Homeಮುಖಪುಟಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಉದ್ಧವ್ ಠಾಕ್ರೆ: ಶಿವಸೇನೆ ಶಾಸಕರ ಒಕ್ಕೊರಲ ಒತ್ತಾಯ

ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಉದ್ಧವ್ ಠಾಕ್ರೆ: ಶಿವಸೇನೆ ಶಾಸಕರ ಒಕ್ಕೊರಲ ಒತ್ತಾಯ

ಶಿವಸೇನೆಯ ಹಿರಿಯ ಮುಖಂಡ ಏಕನಾಥ್ ಶಿಂಧೆ ಕೂಡ ಸಿಎಂ ಆಕಾಂಕ್ಷಿಯಾಗಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದಲ್ಲಿ ಎನ್‌ಸಿಪಿ ಹಾಗೂ ಕಾಂಗ್ರೆಸ್ ಸೇರಿ ಸರ್ಕಾರ ರಚನೆ ನಿರ್ಣಾಯಕ ಹಂತ ತಲುಪಿದೆ. ಮುಖ್ಯಮಂತ್ರಿ ಸೇರಿದಂತೆ ಸಚಿವ ಸ್ಥಾನದ ಹಂಚಿಕೆ ಕುರಿತು ರಾಜ್ಯದಲ್ಲಿ ಸರ್ಕಾರ ರಚಿಸುವ ಎಲ್ಲಾ ವಿವರಗಳನ್ನು ಬಹಿರಂಗಪಡಿಸಲು ಶಿವಸೇನೆ, ಎನ್‌ಸಿಪಿ ಹಾಗೂ ಕಾಂಗ್ರೆಸ್ ಮತ್ತೊಂದು ಸುತ್ತಿನ ಸಭೆ ನಡೆಸಲಿವೆ.

ನಿರ್ಣಾಯಕ ಸಭೆಯಲ್ಲಿ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ತಮ್ಮ ಮೈತ್ರಿಯ ವಿವರಗಳನ್ನು ಮತ್ತು ರಾಜಕೀಯ ನಿರ್ಣಾಯಕ ವಿವರಗಳ ಕುರಿತು ಮಾತುಕತೆ ನಡೆಸಲಿವೆ. ಶರದ್ ಪವಾರ್, ಉದ್ಧವ್ ಠಾಕ್ರೆ, ಕಾಂಗ್ರೆಸ್ ಮುಖಂಡರಾದ ಅಹ್ಮದ್ ಪಟೇಲ್, ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಮೂರು ಪಕ್ಷಗಳ ನಾಯಕರು ಮುಂಬೈನಲ್ಲಿ ಸಭೆ ನಡೆಸಲಿದ್ದಾರೆ ಎಂದು ಶಿವಸೇನೆ ವಕ್ತಾರ ಸಂಜಯ್ ರಾವತ್ ತಿಳಿಸಿದ್ದಾರೆ. ಇಂದು ಸಂಜೆ ವೇಳೆಗೆ ಸರ್ಕಾರ ರಚನೆಯ ಅಧಿಕೃತ ಘೋಷಣೆ ಮಾಡುವ ಸಾಧ್ಯತೆಯಿದೆ.

ಇದನ್ನೂ ಓದಿ: ‘ಪುದುಚೇರಿಯನ್ನು ಕೇಂದ್ರ ‘ಟ್ರಾನ್ಸ್ ಜೆಂಡರ್’ನಂತೆ ಪರಿಗಣಿಸುತ್ತಿದೆ’: ಸಿಎಂ ನಾರಾಯಣಸ್ವಾಮಿ ಅಸಮಾಧಾನ

ಮುಂದಿನ ದಿನಗಳಲ್ಲಿ ಎನ್‌ಸಿಪಿ, ಕಾಂಗ್ರೆಸ್ ಜತೆ ಶಿವಸೇನೆ ಮೈತ್ರಿ ಸರ್ಕಾರ ರಚನೆಯಾಗಲಿದೆ. ಹೀಗಾಗಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಹೊಸ ಸರ್ಕಾರದ ಮುಂದಾಳತ್ವ ವಹಿಸಬೇಕು ಅಂದರೆ ಸಿಎಂ ಹುದ್ದೆಯನ್ನು ಅಲಂಕರಿಸಬೇಕು ಎಂದು ಶಿವಸೇನೆ ಶಾಸಕರು ಒತ್ತಾಯಿಸಿದ್ದಾರೆ.

ಇದೇ ಮೊದಲ ಬಾರಿಗೆ ಠಾಕ್ರೆ ಕುಟುಂಬದ ಕುಡಿ ಆದಿತ್ಯ ಠಾಕ್ರೆ ಚುನಾವಣೆಯಲ್ಲಿ ಸ್ಪರ್ಧಿಸಿ ವಿಜಯಿಯಾಗಿದ್ದಾರೆ. ಈಗ ಒಂದು ವೇಳೆ ಉದ್ಧವ್ ಠಾಕ್ರೆ ಸಿಎಂ ಆದಲ್ಲಿ ಅಧಿಕಾರ ವಹಿಸಿದ ಠಾಕ್ರೆ ಕುಟುಂಬದ ಮೊದಲಿಗರಾಗಲಿದ್ದಾರೆ.

ಈ ಮೊದಲು ಉದ್ಧವ್ ಠಾಕ್ರೆ ತಮ್ಮ ಮಾತೋಶ್ರೀ ನಿವಾಸದಲ್ಲಿ ಶಾಸಕಾಂಗ ಸಭೆ ಕರೆದಿದ್ದರು. ಈ ವೇಳೆ ಎಲ್ಲಾ ಶಾಸಕರು ಉದ್ಧವ್ ಜೀ, ಸರ್ಕಾರವನ್ನು ಮತ್ತು ಪಕ್ಷವನ್ನೂ ಮುನ್ನಡೆಸಬೇಕು ಎಂದು ಒತ್ತಾಯಿಸಿದ್ದಾರೆ ಎಂದು ಪ್ರತಾಪ್ ಸರ್ ನಾಯಕ್ ಮಾಹಿತಿ ನೀಡಿದ್ದಾರೆ.

ಶಾಸಕ ಉದಯ್ ಸಮಂತ್ ಮಾತನಾಡಿ, ಸರ್ಕಾರ ರಚನೆ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿಕಾರ ಉದ್ಧವ್ ಠಾಕ್ರೆ ಅವರಿಗೆ ಬಿಟ್ಟು ಕೊಡಲಾಗಿದೆ. ಅವರ ನಿರ್ಣಯವೇ ಅಂತಿಮ ಎಂದು ಹೇಳಿದರು. ಆದರೆ, ಠಾಕ್ರೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ.

ಇನ್ನು ಶಿವಸೇನೆಯ ಹಿರಿಯ ಮುಖಂಡ ಏಕನಾಥ್ ಶಿಂಧೆ ಕೂಡ ಸಿಎಂ ಆಕಾಂಕ್ಷಿಯಾಗಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ. ಮುಂದಿನ ಸೂಚನೆ ನೀಡುವವರೆಗೆ ಎಲ್ಲಾ ಶಾಸಕರಿಗೆ ಮುಂಬೈನಲ್ಲೇ ಇರುವಂತೆ ಸೂಚಿಸಲಾಗಿದೆ ಎಂದು ಸಮಂತ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...