Homeಮುಖಪುಟ8 ಪೊಲೀಸರ ಹತ್ಯೆಗೆ ಕಾರಣವಾಗಿದ್ದ ಕ್ರಿಮಿನಲ್ ವಿಕಾಸ್ ದುಬೆ ಬಂಧನ

8 ಪೊಲೀಸರ ಹತ್ಯೆಗೆ ಕಾರಣವಾಗಿದ್ದ ಕ್ರಿಮಿನಲ್ ವಿಕಾಸ್ ದುಬೆ ಬಂಧನ

ನಿನ್ನೆ ಫರಿದಾಬಾದ್, ಗುರುಗ್ರಾಮ್ ಹೊಟೆಲ್‌ನಲ್ಲಿ ವಿಕಾಸ್ ದುಬೆ ಕಾಣಿಸಿಕೊಂಡಿದ್ದ ಎನ್ನಲಾಗಿದ್ದು, ಪೊಲೀಸರಿಗೆ ಸಿಗದೆ ಪರಾರಿಯಾಗಿದ್ದ.

- Advertisement -
- Advertisement -

ಉತ್ತರ ಪ್ರದೇಶದ 8 ಪೊಲೀಸರ ಹತ್ಯೆಗೆ ಕಾರಣವಾಗಿದ್ದ ಕ್ರಿಮಿನಲ್ ವಿಕಾಸ್ ದುಬೆಯನ್ನು ಗುರುವಾರ ಬೆಳಿಗ್ಗೆ ಮಧ್ಯಪ್ರದೇಶದ ಉಜ್ಜಯಿನಿಯ ಮಹಕಲ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ವಿಶೇಷ ಕಾರ್ಯಪಡೆಯ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಅಮಿತಾಬ್ ಯಶ್ ತಿಳಿಸಿದ್ದಾರೆ. ದುಬೆ ಶರಣಾಗಲು ಸ್ವತಃ ಪೊಲೀಸ್ ಠಾಣೆಗೆ ಹೊರಟಿದ್ದಾಗ ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

“ಇದು ದೊಡ್ಡ ಯಶಸ್ಸು. ವಿಕಾಸ್ ದುಬೆ ಕ್ರೂರ ಕೊಲೆಗಾರ. ಅವನನ್ನು ಹಿಡಿಯಲು  ಮಧ್ಯಪ್ರದೇಶ ಪೊಲೀಸರು ಸಂಪೂರ್ಣ ಜಾಗರೂಕರಾಗಿದ್ದರು. ಅವನನ್ನು ಉಜ್ಜಯಿನಿ ಮಹಕಲ್ ದೇವಸ್ಥಾನದಲ್ಲಿ ಬಂಧಿಸಲಾಗಿದೆ. ಈ ಕುರಿತು ನಾವು ಉತ್ತರ ಪ್ರದೇಶ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ” ಎಂದು ಮಧ್ಯಪ್ರದೇಶ ಸಚಿವ ನರೋತ್ತಮ್ ಮಿಶ್ರಾ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಬಂಧನದ ಬಳಿಕ “ನಾನು ವಿಕಾಸ್ ದುಬೆ, ಕಾನ್ಪುರದವನು” ಎಂದು ವಿಕಾಸ್ ದುಬೆ ಒಪ್ಪಿಕೊಂಡಿದ್ದಾನೆ ಎಂದು ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದಾರೆ.

ಕಳೆದ ವಾರ ಕಾನ್ಪುರ ಬಳಿಯ ಬಿಕ್ರು ಗ್ರಾಮದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ 8 ಪೊಲೀಸರು ಹತ್ಯೆಯಾದಾಗಿನಿಂದ ದುಬೆ ಪರಾರಿಯಾಗಿದ್ದ. ಅವನ ಬಂಧನಕ್ಕೆ 25 ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು.

ದುಬೆಯ ಬಂಧನ ಕುರಿತು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಮಾತನಾಡಿದ್ದಾರೆ.

ಇದಕ್ಕೂ ಮುನ್ನ ಗುರುವಾರ ಯುಪಿ ದರೋಡೆಕೋರ ವಿಕಾಸ್ ದುಬೆಯ ಇಬ್ಬರು ಸಹಚರರು ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಸಾವನ್ನಪ್ಪಿದ್ದರು.

ನಿನ್ನೆ ಫರಿದಾಬಾದ್, ಗುರುಗ್ರಾಮ್ ಹೊಟೆಲ್‌ನಲ್ಲಿ ವಿಕಾಸ್ ದುಬೆ ಕಾಣಿಸಿಕೊಂಡಿದ್ದ ಎನ್ನಲಾಗಿದ್ದು, ಪೊಲೀಸರಿಗೆ ಸಿಗದೆ ಪರಾರಿಯಾಗಿದ್ದ.

60ಕ್ಕು ಹೆಚ್ಚು ಪ್ರಕರಣಗಳಲ್ಲಿ ಆರೋಪಿಯಾಗಿರುವ ಈತ ಮತ್ತು ಅವರ ಸಹಚರರು ಜುಲೈ 1 ರಂದು ತನ್ನನ್ನು ಬಂಧಿಸಲು ಬಂದ ಪೊಲೀಸರ ಮೇಲೆ ಗುಂಡಿನ ಮಳೆಗರೆದಿದ್ದರು. ಘಟನೆಯಲ್ಲಿ 8 ಪೊಲೀಸರು ಹತರಾಗಿದ್ದರು. ದಾಳಿಯ ಮಾಹಿತಿ ಸೋರಿಕೆ ಮಾಡಿದ ಆರೋಪದ ಮೇಲೆ ಹಲವು ಪೊಲೀಸರನ್ನು ಬಂಧಿಸಲಾಗಿದೆ.


ಇದನ್ನೂ ಓದಿ: ಯುಪಿಯ 8 ಪೋಲಿಸರ ಹತ್ಯೆ : ದೆಹಲಿ ಹೋಟೆಲ್‌ನಲ್ಲಿ ಆರೋಪಿ ವಿಕಾಸ್ ದುಬೆ ಸುಳಿವು…

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...