Homeಮುಖಪುಟಮೇಕೆದಾಟು ಯೋಜನೆ ವಿರೋಧಿಸಿದ ಅಣ್ಣಾಮಲೈಗೆ ಸಿ.ಟಿ ರವಿ ಬೆಂಬಲ!

ಮೇಕೆದಾಟು ಯೋಜನೆ ವಿರೋಧಿಸಿದ ಅಣ್ಣಾಮಲೈಗೆ ಸಿ.ಟಿ ರವಿ ಬೆಂಬಲ!

ಸಿ.ಟಿ ರವಿ ಎನ್ ಸ್ವಾಮಿ ಇದು? ರಾಜ್ಯ ದ್ರೋಹಿ ಇದ್ದೀರಿ ನೀವು. ಅಸಹ್ಯ ಅಗಲ್ವೇ, ನಿಮ್ಮ ಸ್ವಾರ್ಥಕ್ಕೆ ರಾಜ್ಯನೆ ಮಾರುತ್ತೀರ? ನಿಮ್ಮ ಧೋರಣೆಗೆ ಧಿಕ್ಕಾರ ಎಂದು ಸಾಮಾನ್ಯ ಕನ್ನಡಿಗ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕರ್ನಾಟಕವು ಮೇಕೆದಾಟು ಬಳಿ ಸಮನಾಂತರ ಜಲಾಶಯ ನಿರ್ಮಿಸುವ ಯೋಜನೆಯನ್ನು ತಮಿಳುನಾಡಿನ ಹಲವರು ವಿರೋಧಿಸಿರುವುದು ನಮಗೆಲ್ಲಾ ಗೊತ್ತಿದೆ. ಆದರೆ ಈ ಯೋಜನೆಗೆ ಕರ್ನಾಟಕದ ಶಾಸಕ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ!

ಆಗಸ್ಟ್ 5 ರಂದು ಮೇಕೆದಾಟು ಯೋಜನೆ ವಿರೋಧಿಸಿ ಅಣ್ಣಾಮಲೈ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ಆ ಚಿತ್ರಗಳನ್ನು ಟ್ವೀಟ್ ಮಾಡಿ ಕರ್ನಾಟಕದ ಸಹೋದರ, ಸಹೋದರಿಯರು ಈ ಯೋಜನೆಗೆ ಒತ್ತಡ ಹೇರದಂತೆ ಮನವಿ ಮಾಡುತ್ತೇನೆ ಎಂದು ಬರೆದಿದ್ದರು. ಅದನ್ನು ಸಿ.ಟಿ ರವಿ ಮರುಟ್ವೀಟ್ ಮಾಡುವ ಮೂಲಕ ಅಣ್ಣಾಮಲೈಗೆ ಬೆಂಬಲ ಸೂಚಿಸಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಅಣ್ಣಾಮಲೈಗೆ ಅವರ “ರಾಜ್ಯ ಮೊದಲು”, ಇದನ್ನು ರಿಟ್ವೀಟ್ ಮಾಡಿದ ಸಿ.ಟಿ ರವಿಗೆ “ದೇಶ ಮೊದಲು”.. ಈ ‘ದೇಮೋ’ಗಳು ಮನೆಗೆ ಮಗಾನೂ ಆಗೋದಿಲ್ಲ, ಊರಿಗೆ ಆಳೂ ಆಗೋದಿಲ್ಲ. ಒಟ್ಟಿನಲ್ಲಿ ಟೋಟಲ್ ಕುಲಘಾತಕರು.. ಎಂದು ಗುರು ಕುಲಕರ್ಣಿ ಕಿಡಿಕಾರಿದ್ದಾರೆ.

ಇದನ್ನ ರೀಟ್ವಿಟ್ ಮಾಡಿ ಸಪೋರ್ಟ್ ಮಾಡ್ತಿದ್ದಿರೇನ್ರಿ ಸಿಟಿ ರವಿ ಅವ್ರೇ, ಮೊದಲು ನಮ್ಮ‌ ಜನ ಸರಿಯಿಲ್ಲ, ನಾಡು, ನುಡಿ, ನೆಲ, ಜಲದ ವಿಷಯದಲ್ಲಿ ಬದ್ಧತೆ ಇಲ್ಲದವರನ್ನು ಆಯ್ಕೆ ಮಾಡ್ತಾರೆ. ನೋಡಿ ನಮ್ಮದೆ ತಪ್ಪು, ಅವಯ್ಯನಿಗೆ ತನ್ನ ನಾಡೇ ಮೊದಲಾಯಿತು, ಇವಯ್ಯನಿಗೆ?? ಎಂದು ಶಿವಸೂರ್ಯ ಎಂಬುವವರು ಪ್ರತಿಕ್ರಿಯೆ ನೀಡಿದ್ದಾರೆ.

