Homeಅಂತರಾಷ್ಟ್ರೀಯಶ್ರೀಲಂಕಾ ಬಿಕ್ಕಟ್ಟು: ಅಧ್ಯಕ್ಷರ ನಿವಾಸಕ್ಕೆ ನುಗ್ಗಿದ ಪ್ರತಿಭಟನಾಕಾರರು!

ಶ್ರೀಲಂಕಾ ಬಿಕ್ಕಟ್ಟು: ಅಧ್ಯಕ್ಷರ ನಿವಾಸಕ್ಕೆ ನುಗ್ಗಿದ ಪ್ರತಿಭಟನಾಕಾರರು!

- Advertisement -
- Advertisement -

ಶ್ರೀಲಂಕಾದಲ್ಲಿ ಪ್ರತಿಭಟನೆ ಮತ್ತೇ ತೀವ್ರಗೊಂಡಿದ್ದು, ರಾಜಧಾನಿ ಕೊಲಂಬೊದಲ್ಲಿ ಸಾವಿರಾರು ಪ್ರತಿಭಟನಾಕಾರರು ಪೊಲೀಸ್ ಬ್ಯಾರಿಕೇಡ್‌ಗಳನ್ನು ಭೇದಿಸಿ ಅಧ್ಯಕ್ಷರ ಅಧಿಕೃತ ನಿವಾಸಕ್ಕೆ ಶನಿವಾರ ಮುತ್ತಿಗೆ ಹಾಕಿದ್ದಾರೆ. ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದರೂ, ಉದ್ರಿಕ್ತ ಜನರ ಗುಂಪ ಅಧ್ಯಕ್ಷೀಯ ನಿವಾಸವನ್ನು ಸುತ್ತುವರೆದಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಘಟನೆ ಸಂಕ್ಷಿಪ್ತ ಪಾಯಿಂಟ್‌ಗಳು ಇಲ್ಲಿವೆ.

  • ಪರಿಸ್ಥಿತಿ ನಿಯಂತ್ರಣ ತಪ್ಪಲಿದೆ ಎಂಬ ಗುಪ್ತಚರ ವರದಿಗಳ ನಂತರ ದೇಶದ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರನ್ನು ಕಳೆದ ರಾತ್ರಿ ಸೇನಾ ಪ್ರಧಾನ ಕಛೇರಿಗೆ ಸ್ಥಳಾಂತರಿಸಲಾಗಿದೆ ಎಂದು ಸರ್ಕಾರದ ಉನ್ನತ ಮೂಲವೊಂದು ಎನ್‌ಡಿಟಿವಿಗೆ ತಿಳಿಸಿದೆ.
    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
    ₹100 ₹200 ₹500 ₹1000 Others
  • ವಿರೋಧ ಪಕ್ಷಗಳು, ನಾಗರೀಕ ಹಕ್ಕುಗಳ ಕಾರ್ಯಕರ್ತರು ಮತ್ತು ವಕೀಲರ ಸಂಘಗಳ ಕಾನೂನು ಹೋರಾಟದ ನಂತರ ಪೊಲೀಸರು ಕರ್ಫ್ಯೂ ಆದೇಶವನ್ನು ಹಿಂತೆಗೆದುಕೊಂಡಿದ್ದಾರೆ.
  • ಕರ್ಫ್ಯೂ ಹಿಂತೆಗೆಯುತ್ತಿದ್ದಂತೆ ಶ್ರೀಲಂಕಾದ ಧ್ವಜಗಳು ಮತ್ತು ಹೆಲ್ಮೆಟ್‌ಗಳನ್ನು ಹಿಡಿದು ಸಾವಿರಾರು ಪ್ರತಿಭಟನಾಕಾರರು ಇಂದು ಬೆಳಿಗ್ಗೆ ಅಧ್ಯಕ್ಷರ ಅಧಿಕೃತ ನಿವಾಸವನ್ನು ಸುತ್ತುವರೆದಿದ್ದಾರೆ.

