Homeಮುಖಪುಟಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಶಿಕ್ಷಕಿ ಒತ್ತಾಯಿಸಿರುವುದು 'ದ್ವೇಷದ ಸಂಸ್ಕೃತಿ': ಪ್ರತಿಪಕ್ಷಗಳಿಂದ ವಾಗ್ದಾಳಿ

ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಶಿಕ್ಷಕಿ ಒತ್ತಾಯಿಸಿರುವುದು ‘ದ್ವೇಷದ ಸಂಸ್ಕೃತಿ’: ಪ್ರತಿಪಕ್ಷಗಳಿಂದ ವಾಗ್ದಾಳಿ

- Advertisement -
- Advertisement -

ಏಳು ವರ್ಷದ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಶಿಕ್ಷಕಿಯೊಬ್ಬರು ಇನ್ನುಳಿದ ವಿದ್ಯಾರ್ಥಿಗಳಿಗೆ ಆದೇಶಿಸಿದ ಭಯಾನಕ ವಿಡಿಯೋವೊಂದು ಶುಕ್ರವಾರ ವೈರಲ್ ಆಗಿದ್ದು, ಇದೀಗ ವಿರೋಧ ಪಕ್ಷಗಳು ಮತ್ತು ಮುಸ್ಲಿಂ ಸಂಘಟನೆಗಳು ಈ ಘಟನೆಯನ್ನು ”ದ್ವೇಷದ ಸಂಸ್ಕೃತಿ” ಎಂದು ಕರೆದಿವೆ.

ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಖುಬಾಪುರ ಗ್ರಾಮದ ನೇಹಾ ಪಬ್ಲಿಕ್ ಸ್ಕೂಲ್‌ನಲ್ಲಿ ಈ ಘಟನೆ ನಡೆದಿದೆ. ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ವೈರಲ್ ಆಗಿರುವ ವೀಡಿಯೊದಲ್ಲಿ, ತರಗತಿಯ ಮುಂದೆ ನಿಂತಿದ್ದ ಮುಸ್ಲಿಂ ಹುಡುಗನನ್ನು ಒಬ್ಬ ವಿದ್ಯಾರ್ಥಿ ಹೊಡೆದ ನಂತರ, ಶಿಕ್ಷಕರು ಇತರ ವಿದ್ಯಾರ್ಥಿಗಳಿಗೂ ಬಲವಾಗಿ ಹೊಡೆಯುವಂತೆ ಒತ್ತಾಯಿಸುವುದನ್ನು ಕಾಣಬಹುದು.

ಒಬ್ಬ ವಿದ್ಯಾರ್ಥಿ ಆತನ ಕಪಾಳಕ್ಕೆ ಹೊಡೆದ ನಂತರ, ಶಿಕ್ಷಕಿಯು ಇನ್ನೊಬ್ಬ ವಿದ್ಯಾರ್ಥಿಯನ್ನು ಕರೆದು, ”ನಾನು ಹೇಳುತ್ತಿದ್ದೇನೆ, ಈ ಮುಸ್ಲಿಂ ವಿದ್ಯಾರ್ಥಿಯ ಬೆನ್ನಿನ ಮೇಲೆ ಹೊಡೆಯಬೇಕು… ಮತ್ತೆ ಬೇರೆ ವಿಧ್ಯಾರ್ಥಿಗಳನ್ನು ಕರೆದು, ಅವನ ಸೊಂಟದ ಮೇಲೆ ಹೊಡೆಯಲು ಪ್ರಾರಂಭಿಸಿ… ಅವನ ಮುಖವು ಕೆಂಪಾಗುತ್ತಿದೆ, ಅವನ ಸೊಂಟದ ಮೇಲೆ ಎಲ್ಲರೂ ಹೊಡೆಯಿರಿ” ಎಂದು ಆದೇಶಿಸಿದ್ದಾರೆ.

