Homeಮುಖಪುಟ8 ಪೊಲೀಸರನ್ನು ಗುಂಡಿಕ್ಕಿ ಕೊಂದ ಕ್ರಿಮಿನಲ್! ಉತ್ತರ ಪ್ರದೇಶದಲ್ಲೊಂದು ಭೀಕರ ಘಟನೆ

8 ಪೊಲೀಸರನ್ನು ಗುಂಡಿಕ್ಕಿ ಕೊಂದ ಕ್ರಿಮಿನಲ್! ಉತ್ತರ ಪ್ರದೇಶದಲ್ಲೊಂದು ಭೀಕರ ಘಟನೆ

ವಿಕಾಸ್ ದುಬೆಯನ್ನು ಹುಡುಕಿಹೋದ ಪೊಲೀಸ್ ತಂಡಗಳ ಸಮರ್ಪಕ ಯೋಜನೆಯ ಕೊರತೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ. ಈ ಮಧ್ಯೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪೊಲೀಸರ ಸಾವಿಗೆ ಸಂತಾಪ ಸೂಚಿಸಿದ್ದಾರೆ.

- Advertisement -
- Advertisement -

ಉತ್ತರ ಪ್ರದೇಶದ ಕಾನ್ಪುರದ ಬಳಿಯ ಹಳ್ಳಿಯಲ್ಲಿ ಆರೋಪಿಯನ್ನು ಬಂಧಿಸಲು ಹೋದ 8 ಪೊಲೀಸರ ಮೇಲೆ ಆತನ ಸಹಚರರು ಗುಂಡಿಕ್ಕಿ ಕೊಂದಿರುವ ದುರ್ಘಟನೆ ಇಂದು ಮುಂಜಾನೆ ಜರುಗಿದೆ.

ಉತ್ತರ ಪ್ರದೇಶ ರಾಜಧಾನಿ ಲಖನೌದಿಂದ 150 ಕಿ.ಮೀ ದೂರದಲ್ಲಿರುವ ಡಿಕ್ರು ಗ್ರಾಮದಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ದಿವೇಂದ್ರ ಕುಮಾರ್ ಮಿಶ್ರಾ, ಮೂವರು ಸಬ್ ಇನ್ಸ್‌ಪೆಕ್ಟರ್‌ಗಳು ಮತ್ತು ನಾಲ್ವರು ಕಾನ್‌ಸ್ಟೆಬಲ್‌ಗಳನ್ನು ಹತ್ಯೆ ಮಾಡಲಾಗಿದೆ.

ದರೋಡೆ, ಕೊಲೆ, ಅಪಹರಣ, ಸುಲಿಗೆ, ಗಲಭೆ, ಕ್ರಿಮಿನಲ್ ಪಿತೂರಿ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ವಿಕಾಸ್ ದುಬೆ ಎಂಬಾತನನ್ನ ಹುಡುಕಿಕೊಂಡು ಮೂರು ಪೊಲೀಸ್ ಠಾಣೆಗಳ ತಂಡಗಳು ಹಳ್ಳಿಗೆ ಹೋಗಿದ್ದವು. ಆತನ ಮೇಲೆ ಸುಮಾರು 60 ಕ್ರಿಮಿನಲ್ ಪ್ರಕರಣಗಳಿದ್ದು ಹೊಸ ಕೊಲೆಗೆ ಯೋಜಿಸಿದ್ದ ಎನ್ನಲಾಗಿದೆ. ಆತನ ಸುಳಿವು ಹಿಡಿದು ಹೊರಟ ಪೊಲೀಸರ ಮೇಲೆ ಆತನ ಸಹಚರರು ಎಗ್ಗಾಮಗ್ಗಾ ಗುಂಡಿಕ್ಕಿ ಹತ್ಯೆಗೈದಿದ್ದಾರೆ.

