Homeಮುಖಪುಟಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸದ ಸಿಸಿಟಿವಿ: ಕಸ್ಟಡಿ ಸಾವು ಕುರಿತ ವರದಿ ಬೆನ್ನಲ್ಲೇ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ...

ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸದ ಸಿಸಿಟಿವಿ: ಕಸ್ಟಡಿ ಸಾವು ಕುರಿತ ವರದಿ ಬೆನ್ನಲ್ಲೇ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಸುಪ್ರೀಂ ಕೋರ್ಟ್

- Advertisement -
- Advertisement -

ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮರಾಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಗುರುವಾರ (ಸೆ.4) ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

ಕಳೆದ 7 ರಿಂದ 8 ತಿಂಗಳುಗಳಲ್ಲಿ ಪೊಲೀಸ್ ಕಸ್ಟಡಿಯಲ್ಲಿ 11 ಸಾವುಗಳು ಸಂಭವಿಸಿವೆ ಎಂದು ದೈನಿಕ್ ಭಾಸ್ಕರ್ ಪತ್ರಿಕೆಯಲ್ಲಿ ಬಂದ ವರದಿಯ ಆಧಾರದ ಮೇಲೆ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಕ್ರಮ ಕೈಗೊಂಡಿದೆ.

“ದೈನಿಕ್ ಭಾಸ್ಕರ್ ವರದಿಯ ಆಧಾರದ ಮೇಲೆ ಕಳೆದ 7-8 ತಿಂಗಳಲ್ಲಿ ಪೊಲೀಸ್ ಕಸ್ಟಡಿಯಲ್ಲಿ 11 ಸಾವುಗಳು ಸಂಭವಿಸಿವೆ ಎಂದು ತಿಳಿದು ಬಂದಿರುವುದರಿಂದ ‘ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿಗಳ ಕೊರತೆ’ ಎಂಬ ಶೀರ್ಷಿಕೆಯಡಿಯಲ್ಲಿ ನಾವು ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ದಾಖಲಿಸಲು ನಿರ್ದೇಶಿಸುತ್ತಿದ್ದೇವೆ” ಎಂದು ನ್ಯಾಯಾಲಯ ತಿಳಿಸಿದೆ.

2020ರಲ್ಲಿ ನ್ಯಾಯಮೂರ್ತಿಗಳಾದ ರೋಹಿಂಟನ್ ಫಾಲಿ ನಾರಿಮನ್, ಕೆ.ಎಂ ಜೋಸೆಫ್ ಮತ್ತು ಅನಿರುದ್ಧ ಬೋಸ್ ಅವರ ಪೀಠವು ನೀಡಿದ ಮಹತ್ವದ ತೀರ್ಪಿನಲ್ಲಿ, ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಅಳವಡಿಸುವುದನ್ನು ಸುಪ್ರೀಂ ಕೋರ್ಟ್ ಕಡ್ಡಾಯಗೊಳಿಸಿತ್ತು.

ಆ ತೀರ್ಪಿನಲ್ಲಿ, ನ್ಯಾಯಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ದೇಶದಾದ್ಯಂತ ಪ್ರತಿಯೊಂದು ಪೊಲೀಸ್ ಠಾಣೆಗಳಲ್ಲಿ ರಾತ್ರಿ ದೃಷ್ಟಿ ಕ್ಯಾಮರಾಗಳೊಂದಿಗೆ ಸಿಸಿಟಿವಿಗಳನ್ನು ಅಳವಡಿಸಲು ಆದೇಶಿಸಿತ್ತು.

ಕೇಂದ್ರೀಯ ತನಿಖಾ ದಳ (ಸಿಬಿಐ), ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ), ಜಾರಿ ನಿರ್ದೇಶನಾಲಯ (ಇಡಿ), ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (ಎನ್‌ಸಿಬಿ), ಕಂದಾಯ ಗುಪ್ತಚರ ಇಲಾಖೆ (ಡಿಆರ್‌ಐ), ಗಂಭೀರ ವಂಚನೆ ತನಿಖಾ ಕಚೇರಿ (ಎಸ್‌ಎಫ್‌ಐಒ) ಮತ್ತು ಜನರ ವಿಚಾರಣೆ ನಡೆಸುವ ಯಾವುದೇ ಕೇಂದ್ರೀಯ ಸಂಸ್ಥೆ ಕಚೇರಿಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸುವಂತೆಯೂ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

