Homeಮುಖಪುಟಭಾರತದಲ್ಲಿ ಮಹಿಳೆಯರ, ಮಕ್ಕಳ ಮೇಲಿನ ಅಪರಾಧಗಳಲ್ಲಿ ಹೆಚ್ಚಳ: NCRB ವರದಿ

ಭಾರತದಲ್ಲಿ ಮಹಿಳೆಯರ, ಮಕ್ಕಳ ಮೇಲಿನ ಅಪರಾಧಗಳಲ್ಲಿ ಹೆಚ್ಚಳ: NCRB ವರದಿ

- Advertisement -
- Advertisement -

ಭಾರತದಲ್ಲಿ ಮಹಿಳೆಯರ, ಮಕ್ಕಳ ಮೇಲಿನ ಅಪರಾಧಗಳು, ಆತ್ಮಹತ್ಯೆಗಳು ಮತ್ತು ಅಪಘಾತಗಳು 2021ಕ್ಕೆ ಹೋಲಿಕೆ ಮಾಡಿದಾಗ 2022ರಲ್ಲಿ ಹೆಚ್ಚಳವಾಗಿದೆ ಎಂದು ಎನ್‌ಸಿಆರ್‌ಬಿ ವರದಿ ಬಹಿರಂಗಪಡಿಸಿದೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB), ವಾರ್ಷಿಕ ಅಪರಾಧ ವರದಿ ಮತ್ತು ಭಾರತದಲ್ಲಿ ಅಪಘಾತದಿಂದಾಗುವ ಸಾವುಗಳು ಹಾಗೂ ಆತ್ಮಹತ್ಯೆಗಳ ಕುರಿತು (ADSI) ವರದಿಯನ್ನು ಬಿಡುಗಡೆ ಮಾಡಿದೆ. ಕಳೆದ ವರ್ಷ ಇದೇ ವರದಿಯನ್ನು ಆಗಸ್ಟ್‌ನಲ್ಲಿ ಪ್ರಕಟಿಸಲಾಗಿತ್ತು. ಆದರೆ ಈ ಬಾರಿ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಬಿಡುಗಡೆ ಮಾಡಲಾಗಿದೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ವರದಿಯು 2022ರ ಭಾರತದಲ್ಲಿನ ಅಪರಾಧ ಸನ್ನಿವೇಶದ ಸಮಗ್ರ ಅವಲೋಕನವನ್ನು ಮಾಡಿದೆ. ವರದಿಯಲ್ಲಿ ಹಠಾತ್ ಸಾವುಗಳು, ಆತ್ಮಹತ್ಯೆಗಳು, ಮಹಿಳೆಯರು, ಮಕ್ಕಳ ವಿರುದ್ಧದ ಅಪರಾಧಗಳನ್ನು ಅವಲೋಕನ ಮಾಡಿದೆ. ಭಾರತದಲ್ಲಿ ಒಟ್ಟಾರೆ ಅಪರಾಧದ ಪ್ರಮಾಣವು 2021ರಲ್ಲಿ 7% ಇದ್ದು 2022ರಲ್ಲಿ 6.9%ಕ್ಕೆ ಇಳಿದಿದೆ. ಆದರೆ ಮಹಿಳೆಯರು, ಮಕ್ಕಳು, SC- ST ಮತ್ತು ಸೈಬರ್ ಅಪರಾಧ ಸೇರಿದಂತೆ ನಿರ್ದಿಷ್ಟ ವರ್ಗಗಳ ವಿರುದ್ಧದ ಅಪರಾಧಗಳು 2021ಕ್ಕೆ ಹೋಲಿಕೆ ಮಾಡಿದರೆ ಹೆಚ್ಚಳವಾಗಿದೆ ಎಂದು ವರದಿಯು ತಿಳಿಸಿದೆ.