ಮಗು ಖುಬಾಪುರ ಗ್ರಾಮದ ನೇಹಾ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಶುವಿಹಾರದಲ್ಲಿ ಓದುತ್ತಿದೆ ಎಂದು ಆತನ ಪೋಷಕರು ತಿಳಿಸಿದ್ದಾರೆ. ಮಗುವಿನ ತಂದೆ ಹೆಸರು ಇರ್ಷಾದ್ ತ್ಯಾಗಿ, ಅವರು ವೃತ್ತಿಯಲ್ಲಿ ರೈತರಾಗಿದ್ದಾರೆ. ಇನ್ನು ಶಿಕ್ಷಕಿಯನ್ನು ತ್ರಿಪ್ತಾ ತ್ಯಾಗಿ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ವಿದ್ಯಾರ್ಥಿಗಳಿಗೆ ಒತ್ತಾಯಿಸಿದ ಯುಪಿ ಶಿಕ್ಷಕಿ: ವಿಡಿಯೋ ವೈರಲ್

ಪ್ರತಿಪಕ್ಷಗಳಿಂದ ಖಂಡನೆ:

”ದ್ವೇಷದ ಸಂಸ್ಕೃತಿ: ನೇಹಾ ಪಬ್ಲಿಕ್ ಸ್ಕೂಲ್‌ನ ತ್ರಿಪ್ತ ತ್ಯಾಗಿ ಎನ್ನುವ ಶಿಕ್ಷಕಿ ತರಗತಿಯಲ್ಲಿ ಮುಸ್ಲಿಂ ವಿದ್ಯಾರ್ಥಿಯನ್ನು ಹಿಂದೂ ವಿದ್ಯಾರ್ಥಿಗಳಿಂದ ಥಳಿಸಲು ಒತ್ತಾಯಿಸಸಿದ್ದಾರೆ. ಇದು ನಿಜವಾಗಿದ್ದರೆ, ಯೋಗಿ ಜೀ ಮಾತನಾಡುತ್ತಾರೆಯೇ? ಮೋದಿಜಿ ಇದನ್ನು ಸಾರ್ವಜನಿಕವಾಗಿ ಖಂಡಿಸುವರೇ?
ಶಿಕ್ಷಕರ ವಿರುದ್ಧ ಕಾನೂನು ಕ್ರಮ ಜರುಗಿಸುವುದೇ? ಅಥವಾ “ದ್ವೇಷ”ದ ಸಂಸ್ಕೃತಿಯು ಪ್ರವರ್ಧಮಾನಕ್ಕೆ ಬರಲು ಬಿಡುವುದೇ? ಎಂದು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ.

 

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ”ಮುಗ್ಧ ಮಕ್ಕಳ ಮನಸ್ಸಿನಲ್ಲಿ ತಾರತಮ್ಯದ ವಿಷಬೀಜವನ್ನು ಬಿತ್ತುವುದು, ಶಾಲೆಯಂತಹ ಪವಿತ್ರ ಸ್ಥಳವನ್ನು ದ್ವೇಷದ ಮಾರುಕಟ್ಟೆಯಾಗಿ ಪರಿವರ್ತಿಸುವುದು – ಒಬ್ಬ ಶಿಕ್ಷಕನು ದೇಶಕ್ಕಾಗಿ ಏನನ್ನೂ ಮಾಡಲಾರನು” ಎಂದಿದ್ದಾರೆ.

”ಬಿಜೆಪಿಯವರು ಇದೇ ಸೀಮೆಎಣ್ಣೆಯನ್ನು ಭಾರತದ ಮೂಲೆ ಮೂಲೆಗೆ ಹರಡಿ ಬೆಂಕಿ ಹಚ್ಚಿದ್ದಾರೆ” ಎಂದು ರಾಹುಲ್ ಕಿಡಿಕಾರಿದ್ದಾರೆ.

