Homeಮುಖಪುಟಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದೆ: ಕೇಂದ್ರ ಸಚಿವರು ಸುಳ್ಳು ಹೇಳಿದರೇ?

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದೆ: ಕೇಂದ್ರ ಸಚಿವರು ಸುಳ್ಳು ಹೇಳಿದರೇ?

- Advertisement -
- Advertisement -

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿರುವುದರಿಂದ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವರಾದ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಈ ಕುರಿತು ಸಚಿವರ ಹೇಳಿಕೆಯನ್ನು ವರದಿ ಮಾಡಿರುವ ಎಎನ್‌ಐ, “ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಳದಿಂದಾಗಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗಿದೆ. ಇದು ಕ್ರಮೇಣ ಕಡಿಮೆಯಾಗಲಿದೆ. ಕೊರೊನಾ ರೋಗವು ಇಂಧನ ಉತ್ಪಾದನೆ ಮೇಲೆ ಪರಿಣಾಮ ಬೀರುತ್ತಿರುವುದರಿಂದ ಜಾಗತಿಕ ಪೂರೈಕೆಯೂ ಕುಸಿದಿದೆ” ಎಂದು ಹೇಳಿದ್ದಾರೆ.

ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪಿಗೆ ತರಲು ಜಿಎಸ್‌ಟಿ ಕೌನ್ಸಿಲ್‌ಗೆ ನಿರಂತರವಾಗಿ ವಿನಂತಿಸುತ್ತಿದ್ದೇವೆ. ಇದರಿಂದ ಜನರಿಗೆ ಅನುಕೂಲವಾಗಲಿದೆ ಎಂದೂ ಹೇಳಿದ್ದಾರೆ.

ಇಂಧನ ಬೆಲೆ ಏರಿಕೆ ವಿರುದ್ಧ ಕೇಂದ್ರ ಸರ್ಕಾರವನ್ನು ದೂರಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಧಮೇಂದ್ರ ಪ್ರಧಾನ್ ವಾಗ್ದಾಳಿ ನಡೆಸಿದ್ದು, “ರಾಜಸ್ಥಾನ ಹಾಗೂ ಮಹಾರಾಷ್ಟ್ರದಲ್ಲಿ ಗರಿಷ್ಠ ತೆರಿಗೆಯಿದೆ ಎಂಬುದು ಸೋನಿಯಾಗೆ ತಿಳಿದಿರಬೇಕು. ಲಾಕ್‌ಡೌನ್ ಸಮಯದಲ್ಲಿ ಕೇಂದ್ರ ಹಾಗೂ ರಾಜ್ಯ ಗಳಿಕೆಯು ಕುಸಿದಿದೆ. ಉದ್ಯೋಗಗಳನ್ನು ಹೆಚ್ಚಿಸಲು ಬಜೆಟ್‌ನಲ್ಲಿ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಹಂಚಿಕೆ ನೀಡಿದ್ದೇವೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ದಲಿತ ಮಹಿಳೆ ಮೇಲೆ ನಿರಂತರ ಲೈಂಗಿಕ ಕಿರುಕುಳ, ವಂಚನೆ ಆರೋಪ: ಕ್ರಮಕ್ಕೆ ಮಹಿಳೆಯ ಆಗ್ರಹ

ಆದರೆ ಜಾಗತಿಕ ಮಾರುಕಟ್ಟೆಯಲ್ಲಿ ಇಂಧನ ಬೆಲೆ ಕಡಿಮೆಯಿದೆ ಎಂದು ಹಲವರು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಡಾ. ಬಸವರಾಜು ವೀಡಿಯೋವೊಂದನ್ನು ಮಾಡಿದ್ದು, ಅದರಲ್ಲಿ 2014 ರಿಂದ 2021ರ ವರೆಗೂ ಪೆಟ್ರೋಲ್ ಬೆಲೆಯಲ್ಲಿ ಆದಂತಹ ವೈಪರೀತ್ಯಗಳನ್ನು ವಿವರಿಸಿದ್ದಾರೆ. ಈ ವೀಡಿಯೋವನ್ನು ನೋಡಿದರೆ ಕೇಂದ್ರ ಸಚಿವರು ಹಸಿ ಸುಳ್ಳು ಹೇಳುತ್ತಿದ್ದಾರೆ ಎಂದು ತಿಳಿದುಬರುತ್ತದೆ.


ಇದನ್ನೂ ಓದಿ: ರಂಜನ್ ಗೊಗೊಯ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿ: ಸಾಕೇತ್ ಗೋಖಲೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...