ದೇಶಾದ್ಯಂತ ವರದಿಯಾದ ಹಠಾತ್ ಸಾವುಗಳ ಸಂಖ್ಯೆಯಲ್ಲಿ 11.6% ಹೆಚ್ಚಳವಾಗಿದೆ. 2022ರಲ್ಲಿ ಕನಿಷ್ಠ 56,653 ಹಠಾತ್ ಸಾವುಗಳು ಸಂಭವಿಸಿದೆ. ಇದರಲ್ಲಿ ಹೃದಯಾಘಾತದಿಂದ 32,410 ಸಾವುಗಳು ಸಂಭವಿಸಿವೆ. 24,243 ಸಾವುಗಳಿಗೆ ಇತರ ಕಾರಣಗಳಿಂದ ಸಂಭವಿಸಿದೆ. 45-60ವರ್ಷ ವಯಸ್ಸಿನವರಲ್ಲಿ ಗರಿಷ್ಠ ಸಂಖ್ಯೆಯ ಸಾವುಗಳು ಎಂದರೆ 19,456 ಸಾವುಗಳು ಸಂಭವಿಸಿದೆ ಎಂದು ವರದಿ ತಿಳಿಸಿದೆ.

ಆತ್ಮಹತ್ಯೆಗಳು ಮತ್ತು ಆಕಸ್ಮಿಕ ಸಾವುಗಳು

ಭಾರತದಲ್ಲಿ 2021ರಲ್ಲಿ 1,64,033ರಷ್ಟು ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು, ಅದು 2022ರಲ್ಲಿ 1,70,924ಕ್ಕೆ ಏರಿಕೆಯಾಗಿದೆ. 2021ರಲ್ಲಿ ಅಪಘಾತದಿಂದ ಭಾರತದಲ್ಲಿ 3,97,530 ಮಂದಿ ಮೃತಪಟ್ಟಿದ್ದು, 2022ರಲ್ಲಿ ಅಪಘಾತದಲ್ಲಿ 4,30,504 ಮಂದಿ ಮೃತಪಟ್ಟಿದ್ದಾರೆ.

ಇಂಡಿಯಾ ಸ್ಪೆಂಡ್ ವರದಿಯ ಪ್ರಕಾರ, ಭಾರತವು 2021ರಲ್ಲಿ ಇತಿಹಾಸದಲ್ಲೇ ಅತಿ ಹೆಚ್ಚು ಆತ್ಮಹತ್ಯೆ ಪ್ರಕರಣವನ್ನು ವರದಿ ಮಾಡಿದೆ. ಪ್ರತಿ 1,00,000 ಜನರಿಗೆ 12 ಆತ್ಮಹತ್ಯೆಗಳು ಸಂಭವಿಸಿದೆ.

ಮಹಿಳೆಯರ ವಿರುದ್ಧದ ಅಪರಾಧಗಳು

2022ರಲ್ಲಿ ಕನಿಷ್ಠ 4,45,256 ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳು ದಾಖಲಾಗಿದ್ದು, 2021ರಿಂದ ಇದು 4% ಹೆಚ್ಚಳವಾಗಿದೆ ಎಂದು ವರದಿ ತಿಳಿಸಿದೆ.

ಪತಿ ಮತ್ತು ಆತನ ಸಂಬಂಧಿಕರಿಂದ ಕ್ರೌರ್ಯ, ಮಹಿಳೆಯರ ಅಪಹರಣ, ಮಹಿಳೆಯರ ಮೇಲೆ ಹಲ್ಲೆ ಮತ್ತು ಅತ್ಯಾಚಾರದಂತಹ ಪ್ರಕರಣಗಳು ಸೇರಿದೆ. ವಿಶ್ವ ಆರೋಗ್ಯ ಸಂಸ್ಥೆಯ ದಾಖಲೆಯನ್ನು ಉಲ್ಲೇಖಿಸಿ 2022ರಲ್ಲಿ  ಬಿಬಿಸಿ ಮಾಡಿದ ವರದಿಯ ಪ್ರಕಾರ ಜಾಗತಿಕವಾಗಿ ಮೂವರು ಮಹಿಳೆಯರಲ್ಲಿ ಓರ್ವರು ಲಿಂಗ ಆಧಾರಿತ ಹಿಂಸೆಯನ್ನು ಎದುರಿಸುತ್ತಿದ್ದಾರೆ ಎಂದು ಹೇಳಿದೆ.

2021ರಲ್ಲಿ ಭಾರತವು ಮಹಿಳೆಯರ ವಿರುದ್ಧ ಅತಿ ಹೆಚ್ಚು ಅಪರಾಧಗಳನ್ನು ದಾಖಲಿಸಿದೆ ಎಂದು ವರದಿಯು ಗಮನಿಸಿದೆ. ಇದು 2016ರಿಂದ 6 ವರ್ಷಗಳಲ್ಲಿ 26.35% ರಷ್ಟು ಏರಿಕೆಯಾಗಿದೆ.

