ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿರುವುದರಿಂದ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವರಾದ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ಈ ಕುರಿತು ಸಚಿವರ ಹೇಳಿಕೆಯನ್ನು ವರದಿ ಮಾಡಿರುವ ಎಎನ್‌ಐ, “ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಳದಿಂದಾಗಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗಿದೆ. ಇದು ಕ್ರಮೇಣ ಕಡಿಮೆಯಾಗಲಿದೆ. ಕೊರೊನಾ ರೋಗವು ಇಂಧನ ಉತ್ಪಾದನೆ ಮೇಲೆ ಪರಿಣಾಮ ಬೀರುತ್ತಿರುವುದರಿಂದ ಜಾಗತಿಕ ಪೂರೈಕೆಯೂ ಕುಸಿದಿದೆ” ಎಂದು ಹೇಳಿದ್ದಾರೆ.
Due to an increase in prices of crude oil in international markets, consumer price (for petrol & diesel) has risen. This will soften gradually. Global supply was reduced due to COVID in turn affecting production as well: Union Petroleum Minister Dharmendra Pradhan pic.twitter.com/TN9N52U2rm
— ANI (@ANI) February 23, 2021
ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪಿಗೆ ತರಲು ಜಿಎಸ್‌ಟಿ ಕೌನ್ಸಿಲ್‌ಗೆ ನಿರಂತರವಾಗಿ ವಿನಂತಿಸುತ್ತಿದ್ದೇವೆ. ಇದರಿಂದ ಜನರಿಗೆ ಅನುಕೂಲವಾಗಲಿದೆ ಎಂದೂ ಹೇಳಿದ್ದಾರೆ.
ಇಂಧನ ಬೆಲೆ ಏರಿಕೆ ವಿರುದ್ಧ ಕೇಂದ್ರ ಸರ್ಕಾರವನ್ನು ದೂರಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಧಮೇಂದ್ರ ಪ್ರಧಾನ್ ವಾಗ್ದಾಳಿ ನಡೆಸಿದ್ದು, “ರಾಜಸ್ಥಾನ ಹಾಗೂ ಮಹಾರಾಷ್ಟ್ರದಲ್ಲಿ ಗರಿಷ್ಠ ತೆರಿಗೆಯಿದೆ ಎಂಬುದು ಸೋನಿಯಾಗೆ ತಿಳಿದಿರಬೇಕು. ಲಾಕ್‌ಡೌನ್ ಸಮಯದಲ್ಲಿ ಕೇಂದ್ರ ಹಾಗೂ ರಾಜ್ಯ ಗಳಿಕೆಯು ಕುಸಿದಿದೆ. ಉದ್ಯೋಗಗಳನ್ನು ಹೆಚ್ಚಿಸಲು ಬಜೆಟ್‌ನಲ್ಲಿ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಹಂಚಿಕೆ ನೀಡಿದ್ದೇವೆ” ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ದಲಿತ ಮಹಿಳೆ ಮೇಲೆ ನಿರಂತರ ಲೈಂಗಿಕ ಕಿರುಕುಳ, ವಂಚನೆ ಆರೋಪ: ಕ್ರಮಕ್ಕೆ ಮಹಿಳೆಯ ಆಗ್ರಹ
ಆದರೆ ಜಾಗತಿಕ ಮಾರುಕಟ್ಟೆಯಲ್ಲಿ ಇಂಧನ ಬೆಲೆ ಕಡಿಮೆಯಿದೆ ಎಂದು ಹಲವರು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಡಾ. ಬಸವರಾಜು ವೀಡಿಯೋವೊಂದನ್ನು ಮಾಡಿದ್ದು, ಅದರಲ್ಲಿ 2014 ರಿಂದ 2021ರ ವರೆಗೂ ಪೆಟ್ರೋಲ್ ಬೆಲೆಯಲ್ಲಿ ಆದಂತಹ ವೈಪರೀತ್ಯಗಳನ್ನು ವಿವರಿಸಿದ್ದಾರೆ. ಈ ವೀಡಿಯೋವನ್ನು ನೋಡಿದರೆ ಕೇಂದ್ರ ಸಚಿವರು ಹಸಿ ಸುಳ್ಳು ಹೇಳುತ್ತಿದ್ದಾರೆ ಎಂದು ತಿಳಿದುಬರುತ್ತದೆ.
ಇದನ್ನೂ ಓದಿ: ರಂಜನ್ ಗೊಗೊಯ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿ: ಸಾಕೇತ್ ಗೋಖಲೆ ಆಗ್ರಹ


