HomeಮುಖಪುಟCRPF ಸೈನಿಕನ ಮೇಲೆ ಪೊಲೀಸರಿಂದ ಹಲ್ಲೆ: ಗೃಹಮಂತ್ರಿ ಬೊಮ್ಮಾಯಿ ರಾಜೀನಾಮೆಗೆ ಒತ್ತಡ

CRPF ಸೈನಿಕನ ಮೇಲೆ ಪೊಲೀಸರಿಂದ ಹಲ್ಲೆ: ಗೃಹಮಂತ್ರಿ ಬೊಮ್ಮಾಯಿ ರಾಜೀನಾಮೆಗೆ ಒತ್ತಡ

ಟ್ವಿಟ್ಟರ್‌ನಲ್ಲಿ #ResignHMBommai ಹ್ಯಾಸ್‌ಟ್ಯಾಗ್‌ ಟ್ರೆಂಡ್‌ ಆಗಿದ್ದು, ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಸಾವಿರಾರು ಜನ ಸೈನಿಕನ ಪರ ನಿಂತಿದ್ದಾರೆ.

- Advertisement -
- Advertisement -

CRPF ಸೈನಿಕ ಸಚಿನ್ ಸಾವಂತ್ ಮೇಲೆ ಬೆಳಗಾವಿ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಸೈನಿಕನನ್ನು ಬಂಧಿಸಿ, ಕೈಕೊಳ ಹಾಕಿ ಚಿತ್ರಹಿಂಸೆ ಕೊಟ್ಟಿದ್ದರ ಹೊಣೆ ಹೊತ್ತು ಕರ್ನಾಟಕದ ಗೃಹಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜೀನಾಮೆ ನೀಡಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಒತ್ತಡ ಹೇರಲಾಗಿದೆ.

ಟ್ವಿಟ್ಟರ್‌ನಲ್ಲಿ #ResignHMBommai ಹ್ಯಾಸ್‌ಟ್ಯಾಗ್‌ ಟ್ರೆಂಡ್‌ ಆಗಿದ್ದು, ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಸಾವಿರಾರು ಜನ ಸೈನಿಕನ ಪರ ನಿಂತಿದ್ದಾರೆ.

ಇದೇ ಸಂದರ್ಭದಲ್ಲಿ CRPF ಸೈನಿಕ ಸಚಿನ್ ಸಾವಂತ್ ಮೇಲಿನ ಪ್ರಕರಣವನ್ನು ಪೊಲೀಸ್‌ ಇಲಾಖೆ ಕೈಬಿಡಲಿದೆ ಎಂದು ಎಎನ್‌ಐ ವರದಿ ಮಾಡಿದೆ. ಸಚಿನ್‌ ಸಾವಂತ್‌ಗೆ ಜಾಮೀನು ದೊರೆತಿದ್ದು ಇಂದು ಬಿಡುಗಡೆಯಾಗಿದ್ದಾರೆ.

ಕೊರೊನಾ ವೈರಸ್ ಮುನ್ನೆಚ್ಚರಿಕೆಗಳನ್ನು ಉಲ್ಲಂಘಿಸಿ ಮಾಸ್ಕ್‌ ಧರಿಸದೇ  ನಂತರ CRPF ಕಮಾಂಡೋ (ಮಾವೋವಾದಿ ವಿರೋಧಿ ಕೋಬ್ರಾ ಘಟಕದ ಕಮಾಂಡೋ) ಸಚಿನ್ ಸಾವಂತ್‌ರನ್ನು ಬೆಳಗಾವಿ ಜಿಲ್ಲೆಯಲ್ಲಿ ಬಂಧಿಸಿ ಪೊಲೀಸ್ ಠಾಣೆಯಲ್ಲಿ ಕೈಕೋಳ ತೊಡಿಸಿ ಕಟ್ಟಿ ಹಾಕಿದ ಚಿತ್ರ ವೈರಲ್‌ ಆಗಿದ್ದು ವಿವಾದಕ್ಕೆ ನಾಂದಿಯಾಗಿತ್ತು.