”ಮಕ್ಕಳು ಭಾರತದ ಭವಿಷ್ಯ – ಅವರನ್ನು ದ್ವೇಷಿಸಬೇಡಿ, ನಾವೆಲ್ಲರೂ ಒಟ್ಟಾಗಿ ಪ್ರೀತಿಯನ್ನು ಕಲಿಸಬೇಕು” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಇಂಡಿಯನ್ ಅಮೇರಿಕನ್ ಮುಸ್ಲಿಂ ಕೌನ್ಸಿಲ್ ಕೂಡ ಈ ಘಟನೆಯನ್ನು ”ಅತಿರೇಕದ ಹಿಂದೂ ಮೂಲಭೂತೀಕರಣದ ಫಲಿತಾಂಶ” ಎಂದು ಹೇಳಿದೆ.

”ಮುಸ್ಲಿಂ ಹುಡುಗನಿಗೆ ಈ ರೀತಿ ಅವಮಾನ ಮಾಡಿದ ಬಳಿಕ ಅವನ ಮನಸ್ಥಿತಿಯನ್ನು ಬದಲಾಯಿಸಲು ಸಾಧ್ಯವೇ?” ಎಂದು ಕಾಂಗ್ರೆಸ್ ವಕ್ತಾರ ಸುಪ್ರಿಯಾ ಶ್ರಿನಾಟೆ ಪ್ರಶ್ನೆ ಮಾಡಿದ್ದಾರೆ.

”ಮಗುವಿನ ತಂದೆ ನ್ಯಾಯಾಲಯಕ್ಕೆ ಅಲೆದಾಡಲು ನಾವು ಶಕ್ತರಲ್ಲ ಹಾಗಾಗಿ ನಾವು ಎಫ್‌ಐಆರ್ [ಪ್ರಥಮ ಮಾಹಿತಿ ವರದಿ] ದಾಖಲಿಸುವುದಿಲ್ಲ” ಎಂದು ಹೇಳುತ್ತಾರೆ. ಆದರೆ ಘಟನೆಯನ್ನು ಗಮನದಲ್ಲಿಟ್ಟುಕೊಂಡು ಎಫ್‌ಐಆರ್ ದಾಖಲಿಸಬೇಕು ಶ್ರೀನೇಟ್ ವೀಡಿಯೊದಲ್ಲಿ ಹೇಳಿದ್ದಾರೆ.

ವೀಡಿಯೋ ನೋಡಿದ ನಂತರ ಮಗು ಮತ್ತು ಆತನ ಪೋಷಕರ ಹೇಳಿಕೆಗಳನ್ನು ಮರುಪಡೆದುಕೊಂಡು ಪ್ರಕರಣ ದಾಖಲಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಹುಡುಗನ ತಂದೆ ಇರ್ಷಾದ್ ಮಾತನಾಡಿ, ”ಶಿಕ್ಷಕರು ನನ್ನ ಮಗನನ್ನು ಏಕೆ ಈ ರೀತಿ ನಡೆಸಿಕೊಂಡರು ಎಂದು ನಮಗೆ ತಿಳಿದಿಲ್ಲ. ಅವರು ಮುಸ್ಲಿಂ ವಿರೋಧಿ ಹೇಳಿಕೆಗಳನ್ನು ನೀಡುತ್ತಿರುವುದು ದುಃಖಕರ ಸಂಗತಿ” ಎಂದು ಹೇಳಿದರು.

”ಸಮಾಜ ಧ್ರುವೀಕರಣಗೊಂಡಿದೆ, ಈ ಹಿಂದೂ-ಮುಸ್ಲಿಂ ವಿಷಯ ಶಾಲೆಗಳಿಗೂ ತಲುಪಿದೆ” ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಶುಕ್ರವಾರ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಉತ್ತರ ಪ್ರದೇಶದ ಮೂಲ ಶಿಕ್ಷಾ ಇಲಾಖೆಯ ಅಧಿಕಾರಿ ಶುಭಂ ಶುಕ್ಲಾ, ”ಶಿಕ್ಷಕಿ ಹಾಗೂ ಆ ಶಾಲೆಯ ಆಡಳಿತದ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...