Homeಮುಖಪುಟಸೆಂಟ್ರಲ್ ವಿಸ್ತಾ ಯೋಜನೆಗೆ ವ್ಯಾಪಕ ವಿರೋಧ: ಪೋಟೋ, ವಿಡಿಯೊ ನಿಷೇಧಿಸಿದ ಸರ್ಕಾರ

ಸೆಂಟ್ರಲ್ ವಿಸ್ತಾ ಯೋಜನೆಗೆ ವ್ಯಾಪಕ ವಿರೋಧ: ಪೋಟೋ, ವಿಡಿಯೊ ನಿಷೇಧಿಸಿದ ಸರ್ಕಾರ

- Advertisement -
- Advertisement -

ಸೆಂಟ್ರಲ್ ವಿಸ್ತಾ ಪುನರಾಭಿವೃದ್ಧಿ ಯೋಜನೆಯ ಬಗ್ಗೆ ಸಾರ್ವಜನಿಕರು, ಪ್ರತಿಪಕ್ಷಗಳಿಂದ ವ್ಯಾಪಕ ವಿರೋಧ, ಟೀಕೆಗಳು ವ್ಯಕ್ತವಾದ ಹಿನ್ನೆಲೆ, ಕೇಂದ್ರ ಲೋಕೋಪಯೋಗಿ ಇಲಾಖೆ ಇಂಡಿಯಾ ಗೇಟ್ ಬಳಿಯ ನಿರ್ಮಾಣ ಸ್ಥಳದಲ್ಲಿ ಛಾಯಾಗ್ರಹಣ ಮತ್ತು ವಿಡಿಯೊ ರೆಕಾರ್ಡಿಂಗ್ ನಿಷೇಧಿಸಿದೆ.

ಸೆಂಟ್ರಲ್ ವಿಸ್ತಾದ ಕಾಮಗಾರಿ ಸ್ಥಳದಲ್ಲಿ ‘ಫೋಟೋಗ್ರಫಿ ಮಾಡುವಂತಿಲ್ಲ, ‘ವಿಡಿಯೊ ರೆಕಾರ್ಡಿಂಗ್ ನಿಷೇಧಿಸಲಾಗಿದೆ’ ಎಂಬ ಸೂಚನ ಫಲಕಗಳನ್ನು ಅಳವಡಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಲು ಅಧಿಕಾರಿಗಳು ನಿರಾಕರಿಸಿದ್ದಾರೆ.

ದೇಶದಲ್ಲಿ ಸಾವಿನ ಕೇಕೆ ಹಾಕಿಸುತ್ತಿರುವ ಕೊರೊನಾ ಸಾಂಕ್ರಾಮಿಕದ ಮಧ್ಯೆ ಸೆಂಟ್ರಲ್ ವಿಸ್ತಾ ಪುನರಾಭಿವೃದ್ಧಿ ಯೋಜನೆಯನ್ನು ಕಾರ್ಯಗತಗೊಳಿಸಿದ್ದಕ್ಕಾಗಿ ಸರ್ಕಾರವು ಪ್ರತಿಪಕ್ಷಗಳಿಂದ, ಸಾರ್ವಜನಿಕ ವಲಯದಿಂದ ಭಾರಿ ಟೀಕೆಗಳನ್ನು ಎದುರಿಸುತ್ತಿದೆ.

ಇದನ್ನೂ ಓದಿ: ಮೋದಿ ಸರ್ಕಾರದ ಹೊಸ ಸಂಸತ್ ಕಟ್ಟಡ ಸೆಂಟ್ರಲ್ ವಿಸ್ತಾ – ಒಂದು ಧ್ವಂಸ ಕಾರ್ಯಾಚರಣೆಯಷ್ಟೇ!

ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ರೋಗದ ಏರಿಕೆ ಹಿನ್ನೆಲೆಯಲ್ಲಿ ಭಾರತದಾದ್ಯಂತ ಹಲವಾರು ಜನಪರ ಸಂಘಟನೆಗಳು, ಸಿವಿಲ್ ಸೊಸೈಟಿ ಗ್ರೂಪ್ಸ್ ಮತ್ತು ಪರಿಸರ ಸಂಸ್ಥೆಗಳು ಕೇಂದ್ರದ ಮಹತ್ವಾಕಾಂಕ್ಷೆಯ ಈ ಯೋಜನೆಯನ್ನು ಮನವಿ ಮಾಡಿವೆ.

ಸುಮಾರು 20 ಸಾವಿರ ಕೋಟಿ ರೂ.ಗಳ ಯೋಜನೆಯನ್ನು ಸ್ಥಗಿತಗೊಳಿಸಿ ಮತ್ತು ಲಭ್ಯವಿರುವ ಎಲ್ಲ ಸಂಪನ್ಮೂಲಗಳನ್ನು ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಬಳಸಬೇಕೆಂದು 65 ಸಂಸ್ಥೆಗಳು ಹೊರಡಿಸಿದ ಹೇಳಿಕೆಯಲ್ಲಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿದೆ.

