Homeಮುಖಪುಟಸಚಿವ ಸುಧಾಕರ್ ಹೇಳಿಕೆ ಸಮರ್ಥಿಸಿಕೊಂಡ ಸಿ.ಟಿ ರವಿ: ವ್ಯಾಪಕ ಖಂಡನೆ

ಸಚಿವ ಸುಧಾಕರ್ ಹೇಳಿಕೆ ಸಮರ್ಥಿಸಿಕೊಂಡ ಸಿ.ಟಿ ರವಿ: ವ್ಯಾಪಕ ಖಂಡನೆ

ಆಧುನಿಕ ಭಾರತೀಯ ಮಹಿಳೆಯರು ಒಂಟಿಯಾಗಿ ಇರಲು ಬಯಸುತ್ತಾರೆ. ಮದುವೆಯಾದ ನಂತರ ಕೂಡಾ ಅವರು ಜನ್ಮ ನೀಡಲು ಇಷ್ಟಪಡುತ್ತಿಲ್ಲ. ಇದು ಸರಿಯಲ್ಲ ಎಂದು ಸಚಿವ ಸುಧಾಕರ್ ವಿವಾದಾತ್ಮಕ ಹೇಳಿಕೆ ನೀಡಿದ್ದರು.

- Advertisement -
- Advertisement -

ಆಧುನಿಕ ಮಹಿಳೆಯರು ಜನ್ಮ ನೀಡಲು ಬಯಸುತ್ತಿಲ್ಲ, ಇದು ಒಳ್ಳೆಯದಲ್ಲ ಎಂಬ ಸಚಿವ ಸುಧಾಕರ್‌ ರವರ ವಿವಾದಾತ್ಮಕ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿಯೇ ಆ ಹೇಳಿಕೆಯನ್ನು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಮರ್ಥಿಸಿಕೊಂಡಿದ್ದಾರೆ.

ಸುದ್ದಿವಾಹಿನಿ ಎಎನ್‌ಐ ಜೊತೆ ಮಾತನಾಡಿರುವ ಸಿ.ಟಿ ರವಿಯವರು, “ಸುಧಾಕರ್‌ರವರು ಹೇಳಿಕೆ ಗಮನಿಸಿದೆ. ಎಲ್ಲ ಮಹಿಳೆಯರು ಹಾಗಿಲ್ಲ. ಆದರೆ ಸ್ವಲ್ಪ ಓದಿರುವವರು, ಕೆಲಸ ಮಾಡುವವರು, ಮುಖ್ಯವಾಗಿ ಐಟಿ-ಬಿಟಿಯಲ್ಲಿ ಕೆಲಸ ಮಾಡುವವರ ಮನಸ್ಥಿತಿ ಹೆಚ್ಚು ಹಾಗಾಗಿದೆ. ಇದು ಗಂಭೀರವಾಗಿ ಯೋಚಿಸಬೇಕಾದ ವಿಷಯವಾಗಿದ್ದು ನಾವು ಇದರ ಬಗ್ಗೆ ಆಲೋಚಿಸುತ್ತೇವೆ” ಎಂದಿದ್ದಾರೆ.

ಮುಂದುವರಿದು ಸಣ್ಣ ಕುಟುಂಬಗಳು ಮತ್ತು ಪಾಶ್ಚಿಮಾತ್ಯ ಪ್ರಭಾವ ಹೆಚ್ಚಾದ ಕಾರಣಕ್ಕೆ ಹೀಗಾಗಿದೆ. ಆದರೆ ಎಲ್ಲ ಮಹಿಳೆಯರು ಹಾಗಿಲ್ಲ. ಇಂದಿಗೂ ಹೆಚ್ಚು ಭಾರತೀಯ ಮಹಿಳೆಯರು ಕುಟುಂಬದ ಮೇಲೆ ನಂಬಿಕೆಯಿಟ್ಟಿದ್ದಾರೆ. ನಮ್ಮ ದೇಶ ಅಮೆರಿಕ ಅಥವಾ ಇಂಗ್ಲೆಂಡ್‌ ರೀತಿಯದ್ದಲ್ಲ… ಇದರ ಬಗ್ಗೆ ನಾವು ಆಲೋಚಿಸಬೇಕಾಗಿದೆ ಎಂದಿದ್ದಾರೆ.

ಅಕ್ಟೋಬರ್ 10 ರಂದು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವೈಜ್ಞಾನಿಕ ಸಂಸ್ಥೆ(ನಿಮ್ಹಾನ್ಸ್)ಯಲ್ಲಿ ಭಾನುವಾರ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯಲ್ಲಿ ಮಾತನಾಡಿದ್ದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌, ‘‘ಆಧುನಿಕ ಭಾರತೀಯ ಮಹಿಳೆಯರು ಒಂಟಿಯಾಗಿ ಇರಲು ಬಯಸುತ್ತಾರೆ. ಮದುವೆಯಾದ ನಂತರ ಕೂಡಾ ಅವರು ಜನ್ಮ ನೀಡಲು ಇಷ್ಟಪಡುತ್ತಿಲ್ಲ. ಬಾಡಿಗೆ ತಾಯ್ತನದಿಂದ ಮಕ್ಕಳನ್ನು ಬಯಸುತ್ತಾರೆ, ಇದು ಸರಿಯಲ್ಲ. ಭಾರತೀಯ ಸಮಾಜದ ಮೇಲೆ ಪಾಶ್ಚಿಮಾತ್ಯ ಪ್ರಭಾವ ಹೆಚ್ಚಾಗಿದೆ. ಜನರು ತಮ್ಮ ಹೆತ್ತವರು ತಮ್ಮೊಂದಿಗೆ ಇರಲು ಇಷ್ಟಪಡುತ್ತಿಲ್ಲ ಎಂದು ಹೇಳಿದ್ದಾರೆ.’’ ಎಂದು ಹೇಳಿ ವಿವಾದ ಸೃಷ್ಟಿಸಿದ್ದರು.

