Homeಮುಖಪುಟಮೋದಿ ವಿರುದ್ಧದ ಟೀಕೆ ಪ್ರಕರಣ: ಕಾಂಗ್ರೆಸ್ ನಾಯಕ ಪವನ್ ಖೇರಾ ಜಾಮೀನು ಮಾರ್ಚ್ 3ರವರೆಗೆ ವಿಸ್ತರಣೆ

ಮೋದಿ ವಿರುದ್ಧದ ಟೀಕೆ ಪ್ರಕರಣ: ಕಾಂಗ್ರೆಸ್ ನಾಯಕ ಪವನ್ ಖೇರಾ ಜಾಮೀನು ಮಾರ್ಚ್ 3ರವರೆಗೆ ವಿಸ್ತರಣೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕೆ ಮಾಡಿದ್ದಕ್ಕೆ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರನ್ನು ಫೆಬ್ರವರಿ 23ರಂದು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಖೇರಾ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ಸೋಮವಾರ ಮಾರ್ಚ್ 3ರವರೆಗೆ ವಿಸ್ತರಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರನ್ನು ಅಸ್ಸಾಂ ಪೊಲೀಸರು ಗುರುವಾರ (ಫೆ.23) ಬಂಧಿಸಿದ್ದರು. ಈ ವಿಚಾರವಾಗಿ ಕಾಂಗ್ರೆಸ್ ಪಕ್ಷ ಸುಪ್ರೀಂ ಕೋರ್ಟ್ ಮಟ್ಟಿಲೇರಿತ್ತು. ಆಗ ಸುಪ್ರೀಂ ಕೋರ್ಟ್, ಖೇರಾ ಅವರಿಗೆ ಫೆಬ್ರವರಿ 28ರವರೆಗೆ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಆದೇಶಿಸಿತ್ತು.

ಅಸ್ಸಾಂ ಪೊಲೀಸರ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಸಲ್ಲಿಕೆಗಳನ್ನು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠವು ಗಮನಿಸಿತು.

ಉತ್ತರ ಪ್ರದೇಶದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಗರಿಮಾ ಪ್ರಸಾದ್ ಅವರು, ಈ ವಿಚಾರದಲ್ಲಿ ಪ್ರತಿಕ್ರಿಯೆಯನ್ನು ಸಲ್ಲಿಸುವುದಾಗಿ ಹೇಳಿದರು.

ಇದನ್ನೂ ಓದಿ: ಪ್ರಧಾನಿ ವಿರುದ್ಧ ಟೀಕೆ: ಮಧ್ಯಂತರ ಜಾಮೀನಿನ ಮೇಲೆ ಪವನ್ ಖೇರಾ ಬಿಡುಗಡೆಗೆ ಸುಪ್ರೀಂ ಆದೇಶ

ಪೀಠವು ಸಲ್ಲಿಕೆಗಳನ್ನು ಗಮನಿಸಿತು ಮತ್ತು ಫೆಬ್ರವರಿ 23ರಂದು ಅವರಿಗೆ ನೀಡಲಾದ ಮಧ್ಯಂತರ ಜಾಮೀನು ವಿಸ್ತರಣೆ ಮಾಡುವ ಮೂಲಕ ವಿಚಾರಣೆಯನ್ನು ಮಾರ್ಚ್ 3ರವರೆಗೆ ಮುಂದೂಡಿತು.

ಘಟನೆ ಹಿನ್ನೆಲೆ:

ಫೆ.17ರಂದು ಮುಂಬೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಖೇರಾ ಅವರು, ಪ್ರಧಾನಿಯನ್ನು ನರೇಂದ್ರ ದಾಮೋದರದಾಸ್ ಮೋದಿ ಬದಲಿಗೆ ”ನರೇಂದ್ರ ಗೌತಮ್‌ದಾಸ್ ಮೋದಿ” ಎಂದು ಉಲ್ಲೇಖಿಸಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ ಖೇರಾ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು.

ಪ್ರಧಾನಿ ವಿರುದ್ಧದ ಹೇಳಿಕೆಗಳಿಗಾಗಿ ಖೇರಾ ಅವರ ವಿರುದ್ಧ ಅಸ್ಸಾಂ, ಲಕ್ನೋ ಮತ್ತು ವಾರಣಾಸಿಯಲ್ಲಿ ಅನೇಕ ಎಫ್‌ಐಆರ್‌ಗಳನ್ನು ಸಲ್ಲಿಸಲಾಗಿದೆ ಆ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಅಸ್ಸಾಂ ಮತ್ತು ಉತ್ತರ ಪ್ರದೇಶ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿತ್ತು.

