Homeಮುಖಪುಟದೇಶದಲ್ಲಿ 20 ವರ್ಷಗಳಲ್ಲಿ 1,888 ಲಾಕಪ್ ಡೆತ್: ಕೇವಲ 26 ಮಂದಿ ಪೊಲೀಸರಿಗೆ ಶಿಕ್ಷೆ

ದೇಶದಲ್ಲಿ 20 ವರ್ಷಗಳಲ್ಲಿ 1,888 ಲಾಕಪ್ ಡೆತ್: ಕೇವಲ 26 ಮಂದಿ ಪೊಲೀಸರಿಗೆ ಶಿಕ್ಷೆ

- Advertisement -
- Advertisement -

ಕಳೆದ 20 ವರ್ಷಗಳಲ್ಲಿ, ದೇಶಾದ್ಯಂತ 1,888 ಲಾಕಪ್ ಡೆತ್ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಪೊಲೀಸ್ ಸಿಬ್ಬಂದಿ ವಿರುದ್ಧ 893 ಪ್ರಕರಣಗಳನ್ನು ದಾಖಲಿಸಲಾಗಿದೆ. 358 ಸಿಬ್ಬಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಆದರೆ ಈ ಅವಧಿಯಲ್ಲಿ ಕೇವಲ 26 ಪೊಲೀಸರಿಗೆ ಶಿಕ್ಷೆಯಾಗಿದೆ ಎಂದು ಅಧಿಕೃತ ದಾಖಲೆಗಳು ತಿಳಿಸಿವೆ.

2001-2020 ರವರೆಗಿನ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ(National Crime Records Bureau) ವಾರ್ಷಿಕ ಅಪರಾಧದ (CII) ವರದಿಗಳು ಈ ನಿರಾಶದಾಯಕ ಸತ್ಯವನ್ನು ಹೊರಗೆಡವಿದೆ. 1,888 ಜನರ ಲಾಕಪ್‌ ಡೆತ್‌ ಆಗಿದ್ದರೂ ಕೂಡ ಶಿಕ್ಷೆ ಕೇವಲ 26 ಪೊಲೀಸರಿಗೆ ಎನ್ನುವುದನ್ನು ಈ ದಾಖಲೆಗಳು ಬಿಚ್ಚಿಟ್ಟಿವೆ.

ಉತ್ತರ ಪ್ರದೇಶದ ಕಾಸ್‌ಗಂಜ್‌ನಲ್ಲಿ ಕಳೆದ ಮಂಗಳವಾರ 22 ವರ್ಷದ ಅಲ್ತಾಫ್‌ನ ಕಸ್ಟಡಿ ಸಾವಿನ ಹಿನ್ನೆಲೆಯಲ್ಲಿ ಈ ವರದಿ ಮಹತ್ವ ಪಡೆದುಕೊಂಡಿದೆ. ಹಿಂದೂ ಸಮುದಾಯದ ಅಪ್ರಾಪ್ತ ಬಾಲಕಿ ನಾಪತ್ತೆಯಾದ ಪ್ರಕರಣದಲ್ಲಿ ಮುಸ್ಲಿಂ ಸಮುದಾಯದ ಅಪ್ತಾಫ್‌ನನ್ನು ಬಂಧಿಸಲಾಗಿತ್ತು. ಕಾಸ್‌ಗಂಜ್‌ ಲಾಕಪ್ ಡೆತ್ ನಂತರ, ಕಾಸ್‌ಗಂಜ್‌ನ ಕೊಟ್ವಾಲಿ ಪೊಲೀಸ್ ಠಾಣೆಯ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. 

ಇದನ್ನೂ ಓದಿ: ಕಾಸ್‌ಗಂಜ್ ಮುಸ್ಲಿಂ ಯುವಕನ ಲಾಕಪ್ ಡೆತ್: ಸರ್ಕಾರದಿಂದ ವರದಿ ಕೇಳಿದ ಅಲ್ಪಸಂಖ್ಯಾತರ ಆಯೋಗ

