Homeಕರ್ನಾಟಕಜನವರಿ 25ಕ್ಕೆ "ಪರಿಷೆ" ತಂಡದಿಂದ "ಸಾಂಸ್ಕೃತಿಕ ಸಂವಿಧಾನ ಪರಿಷೆ"

ಜನವರಿ 25ಕ್ಕೆ “ಪರಿಷೆ” ತಂಡದಿಂದ “ಸಾಂಸ್ಕೃತಿಕ ಸಂವಿಧಾನ ಪರಿಷೆ”

- Advertisement -
- Advertisement -

ಇದೇ ಜನವರಿ 25ರಂದು ಬೆಂಗಳೂರಿನ ಸೈಂಟ್‌ ಜೋಸೆಫ್‌ ಯುನಿವರ್ಸಿಟಿಯ ಝೇವಿಯರ್‌ ಹಾಲ್‌ ನಲ್ಲಿ ಬೆಳಗ್ಗೆ 9.30 ರಿಂದ ಸಂಜೆಯವರೆಗೂ ” ಸಾಂಸ್ಕೃತಿಕ ಸಂವಿಧಾನ ಪರಿಷೆ” ಮಾಡಲು ನಿರ್ಧರಿಸಲಾಗಿದೆ ಎಂದು ಪರಿಷೆ ತಂಡದ ಗುರುಬಸವ ಬರಗೂರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಅವರು, ರಾಜ್ಯದ ಜೀವಪರ ಕಲಾವಿದರ ಒಗ್ಗೂಡುವಿಕೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಕಲಾವಿದರು ಸಂವಿಧಾನದ ಮೌಲ್ಯ, ಆಶಯಗಳ ಪರ ಇರುವ ಸಾಂಸ್ಕೃತಿಕ ಪ್ರದರ್ಶನಗಳನ್ನು ನೀಡಲು ಈ ಮೂಲಕ ಆಹ್ವಾನಿಸುತ್ತೇವೆ ಎಂದಿದ್ದಾರೆ.

ಸ್ವಾತಂತ್ರ್ಯ ಭಾರತದಲ್ಲಿ ಎಲ್ಲಾ ಜನರ ಹಿತ ಬಯಸುವ ಮಹಿಳೆಯರ, ನೊಂದವರ, ಬಡವರ, ಶೋಷಿತರಿಗೆ ಸಾಮಾಜಿಕ ನ್ಯಾಯ ಕೊಟ್ಟ ಸಮತೆ, ಸಮಾನತೆ, ಬ್ರಾತೃತ್ವ, ಭಾವದ, ಜಾತ್ಯತೀತ – ಸಾಮಾಜಿಕ ನ್ಯಾಯ ಬಹುತ್ವವನ್ನು ಒಳಗೊಂಡ, ಪ್ರಜಾಪ್ರಭುತ್ವ ಆಶಯದ ಭಾರತದ ಸಂವಿಧಾನ ಮತ್ತು ಅದರ ಮೌಲ್ಯಗಳನ್ನು ಈ ನೆಲದ ಹಲವು ಸಾಂಸ್ಕೃತಿಕ ಪ್ರಕಾರಗಳಾದ ತಮಟೆ ಕುಣಿತ, ಹಾಡು, ತತ್ವಪದ, ನಾಟಕ, ಕಥನ ಹಾಡು, ಭರತ ನಾಟ್ಯ, ಹಸಿರು ಪದ, ಯಕ್ಷಗಾನ, ಚೌಡಿಕೆ ಪದ ಹಾಗೂ ಹಲವು ನೆಲ ಸಂಗೀತ ಪರಿಕರಗಳ ಸದ್ದುಗಳ ಮೂಲಕ ಅಭಿವ್ಯಕ್ತಿಸುವ “ಸಾಂಸ್ಕೃತಿಕ ಸಂವಿಧಾನ ಪರಿಷೆ” ಯನ್ನು ಸಂವಿಧಾನ ಆಶಯದ ಪರವಾಗಿ ಇರುವ ಕರ್ನಾಟಕದ ಜೀವಪರ ಕಲಾವಿದರು, ಸಾಹಿತಿಗಳು ಸೇರಿ ಜನವರಿ 25 ಶನಿವಾರ ದಂದು ಇಡೀ ದಿನ
ಬೆಂಗಳೂರಿನ ಶಾಂತಿನಗರದಲ್ಲಿರುವ ಸೇಂಟ್ ಜೋಸೆಫ್ ಯೂನಿವರ್ಸಿಟಿಯಲ್ಲಿ ನಡೆಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪರಿಷೆಯಲ್ಲಿ ಸಂವಿಧಾನ ಮೌಲ್ಯ ಇರುವ ಪುಸ್ತಕ, ಟೀ ಸರ್ಟ್, ಕೀ ಬಂಚ್, ಪೆನ್ಸ್, ಹೀಗೆ ಅನೇಕ ಪರಿಕರಗಳ ಮಳಿಗೆಗಳನ್ನು ಅಳವಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಬೇರು ಬೆವರು ಕಲಾ ಬಳಗದ ಚಂದ್ರಶೇಖರ್ ರವರ ನಂ. 8867361110 ಅನ್ನು ಸಂಪರ್ಕಿಸಬಹುದು ಎಂದು ಅವರು ಹೇಳಿಕೆಯಲ್ಲಿ ಹೇಳಿದ್ದಾರೆ.

ಛತ್ತೀಸ್‌ಗಢ| ಸುಕ್ಮಾದಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ; 12 ನಕ್ಸಲರು ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...