Homeಮುಖಪುಟ'ಲಕ್ಷ್ಮಣ ರೇಖೆ ದಾಟಿದೆ': ಮೋದಿ ಸರ್ಕಾರವನ್ನು ಹೊಗಳಿದ ಶಶಿ ತರೂರ್ ನಿಲುವಿಗೆ ಕಾಂಗ್ರೆಸ್‌ ನಾಯಕರಲ್ಲಿ ಅಸಮಾಧಾನ

‘ಲಕ್ಷ್ಮಣ ರೇಖೆ ದಾಟಿದೆ’: ಮೋದಿ ಸರ್ಕಾರವನ್ನು ಹೊಗಳಿದ ಶಶಿ ತರೂರ್ ನಿಲುವಿಗೆ ಕಾಂಗ್ರೆಸ್‌ ನಾಯಕರಲ್ಲಿ ಅಸಮಾಧಾನ

- Advertisement -
- Advertisement -

‘ಆಪರೇಷನ್ ಸಿಂಧೂರ’ ಮತ್ತು ಅದರ ನಂತರದ ಬೆಳವಣಿಗೆಗಳಿಗೆ ಸಂಬಂಧಪಟ್ಟಂತೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಹೊಗಳಿದ ಸಂಸದ ಶಶಿ ತರೂರ್ ನಿಲುವಿಗೆ ಕಾಂಗ್ರೆಸ್‌ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.

ಭಾರತ-ಪಾಕ್ ಸಂಘರ್ಷದ ಕುರಿತ ಪಕ್ಷದ ಅಧಿಕೃತ ಹೇಳಿಕೆಗಿಂತ ಭಿನ್ನವಾಗಿ ಪದೇ ಪದೇ ಶಶಿ ತರೂರ್ ಹೇಳಿಕೆ ನೀಡುತ್ತಿರುವುದು. ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ಅವರನ್ನು ಹೊಗಳುತ್ತಿರುವುದಕ್ಕೆ ಕಾಂಗ್ರೆಸ್‌ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಣೆ, ಆ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಹೇಳಿಕೆ ಕುರಿತು ಚರ್ಚಿಸಲು ಗುರುವಾರ ಕಾಂಗ್ರೆಸ್‌ನ ಹಿರಿಯ ನಾಯಕರ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ, ‘ಶಶಿ ತರೂರ್ ಲಕ್ಷಣ ರೇಖೆ ದಾಟಿದ್ದಾರೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಹೇಳಿದ್ದಾಗಿ ವರದಿಯಾಗಿದೆ.

ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜೈರಾಮ್ ರಮೇಶ್, “ಶಶಿ ತರೂರ್ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ, ಪಕ್ಷದ ಅಧಿಕೃತ ನಿಲುವಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿ, ಆ ಬಳಿಕದ ಭಾರತ-ಪಾಕಿಸ್ತಾನ ಸಂಘರ್ಷ, ಕದನ ವಿರಾಮ ಘೋಷಣೆ, ಅದಕ್ಕೆ ನಾವು ಮಧ್ಯಸ್ಥಿಕೆ ವಹಿಸಿದ್ದೇವೆ ಎಂಬ ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿಕೆ, ಇವೆಲ್ಲವೂ ಮೋದಿ ಸರ್ಕಾರದ ವೈಫಲ್ಯ ಎಂಬುವುದು ಕಾಂಗ್ರೆಸ್‌ ಪಕ್ಷದ ಅಭಿಪ್ರಾಯವಾಗಿದೆ. ಈ ಸಂಬಂಧ ಪ್ರತಿದಿನ ಹಲವು ಪ್ರಶ್ನೆಗಳನ್ನು ಕಾಂಗ್ರೆಸ್‌ ಸರ್ಕಾರಕ್ಕೆ ಕೇಳುತ್ತಿದೆ. ಈ ನಡುವೆ ಸಂಸದ ಶಶಿ ತರೂರ್ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ಪರ ಬ್ಯಾಟ್ ಬೀಸುತ್ತಿರುವುದು ಕಾಂಗ್ರೆಸ್ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ.

“ಮೋದಿ ಸರ್ಕಾರದ ವಿದೇಶಾಂಗ ನೀತಿ ಸಂಪೂರ್ಣ ವಿಫಲವಾಗಿದ್ದು, ರಾಷ್ಟ್ರೀಯ ಹಿತಾಸಕ್ತಿಯ ದೃಷ್ಟಿಯಿಂದ ಅದನ್ನು ಎತ್ತಿ ತೋರಿಸುವುದು ಪ್ರತಿಯೊಬ್ಬ ಭಾರತೀಯ ನಾಯಕನ ಕರ್ತವ್ಯ” ಎಂದು ಕಾಂಗ್ರೆಸ್ ನಾಯಕ ಪ್ರವೀಣ್ ಚಕ್ರವರ್ತಿ ಹೇಳಿದ್ದಾರೆ.

