HomeUncategorizedಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ಬಹಿರಂಗಪಡಿಸಬೇಕು: ಹೈಕೋರ್ಟ್ ಆದೇಶ

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ಬಹಿರಂಗಪಡಿಸಬೇಕು: ಹೈಕೋರ್ಟ್ ಆದೇಶ

- Advertisement -
- Advertisement -

ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲೂ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ಬಹಿರಂಗಪಡಿಸಬೇಕು ಎಂಬ ಸುಪ್ರೀಂ ಕೋರ್ಟ್ ನಿರ್ದೇಶನ ಪಾಲನೆಗೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಪ್ರಕರಣವೊಂದರಲ್ಲಿ ಸಿವಿಲ್ ಕೋರ್ಟ್ ನೀಡಿದ್ದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ಅಭ್ಯರ್ಥಿಗಳ ಕ್ರಿಮಿನಲ್ ಕೇಸ್ ವಿವರಗಳನ್ನು ನೀಡಲು ಪ್ರತ್ಯೇಕ ನಮೂನೆ ಒದಗಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ.

ಅಭ್ಯರ್ಥಿಗಳು ಚುನಾವಣಾ ಆಯೋಗ ನೀಡುವ ಫಾರ್ಮ್ ತುಂಬಬೇಕು, ಬಾಕಿಯಿರುವ ಕ್ರಿಮಿನಲ್ ಕೇಸ್​ಗಳ ವಿವರ ನೀಡಬೇಕು, ಟಿಕೆಟ್ ನೀಡುವ ರಾಜಕೀಯ ಪಕ್ಷಕ್ಕೂ ವಿವರ ಒದಗಿಸಬೇಕು, ಪಕ್ಷದ ವೆಬ್ ಸೈಟ್​ನಲ್ಲೂ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ‌ ತಿಳಿಸಬೇಕು. ಪತ್ರಿಕೆಗಳಲ್ಲೂ ಅಭ್ಯರ್ಥಿಗಳು ಕ್ರಿಮಿನಲ್ ಹಿನ್ನೆಲೆ ಪ್ರಕಟಿಸಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಪೀಠ ಸೂಚಿಸಿದೆ.

ಏನಿದು ಪ್ರಕರಣ? ಚುನಾವಣೆ ವೇಳೆ ಕ್ರಿಮಿನಲ್ ಹಿನ್ನೆಲೆ ಬಹಿರಂಗಪಡಿಸದ ಕಾರಣ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹರಿದ್ರಾವತಿ ಗ್ರಾಮ ಪಂಚಾಯತ್ ಸದಸ್ಯ ಕೆ.ವಿ.ಅಶೋಕ್ ಅವರ ಆಯ್ಕೆಯನ್ನು ಚುನಾವಣಾ ಆಯೋಗ ರದ್ದುಗೊಳಿಸಿತ್ತು. ಈ ನಿರ್ಧಾರವನ್ನು ಸಿವಿಲ್ ಕೋರ್ಟ್ ಎತ್ತಿ ಹಿಡಿದಿತ್ತು. ಇದನ್ನು ಪ್ರಶ್ನಿಸಿ ಅಶೋಕ್ ಹೈಕೋರ್ಟ್‌ ಏಕ ಸದಸ್ಯ ಪೀಠದ ಮೊರೆ ಹೋಗಿದ್ದರು. ಏಕಸದಸ್ಯ ಪೀಠ ಅಶೋಕ್ ಅರ್ಜಿ ವಜಾಗೊಳಿಸಿ, ಅಸಿಂಧು ಆದೇಶ ಊರ್ಜಿತಗೊಳಿಸಿತ್ತು. ಈ ಆದೇಶ ಪ್ರಶ್ನಿಸಿ ಅಶೋಕ್ ವಿಭಾಗೀಯ ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ. ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠ ಸುಪ್ರೀಂ ಕೋರ್ಟ್ ನಿರ್ದೇಶನ ಪಾಲನೆಗೆ ಆದೇಶಿಸಿದೆ.

ಇದನ್ನೂ ಓದಿ : ಹೆಣ್ಣು ಭ್ರೂಣ ಹತ್ಯೆ ಜಾಲ ಬೇಧಿಸಿದ ಪೊಲೀಸರು: 9 ಆರೋಪಿಗಳ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದೆಹಲಿ ಕಾಂಗ್ರೆಸ್‌ನಲ್ಲಿ ನಿಲ್ಲದ ರಾಜೀನಾಮೆ ಪರ್ವ; ಎಎಪಿ ಮೈತ್ರಿ ವಿರೋಧಿಸಿ ಪಕ್ಷ ತೊರೆದ ಮತ್ತಿಬ್ಬರು...

0
ದೆಹಲಿ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಅರವಿಂದ್ ಸಿಂಗ್ ಲವ್ಲಿ ನಂತರ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದ್ದು, ರಾಷ್ಟ್ರ ರಾಜಧಾನಿಯ ಎರಡು ಲೋಕಸಭಾ ಸ್ಥಾನಗಳಿಗೆ ನೇಮಿಸಿದ್ದ ಅದರ ಇಬ್ಬರು ನಾಯಕರು, ವೀಕ್ಷಕರಾದ ನೀರಜ್ ಬಸೋಯಾ ಮತ್ತು ನಸೀಬ್...