Homeಮುಖಪುಟಬಾಂಗ್ಲಾದೇಶ | ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ: 105 ಮಂದಿ ಸಾವು, ಕರ್ಫ್ಯೂ ಘೋಷಣೆ

ಬಾಂಗ್ಲಾದೇಶ | ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ: 105 ಮಂದಿ ಸಾವು, ಕರ್ಫ್ಯೂ ಘೋಷಣೆ

- Advertisement -
- Advertisement -

ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಮೀಸಲಾತಿ ವಿರೋಧಿ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು, ವಿದ್ಯಾರ್ಥಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಘರ್ಷಣೆಯಲ್ಲಿ ಕನಿಷ್ಠ 105 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಬೆನ್ನಲ್ಲೇ ರಾಷ್ಟ್ರವ್ಯಾಪಿ ಕರ್ಫ್ಯೂ ಘೋಷಣೆ ಮಾಡಲಾಗಿದೆ.

ಬಾಂಗ್ಲಾದೇಶದ ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಹಿಂಸಾಚಾರದಲ್ಲಿ ನೂರಾರು ಮಂದಿ ಸಾವನ್ನಪ್ಪುತ್ತಿದ್ದಂತೆ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಿರುವ ಪ್ರಧಾನಿ ಶೇಖ್ ಹಸೀನಾ, ಶಾಂತಿಯುತವಾಗಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ವಿದ್ಯಾರ್ಥಿಗಳನ್ನು ಮಾತುಕತೆಗೆ ಆಹ್ವಾನಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, “ಇದು ಬಾಂಗ್ಲಾದೇಶದ ಆಂತರಿಕ ವಿಷಯ” ಎಂದು ಹೇಳಿದ್ದಾರೆ. ಇನ್ನು 8,500 ವಿದ್ಯಾರ್ಥಿಗಳು ಸೇರಿದಂತೆ ಸುಮಾರು 15,000 ಭಾರತೀಯರು ಬಾಂಗ್ಲಾದೇಶದಲ್ಲಿ ನೆಲೆಸಿದ್ದು, ಅವರೆಲ್ಲವರೂ ಸುರಕ್ಷಿತವಾಗಿದ್ದಾರೆ. 400 ವಿದ್ಯಾರ್ಥಿಗಳು ಸೇರಿದಂತೆ 700 ಭಾರತೀಯ ನಾಗರಿಕರು ದೇಶಕ್ಕೆ ಹಿಂದಿರುಗಲು ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ರೈಲು ಸಂಚಾರ ಸ್ಥಗಿತ

ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿರುವ ಹಿನ್ನೆಲೆ, ಭಾರತೀಯ ರೈಲ್ವೆಯು ಕೋಲ್ಕತ್ತಾ-ಢಾಕಾ ನಡುವಿನ ಮೈತ್ರಿ ಎಕ್ಸ್‌ಪ್ರೆಸ್ ಮತ್ತು ಕೋಲ್ಕತ್ತಾ- ಖುಲ್ನಾ ನಡುವಿನ ಬಂಧನ್ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ ಎಂದು ವರದಿಯಾಗಿದೆ.

ಪ್ರತಿಭಟನೆಗೆ ಕಾರಣವೇನು?

ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ 1971ರಲ್ಲಿ ಪಾಕಿಸ್ತಾನದ ವಿರುದ್ಧ ಹೋರಾಡಿದ ಯೋಧರ ಕುಟುಂಬಸ್ಥರಿಗೆ ಸರ್ಕಾರಿ ನೇಮಕಾತಿಗಳಲ್ಲಿ ಶೇ. 30 ಮೀಸಲಾತಿಯಿದೆ. ಈ ಮೀಸಲಾತಿ ವ್ಯವಸ್ಥೆ ತಾರತಮ್ಯದಿಂದ ಕೂಡಿದೆ. ಸ್ವಾತಂತ್ರ್ಯ ಚಳುವಳಿಯ ನೇತೃತ್ವ ವಹಿಸಿದ್ದ ಅವಾಮಿ ಲೀಗ್ ಪಕ್ಷದ ಮುಖ್ಯಸ್ಥೆ ಹಾಗೂ ಪ್ರಧಾನಿ ಶೇಖ್ ಹಸೀನಾರ ಬೆಂಬಲಿಗರು ಇದರಿಂದ ಹೆಚ್ಚಿನ ಪ್ರಯೋಜನ ಪಡೆಯುತ್ತಿದ್ದಾರೆ. ಹಾಗಾಗಿ, ಈ ಮೀಸಲಾತಿ ವ್ಯವಸ್ಥೆ ಕೊನೆಗೊಳಿಸಿ ಮೆರಿಟ್ ಆಧಾರಿತ ನೇಮಕಾತಿ ಜಾರಿಗೊಳಿಸಬೇಕು ಎಂಬುವುದು ಪ್ರತಿಭಟನಾಕಾರರ ಆಗ್ರಹವಾಗಿದೆ.

ಇದನ್ನೂ ಓದಿ : ಕನ್ವರ್ ಯಾತ್ರೆ: ಹೋಟೆಲ್‌ ಮಾಲೀಕರ ಹೆಸರು ಪ್ರದರ್ಶನ ಆದೇಶಕ್ಕೆ ಚಿರಾಗ್ ಪಾಸ್ವಾನ್ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...