ಸಿ.ಟಿ ರವಿ ಎನ್ ಸ್ವಾಮಿ ಇದು? ರಾಜ್ಯ ದ್ರೋಹಿ ಇದ್ದೀರಿ ನೀವು. ಅಸಹ್ಯ ಅಗಲ್ವೇ, ಕನ್ನಡಿಗರ ಹಿತಾಸಕ್ತಿ ವಿರುದ್ಧ ಬೆಂಬಲ ಕೊಡಲು? ನಿಮ್ಮ ಸ್ವಾರ್ಥಕ್ಕೆ ರಾಜ್ಯನೆ ಮಾರುತ್ತೀರ? ನಿಮ್ಮ ಧೋರಣೆಗೆ ಧಿಕ್ಕಾರ ಎಂದು ಸಾಮಾನ್ಯ ಕನ್ನಡಿಗ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಆಮ್ ಆದ್ಮಿ ಪಕ್ಷದ ಜಂಟಿ ಕಾರ್ಯದರ್ಶಿಗಳಾದ ದರ್ಶನ್ ಜೈನ್ ಮಾತನಾಡಿ, “ಸಿ.ಟಿ ರವಿ ಸೇರಿದಂತೆ ಹಲವು ಬಿಜೆಪಿ ನಾಯಕರಿಗೆ ಕನ್ನಡ ವಿರೋಧಿ ಧೋರಣೆ ಅನುಸರಿಸುವುದು ಚಟವಾಗಿಬಿಟ್ಟಿದೆ. ಇದರಲ್ಲಿ ಅವರು ವಿಕೃತ ಆನಂದ ಅನುಭವಿಸುತ್ತಿದ್ದಾರೆ. ಈ ಹಿಂದೆ ಕೂಡ ಶ್ರೀಲಂಕಾ ಪಾಸ್‌ಪೋರ್ಟ್ ವಿವಾದಯೆದ್ದಾಗ 5-6 ಭಾಷೆಗಳಲ್ಲಿ ಪಾಸ್‌ಪೋರ್ಟ್ ಮಾಹಿತಿ ಸಿಗುತ್ತಿರುವಾಗ ಕನ್ನಡದಲ್ಲಿ ಏಕಿಲ್ಲ? ಎಂದು ಒಬ್ಬರು ಪ್ರಶ್ನಿಸಿದ್ದರು. ಆಗ ಲೋಕಲ್ ಭಾಷೆಯಲ್ಲಿ ಪ್ರಿಂಟ್ ಹಾಕಲು ಇದೇನು ನಿಮ್ಮ ರೇಷನ್ ಕಾರ್ಡ್ ಅಂದುಕೊಂಡಿದ್ದೀರಾ? ಎಂದು ಸಿ.ಟಿ ರವಿ ವ್ಯಂಗ್ಯವಾಡಿದ್ದರು. ಆಗಲೂ ಜನ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು” ಎಂದು ವಿಷಾಧ ವ್ಯಕ್ತಪಡಿಸಿದರು.

ಇದೇ ಸಿ.ಟಿ ರವಿಯವರು ಹಿಂದೆ ನಾನು ನನ್ನ ಮಕ್ಕಳೊಡನೆ ಇಂಗ್ಲಿಷ್‌ನಲ್ಲಿ ಮಾತನಾಡಿಸುತ್ತೇನೆ, ಅವರನ್ನು ಇಂಗ್ಲಿಷ್ ಶಾಲೆಗೆ ಕಳಿಸುತ್ತೇನೆ ಎಂದು ಹೇಳಿಕೆ ನೀಡುವ ಮೂಲಕ ಕನ್ನಡಕ್ಕಿಂತ ಇಂಗ್ಲಿಷ್ ಮೇಲು ಎನ್ನುವ ಅರ್ಥದಲ್ಲಿ ಮಾತನಾಡಿದ್ದರು. ಅವರಿಗೆ ಕನ್ನಡದ ಭಾವನೆಗಳಿಗೆ ಬೆಲೆ ಕೊಡಬೇಕೆನ್ನುವ ಕನಿಷ್ಟ ಸೌಜನ್ಯವಿಲ್ಲ. ಅವರಿಗೆ ಅಧಿಕಾರದ ಮದ ಏರಿದ್ದು ನಾವು ಏನು ಜನಪರ ಕೆಲಸ ಮಾಡದಿದ್ದರೂ ಸಹ ನಾವು ಗೆಲ್ಲುತ್ತೇವೆ ಎನ್ನುವ ಅಹಂ ಅವರದು. ಬಿಜೆಪಿ ಪ್ರಾದೇಶಿಕ ಭಾವನೆಗಳಿಗೆ ಯಾವತ್ತೂ ಬೆಲೆ ಕೊಡುವುದಿಲ್ಲ. ಇದನ್ನು ಜನ ಈಗಲಾದರೂ ಅರ್ಥ ಮಾಡಿಕೊಳ್ಳಬೇಕು ಮತ್ತು ಬಿಸಿ ಮುಟ್ಟಿಸಬೇಕು ಎಂದು ದರ್ಶನ್ ಜೈನ್ ಅಭಿಪ್ರಾಯಪಟ್ಟಿರು.


ಇದನ್ನೂ ಓದಿ: ಮೇಕೆದಾಟು ಯೋಜನೆ ತ್ವರಿತಗೊಳಿಸಿ ಎಂದು ಎಎಪಿಯಿಂದ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...