Homeಮುಖಪುಟಟಿಕೆಟ್ ಕೈತಪ್ಪಲು ಸಿ.ಟಿ ರವಿ ಕಾರಣ: ಬಿಜೆಪಿಗೆ ಗುಡ್ ಬೈ ಹೇಳಿದ ಎಂ.ಪಿ ಕುಮಾರಸ್ವಾಮಿ

ಟಿಕೆಟ್ ಕೈತಪ್ಪಲು ಸಿ.ಟಿ ರವಿ ಕಾರಣ: ಬಿಜೆಪಿಗೆ ಗುಡ್ ಬೈ ಹೇಳಿದ ಎಂ.ಪಿ ಕುಮಾರಸ್ವಾಮಿ

- Advertisement -
- Advertisement -

ಮೂಡಿಗೆರೆ ಬಿಜೆಪಿ ಕೈ ತಪ್ಪಿದ್ದಕ್ಕೆ ಸಿ.ಟಿ ರವಿ ವಿರುದ್ಧ ಕಿಡಿಕಾರಿರುವ ಶಾಸಕ ಎಂ.ಪಿ ಕುಮಾರಸ್ವಾಮಿಯವರು ಶಾಸಕ ಸ್ಥಾನಕ್ಕೆ ಮತ್ತು ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಸಿಟಿ ರವಿಯವರಿಗೆ ನಿಷ್ಠರಾಗಿದ್ದರೆ, ಅವರು ಹೇಳಿದಂತೆ ಕೇಳಿದರೆ ಟಿಕೆಟ್ ಸಿಗುತ್ತಿತ್ತೇನೊ. ಆದರೆ ಅದು ನನ್ನಿಂದ ಸಾಧ್ಯವಿಲ್ಲ. ನನಗೆ ಟಿಕೆಟ್ ಕೈ ತಪ್ಪಲು ಅವರೇ ನೇರ ಕಾರಣ. ನಾನು ಏನು ಅನ್ಯಾಯ ಮಾಡಿದೆ ಎಂದು ಈ ರೀತಿ ಮಾಡಿದ್ದಾರೆ ಎಂದು ನೋವು ತೋಡಿಕೊಂಡರು.

ಬಿ.ಎಸ್ ಯಡಿಯೂರಪ್ಪನವರು ಮೊಬೈಲ್​ ಸ್ವಿಚ್​ಆಫ್​ ಮಾಡಿಕೊಂಡ್ರೆ ಬಿಜೆಪಿಗೆ 50 ಸ್ಥಾನವೂ ಬರಲ್ಲ. ಇದನ್ನು ಅರ್ಥ ಮಾಡಿಕೊಳ್ಳದೆ ದೆಹಲಿಯಲ್ಲಿ ಸಿ.ಟಿ.ರವಿ ಕಣ್ಣಾಮುಚ್ಚಾಲೆ ಆಟ ಆಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ನೆಲಕಚ್ಚಲು ಸಿ.ಟಿ.ರವಿ ಕಾರಣ ಆಗುತ್ತಾರೆ ಎಂಬುದನ್ನು ಮರೆಯಬಾರದು ಎಂದು ಎಂ.ಪಿ ಕುಮಾರಸ್ವಾಮಿ ಹೇಳಿದ್ದಾರೆ.

ಮೂಡಿಗೆರೆಯ ಬಿಜೆಪಿ ಟಿಕೆಟ್ ದೀಪಕ್‌ ದೊಡ್ಡಯ್ಯನವರಿಗೆ ಸಿಕ್ಕಿದೆ. ಹಾಗಾಗಿ ಎಂ.ಪಿ ಕುಮಾರಸ್ವಾಮಿಯವರು ಜೆಡಿಎಸ್ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.

ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಲಕ್ಷ್ಮಣ್ ಸವದಿ ಬಿಜೆಪಿ ತೊರೆದಿದ್ದಾರೆ. ಜಗದೀಶ್ ಶೆಟ್ಟರ್ ಬಂಡಾಯ ಸ್ಪರ್ಧೆ ಸುಳಿವು ನೀಡಿದ್ದಾರೆ. ಗೂಳಿಹಟ್ಟಿ ಶೇಖರ್ ಬಂಡಾಯ ಅಭ್ಯರ್ಥಿಯಾಗುವುದಾಗಿ ಘೋಷಿಸಿದ್ದಾರೆ. ಸುಳ್ಯ ಕ್ಷೇತ್ರದ ಶಾಸಕರೂ ಆಗಿರುವ ಮೀನುಗಾರಿಕಾ ಸಚಿವ ಎಸ್‌.ಅಂಗಾರ ಅವರಿಗೆ ಟಿಕೆಟ್ ಸಿಗದಿರುವ ಕಾರಣಕ್ಕೆ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಉಡುಪಿ ಟಿಕೆಟ್ ಸಿಗದ ರಘುಪತಿ ಭಟ್ ಕಣ್ಣೀರು ಹಾಕಿದ್ದಾರೆ. ನಿನ್ನೆಯೇ ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ತುಮಕೂರು ನಗರದ ಸೊಗಡು ಶಿವಣ್ಣ ಬಿಜೆಪಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಕುಣಿಗಲ್ ಟಿಕೆಟ್ ಆಕಾಂಕ್ಷಿಗಳಾಗಿದ್ದ ಮುದ್ದಹನುಮೇಗೌಡ ಮತ್ತು ರಾಜೇಶ್ ಗೌಡ ಕೂಡ ಬಂಡಾಯದ ಬಾವುಟ ಹಾರಿಸಿದ್ದಾರೆ. ಜೇವರ್ಗಿಯ ದೊಡ್ಡಪ್ಪಗೌಡ ಪಾಟೀಲ್ ಬಿಜೆಪಿ ತೊರೆದು ಜೆಡಿಎಸ್‌ನತ್ತ ಮುಖ ಮಾಡಿದ್ದಾರೆ. ಮಾಲೂರಿನಲ್ಲಿ ಹೂಡಿ ವಿಜಯ್ ಕುಮಾರ್ ಪಕ್ಷೇತರ ಅಭ್ಯರ್ಥಿಯಾಗಲಿದ್ದಾರೆ. ಅವರ ಸಾಲಿಗೆ ಎಂ.ಪಿ ಕುಮಾರಸ್ವಾಮಿ ಸೇರಿಕೊಂಡಿದ್ದಾರೆ.

ಇದನ್ನೂ ಓದಿ ; ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮೂಡಿಗೆರೆ: ಒಕ್ಕಲಿಗರ ಮರ್ಜಿಯ ಮೀಸಲು ಕ್ಷೇತ್ರದಲ್ಲಿ ಮೂರೂ ಮುಖ್ಯ ಪಕ್ಷಗಳಲ್ಲಿ ಬಂಡಾಯದ ಬಾವುಟ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲು

0
ಚುನಾವಣೆ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಂಡ ಹಿನ್ನೆಲೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ತೆಲಂಗಾಣದ ಹೈದರಾಬಾದ್‌ನಲ್ಲಿ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಲಾಗಿದೆ. ಚುನಾವಣಾ...