Homeಮುಖಪುಟಮಹಾಕುಂಭದ ಕುರಿತು ಟೀಕೆ; ಸಮಾಜವಾದಿ ಪಕ್ಷದ ಸಂಸದರ ವಿರುದ್ಧ ಎಫ್‌ಐಆರ್‌ ದಾಖಲು

ಮಹಾಕುಂಭದ ಕುರಿತು ಟೀಕೆ; ಸಮಾಜವಾದಿ ಪಕ್ಷದ ಸಂಸದರ ವಿರುದ್ಧ ಎಫ್‌ಐಆರ್‌ ದಾಖಲು

- Advertisement -
- Advertisement -

ಮಹಾ ಕುಂಭದ ಬಗ್ಗೆ ‘ಆಕ್ಷೇಪಾರ್ಹ’ ಹೇಳಿಕೆ ನೀಡಿದ್ದಕ್ಕಾಗಿ ಸಮಾಜವಾದಿ ಪಕ್ಷದ (ಎಸ್‌ಪಿ) ಲೋಕಸಭಾ ಸದಸ್ಯ ಅಫ್ಜಲ್ ಅನ್ಸಾರಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಉತ್ತರ ಪ್ರದೇಶದ ಗಾಜಿಪುರದ ಲೋಕಸಭಾ ಸದಸ್ಯ ಅನ್ಸಾರಿ, ”ಸ್ವರ್ಗದ ಮನೆ ತುಂಬಿದಂತೆ ಕಾಣುತ್ತದೆ; ಯಾರೂ ನರಕದಲ್ಲಿ ಉಳಿಯುವುದಿಲ್ಲ” ಎಂದು ಹೇಳಿದ್ದರು.

ಸುಮಾರು 50 ಕೋಟಿ ಭಕ್ತರು ‘ಸಂಗಮ’ದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂಬ ರಾಜ್ಯ ಸರ್ಕಾರದ ಹೇಳಿಕೆಯನ್ನು ಉಲ್ಲೇಖಿಸಿ ಅವರು ಮೇಲಿನ ಹೇಳಿಕೆ ನೀಡಿದ್ದರು ಎನ್ನಲಾಗಿದೆ.

ಪುರಾಣದ ಪ್ರಕಾರ, ಸಂಗಮ ನೀರಿನಲ್ಲಿ ಪವಿತ್ರ ಸ್ನಾನ ಮಾಡುವ ಯಾರೇ ಆಗಲಿ ಸ್ವರ್ಗದಲ್ಲಿ ಸ್ಥಾನ ಪಡೆಯುತ್ತಾರೆ, ಅವರ ಪಾಪಗಳು ತೊಳೆಯಲ್ಪಡುತ್ತವೆ ಎಂದು ನಂಬಲಾಗಿದೆ.

“ಲಗ್ತಾ ಹೈ ಸ್ವರ್ಗ್ ಹೌಸ್ ಫುಲ್ ಹೋ ಜಾಯೇಗಾ…ನರ್ಕ್ ಮೇ ಕೋ ಬಚೇಗಾ ಹಿ ನಹೀ” (ಸ್ವರ್ಗವು ಮನೆ ತುಂಬಿರುತ್ತದೆ ಮತ್ತು ನರಕದಲ್ಲಿ ಯಾರೂ ಇರುವುದಿಲ್ಲ ಎಂದು ತೋರುತ್ತದೆ) ಎಂದು ಘಾಜಿಪುರದಲ್ಲಿ ದಲಿತ ಸಂತ ರವಿದಾಸ್ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಅನ್ಸಾರಿ ಹೇಳಿದ್ದಾರೆ ಎಂದು ವರದಿಯಾಗಿದೆ.

ಮಹಾ ಕುಂಭದಲ್ಲಿ ನಡೆದ ‘ನಿರ್ವಹಣೆಯಲ್ಲಿನ ದುಷ್ಕೃತ್ಯ’ದ ಬಗ್ಗೆ ಅನ್ಸಾರಿ ರಾಜ್ಯ ಸರ್ಕಾರವನ್ನು ಟೀಕಿಸಿದ್ದಾರೆ ಎಂದು ವರದಿಯಾಗಿದೆ. “ಜನರು ರೈಲುಗಳ ಕಿಟಕಿಗಳನ್ನು ಒಡೆಯುತ್ತಿದ್ದಾರೆ.. ಭಯಭೀತರಾದ ಮಹಿಳೆಯರು ಮತ್ತು ಮಕ್ಕಳು ಬೋಗಿಗಳ ಒಳಗೆ ನಡುಗುತ್ತಿದ್ದಾರೆ. ಕಾಲ್ತುಳಿತದಲ್ಲಿ ಅನೇಕ ಜನರು ಸಾವನ್ನಪ್ಪಿದ್ದಾರೆ. ಆದರೆ, ರಾಜ್ಯ ಸರ್ಕಾರ ವಿವರಗಳನ್ನು ನೀಡುತ್ತಿಲ್ಲ” ಎಂದು ಅವರು ಕಾರ್ಯಕ್ರಮದಲ್ಲಿ ಹೇಳಿರುವುದಾಗಿ ಉಲ್ಲೇಖಿಸಲಾಗಿದೆ.

ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ ಆರೋಪದ ಮೇಲೆ ಘಾಜಿಪುರದ ಶಾದಿಯಾಬಾದ್ ಪೊಲೀಸ್ ಠಾಣೆಯಲ್ಲಿ ಅನ್ಸಾರಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಘಾಜಿಪುರದ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ; ಕೇರಳದಲ್ಲಿ ಮತ್ತೊಂದು ರ‍್ಯಾಗಿಂಗ್ ಪ್ರಕರಣ ಬೆಳಕಿಗೆ; 11 ನೇ ತರಗತಿ ವಿದ್ಯಾರ್ಥಿಯ ಕೈ ಮುರಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...