತ್ತು ಇತರ ಇಬ್ಬರ ವಿರುದ್ಧ ಕೇರಳದಲ್ಲಿ ವಂಚನೆ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕೇರಳದ ಕಣ್ಣೂರಿನಲ್ಲಿ ಸರೀಶ್ ಗೋಪಾಲನ್ ಎಂಬುವರು ನೀಡಿದ ದೂರಿನ ಮೇರೆಗೆ ಶ್ರೀಶಾಂತ್‌ ಮತ್ತು ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ರಾಜೀವ್ ಕುಮಾರ್ ಮತ್ತು ವೆಂಕಟೇಶ್ ಕಿಣಿ ಅವರು ಕರ್ನಾಟಕದ ಕೊಲ್ಲೂರಿನಲ್ಲಿ ಕ್ರೀಡಾ ಅಕಾಡೆಮಿ ನಿರ್ಮಿಸುವುದಾಗಿ ಹೇಳಿ 2019ರ ಏ.25ರಿಂದ ವಿವಿಧ ದಿನಾಂಕಗಳಲ್ಲಿ 18.70 ಲಕ್ಷ ರೂ.ಗಳನ್ನು ತೆಗೆದುಕೊಂಡಿದ್ದಾರೆ. ಇದರಲ್ಲಿ ಶ್ರೀಶಾಂತ್ ಪಾಲುದಾರರು ಎಂದು ಚೂಂಡಾ ಮೂಲದ ಸರೀಶ್ ಗೋಪಾಲನ್ ಆರೋಪಿಸಿದ್ದಾರೆ.

ಅಕಾಡೆಮಿಯಲ್ಲಿ ಪಾಲುದಾರರಾಗಲು ಅವಕಾಶ ನೀಡುವ ಭರವಸೆ ಕೊಟ್ಟ ನಂತರ ಹಣವನ್ನು ಹೂಡಿಕೆ ಮಾಡಿರುವುದಾಗಿ ಸರೀಶ್ ಗೋಪಾಲನ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಶ್ರೀಶಾಂತ್ ಮತ್ತು ಇತರ ಇಬ್ಬರ ವಿರುದ್ಧ ಐಪಿಸಿ ಸೆಕ್ಷನ್ 420ರಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಶ್ರೀಶಾಂತ್‌ ಅವರನ್ನು 3ನೇ ಆರೋಪಿಯನ್ನಾಗಿ ಹೆಸರಿಸಲಾಗಿದೆ.

ಶ್ರೀಶಾಂತ್ ಭಾರತೀಯ ಕ್ರಿಕೆಟ್‌ ತಂಡದ ಮಾಜಿ ಆಟಗಾರ ಮತ್ತು ಚಲನಚಿತ್ರ ನಟ. ಅವರು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಕೇರಳ ಪರ ಆಡಿದ್ದರು. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದು, ಭಾರತಕ್ಕಾಗಿ ಟ್ವೆಂಟಿ-20 ಕ್ರಿಕೆಟ್ ಆಡಿದ ಮೊದಲ ಕೇರಳ ರಣಜಿ ಆಟಗಾರರಾಗಿದ್ದಾರೆ.

2013ರ ಐಪಿಎಲ್‌ನಲ್ಲಿ ಸ್ಪಾಟ್ ಫಿಕ್ಸಿಂಗ್‌ನ ನಂತರ ಆರಂಭದಲ್ಲಿ ಶ್ರೀಶಾಂತ್‌ಗೆ ಆಜೀವ ನಿಷೇಧ ವಿಧಿಸಲಾಗಿತ್ತು. ಆ.2019ರಲ್ಲಿ ನಿಷೇಧವನ್ನು 7 ವರ್ಷಗಳಿಗೆ ಇಳಿಸಲಾಗಿತ್ತು. ಮಾ. 2022ರಲ್ಲಿ ಶ್ರೀಶಾಂತ್ ದೇಶೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು.

ಇದನ್ನು ಓದಿ: ಮಹುವಾ ವಿರುದ್ಧದ ಪ್ರಶ್ನೆಗಾಗಿ ನಗದು ಆರೋಪ: ಮೌನ ಮುರಿದ ಮಮತಾ ಬ್ಯಾನರ್ಜಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಕರ್ನಾಟಕದಲ್ಲಿ ಮುಸ್ಲಿಮರು ರಸ್ತೆ ಮಧ್ಯೆ ಗೋಹತ್ಯೆ ಮಾಡಿದ್ದಾರೆ ಎಂಬುವುದು ಸುಳ್ಳು

0
"ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯದವರು ರಸ್ತೆ ಮಧ್ಯೆಯೇ ಬಹಿರಂಗವಾಗಿ ಗೋಹತ್ಯೆ ಮಾಡಿದ್ದಾರೆ" ಎಂದು ಎಕ್ಸ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ. ವಿಡಿಯೋದಲ್ಲಿ ಜೀಪ್‌ ಒಂದರ ಮುಂಭಾಗದಲ್ಲಿ ಹಸುವಿನ ಕಳೇಬರ ಕಟ್ಟಿದಂತೆ ಕಾಣುತ್ತಿದೆ. ಫ್ಯಾಕ್ಟ್‌ಚೆಕ್ : ವಿಡಿಯೋದ ಸತ್ಯಾಸತ್ಯತೆಯನ್ನು ನಾವು...