ಸಾಮಾನ್ಯ ಬಟ್ಟೆ ಧರಿಸಿದ್ದ ‌ಅವರು ರಜೆಯ ಕಾರಣಕ್ಕೆ ಊರಿನಲ್ಲಿದ್ದು ಮಾಸ್ಕ್‌ ಹಾಕದೇ ಹೊರಬಂದು ತಮ್ಮ ಬೈಕ್‌ ತೊಳೆಯುತ್ತಿದ್ದರು. ಅದಕ್ಕಾಗಿ ತನ್ನನ್ನು ಥಳಿಸಿ, ಕೈಕಂಬ ಹಾಕಿ ನೆಲದ ಮೇಲೆ ಕುಳಿತುಕೊಳ್ಳುವಂತೆ ಮಾಡಿದರೆಂದು ಸಚಿನ್ ಸಾವಂತ್ ಆರೋಪಿಸಿದ್ದಾರೆ.

ಸೆಂಟ್ರಲ್ ರಿಸರ್ವ್ ಪೋಲಿಸ್ ಫೋರ್ಸ್ (ಸಿಆರ್ಪಿಎಫ್) ನ ಕೋಬ್ರಾ ಅಥವಾ ಕಮಾಂಡೋ ಬೆಟಾಲಿಯನ್ ಗೆರಿಲ್ಲಾ ಯುದ್ಧದಲ್ಲಿ ನುರಿತ ಮತ್ತು ಸಾಮಾನ್ಯವಾಗಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಸಚಿನ್ ಸಾವಂತ್ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಈ ಕುರಿತು ಸಿಆರ್ಪಿಎಫ್ ಕರ್ನಾಟಕ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಅವರಿಗೆ ಪತ್ರ ಬರೆದಿದ್ದು, ಏಪ್ರಿಲ್ 23 ರಂದು ಕಮಾಂಡೋ ಸಚಿನ್ ಸಾವಂತ್ ಅವರನ್ನು ಬಂಧಿಸುವ ಮೊದಲು ರಾಜ್ಯ ಪೊಲೀಸರು ಸಿಆರ್ಪಿಎಫ್ ಶ್ರೇಣಿಯನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರೆ ಅಹಿತಕರ ಪರಿಸ್ಥಿತಿಯನ್ನು ತಪ್ಪಿಸಬಹುದಿತ್ತು ಎಂದು ದೂರಿದೆ.

ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ಉಲ್ಲೇಖಿಸಿದ ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ಸಿಆರ್ಪಿಎಫ್ ಪೊಲೀಸರ ದುಷ್ಕೃತ್ಯದ ವಿರುದ್ಧ ಎಫ್ಐಆರ್ ದಾಖಲಿಸಲು ಯೋಚಿಸುತ್ತಿದೆ ಎನ್ನಲಾಗಿದೆ.

ಕೋವಿಡ್‌-19 ಲಾಕ್‌ಡೌನ್ ಅನ್ನು ಜಾರಿಗೊಳಿಸುವ ಪೊಲೀಸರು ಕಮಾಂಡೋವನ್ನು “ಕೈಕೋಳ ಹಾಕಿ ಪೊಲೀಸ್ ಠಾಣೆಯಲ್ಲಿ ಬರಿಗಾಲಿನಲ್ಲಿ ಅವರನ್ನು ಸರಪಳಿ ಹಾಕಿ ಬಂಧಿಸಲಾಗಿದೆ” ಎಂದು ಸಿಆರ್‌ಪಿಎಫ್ ತನ್ನ ಪತ್ರದಲ್ಲಿ ತಿಳಿಸಿದೆ.

ಇಬ್ಬರು ಬೀಟ್ ಕಾನ್‌ಸ್ಟೆಬಲ್‌ಗಳು ಅವನನ್ನು ನೋಡಿದಾಗ ಸಚಿನ್ ಸಾವಂತ್ “ಮಾಸ್ಕ್‌ ಇಲ್ಲದೇ ರಸ್ತೆಯಲ್ಲಿದ್ದರು” ಎಂದು ಪೊಲೀಸರು ಕೋಬ್ರಾ ಘಟಕಕ್ಕೆ ಪತ್ರ ಬರೆದಿದ್ದಾರೆ.

“ಇದ್ದಕ್ಕಿದ್ದಂತೆ ಸಚಿನ್ ಬೀಟ್ ಕಾನ್ಸ್‌ಸ್ಟೇಬಲ್‌ಗಳೊಂದಿಗೆ ಹೊಲಸು ಭಾಷೆಯಲ್ಲಿ ವಾದಿಸಿದರು ಮತ್ತು ನಾನು ಸಿಆರ್ಪಿಎಫ್ ಪೊಲೀಸ್ ಆಗಿದ್ದು ನಾನು ಎಂದಿಗೂ ನಿಮ್ಮ ನಿಯಮಗಳನ್ನು ಅನುಸರಿಸುವುದಿಲ್ಲ, ನೀವು ನನ್ನನ್ನು ಕೇಳಬೇಡಿ” ಎಂದು ಪೊಲೀಸರು ತಿಳಿಸಿದ್ದಾರೆ.