ಪೊಲೀಸರು ಡಿಕ್ರು ಹಳ್ಳಿ ಸಮೀಪಿಸುತ್ತಿದ್ದಂತೆ ಭಾರೀ ಬುಲ್ಡೋಡರ್‌ಗಳನ್ನು ರಸ್ತೆಗಡ್ಡವಾಗಿ ನಿಲ್ಲಿಸಲಾಗಿತ್ತು. ಪೊಲೀಸರು ಬರುವ ಮುನ್ಸೂಚನೆ ಅರಿತಿದ್ದ ಆರೋಪಿಗಳು ಹಲವು ರಸ್ತೆಗಳನ್ನು ಬಂದ್ ಮಾಡಿದ್ದರು. ಅವುಗಳನ್ನು ತೆರವುಗೊಳಿಸಿ ಕೊನೆಗೆ ಪೊಲೀಸರು ಗ್ರಾಮ ಪ್ರವೇಶಿಸಿದ ಕೂಡಲೇ ಹಲವು ಕಟ್ಟಡಗಳ ಮೇಲ್ಛಾವಣಿಗಳಲ್ಲಿ ಅಡಗಿದ್ದ ಆರೋಪಿಗಳು ಮನಬಂದಂತೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖಂಡ ಪಿಂಟೂ ಸೆಂಗಾರ್‌ನನ್ನು ಇದೇ ಆರೋಪಿಗಳು ಜೂನ್ 18 ರಂದು ಕೊಂದಿದ್ದರು. ಈ ಪ್ರಕರಣದ ಮೂವರು ಪ್ರಮುಖ ಆರೋಪಿಗಳನ್ನು ಮಧ್ಯಪ್ರದೇಶದ ಚಿಂದ್ವಾರದಿಂದ ಕಾನ್ಪುರ ಪೊಲೀಸರು ಗುರುವಾರ ಬಂಧಿಸಿದ್ದರು. ಆನಂತರ ಉಳಿದ ಆರೋಪಿಗಳು ಬಿಕ್ರುನಲ್ಲಿ ಹಲವು ಬಾಡಿಗೆ ಶೂಟರ್‌ಗಳೊಂದಿಗೆ ಅಡಗಿಕೊಂಡಿದ್ದರು ಎನ್ನಲಾಗಿದೆ.

ಶಿವರಾಜ್‌ಪುರದ ಸ್ಟೇಷನ್ ಆಫೀಸರ್ ಆಗಿದ್ದ ಉಪ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಮಿಶ್ರಾ, ಸಬ್ ಇನ್ಸ್‌ಪೆಕ್ಟರ್ ಮಹೇಶ್ ಯಾದವ್ ಮತ್ತು ಕಾನ್‌ಸ್ಟೆಬಲ್‌ಗಳಾದ ಸುಲ್ತಾನ್ ಸಿಂಗ್, ರಾಹುಲ್, ಜಿತೇಂದ್ರ ಮತ್ತು ಬಾಬ್ಲೂ ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಗುಂಡಿನ ದಾಳಿಯಲ್ಲಿ ಇತರ ಐವರು ಪೊಲೀಸರು ಗಾಯಗೊಂಡಿದ್ದಾರೆ.

“ಪೊಲೀಸರ ಕಡೆಯಿಂದಲೂ ಪ್ರತಿ ಗುಂಡಿನ ದಾಳಿ ನಡೆಯಿತು ಆದರೆ ಅಪರಾಧಿಗಳು ಕಟ್ಟಡಗಳ ಮೇಲಿದ್ದರಿಂದ ತಪ್ಪಿಸಿಕೊಂಡರು. ಪೊಲೀಸರ ಮೇಲಿನ ಏಕಾಏಕಿ ದಾಳಿಗೆ ನಮ್ಮ ಎಂಟು ಮಂದಿ ಸಾವನ್ನಪ್ಪಿದ್ದಾರೆ” ಎಂದು ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಎಚ್‌ಸಿ ಅವಸ್ಥಿ ಹೇಳಿದ್ದಾರೆ.