“ತಿರುವನಂತಪುರಂ, ತಿರುಚಿರಾಪಳ್ಳಿ ಅಥವಾ ಥಾಣೆ ಯಾವುದೇ ಕ್ಷೇತ್ರದ ಸಂಸದರಾಗಿರಲಿ, ಇಂಗ್ಲಿಷ್, ತಮಿಳು ಅಥವಾ ಮರಾಠಿ ಯಾವುದೇ ಭಾಷೆಯಲ್ಲಿ ಏನೇ ಹೇಳಲಿ, ಸತ್ಯಗಳು ಮಾತ್ರ ನಿರ್ವಿವಾದ. ಅಮೆರಿಕ ಅಧ್ಯಕ್ಷ ಟ್ರಂಪ್ ಭಾರತ ಮತ್ತು ಪಾಕಿಸ್ತಾನ ಸಮಾನರು ಎಂದು ಹೇಳಿದ್ದಾರೆ. ಕಾಶ್ಮೀರ ಅಂತಾರಾಷ್ಟ್ರೀಯ ವಿಷಯವಾಗಿದೆ, ಅಮೆರಿಕವು ಭಾರತವನ್ನು ಕದನ ವಿರಾಮಕ್ಕೆ ಒಪ್ಪಿಕೊಳ್ಳುವಂತೆ ಒತ್ತಾಯಿಸಿತು ಎಂದು ಹೇಳಿದ್ದಾರೆ” ಎಂದು ಚಕ್ರವರ್ತಿ ತಿಳಿಸಿದ್ದಾರೆ.

ತನ್ನ ನಿಲುವಿಗೆ ಪಕ್ಷದ ನಾಯಕರು ಅಸಮಾಧಾನಗೊಂಡ ಬಗ್ಗೆ ಪ್ರತಿಕ್ರಿಯಿಸಿರುವ ತರೂರ್, “ನನ್ನ ಅಭಿಪ್ರಾಯಗಳು ವೈಯಕ್ತಿವಾಗಿದ್ದು, ಪಕ್ಷದ ಅಧಿಕೃತ ನಿಲುವಲ್ಲ” ಎಂದಿದ್ದಾರೆ.

” ನಾನೊಬ್ಬ ಹೆಮ್ಮೆಯ ಭಾರತೀಯ ನಾಗರಿಕನಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದೇನೆ. ಅದು ನನ್ನ ವೈಯಕ್ತಿಕ ಅಭಿಪ್ರಾಯ. ನಾನು ಪಕ್ಷದ ವಕ್ತಾರನಲ್ಲ, ನನ್ನ ಹೇಳಿಕೆ ಪಕ್ಷದ ಅಧಿಕೃತ ಹೇಳಿಕೆಯಲ್ಲ. ನಾನು ಹೇಳಿದ್ದನ್ನು ನೀವು ಒಪ್ಪಬಹುದು ಅಥವಾ ತಿರಸ್ಕರಿಸಬಹುದು. ಆ ಕಾರಣಕ್ಕೆ ನನ್ನ ಹೊಗಳಬಹುದು, ತೆಗಳಬಹುದು, ಅದು ನಿಮ್ಮಿಷ್ಟ” ಎಂದು ತರೂರ್ ಹೇಳಿದ್ದಾರೆ.

ತನ್ನ ನಿಲುವಿನ ಕುರಿತು “ಲಕ್ಷಣ ರೇಖೆ ದಾಟಿದ್ದಾರೆ” ಎಂಬ ಅಭಿಪ್ರಾಯ ಪಕ್ಷದ ಕಾರ್ಯಕಾರಿ ಸಭೆಯಲ್ಲಿ ವ್ಯಕ್ತವಾಗಿದೆ ಎಂಬುವುದನ್ನು ಶಶಿತರೂರ್ ತಳ್ಳಿ ಹಾಕಿದ್ದಾರೆ.

ಬುಡಕಟ್ಟು ಜನಾಂಗದ ನಿರ್ಲಕ್ಷ್ಯಕ್ಕೆ ಬಿಜೆಪಿ ವಿರುದ್ಧ ವಾಗ್ದಾಳಿ; ಟಿಎಂಸಿ ಸೇರಿದ ಮಾಜಿ ಕೇಂದ್ರ ಸಚಿವ ಜಾನ್ ಬಾರ್ಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...