ಸುಧಾಕರ್‌ರವರ ಹೇಳಿಕೆಗೆ ಸಮಾಜದ ಎಲ್ಲಾ ವಿಭಾಗಗಳಿಂದ ವ್ಯಾಪಕ ಟೀಕೆ ಕೇಳಿಬಂದಿತ್ತು. ಮಹಿಳೆಯರು ಹೀಗೆ ಇರಬೇಕೆಂದು ನಿರ್ಧರಿಸುವ ಹಕ್ಕು ನಿಮಗೆ ಕೊಟ್ಟವರ್ಯಾರು ಎಂದು ಕಿಡಿಕಾರಿದ್ದರು. ತದನಂತರ ಸ್ಪಷ್ಟೀಕರಣ ನೀಡಿದ್ದ ಸಚಿವರು, “ನಾವು ಇಂದು ಎದುರಿಸುತ್ತಿರುವ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ನಮ್ಮ ಭಾರತೀಯ ಕುಟುಂಬ ಮೌಲ್ಯ ವ್ಯವಸ್ಥೆಯು ಹೇಗೆ ಪರಿಹರಿಸಬಹುದು ಎಂಬುದರ ಬಗೆ ಮಾತನಾಡಲು ಬಯಸಿದ್ದೆ. ಮಹಿಳೆಯರನ್ನು ಪ್ರತ್ಯೇಕಗೊಳಿಸುವ ಉದ್ದೇಶ ಹೊಂದಿರಲಿಲ್ಲ” ಎಂದಿದ್ದರು.

ಸಚಿವರು ತಮ್ಮ ಸ್ತ್ರೀದ್ವೇ‍ಷದ ಹೇಳಿಕೆಯನ್ನು ಹಿಂಪಡೆದು ಕ್ಷಮೆ ಕೇಳಬೇಕೆಂದು ಸ್ವರಾಜ್ಯ ಇಂಡಿಯಾ ಪಕ್ಷ ಒತ್ತಾಯಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ಸ್ವರಾಜ್ ಇಂಡಿಯಾ ಬೆಂಗಳೂರು ಅಧ್ಯಕ್ಷೆ ನಿಶಾ ಗೂಳೂರು, “ಸಚಿವರ ಹೇಳಿಕೆ ಸತ್ಯದಿಂದ ಕೂಡಿಲ್ಲ. ಮಹಿಳೆಯರನ್ನು ಕೆಟ್ಟದಾಗಿ ಬಿಂಬಿಸುವಂತಿದೆ. ಅವರು ಮಹಿಳೆಯರನ್ನು ಮತ್ತು ಅವರ ಸಂತಾನೋತ್ಪತ್ತಿಯ ಹಕ್ಕುಗಳನ್ನು ಹೇಗೆ ನೋಡುತ್ತಾರೆ ಎಂಬುದರ ಪ್ರತಿಬಿಂಬ ಆ ಹೇಳಿಕೆ” ಎಂದು ವಿ‍‍ಷಾಧ ವ್ಯಕ್ತಪಡಿಸಿದ್ದಾರೆ.

ರಾಜಕಾರಣಿಗಳ ಅತ್ಯಂತ ಅಸಹ್ಯಕರವಾದ ಸ್ತ್ರೀದ್ವೇಷ, ಲೈಂಗಿಕತೆಯ ಹೇಳಿಕೆಗಳನ್ನು ನೀಡಿದಾಗ ಅದರ ವಿರುದ್ಧ ಹೋರಾಡುವುದು ಬಹಳ ಮುಖ್ಯ, ಇದರಿಂದ ಮಹಿಳೆಯರ ದನಿ ಅಡಗಿಸಲು ಸಾಧ್ಯವಿಲ್ಲ. ಸ್ವರಾಜ್ ಇಂಡಿಯಾ ಮಹಿಳಾ ವಿರೋಧಿ ಹೇಳಿಕೆಯನ್ನು ಬಲವಾಗಿ ಖಂಡಿಸುತ್ತದೆ ಮತ್ತು ಈ ಸಚಿವರು ತಕ್ಷಣ ಸಾರ್ವಜನಿಕ ಕ್ಷಮೆ ಕೇಳಬೇಕೆಂದು ಒತ್ತಾಯಿಸುತ್ತದೆ ಎಂದಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿಯೂ ಸಚಿವರ ಹೇಳಿಕೆಗೆ ತೀವ್ರ ವಿರೋಧಗಳು ದಾಖಲಾಗಿವೆ.


ಇದನ್ನೂ ಓದಿ: ಆಧುನಿಕ ಮಹಿಳೆಯರು ಜನ್ಮ ನೀಡಲು ಬಯಸುತ್ತಿಲ್ಲ, ಇದು ಒಳ್ಳೆಯದಲ್ಲ: ಸಚಿವ ಸುಧಾಕರ್‌ ವಿವಾದಾತ್ಮಕ ಹೇಳಿಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...