ನೆಲದಿಂದ ಕೇವಲ ಒಂದೆರಡು ಅಡಿ ಎತ್ತರದಲ್ಲಿರುವ ಶೌಚಾಲಯದ ನೀರಿನ ಪೈಪ್‌ಗೆ ಅಲ್ತಾಫ್ ತನ್ನ ಜಾಕೆಟ್‌ನ ಹುಡ್‌ನಿಂದ ನೇಣು ಬಿಗಿದುಕೊಂಡಿದ್ದರು ಎಂದು ಪೊಲೀಸರು ಹೇಳಿದ್ದರು. ಕಸ್ಟಡಿ ಸಾವಿನ ಬಗ್ಗೆ ಇಲಾಖಾ ವಿಚಾರಣೆ ಮತ್ತು ಮ್ಯಾಜಿಸ್ಟ್ರೇಟ್ ತನಿಖೆಯನ್ನು ಏಕಕಾಲದಲ್ಲಿ ನಡೆಸಲಾಗುತ್ತಿದೆ ಎಂದು ಯುಪಿ ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಮಾಹಿತಿಯ ಪ್ರಕಾರ, 2020 ರಲ್ಲಿ 76 ಲಾಕಪ್ ಡೆತ್ ವರದಿಯಾಗಿವೆ. ಗುಜರಾತ್‌ನಲ್ಲಿ ಅತಿ ಹೆಚ್ಚು ಅಂದರೆ, 15 ಸಾವುಗಳು ವರದಿಯಾಗಿವೆ. ಉಳಿದಂತೆ ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಉತ್ತರ ಪ್ರದೇಶ, ಹರಿಯಾಣ, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ರಾಜಸ್ಥಾನ, ತಮಿಳುನಾಡು, ತೆಲಂಗಾಣ ಮತ್ತು ಪಶ್ಚಿಮ ಬಂಗಾಳ ಸೇರಿವೆ.

ಎನ್‌ಸಿಆರ್‌ಬಿ 2017 ರಿಂದ ಲಾಕಪ್ ಡೆತ್ ಪ್ರಕರಣಗಳಲ್ಲಿ ಬಂಧಿತ ಪೊಲೀಸರ ಡೇಟಾವನ್ನು ಬಿಡುಗಡೆ ಮಾಡುತ್ತಿದೆ. ಕಳೆದ ನಾಲ್ಕು ವರ್ಷಗಳಲ್ಲಿ ‌ಈ ಸಾವುಗಳಿಗೆ ಸಂಬಂಧಿಸಿದಂತೆ 96 ಪೊಲೀಸರನ್ನು ಬಂಧಿಸಲಾಗಿದೆ.

ಎನ್‌ಸಿಆರ್‌ಬಿ ಪೊಲೀಸ್ ಕಸ್ಟಡಿ/ಲಾಕಪ್‌ ಡೆತ್‌‌ಗಳನ್ನು ರಿಮಾಂಡ್‌ನಲ್ಲಿ ಇಲ್ಲದ ವ್ಯಕ್ತಿಗಳು ಮತ್ತು ರಿಮಾಂಡ್‌ನಲ್ಲಿರುವ ವ್ಯಕ್ತಿಗಳು ಎಂದು ಎರಡು ವಿಭಾಗಗಳ ಅಡಿಯಲ್ಲಿ ವರ್ಗೀಕರಿಸಿದೆ.

ರಿಮಾಂಡ್‌ನಲ್ಲಿ ಇಲ್ಲದ ವ್ಯಕ್ತಿಗಳು ಎಂದರೆ, ಬಂಧಿಸಲ್ಪಟ್ಟವರನ್ನು ಇನ್ನೂ ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕಾದವರು. ರಿಮಾಂಡ್‌ನಲ್ಲಿರುವ ವ್ಯಕ್ತಿಗಳು ಎಂದರೆ ಪೊಲೀಸ್ ಅಥವಾ ನ್ಯಾಯಾಂಗ ಬಂಧನದಲ್ಲಿರುವವರು.

2006 ರಲ್ಲಿ ಉತ್ತರ ಪ್ರದೇಶದಲ್ಲಿ ಏಳು ಮತ್ತು ಮಧ್ಯಪ್ರದೇಶದಲ್ಲಿ ನಾಲ್ವರು ಪೊಲೀಸರು ಲಾಕಪ್ ಡೆತ್ ಪ್ರಕರಣದಲ್ಲಿ ತಪ್ಪಿತಸ್ಥರೆಂದು ವರದಿಯಾಗಿತ್ತು. ಈ 11 ಮಂದಿ ಪೊಲೀಸರಿಗೂ ಶಿಕ್ಷೆಯಾಗಿದ್ದು, 20 ವರ್ಷಗಳಲ್ಲಿ ಒಂದೇ ಬಾರಿಗೆ ಶಿಕ್ಷೆಗೆ ಗುರಿಯಾದ ಅತ್ಯಧಿಕ ಪೊಲೀಸರು ಇವರು ಎಂಬುದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ದತ್ತಾಂಶದಲ್ಲಿ ಕಾಣಸಿಗುತ್ತದೆ. ಆದರೆ, ಇವರೆಲ್ಲಾ ಅದೇ ವರ್ಷ ಮಾಡಿದ ಅಪರಾಧಕ್ಕೆ ಶಿಕ್ಷೆ ಅನುಭವಿಸಿದ್ದಾರೆಯೇ ಎಂಬ ಬಗ್ಗೆ ಯಾವುದೇ ಮಾಹಿತಿಯಿಲ್ಲ.


ಇದನ್ನೂ ಓದಿ: ಕಾಸ್‌ಗಂಜ್ ಲಾಕಪ್‌ ಡೆತ್: ಅಪರಿಚಿತ ಪೊಲೀಸರ ವಿರುದ್ಧ ಕೊಲೆ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...