ಖೇರಾ ಪರ ವಾದ ಮಂಡಿಸಿದ ಹಿರಿಯ ವಕೀಲ ಎಎಂ ಸಿಂಘ್ವಿ ಅವರು, ಕಾಂಗ್ರೆಸ್ ನಾಯಕ ಖೇರಾ ಅವರು ಪ್ರಧಾನಿಯ ಮೇಲಿನ ಹೇಳಿಕೆಗೆ ಅದೇ ದಿನ ಕ್ಷಮೆಯಾಚಿಸಿದ್ದರು. ಈ ಎಫ್‌ಐಆರ್‌ಗಳಲ್ಲಿ ಅವರ ವಿರುದ್ಧ ಆರೋಪ ಮಾಡಿರುವ ಅಪರಾಧಗಳಿಗೆ ಬಂಧನ ಮಾಡುವ ಅಗತ್ಯವಿಲ್ಲ ಎಂದು ಹೇಳಿದ್ದರು.

ಖೇರಾ ಅವರು ಬಳಸಿದ ಪದಗಳ ಆಯ್ಕೆ ಮತ್ತು ಅವರ ವಿರುದ್ಧ ದಾಖಲಾದ ಪ್ರಕರಣಕ್ಕೂ ಹೊಂದಿಕೆಯಾಗುವುದಿಲ್ಲ. ”ಇದು ವಾಕ್ ಸ್ವಾತಂತ್ರ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ” ಎಂದು ಸಿಂಘ್ವಿ ಹೇಳಿದ್ದರು.

ಅಸ್ಸಾಂ ಪೊಲೀಸರ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ಅವರು, ಆಪಾದಿತ ಹೇಳಿಕೆಗಳ ಆಡಿಯೋ-ವಿಡಿಯೋ ಕ್ಲಿಪ್‌ಅನ್ನು ನ್ಯಾಯಾಲಯದಲ್ಲಿ ಪ್ಲೇ ಮಾಡಿದ್ದರು ಮತ್ತು ಖೇರಾ ಅವರು ದೇಶದ ಪ್ರಜಾಸತ್ತಾತ್ಮಕವಾಗಿ ಚುನಾಯಿತರಾದ ಪ್ರಧಾನಿಯ ವಿರುದ್ಧ ಇಂತಹ ”ಅವಹೇಳನಕಾರಿ ಪದಗಳನ್ನು” ಬಳಸುವಂತಿಲ್ಲ ಎಂದಿದ್ದರು.

ಆ ಬಳಿಕ ಪ್ರಕರಣದಲ್ಲಿ ಖೇರಾ ಅವರಿಗೆ ಫೆ.28ರವರೆಗೆ  ಮಧ್ಯಂತರ ಜಾಮೀನು ನೀಡಿತ್ತು. ಇಂದು ಮತ್ತೆ  ಸುಪ್ರೀಂ ಕೋರ್ಟ್, ಮಧ್ಯಂತರ ಜಾಮೀನಿನ ಅವಧಿಯನ್ನು ವಿಸ್ತರಣೆ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಅಕ್ರಮ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ತನಿಖೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಅತ್ಯಂತ ಮಹತ್ವದ ಆದೇಶ ಹೊರಡಿಸಿದೆ. ಈ ಬಹುಕೋಟಿ ನೇಮಕಾತಿ...

ಲಕ್ನೋದಲ್ಲಿ ಮುಸ್ಲಿಂ ವ್ಯಾಪಾರಿ ಮೇಲೆ ಹಲ್ಲೆ, ಮಾಂಸದ ಅಂಗಡಿಗಳ ವಿರುದ್ಧ ಪ್ರತಿಭಟನೆ: ತೀವ್ರಗೊಂಡ ಬಜರಂಗದಳದ ‘ಆಹಾರ ಭಯೋತ್ಪಾದನೆ’

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಮಾಂಸ ಸಾಗಿಸುತ್ತಿದ್ದ ಬಿರಿಯಾನಿ ಅಂಗಡಿ ಮಾಲೀಕರೊಬ್ಬರ ಮೇಲೆ ಮೂವರು ಯುವಕರು ಹಲ್ಲೆ ನಡೆಸಿ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ....

ಟಿಎಂಸಿ ಹೆಸರು – ಚಿಹ್ನೆ ‘ಫ್ರೀಜ್‌’ ಪ್ರಶ್ನಿಸಿ ಮಮತಾ ಬ್ಯಾನರ್ಜಿ ಅರ್ಜಿ; ತುರ್ತು ವಿಚಾರಣೆಗೆ ಒಪ್ಪಿಗೆ ಸುಪ್ರೀಂ ಕೋರ್ಟ್‌

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಎರಡು ಬಣಗಳ ನಡುವಿನ ವಿವಾದದ ನಡುವೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಫ್ರೀಜ್ ಮಾಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ...

