Homeಮುಖಪುಟಪ್ರಧಾನಿ ವಿರುದ್ಧ ಟೀಕೆ: ಮಧ್ಯಂತರ ಜಾಮೀನಿನ ಮೇಲೆ ಪವನ್ ಖೇರಾ ಬಿಡುಗಡೆಗೆ ಸುಪ್ರೀಂ ಆದೇಶ

ಪ್ರಧಾನಿ ವಿರುದ್ಧ ಟೀಕೆ: ಮಧ್ಯಂತರ ಜಾಮೀನಿನ ಮೇಲೆ ಪವನ್ ಖೇರಾ ಬಿಡುಗಡೆಗೆ ಸುಪ್ರೀಂ ಆದೇಶ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರನ್ನು ಅಸ್ಸಾಂ ಪೊಲೀಸರು ಗುರುವಾರ (ಫೆ.23) ಬಂಧಿಸಿದ್ದಾರೆ. ಈ ವಿಚಾರವಾಗಿ ಕಾಂಗ್ರೆಸ್ ಪಕ್ಷ ಸುಪ್ರೀಂ ಕೋರ್ಟ್ ಮಟ್ಟಿಲೇರಿತ್ತು. ಇದೀಗ ಸುಪ್ರೀಂ ಕೋರ್ಟ್, ಖೇರಾ ಅವರಿಗೆ ಫೆಬ್ರವರಿ 28ರವರೆಗೆ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಆದೇಶಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠವು, ಖೇರಾ ಅವರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ ನಂತರ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು. ಈ ಆದೇಶವು ಮಂಗಳವಾರದವರೆಗೆ (ಫೆಬ್ರವರಿ 28) ಕಾರ್ಯನಿರ್ವಹಿಸುತ್ತದೆ ಎಂದು ನ್ಯಾಯಮೂರ್ತಿಗಳಾದ ಎಂಆರ್ ಶಾ ಮತ್ತು ಪಿಎಸ್ ನರಸಿಂಹ ಅವರನ್ನೊಳಗೊಂಡ ಪೀಠ ಹೇಳಿದೆ.

ಪ್ರಧಾನಿ ವಿರುದ್ಧದ ಹೇಳಿಕೆಗಳಿಗಾಗಿ ಖೇರಾ ಅವರ ವಿರುದ್ಧ ಅಸ್ಸಾಂ, ಲಕ್ನೋ ಮತ್ತು ವಾರಣಾಸಿಯಲ್ಲಿ ಅನೇಕ ಎಫ್‌ಐಆರ್‌ಗಳನ್ನು ಸಲ್ಲಿಸಲಾಗಿದೆ ಆ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಅಸ್ಸಾಂ ಮತ್ತು ಉತ್ತರ ಪ್ರದೇಶ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಖೇರಾ ಪರ ವಾದ ಮಂಡಿಸಿದ ಹಿರಿಯ ವಕೀಲ ಎಎಂ ಸಿಂಘ್ವಿ ಅವರು, ಕಾಂಗ್ರೆಸ್ ನಾಯಕ ಖೇರಾ ಅವರು ಪ್ರಧಾನಿಯ ಮೇಲಿನ ಹೇಳಿಕೆಗೆ ಅದೇ ದಿನ ಕ್ಷಮೆಯಾಚಿಸಿದ್ದಾರೆ ಮತ್ತು ಈ ಎಫ್‌ಐಆರ್‌ಗಳಲ್ಲಿ ಅವರ ವಿರುದ್ಧ ಆರೋಪ ಮಾಡಿರುವ ಅಪರಾಧಗಳಿಗೆ ಬಂಧನ ಮಾಡುವ ಅಗತ್ಯವಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಅಸ್ಸಾಂ ಪೊಲೀಸರಿಂದ ದೆಹಲಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ವಕ್ತಾರ ಪವನ್ ಖೇರಾ ಬಂಧನ

ಖೇರಾ ಅವರು ಬಳಸಿದ ಪದಗಳ ಆಯ್ಕೆ ಮತ್ತು ಅವರ ವಿರುದ್ಧ ದಾಖಲಾದ ಪ್ರಕರಣಕ್ಕೂ ಹೊಂದಿಕೆಯಾಗುವುದಿಲ್ಲ. “ಇದು ವಾಕ್ ಸ್ವಾತಂತ್ರ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ” ಎಂದು ಸಿಂಘ್ವಿ ಹೇಳಿದರು.

ಅಸ್ಸಾಂ ಪೊಲೀಸರ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ಅವರು, ಆಪಾದಿತ ಹೇಳಿಕೆಗಳ ಆಡಿಯೋ-ವಿಡಿಯೋ ಕ್ಲಿಪ್‌ಅನ್ನು ನ್ಯಾಯಾಲಯದಲ್ಲಿ ಪ್ಲೇ ಮಾಡಿದರು ಮತ್ತು ಖೇರಾ ಅವರು ದೇಶದ ಪ್ರಜಾಸತ್ತಾತ್ಮಕವಾಗಿ ಚುನಾಯಿತರಾದ ಪ್ರಧಾನಿಯ ವಿರುದ್ಧ ಇಂತಹ ”ಅವಹೇಳನಕಾರಿ ಪದಗಳನ್ನು” ಬಳಸುವಂತಿಲ್ಲ ಎಂದು ಹೇಳಿದರು.

ಖೇರಾ ಅವರನ್ನು ಬಂಧಿಸಲಾಗಿದೆ, ಅವರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗುವುದು ಎಂದು ಭಾಟಿ ನ್ಯಾಯಾಲಯಕ್ಕೆ ತಿಳಿಸಿದರು.

ತುರ್ತು ಪಟ್ಟಿಗಾಗಿ ಸಿಂಘ್ವಿ ಪ್ರಸ್ತಾಪಿಸಿದ ಒಂದು ಗಂಟೆಯೊಳಗೆ ಸುಪ್ರೀಂ ಕೋರ್ಟ್ ಈ ವಿಷಯವನ್ನು ಮಧ್ಯಾಹ್ನ 3 ಗಂಟೆಗೆ ಕೈಗೆತ್ತಿಕೊಂಡಿತು.

ಫೆಬ್ರವರಿ 17 ರಂದು ಮುಂಬೈನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಷಿಸಿ ಮಾತನಾಡಿದ ಅವರು, ಫೆಬ್ರವರಿ 17ರಂದು ಮುಂಬೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಖೇರಾ ಅವರು, ಪ್ರಧಾನಿಯನ್ನು ನರೇಂದ್ರ ದಾಮೋದರದಾಸ್ ಮೋದಿ ಬದಲಿಗೆ “ನರೇಂದ್ರ ಗೌತಮ್‌ದಾಸ್ ಮೋದಿ” ಎಂದು ಉಲ್ಲೇಖಿಸಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ ಖೇರಾ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಯಿತು. ಅಸ್ಸಾಂ ಪೊಲೀಸರ ಕೋರಿಕೆಯ ಮೇರೆಗೆ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಖೇರಾ ಜೊತೆಗಿದ್ದ ಕಾಂಗ್ರೆಸ್ ಮುಖಂಡರು ಡಾಂಬರ್ ಮೇಲೆ ಕುಳಿತು ಪ್ರತಿಭಟಿಸಿದರು ಮತ್ತು ಬಂಧನ ವಾರಂಟ್ ಇಲ್ಲದೆ ಅವರನ್ನು ಕರೆದೊಯ್ಯುವ ಪ್ರಯತ್ನಗಳನ್ನು ವಿರೋಧಿಸಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...