ಮಕ್ಕಳ ವಿರುದ್ಧದ ಅಪರಾಧಗಳು

2022ರಲ್ಲಿ ಮಕ್ಕಳ ವಿರುದ್ಧದ ಅಪರಾಧಗಳ ಕನಿಷ್ಠ 1,62,449 ಪ್ರಕರಣಗಳು ದಾಖಲಾಗಿವೆ. ಇದು 2021 ರಿಂದ 8.7% ಹೆಚ್ಚಳವಾಗಿದೆ. ಇವುಗಳಲ್ಲಿ ಅಪಹರಣ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆಗಳು ಹೆಚ್ಚು ದಾಖಲಾಗಿವೆ.

ಇದಲ್ಲದೆ 2022ರಲ್ಲಿ ಹಿರಿಯ ನಾಗರಿಕರು, ಪರಿಶಿಷ್ಟ ಜಾತಿಗಳು (ಎಸ್‌ಸಿ), ಪರಿಶಿಷ್ಟ ಪಂಗಡಗಳ ಮೇಲಿನ ಅಪರಾಧಗಳು ಮತ್ತು ಆರ್ಥಿಕ ಅಪರಾಧಗಳು ಭಾರಿ ಹೆಚ್ಚಳವನ್ನು ತೋರಿಸಿವೆ. 60 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರ ವಿರುದ್ಧದ ಅಪರಾಧಕ್ಕಾಗಿ ಒಟ್ಟು 28,545 ಪ್ರಕರಣಗಳನ್ನು ದಾಖಲಿಸಲಾಗಿದೆ. ಇದು 2021ಕ್ಕೆ ಹೋಲಿಕೆ ಮಾಡಿದರೆ 9.3% ಹೆಚ್ಚಳವಾಗಿರುವುದನ್ನು ತೋರಿಸುತ್ತದೆ.

ಎಸ್‌ಸಿಗಳ ವಿರುದ್ಧದ ಅಪರಾಧಕ್ಕೆ ಸಂಬಂಧಿಸಿ ಒಟ್ಟು 57,582 ಪ್ರಕರಣಗಳು ದಾಖಲಾಗಿವೆ. ಇದು 2021ರಿಂದ 13.1% ಹೆಚ್ಚಳವನ್ನು ತೋರಿಸುತ್ತದೆ. ಪರಿಶಿಷ್ಟ ಪಂಗಡಗಳ(ಎಸ್‌ಟಿ) ಸಮುದಾಯದ ಜನರ ವಿರುದ್ಧದ ಅಪರಾಧಕ್ಕಾಗಿ ಒಟ್ಟು 10,064 ಪ್ರಕರಣಗಳನ್ನು ದಾಖಲಿಸಲಾಗಿದೆ.

ಆರ್ಥಿಕ ಅಪರಾಧಗಳಿಗೆ ಸಂಬಂಧಿಸಿ ಕನಿಷ್ಠ 1,93,385 ಪ್ರಕರಣಗಳನ್ನು ದಾಖಲಿಸಲಾಗಿದೆ. ಇದು 2021ರಿಂದ 11.1% ಹೆಚ್ಚಳವಾಗಿದೆ. ಸೈಬರ್ ಅಪರಾಧಕ್ಕೆ ಸಂಬಂಧಿಸಿ 65,893 ಪ್ರಕರಣಗಳನ್ನು ದಾಖಲಿಸಲಾಗಿದೆ. ಇದು 2021ಕ್ಕೆ ಹೋಲಿಕೆ ಮಾಡಿದಾಗ 4.4% ಹೆಚ್ಚಳವಾಗಿದೆ ಎಂದು ಎನ್‌ಸಿಆರ್‌ಬಿ ವರದಿ ಬಹಿರಂಗಪಡಿಸಿದೆ.

ಇದನ್ನು ಓದಿ: ELECTION UPDATE: ಮಿಜೋರಾಂನಲ್ಲಿ ಬಹುಮತ ಪಡೆದ ZPM: ಸಿಎಂಗೆ ಸೋಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...