ಸೌಜನ್ಯ ಪ್ರಕರಣ: ಸುಪ್ರೀಂ ಆದೇಶದ ಪ್ರತಿ ಸಿಕ್ಕ ತಕ್ಷಣ SIT ರಚನೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮರುತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಕೈ ಸೇರಿದ ತಕ್ಷಣ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ...

ದೆಹಲಿ| ಸಾಮೂಹಿಕ ಮತಾಂತರ ಆರೋಪ; ಕ್ರಿಶ್ಚಿಯನ್ನರ ವಾರಾಂತ್ಯದ ಪ್ರಾರ್ಥನೆಗೆ ಅಡ್ಡಿಪಡಿಸಿದ ಹಿಂದುತ್ವ ಗುಂಪು

ದೆಹಲಿಯ ಜನಕಪುರಿಯಲ್ಲಿರುವ ಹಯಾತ್ ಸೆಂಟ್ರಿಕ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ (ಸೆಪ್ಟೆಂಬರ್ 20 ರಂದು) ಕ್ರಿಶ್ಚಿಯನ್ನರ ಭಾನುವಾರದ ವಾಡಿಕೆಯ ಪ್ರಾರ್ಥನಾ ಸಭೆಗೆ ನುಗ್ಗಿದ ಹಿಂದುತ್ವ ಗುಂಪು ಪ್ರಾರ್ಥನೆಗೆ ಅಡ್ಡಪಿಡಿಸಿದೆ. ಹಿಂದೂಗಳ ಸಾಮೂಹಿಕ ಮತಾಂತರ ನಡೆಯುತ್ತಿದೆ...

ಕಸ್ತೂರಿ ರಂಗನ್ ವರದಿ ತಿರಸ್ಕಾರ, ಮಲೆನಾಡಿನ ಜನರ ಬದುಕಿಗೆ ಶಾಶ್ವತ ಪರಿಹಾರ : ಡಾ. ಜಿ. ಪರಮೇಶ್ವರ್

ಪಶ್ಚಿಮ ಘಟ್ಟದ ಜೀವ ವೈವಿಧ್ಯ ಮತ್ತು ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಗಳನ್ನು ಪದೇ ಪದೇ ಹೊರಡಿಸುತ್ತಿರುವುದು ಮಲೆನಾಡಿನ ಜನರ ನೆಮ್ಮದಿ ಕೆಡಿಸಿದೆ. ರಾಜ್ಯ ಸರ್ಕಾರವು...

‘ಇದು ಸಂಸ್ಕೃತಿಯಲ್ಲ, ಪಿತೃಪ್ರಭುತ್ವ’: ಜಮುಯಿ ಅಪ್ರಾಪ್ತ ಬಾಲಕಿ ಮೇಲಿನ ಕಿರುಕುಳದ ವಿಡಿಯೋಗೆ ರಾಹುಲ್ ಗಾಂಧಿ ಆಕ್ರೋಶ 

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಯನ್ನು ರಸ್ತೆಯಲ್ಲಿ ತಡೆದು ಪುರುಷರ ಗುಂಪೊಂದು ಕಿರುಕುಳ ನೀಡಿದೆ ಎಂದು ಆರೋಪಿಸಲಾದ ವೈರಲ್ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ...

ನಕಲಿ ಔಷಧಗಳ ವಿತರಣೆ ಜಾಲದೊಂದಿಗೆ ನಂಟು; 16 ಫಾರ್ಮಸಿಗಳ ಪರವಾನಗಿ ರದ್ದು

ಬಿಡದಿಯ ಫಾರ್ಮ್‌ಹೌಸ್ (ತೋಟದ ಮನೆ) ಒಂದರಲ್ಲಿ ಪತ್ತೆಯಾದ ನಕಲಿ ಔಷಧಗಳ ವಿತರಣೆಯ ಜಾಲದೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಸಂಸ್ಥೆಯು 16 ಫಾರ್ಮಸಿಗಳ...

ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ

ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ...

ಥಾಣೆ ಗಣೇಶೋತ್ಸವ 2026: ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಘರ್ಷಣೆ, ಬಿಜೆಪಿ ಮಾಜಿ ಉಪಮೇಯರ್ ಸೇರಿ 70-80 ಜನರ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಉಪಮೇಯರ್ ಹಾಗೂ ಹಾಲಿ ಕಾರ್ಪೊರೇಟರ್ ಉಪೇಕ್ಷಾ ಭೋಯಿರ್...