ಕಾನ್‌ಸ್ಟೆಬಲ್‌ಗಳು ಕಮಾಂಡೋವನ್ನು ವಿನಂತಿಸಿದ್ದಾರೆ ಆದರೆ ಸಚಿನ್ ಸಾವಂತ್ “ತನ್ನ ಕೈ ಮತ್ತು ಕಾಲುಗಳಿಂದ” ಅವರ ಮೇಲೆ ಹಲ್ಲೆ ಮಾಡಿದರು. ಸರ್ಕಾರಿ ಕರ್ತವ್ಯದಲ್ಲಿದ್ದವರಿಗೆ ಅಡ್ಡಿಪಡಿಸಿದರು ಎಂದು ಪತ್ರದಲ್ಲಿ ಹೇಳಲಾಗಿದೆ. ಆತನನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಪೊಲೀಸರು ಪತ್ರದಲ್ಲಿ ತಿಳಿಸಿದ್ದಾರೆ.

ಸಿಆರ್ಪಿಎಫ್ ಹೇಳುವಂತೆ ಸೈನಿಕನು ತನ್ನ ಮನೆಯ ಹೊರಗಡೆ ಇದ್ದುದರಿಂದ ತಾನು ಮಾಸ್ಕ್‌ ಧರಿಸಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾನೆ.

“ನಾವು ಕರ್ನಾಟಕದ ರಾಜ್ಯ ಪೊಲೀಸ್ ಮುಖ್ಯಸ್ಥರೊಂದಿಗೆ ಪ್ರಕರಣವನ್ನು ಕೈಗೆತ್ತಿಕೊಂಡಿದ್ದೇವೆ. ಅವರ (ಸಾವಂತ್) ಜಾಮೀನು ಅರ್ಜಿಯು ಮಂಗಳವಾರ ನ್ಯಾಯಾಲಯಕ್ಕೆ ಬರುತ್ತಿದೆ ಮತ್ತು ಸಿಆರ್ಪಿಎಫ್ ಕೂಡ ತನ್ನ ಸ್ಥಳೀಯ ಅಧಿಕಾರಿಗಳ ಮೂಲಕ ನ್ಯಾಯಾಲಯದಲ್ಲಿರಬೇಕು. ಪ್ರಕರಣ ತಾರ್ಕಿಕ ತೀರ್ಮಾನಕ್ಕೆ ಬರಲು ತನಿಖೆಯನ್ನು ಅನುಸರಿಸಬೇಕು ಎಂದು ಸಿಆರ್ಪಿಎಫ್ ವಕ್ತಾರ ಮೋಸೆಸ್ ದಿನಕರನ್ ಪಿಟಿಐಗೆ ತಿಳಿಸಿದ್ದಾರೆ.

ಸಿಆರ್ಪಿಎಫ್ ವೀಡಿಯೊದಲ್ಲಿ, “ಪೊಲೀಸ್ ಸಿಬ್ಬಂದಿಗಳ ನಡವಳಿಕೆ ನಾಗರಿಕತೆಯಿಂದ ಕೂಡಿಲ್ಲ ಎಂಬುದು ಸ್ಪಷ್ಟವಾಗಿದೆ” ಎಂದಿದ್ದಾರೆ. ಸೈನಿಕನಿಗೆ ನ್ಯಾಯ ಒದಗಿಸಲು ನಾವು ಪ್ರಯತ್ನಿಸುತ್ತೇವೆ” ಎಂದು ತಿಳಿಸಿದೆ.


ಇದನ್ನೂ ಓದಿ: ಸಾಮಾಜಿಕ ಅಂತರ ಮರೆತ ಮಧ್ಯಪ್ರದೇಶ ಆರೋಗ್ಯ ಸಚಿವ; ತೀವ್ರ ಟೀಕೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸಿ.ಆರ್.ಪಿ.ಎಫ್. ಯೋದನ ವಿರುದ್ಧ ಅಮಾನುಶವಾಗಿ ವರ್ತಿಸಿರುವ ಪೊಲೀಸರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...