Homeಮುಖಪುಟಕಾಮೇಡಿಯನ್ ’ಕುನಾಲ್ ಕಮ್ರ’ ವಿರುದ್ದ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅನುಮತಿ

ಕಾಮೇಡಿಯನ್ ’ಕುನಾಲ್ ಕಮ್ರ’ ವಿರುದ್ದ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅನುಮತಿ

- Advertisement -
- Advertisement -

ಪ್ರಸಿದ್ದ ಸ್ಟಾಂಡ್‌ಅಪ್ ಕಾಮೇಡಿಯನ್ ’ಕುನಾಲ್ ಕಮ್ರ’ ವಿರುದ್ದ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅಟಾರ್ನಿ ಜನರಲ್ ಅನುಮತಿ ನೀಡಿದ್ದಾರೆ. ಕುನಾಲ್ ಕಮ್ರಾ ಅರ್ನಾಬ್ ಗೋಸ್ವಾಮಿಗೆ ಜಾಮೀನು ನೀಡಿದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟನ್ನು ಟೀಕಿಸಿ ಟ್ವೀಟ್ ಮಾಡಿದ್ದರು. ಇದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಕೆಯಾಗಿತ್ತು.

ಕುನಾಲ್ ವಿರುದ್ದದ ಅರ್ಜಿಯನ್ನು ಮನ್ನಿಸಿರುವ ಅಟಾರ್ನಿ ಜನರಲ್‌ ಕೆ.ಕೆ ವೇಣುಗೋಪಾಲ್, “ಸುಪ್ರೀಂ ಕೋರ್ಟ್‌ ಮೇಲೆ ಅನ್ಯಾಯವಾಗಿ ದಾಳಿ ಮಾಡುವವರು ಶಿಕ್ಷೆಗೆ ಆಹ್ವಾನ ನೀಡುತ್ತಿದ್ದಾರೆ ಎಂದು ಜನರು ಅರ್ಥಮಾಡಿಕೊಳ್ಳುವ ಸಮಯ” ಎಂದಿದ್ದಾರೆ.

ಇದನ್ನೂ ಓದಿ: ವಾಕ್‌ ಸ್ವಾತಂತ್ರ್ಯ ಹತ್ತಿಕ್ಕಲು ನ್ಯಾಯಾಂಗ ನಿಂದನೆ ಕಾನೂನಿನ ದುರುಪಯೋಗ: ಪ್ರಶಾಂತ್‌ ಭೂಷಣ್

ನ್ಯಾಯಾಂಗ ನಿಂದನೆ ಕಾಯ್ದೆ 1975ರ ಸೆಕ್ಷನ್ 15ರ ರೂಲ್ 3ರ ಅಡಿಯಲ್ಲಿ ಕುನಾಲ್ ಕಮ್ರಾ ವಿರುದ್ದ, ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕೆಂದು ವಕೀಲ ರಿಜ್ವಾನ್ ಸಿದ್ದೀಖ್ ಮನವಿ ಮಾಡಿದ್ದರು.

ಟ್ವಿಟ್ಟರ್‌ನಲ್ಲಿ 17 ಲಕ್ಷ ಫಾಲೋವರ್ಸ್ ಹೊಂದಿರುವ ಕುನಾಲ್ ಕಮ್ರ ರವರು ಸುಪ್ರೀಂ ಕೋರ್ಟಿನ ಅವರಹೇಳನ ಮಾಡುವ ನಾಲ್ಕು ಟ್ವೀಟ್ ಮಾಡಿದ್ದಾರೆ. ಅವರನ್ನು ಶಿಕ್ಷಿಸದಿದ್ದರೆ ಅವರ ಫಾಲೋವರ್ಸ್ ಕೂಡ ಸುಪ್ರೀಂ ಕೋರ್ಟಿಗೆ ಬೆಲೆ ನೀಡುವುದಿಲ್ಲ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ಆತ್ಮಹತ್ಯಾ ಪ್ರಕರಣದಲ್ಲಿ ಮುಂಬೈ ಪೊಲೀಸರಿಂದ ಬಂಧನಕ್ಕೊಳಗಾಗಿರುವ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿಗೆ ಸುಪ್ರೀಂ ಕೋರ್ಟ್ ನೀಡಿದ್ದ ಜಾಮೀನನ್ನು ಟೀಕಿಸಿದ್ದ, ಕುನಾಲ್ “ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ಪ್ರಥಮ ದರ್ಜೆ ಪ್ರಯಾಣಿಕರಿಗೆ ಶೀಘ್ರವಾಗಿ ಶಾಂಪೇನ್ ಸೇವೆ ಸಲ್ಲಿಸುತ್ತಿರುವ ಫ್ಲೈಟ್ ಅಟೆಂಡೆರ್‌‌‌ನಂತೆ ಆಗಿದ್ದಾರೆ. ಆದರೆ ಸಾಮಾನ್ಯರು ಹತ್ತುತ್ತಿದ್ದಾರೆಯೇ ಅಥವಾ ಕುಳಿತುಕೊಳ್ಳುತ್ತಾರೆಯೇ ಎಂದು ಅವರು ಯೋಚಿಸುತ್ತಿಲ್ಲ” ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: CJI ಬೋಬ್ಡೆ ಹೆಲಿಕಾಪ್ಟರ್ ಕುರಿತು ಟ್ವೀಟ್‌: ಪ್ರಶಾಂತ್‌ ಭೂಷಣ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಮನವಿ

ಅಷ್ಟೇ ಅಲ್ಲದೆ, ಈ ದೇಶದ ಸುಪ್ರೀಂ ಕೋರ್ಟ್ ಈ ದೇಶದ ಅತ್ಯಂತ ಸುಪ್ರೀಂ ಜೋಕ್ ಆಗಿದೆ ಎಂದು ಕೂಡಾ ಹೇಳಿದ್ದ ಅವರು, “ರಾಷ್ಟ್ರೀಯ ಹಿತಾಸಕ್ತಿ” ವಿಷಯಗಳಲ್ಲಿ ಸುಪ್ರೀಂ ಕೋರ್ಟ್ ಕಾರ್ಯನಿರ್ವಹಿಸುವ ವೇಗವನ್ನು ನೋಡಿದರೆ, ನಾವು ಮಹಾತ್ಮ ಗಾಂಧಿಯವರ ಫೋಟೋ ಬದಲಿಗೆ ಹರೀಶ್ ಸಾಲ್ವೆ ಅವರ ಫೋಟೋ ಹಾಕಬೇಕಾದ ಸಮಯ ಬಂದಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಪ್ರಶಾಂತ್ ಭೂಷಣ್‌ರ ನ್ಯಾಯಾಂಗ ನಿಂದನೆ ಪ್ರಕರಣದೆಡೆಗೆ ನನಗೇಕೆ ಕುತೂಹಲವೆಂದರೆ..; ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...