“ಅದ್ದೂರಿ ಸೆಂಟ್ರಲ್ ವಿಸ್ತಾ ನಿರ್ಮಾಣ ಸೇರಿದಂತೆ ಎಲ್ಲಾ ಅನಗತ್ಯ ಖರ್ಚುಗಳನ್ನು ನಿಲ್ಲಿಸಬೇಕು ಮತ್ತು ಲಭ್ಯವಿರುವ ಎಲ್ಲ ಸಂಪನ್ಮೂಲಗಳನ್ನು ತುರ್ತು ಕೊರೊನಾ ಪ್ರತಿಕ್ರಿಯೆಗೆ ಬಳಸಬೇಕು” ಎಂದು ಸಾಮಾಜಿಕ ಸಂಸ್ಥೆಗಳಲ್ಲಿ ಒಂದಾದ ವಿಕಾಲ್ಪ್ ಸಂಗಮ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಕಳೆದ ವಾರ, ಯೋಜನೆಯ ಬಗ್ಗೆ ಸರ್ಕಾರವನ್ನು ಟೀಕಿಸಿರುವ ಕಾಂಗ್ರೆಸ್ ಮೇಲೆ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಕಿಡಿಕಾರಿದ್ದಾರೆ. ಯುಪಿಎ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ನಾಯಕರು ಈ ವಿಚಾರವನ್ನು ಬೆಂಬಲಿಸಿ, ಈಗ ವಿರೋಧಿಸುತ್ತಿರುವ ಅವರ ವರ್ತನೆ ವಿಲಕ್ಷಣವಾಗಿದೆ ಎಂದು ಹೇಳಿದ್ದಾರೆ.

ತ್ರಿಕೋನ ಆಕಾರದಲ್ಲಿ ನಿರ್ಮಾಣವಾಗುತ್ತಿರುವ ಸಂಸತ್ ಭವನದ ಜತೆಗೆ ಕೇಂದ್ರೀಯ ಸಚಿವಾಲಯಗಳ ಮತ್ತು ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್‌ವರೆಗಿನ 3 ಕಿ.ಮೀ ಉದ್ದದ ರಾಜ್‌ಪತ್‌ ಮಾರ್ಗವನ್ನು ಪುನರುಜ್ಜೀವನಗೊಳಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಜೊತೆಗೆ ಪ್ರಧಾನ ಮಂತ್ರಿಗಳ ಹೊಸ ನಿವಾಸ ಮತ್ತು ಕಚೇರಿ ಕೂಡ ನಿರ್ಮಾಣವಾಗಲಿವೆ.

ಕೊರೊನಾ ಹೆಚ್ಚಾಗಿ ಆಕ್ಸಿಜನ್, ಬೆಡ್, ಆಸ್ಪತ್ರೆಗಳಲ್ಲಿ ಮೂಲಸೌಲಭ್ಯಗಳಿಲ್ಲದೇ ದೇಶದ ಜನರು ಪರದಾಡುತ್ತಿರುವಾಗಲೂ ಈ ಯೋಜನೆಯನ್ನು ನಿಲ್ಲಿಸದೇ ಕಾಮಗಾರಿ ನಡೆಸುತ್ತಿರುವುದರ ಕುರಿತು ಜನ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಹೊರಹಾಕಿದ್ದರು. ಸದ್ಯ ಈ ಯೋಜನೆಯ ಫೋಟೋ ಮತ್ತು ವಿಡಿಯೊ ರೆಕಾರ್ಡಿಂಗ್ ಮಾಡದಂತೆ ಸರ್ಕಾರ ತಡೆಯೊಡ್ಡಿದೆ.


ಇದನ್ನೂ ಓದಿ: ದೇಶದಲ್ಲಿ ಹೆಚ್ಚುತ್ತಿರುವ ಬ್ಲಾಕ್ ಫಂಗಸ್ ಸೋಂಕು: ಮಹಾರಾಷ್ಟ್ರದಲ್ಲೇ 2000 ಮಂದಿ ಸೋಂಕಿತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಮಾತನಾಡಬೇಕು , ನಮಗೆ ಸ್ವಾತಂತ್ರವಾಗಿರುವ ಅಭಿವ್ಯಕ್ತಿ ಸ್ವಾತಂತ್ರ ಉಳಿಸಬೇಕು. ಕೇಂದ್ರ ಸರ್ಕಾರ ತನ್ನ ಅಧಿಕಾರವನ್ನು ಕೇವಲ ಸ್ವಪ್ರತಿಷ್ಠೆ ಬಗ್ಗೆ ಯೋಚಿಸದೆ ಸಾರ್ವಜನಿಕ ಹಿತಾಸಕ್ತಿ ಯ ಬಗ್ಗೆ ಯೋಚಿಸ ಬೇಕು.

  2. This government never retreats respecting people’s demond since it is fascist in nature. It never stop new task work. Adoment government. No one Democrate in this party?

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...