Homeಕರ್ನಾಟಕರಾಜ್ಯ ಬಿಜೆಪಿಯಲ್ಲಿ ಬಿರುಕು: ಯತ್ನಾಳ್ ವಿರುದ್ಧ ರಾಷ್ಟ್ರ ನಾಯಕರಿಗೆ ದೂರು ನೀಡಿದ ಸಿಎಂ ಬೆಂಬಲಿಗರು!

ರಾಜ್ಯ ಬಿಜೆಪಿಯಲ್ಲಿ ಬಿರುಕು: ಯತ್ನಾಳ್ ವಿರುದ್ಧ ರಾಷ್ಟ್ರ ನಾಯಕರಿಗೆ ದೂರು ನೀಡಿದ ಸಿಎಂ ಬೆಂಬಲಿಗರು!

ಯತ್ನಾಳ್​ ಇತ್ತೀಚೆಗೆ ಮುಖ್ಯಮಂತ್ರಿಯ ಕಾರ್ಯ ವೈಖರಿಯನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​ ಕಟೀಲ್ ಅವರಿಗೆ ಬಹಿರಂಗ ಪತ್ರ ಬರೆದಿದ್ದರು.

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಅಸಮಾಧಾನ ಹೊರಹಾಕಿರುವ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಯಡಿಯೂರಪ್ಪ ಬೆಂಬಲಿಗರು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ದೂರು ನೀಡಿದ್ದಾರೆ. “ರಾಜ್ಯ ನಾಯಕತ್ವದ ವಿರುದ್ಧ ಹೇಳಿಕೆ ನೀಡುತ್ತಿರುವ ಯತ್ನಾಳ್ ಮೇಲೆ ಕ್ರಮ ಕೈಗೊಳ್ಳಿ” ಎಂದು ಪತ್ರ ಬರೆದಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಈಗಾಗಲೇ ಯತ್ನಾಳ್ ಅವರೊಂದಿಗೆ ಮಾತನಾಡಿದ್ದು, ಕೇಂದ್ರದ ಶಿಸ್ತಿನ ಸಮಿತಿ ಅವರ ಹೇಳಿಕೆಗಳನ್ನು ಗಮನಿಸುತ್ತಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಅಕ್ಟೋಬರ್‌ನಲ್ಲಿ, “ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಅಧಿಕಾರದಲ್ಲಿ ಉಳಿಯುವುದಿಲ್ಲ. ಕೇಂದ್ರರು ನಾಯಕರು ಅವರಿಗೆ ಗಡುವು ನೀಡಿದ್ದಾರೆ. ಜನವರಿ 14 ರಂದು ಸಂಕ್ರಾಂತಿ ಹಬ್ಬಕ್ಕಿಂತ ಮೊದಲು ಯಡಿಯೂರಪ್ಪನನ್ನು ಬದಲಾಯಿಸಲಾಗುವುದು” ಎಂದು ಹೇಳಿದ್ದರು.

ಇದನ್ನೂ ಓದಿ: ಬಿಎಸ್​ವೈ ವಿರುದ್ಧ ಮತ್ತೆ ಅಪಸ್ವರ ಎತ್ತಿದ ಯತ್ನಾಳ್​; ಸಿಎಂ ಕಾರ್ಯವೈಖರಿ ಖಂಡಿಸಿ ಕಟೀಲ್​ಗೆ ಪತ್ರ

ಯತ್ನಾಳ್ ಮತ್ತು ಬಿಜೆಪಿ ನಡುವಿನ ಮುಸುಕಿನ ಗುದ್ದಾಟ ತುಂಬಾ ದಿನದಿಂದ ನಡೆಯುತ್ತಿದೆ. 2009 ರಲ್ಲಿ, ಎರಡು ಬಾರಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವರಾಗಿದ್ದ ಯತ್ನಾಳ್‌ ಅವರಿಗೆ ಟಿಕೆಟ್ ನಿರಾಕರಿಸಿದಾಗ, ಅವರು ಜೆಡಿಎಸ್‌ಗೆ ಪಕ್ಷಾಂತರವಾಗಿದ್ದರು. ನಂತರ 2013 ರಲ್ಲಿ ಮತ್ತೆ ಬಿಜೆಪಿಗೆ ಸೇರಿದ್ದರು. ಆದರೆ 2015 ರಲ್ಲಿ ಅವರನ್ನು ಪಕ್ಷದಿಂದ ಮತ್ತೆ ಹೊರಹಾಕಲಾಯಿತು. ಇತ್ತೀಚಿಗೆ 2018 ರಲ್ಲಿ ಮತ್ತೆ ಪಕ್ಷಕ್ಕೆ ಸೇರಿಕೊಂಡಿದ್ದರು. ಅಂದಿನ ಮುಖ್ಯಮಂತ್ರಿಯಾಗಿದ್ದ ಡಿ.ವಿ ಸದಾನಂದ ಗೌಡ ಅವರು ಪಕ್ಷದ ನಾಯಕತ್ವದ ವಿರುದ್ಧ ಹೇಳಿಕೆ ನೀಡದಂತೆ ಯತ್ನಾಳ್ ಅವರಿಗೆ ಆದೇಶಿಸಿದ್ದರು. ಆದರೆ ಯತ್ನಾಳ್‌, “ತಾನು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಸೇವೆ ಸಲ್ಲಿಸಿರುವುದಾಗಿಯೂ, ಸದಾನಂದ ಗೌಡ ತಮಗಿಂತ ಕಿರಿಯರು” ಎಂದು ತಿರುಗೇಟು ನೀಡಿದ್ದರು.