ಇದನ್ನೂ ಓದಿ: ಇಂಧನ ಮತ್ತು ನಗದು ಬಿಕ್ಕಟ್ಟು: ಶಾಲೆಗಳಿಗೆ ರಜೆ ಘೋಷಿಸಿದ ಶ್ರೀಲಂಕಾ

  • ಈ ವೇಳೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದರಾದರೂ, ಉದ್ರಿಕ್ತ ಗುಂಪನ್ನು ಅಧ್ಯಕ್ಷೀಯ ನಿವಾಸವನ್ನು ಸುತ್ತುವರಿಯುವುದನ್ನು ತಡೆಯಲು ಸಾಧ್ಯವಾಗಲಿಲ್ಲ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಸುದ್ದಿ ಸಂಸ್ಥೆ AFP ಗೆ ತಿಳಿಸಿದ್ದಾರೆ.
  • “ವಿಫಲ ನಾಯಕನನ್ನು ಹೊರಹಾಕುವ ಏಕೈಕ ಗುರಿಯೊಂದಿಗೆ ದೇಶವು ಇಷ್ಟೊಂದು ಒಗ್ಗಟ್ಟಾಗಿರುವುದು ನಾನು ನನ್ನ ಇಡೀ ಜೀವ ಮಾನದಲ್ಲೇ ನೋಡಿಲ್ಲ. ಬರಹ ಈಗ ನಿಮ್ಮ ಅಧಿಕೃತ ಮನೆಯ ಗೋಡೆಯಲ್ಲಿದೆ. ದಯವಿಟ್ಟು ಶಾಂತಿಯಿಂದ ಹೋಗಿ” ಎಂದು ಮಾಜಿ ಕ್ರಿಕೆಟಿಗ ಸನತ್ ಜಯಸೂರ್ಯ, ಮನಗೆ ಹೋಗಿ ಗೊಟಬಯ” ಎಂದು ಟ್ವೀಟ್ ಮಾಡಿದ್ದಾರೆ.

  • ಶ್ರೀಲಂಕಾ ತೀವ್ರವಾದ ವಿದೇಶಿ ವಿನಿಮಯ ಕೊರತೆಯಿಂದ ನರಳುತ್ತಿದೆ. ಇದರಿಂದಾಗಿ ಇಂಧನ, ಆಹಾರ ಮತ್ತು ಔಷಧಿಗಳ ಅಗತ್ಯ ಆಮದುಗಳನ್ನು ಸೀಮಿತಗೊಂಡಿದೆ.
  • ದೇಶವೂ ಏಳು ದಶಕಗಳಲ್ಲೇ ಅತ್ಯಂತ ಕೆಟ್ಟ ಆರ್ಥಿಕ ಪ್ರಕ್ಷುಬ್ಧತೆಯಲ್ಲಿ ಮುಳುಗಿಸಿದೆ.

ಇದನ್ನೂ ಓದಿ:ಅದಾನಿಗೆ ಗುತ್ತಿಗೆ ನೀಡಲು ಶ್ರೀಲಂಕಾ ಅಧ್ಯಕ್ಷರ ಮೇಲೆ ಮೋದಿ ಒತ್ತಡ; ಆರೋಪ ಮಾಡಿದ್ದ ಅಧಿಕಾರಿ ರಾಜೀನಾಮೆ

  • ದೇಶದ ಅವನತಿಗೆ ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಅವರೇ ಕಾರಣ ಎಂದು ಹಲವರು ದೂಷಿಸುತ್ತಿದ್ದಾರೆ.
  • ಶ್ರೀಲಂಕಾದಲ್ಲಿ ಮಾರ್ಚ್‌ ತಿಂಗಳಿನಿಂದಲೇ ಶಾಂತಿಯುತ ಪ್ರತಿಭಟನೆಗಳು ನಡೆಯುತ್ತಿದ್ದು ಅವರ ರಾಜೀನಾಮೆಗೆ ಒತ್ತಾಯಿಸಲಾಗುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...