ತನ್ನ ಆದೇಶದಂತೆ ಅಳವಡಿಸಲಾದ ಸಿಸಿಟಿವಿ ವ್ಯವಸ್ಥೆಗಳು ‘ರಾತ್ರಿ ದೃಷ್ಟಿಯನ್ನು ಹೊಂದಿರಬೇಕು ಮತ್ತು ಅಗತ್ಯವಾಗಿ ಆಡಿಯೋ ಮತ್ತು ವಿಡಿಯೋ ದೃಶ್ಯಗಳನ್ನು ಒಳಗೊಂಡಿರಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ವಿದ್ಯುತ್ ಮತ್ತು/ಅಥವಾ ಇಂಟರ್ನೆಟ್ ಇಲ್ಲದ ಪ್ರದೇಶಗಳಲ್ಲಿ, ಸೌರ/ಪವನ ವಿದ್ಯುತ್ ಸೇರಿದಂತೆ ಯಾವುದೇ ವಿದ್ಯುತ್ ಒದಗಿಸುವ ವಿಧಾನವನ್ನು ಬಳಸಿಕೊಂಡು ಸಾಧ್ಯವಾದಷ್ಟು ಬೇಗ ಅದನ್ನು ಸಿಸಿಟಿವಿ ಅಳವಡಿಸುವುದು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಕರ್ತವ್ಯವಾಗಿರುತ್ತದೆ ಎಂದು ನ್ಯಾಯಾಲಯವು ತಿಳಿಸಿತ್ತು.

ಪೊಲೀಸ್ ಠಾಣೆಯಲ್ಲಿ ಗಂಭೀರ ಗಾಯ ಅಥವಾ ಕಸ್ಟಡಿ ಸಾವಿನ ಘಟನೆ ನಡೆದಾಗ, ವ್ಯಕ್ತಿಯು ಮಾನವ ಹಕ್ಕುಗಳ ನ್ಯಾಯಾಲಯಗಳಿಗೆ ದೂರು ನೀಡಬಹುದು. ನಂತರ, ನ್ಯಾಯಾಲಯ ಸಿಸಿಟಿವಿ ದೃಶ್ಯಾವಳಿಗಳನ್ನು ಸುರಕ್ಷಿತವಾಗಿಡಲು ಸೂಚಿಸಬಹುದು. ಮಾನವ ಹಕ್ಕುಗಳ ಉಲ್ಲಂಘನೆಯ ಸಂದರ್ಭದಲ್ಲಿ ಸಂತ್ರಸ್ತರಿಗೆ ಸಿಸಿಟಿವಿ ದೃಶ್ಯಗಳು ಲಭ್ಯವಾಗುವಂತೆ ಮಾಡಬೇಕು ಎಂದು ನ್ಯಾಯಾಲಯ ಸೂಚಿಸಿತ್ತು.

ನ್ಯಾಯಾಲಯದ ಈ ನಿರ್ದೇಶನಗಳ ಹೊರತಾಗಿಯೂ, ಕಸ್ಟಡಿ ಹಿಂಸೆ/ಸಾವಿನಂತಹ ಘಟನೆಗಳು ನಡೆದಾಗ ಸಿಸಿಟಿವಿ ದೃಶ್ಯಗಳನ್ನು ಕೇಳಿದಾಗ, ಅವು ಕಾಣೆಯಾಗಿವೆ ಅಥವಾ ಸಿಸಿಟಿವಿ ಕೆಲಸ ಮಾಡುತ್ತಿಲ್ಲ ಎಂಬ ಸಬೂಬುಗಳನ್ನು ಪೊಲೀಸರು ನೀಡುತ್ತಿರುವುದು ಹೆಚ್ಚಾಗುತ್ತಿದೆ. ಹಾಗಾಗಿ, ಸಿಸಿಟಿವಿಯ ವಿಚಾರವನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿದೆ.

ಅತಿಕ್ರಮಣಕ್ಕೆ ಸಂಬಂಧಿಸಿದಂತೆ ದರ್ಗಾಗಳನ್ನು ಮಾತ್ರ ಗುರಿಯಾಗಿಸುತ್ತಿರುವುದು ಏಕೆ: ಹಿಂದುತ್ವ ಎನ್‌ಜಿಒಗೆ ದೆಹಲಿ ಹೈಕೋರ್ಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...