ಭಾನುವಾರ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಯತ್ನಾಳ್‌ ಅವರ ಹೇಳಿಕೆಯ ಕುರಿತು ಚರ್ಚೆ ಮಾಡುವುದಿಲ್ಲ ಎಂದು ಪಕ್ಷದ ಅಧಿಕೃತ ವಕ್ತಾರ ಗಣೇಶ್ ಕಾರ್ನಿಕ್ ಹೇಳಿದ್ದಾರೆ. “ಆದರೆ ಯತ್ನಾಳ್‌ ಅವರನ್ನು ಮೂರರಿಂದ ನಾಲ್ಕು ಪ್ರಬಲ ನಾಯಕರು ಬೆಂಬಲಿಸುತ್ತಿದ್ದಾರೆ ಎನಿಸುತ್ತದೆ. ಯಾಕೆಂದರೆ, ಉನ್ನತ ನಾಯಕರ ವಿರುದ್ಧ ಇಂತಹ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರೂ ಅವರು ಪಕ್ಷದಲ್ಲಿ ಉಳಿಯಲು ಹೇಗೆ ಸಾಧ್ಯ?” ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ: ಜಾತಿ-ಧರ್ಮಗಳ ನಡುವೆ ಕೋಮುಗಲಭೆ ಎಬ್ಬಿಸಿ ಬೇಳೆ ಬೇಯಿಸಿಕೊಳ್ಳುವ ಯತ್ನಾಳ್‌ ಕುತಂತ್ರ ಫಲಿಸುವುದಿಲ್ಲ: ಕರವೇ

ಬಿಜೆಪಿ ಪಕ್ಷ ರಾಜ್ಯದಲ್ಲಿ ತಮ್ಮ ನಿರೀಕ್ಷೆಯಂತೆ ಅಧಿಕಾರದ ಚುಕ್ಕಾಣಿ ಹಿಡಿದು ಒಂದು ವರ್ಷದ ಮೇಲಾಗಿದೆ. ಆದರೂ ಆಂತರಿಕ ಬಿಕ್ಕಟ್ಟು ಮಾತ್ರ ಇನ್ನೂ ಶಮನವಾಗುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಇನ್ನು, ವಿರೋಧ ಪಕ್ಷಗಳಿಗಿಂತ ಪಕ್ಷದ ಹಿರಿಯ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಮುಖ್ಯಮಂತ್ರಿ ಬಿಎಸ್​ವೈ ವಿರುದ್ಧ ವಾಗ್ದಾಳಿ ನಡೆಸುತ್ತಿರುವುದು ಪಕ್ಷಕ್ಕೆ ಬಿಸಿತುಪ್ಪವಾಗಿ ಪರಿಣಮಿಸುತ್ತಿದೆ. ಪಕ್ಷದ ನಾಯಕರು ಎಷ್ಟೇ ಹೇಳಿದರೂ ಬಿಎಸ್​ ಯಡಿಯೂರಪ್ಪ ವಿರುದ್ಧದ ತಮ್ಮ ವಾಡಿಕೆಯ ವಾಗ್ದಾಳಿಯನ್ನು ನಿಲ್ಲಿಸಿಲ್ಲ.

ಯತ್ನಾಳ್​ ಇತ್ತೀಚೆಗೆ ಮುಖ್ಯಮಂತ್ರಿಯ ಕಾರ್ಯ ವೈಖರಿಯನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​ ಕಟೀಲ್ ಅವರಿಗೆ ಬಹಿರಂಗ ಪತ್ರ ಬರೆದಿದ್ದರು.

ಆಡಳಿತ ಮತ್ತು ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಜನವರಿ.4 ಮತ್ತು 5 ರಂದು ಬೆಂಗಳೂರಿನಲ್ಲಿ ವಿಭಾಗವಾರು ಶಾಸಕರ ಸಭೆ ಕರೆದಿದ್ದಾರೆ. ಆದರೆ, ಈ ಸಭೆಯ ವಿಚಾರವನ್ನು ಮುಂದಿಟ್ಟುಕೊಂಡು ಶಾಸಕ ಯತ್ನಾಳ್ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್​ ಕಟೀಲ್ ಅವರಿಗೆ ಪತ್ರ ಬರೆದಿದ್ದರು.


ಇದನ್ನೂ ಓದಿ: ಯತ್ನಾಳ್ ಹುಚ್ಚರಂತೆ ಮಾತನಾಡುತ್ತಿದ್ದಾರೆ: ರೇಣುಕಾಚಾರ್ಯ ಕಿಡಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...