ಎಕೆ 47 ಕಾರ್ಬೈನ್‌ಗಳ ಖಾಲಿ ಚಿಪ್ಪುಗಳನ್ನು ಮೇಲ್ಛಾವಣಿಯಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ, ಲಕ್ನೋದಿಂದ ವಿಧಿವಿಜ್ಞಾನ ತಂಡ ಆಗಮಿಸಿ ಸಾಕ್ಷ್ಯ ಸಂಗ್ರಹಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಕ್ರುನಿಂದ 3 ಕಿ.ಮೀ ದೂರದಲ್ಲಿರುವ ನಿವಾಡಾ ಗ್ರಾಮದಲ್ಲಿ ವಿಕಾಸ್ ದುಬೆ ಅವನ ಇಬ್ಬರು ಸಹಚರರು ಎನ್‌ಕೌಂಟರ್‌ನಲ್ಲಿ ಸಾವನಪ್ಪಿದ್ದಾರೆ. ಪೊಲೀಸರು ಆತನ ಸಹೋದರ ದಿನೇಶ್ ತಿವಾರಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

60 ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಯಾಗಿರುವ ವಿಕಾಸ್ ದುಬೆ 2001 ರಲ್ಲಿ ಶಿವ್ಲಿ ಪೊಲೀಸ್ ಠಾಣೆಯೊಳಗೆ ರಾಜ್ಯ ಸಚಿವ ಮತ್ತು ಬಿಜೆಪಿ ನಾಯಕ ಸಂತೋಷ್ ಶುಕ್ಲಾ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿದ್ದಾನೆ. ನಂತರ ಪ್ರಕರಣದಲ್ಲಿ ಅವನನ್ನು ಖುಲಾಸೆಗೊಳಿಸಲಾಯಿತು.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಅವರು ಡಿಕ್ರು ಹಳ್ಳಿಗೆ ತೆರಳುತ್ತಿದ್ದಾರೆ ಮತ್ತು ಕಾನ್ಪುರದ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ) ದಿನೇಶ್ ಕುಮಾರ್ ಪಿ ಮತ್ತು ಇನ್ಸ್‌ಪೆಕ್ಟರ್ ಜನರಲ್ ಮೋಹಿತ್ ಅಗರ್‌ವಾಲ್ ಅವರು ಈಗಾಗಲೇ ಸ್ಥಳದಲ್ಲಿದ್ದಾರೆ.

ಆರು ಜಿಲ್ಲೆಗಳನ್ನು ಒಳಗೊಂಡ ಕಾನ್ಪುರ ವಿಭಾಗದ ಎಲ್ಲಾ ಗಡಿಗಳಿಗೆ ಪೊಲೀಸ್ ಕಣ್ಗಾವಲು ವಿಧಿಸಲಾಗಿದೆ.

ವಿಕಾಸ್ ದುಬೆಯನ್ನು ಹುಡುಕಿಹೋದ ಪೊಲೀಸ್ ತಂಡಗಳ ಸಮರ್ಪಕ ಯೋಜನೆಯ ಕೊರತೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ. ಈ ಮಧ್ಯೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪೊಲೀಸರ ಸಾವಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಘಟನೆಯ ಬಗ್ಗೆ ವರದಿ ಕೇಳಿದ್ದಾರೆ.

ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಯುಪಿ ಪೊಲೀಸ್ ಮುಖ್ಯಸ್ಥರಿಗೆ ನಿರ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿಯ ಹೇಳಿಕೆ ತಿಳಿಸಿದೆ.


ಭಾರತದಲ್ಲಿ ನಿತ್ಯ ಐದು ಕಸ್ಟಡಿ ಸಾವು; ಬಹುತೇಕರು ಮುಸ್ಲಿಮರು, ದಲಿತರು ಮತ್ತು ಅಂಚಿಗೆ ತಳ್ಳಲ್ಪಟ್ಟವರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...