Homeಕರ್ನಾಟಕಬ್ಯಾಟರಾಯನಪುರ ಠಾಣೆಯಲ್ಲಿ ಯುವಕನಿಗೆ ಕಸ್ಟಡಿ ಹಿಂಸೆ: ಪಾಪ್ಯುಲರ್ ಫ್ರಂಟ್ ಆಕ್ರೋಶ

ಬ್ಯಾಟರಾಯನಪುರ ಠಾಣೆಯಲ್ಲಿ ಯುವಕನಿಗೆ ಕಸ್ಟಡಿ ಹಿಂಸೆ: ಪಾಪ್ಯುಲರ್ ಫ್ರಂಟ್ ಆಕ್ರೋಶ

ಮತ್ತೊಬ್ಬ ಮುಸ್ಲಿಮ್ ಯುವಕನನ್ನು ಬಂಧನದಲ್ಲಿಟ್ಟು ಸತತ ಚಿತ್ರಹಿಂಸೆ ನೀಡಿ ಆತನ ಬಲಗೈ ಕಳೆದುಕೊಳ್ಳುವಂತೆ ಮಾಡಿದ ಆರೋಪದಲ್ಲಿ ಬೆಂಗಳೂರಿನ ವರ್ತೂರು ಪೊಲೀಸ್ ಠಾಣೆಯ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

- Advertisement -
- Advertisement -

ಬೆಂಗಳೂರಿನ ವರ್ತೂರು ಪೊಲೀಸ್ ಠಾಣೆಯಲ್ಲಿ ಚಿತ್ರಹಿಂಸೆಗೊಳಗಾಗಿ ಯುವಕಬ್ಬ ತನ್ನ ಬಲಗೈ ಕಳೆದುಕೊಂಡ ಘಟನೆ ಬೆನ್ನಲ್ಲೆ ತೌಸೀಫ್ ಎಂಬ ಮುಸ್ಲಿಮ್ ಯುವಕನಿಗೆ ಬ್ಯಾಟರಾಯನಪುರ ಠಾಣೆ ಪೊಲೀಸರು ಗಂಭೀರವಾಗಿ ಥಳಿಸಿರುವ ಮತ್ತೊಂದು ಪ್ರಕರಣ ವರದಿಯಾಗಿದೆ.

ಇತ್ತೀಚೆಗೆ ಮುಸ್ಲಿಮ್ ಯುವಕರ ಮೇಲೆ ಪೂರ್ವಗ್ರಹಪೀಡಿತ ಪೊಲೀಸರು ಕಸ್ಟಡಿ ಚಿತ್ರಹಿಂಸೆ ನೀಡುವ ಘಟನೆಗಳು ವರದಿಯಾಗುತ್ತಿವೆ. ಈ ಕಾನೂನುಬಾಹಿರ ಪೊಲೀಸ್ ಗೂಂಡಾಗಿರಿ ನಿಲ್ಲಬೇಕೇಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಬೆಂಗಳೂರು ಜಿಲ್ಲಾಧ್ಯಕ್ಷ ಸೈಯ್ಯದ್ ಜಾವೇದ್ ತೀವ್ರ ಆಗ್ರಹಿಸಿದ್ದಾರೆ.

ಘಟನೆಯ ವಿವರ

ಯುವಕನೋರ್ವ ಗುದ್ದದಹಳ್ಳಿಯ ತಮ್ಮ ಮನೆ ಬಳಿ ಕುಳಿತುಕೊಂಡಿದ್ದನ್ನು ತೌಸೀಫ್ ಆಕ್ಷೇಪಿಸಿದ್ದ. ಆ ನಂತರ ಊರ ಮಂದಿಯ ಮಧ್ಯಸ್ಥಿಕೆಯೊಂದಿಗೆ ಆ ಯುವಕನಿಗೆ ಗುದ್ದದಹಳ್ಳಿಗೆ ಬರದಂತೆ ಎಚ್ಚರಿಕೆ ನೀಡಲಾಗಿತ್ತು. ಆದರೆ 8 ತಿಂಗಳ ನಂತರ, ಮೂರು ದಿನಗಳ ಹಿಂದೆ ಆ ಯುವಕ ಮತ್ತೇ ಗುದ್ದದಹಳ್ಳಿಗೆ ಬಂದಿದ್ದ. ಆ ವೇಳೆ ತೌಸೀಫ್ ಆ ಯುವಕನನ್ನು ದೂರ ಕರೆದುಕೊಂಡು ಹೋಗಿ ಪ್ರಶ್ನಿಸಿದ್ದಾನೆ. ಇದು ಪೊಲೀಸರಿಗೆ ತಿಳಿದು ಪೊಲೀಸರು ಇಬ್ಬರನ್ನೂ ವಿಚಾರಿಸಿದ ಬಳಿಕ ತೌಸೀಫ್ ನನ್ನು ಬ್ಯಾಟರಾಯನಪುರ ಠಾಣೆಗೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ ಎಂದು ತೌಸಿಫ್ ಆರೋಪಿಸಿದ್ದಾರೆ.

ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತೌಸೀಫ್ ಹೇಳುವಂತೆ, ‘ಠಾಣೆಯಲ್ಲಿ ಸರ್ಕಲ್ ಪೊಲೀಸ್ ಶಂಕರ್ ನಾಯಕ್, ಸಬ್ ಇನ್ಸ್ ಪೆಕ್ಟರ್ ಹರೀಶ್ ಉಪಸ್ಥಿತಿಯಲ್ಲಿ ಇತರ ಸಿಬ್ಬಂದಿ ತನ್ನ ಗಡ್ಡ ಕತ್ತರಿಸಿದ್ದಾರೆ. ಮುಂಜಾನೆ 2 ಗಂಟೆಯಿಂದ ಸುಮಾರು 5 ಗಂಟೆಯವರಗೆ ನಿರಂತರ 3 ಗಂಟೆಗಳ ಕಾಲ ಥಳಿಸಿದ್ದಾರೆ. ಬಾಯಾರಿಕೆ ತಣಿಸಲು ನೀರು ಕೇಳಿದಾಗ ಮೂತ್ರ ನೀಡಲಾಗಿದೆ. ಕಾಲು, ಬೂಟುಗಳಿಂದ ತಲೆ, ಮುಖ, ಭುಜ, ಗುಪ್ತಾಂಗಕ್ಕೆ ಒದೆಯಲಾಗಿದೆ. ತೀವ್ರ ತೆರನಾದ ಥಳಿತದಿಂದ ಯುವಕನ ಕಾಲು ಬಾತುಕೊಂಡಿದೆ. ನಡೆದಾಡಲೂ ಸಾಧ್ಯವಾಗದೇ ಕೊನೆಗೆ ಮೂರ್ಛೆ ತಪ್ಪಿದ್ದೆ. ಯಾವುದೇ ಪ್ರಕರಣ ದಾಖಲಿಸದ ಪೊಲೀಸರು, ಆತನ ಬಿಡುಗಡೆಗಾಗಿ 1 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದು, 30 ಸಾವಿರ ರೂಪಾಯಿ ನೀಡಿದ ಬಳಿಕ ಆತನನ್ನು ಬಿಡುಗಡೆಗೊಳಿಸಿದ್ದಾರೆ’ ಎಂದು ಆರೋಪಿಸಲಾಗಿದೆ.

ಠಾಣೆಯಲ್ಲಿ ಪ್ರಕರಣ ಇತ್ಯರ್ಥಪಡಿಸಲು ಪೊಲೀಸರು ಇಂತಿಷ್ಟು ಮೊತ್ತಕ್ಕೆ ಬೇಡಿಕೆ ಇಡುವ ವಿಚಾರ ಗುಪ್ತವಾಗಿರುವುದೇನಲ್ಲ. ಬ್ಯಾಟರಾಯನ ಠಾಣೆಯಲ್ಲಿ ಕೇಳಿ ಬಂದಿರುವ ಪೊಲೀಸರು ಹಣಕ್ಕಾಗಿ ಬೇಡಿಕೆ ಇಟ್ಟಿರುವ ವಿಚಾರವೇ ವಾರದ ಹಿಂದೆ ವರ್ತೂರು ಠಾಣೆಯಲ್ಲೂ ಕೇಳಿ ಬಂದಿತ್ತು. ತಮ್ಮ ಹಣದಾಹಕ್ಕಾಗಿ ಯುವಕರಿಗೆ ಚಿತ್ರಹಿಂಸೆ ನೀಡುವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಂಡು, ಜನಸಾಮಾನ್ಯರಿಗೆ ಕಿರುಕುಳ ನೀಡುವ ಇಂತಹ ಅನಿಷ್ಟ ಪದ್ಧತಿಗೆ ಅಂತ್ಯ ಕಾಣಿಸಬೇಕು ಎಂದು ಪಿಎಫ್‌ಐ ಒತ್ತಾಯಿಸಿದೆ.

ತೌಸೀಫ್‌ಗೆ ಗಂಭೀರವಾಗಿ ಥಳಿಸಿರುವ ಪೊಲೀಸರನ್ನು ಕೂಡಲೇ ಅಮಾನತುಗೊಳಿಸಿ ಅವರ ವಿರುದ್ಧ ಇಲಾಖಾ ವಿಚಾರಣೆ ನಡೆಸಬೇಕು. ಮಾನವ ಹಕ್ಕುಗಳ ಆಯೋಗವು ಕೂಡ ಇಂತಹ  ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಸಂತ್ರಸ್ತ ಯುವಕನ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಬೇಕು ಮತ್ತು 10 ಲಕ್ಷ ರೂಪಾಯಿ ಪರಿಹಾರ ಘೋಷಿಸಬೇಕೆಂದು ಸೈಯ್ಯದ್ ಜಾವೇದ್ ಆಗ್ರಹಿಸಿದ್ದಾರೆ.

ಇನ್ನೊಂದೆಡೆ 22 ವರ್ಷದ ಯುವಕರೊಬ್ಬನನ್ನು ಬಂಧನದಲ್ಲಿಟ್ಟು ಸತತ ಚಿತ್ರಹಿಂಸೆ ನೀಡಿ ಆತ ತನ್ನ ಬಲಗೈ ಕಳೆದುಕೊಳ್ಳುವಂತೆ ಮಾಡಿದ ಆರೋಪದಲ್ಲಿ ಬೆಂಗಳೂರಿನ ವರ್ತೂರು ಪೊಲೀಸ್ ಠಾಣೆಯ ಮೂವರು ಪೊಲೀಸರನ್ನು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಅಮಾನತುಗೊಳಿಸಿದ್ದಾರೆ. ಸಲ್ಮಾನ್ ಮೇಲೆ ಹಲ್ಲೆ ನಡೆಸಿರುವುದು ಹಿರಿಯ ಅಧಿಕಾರಿಯ ವಿಚಾರಣೆಯ ನಂತರ ಬೆಳಕಿಗೆ ಬಂದಿದ್ದು, ಹೆಡ್ ಕಾನ್‌ಸ್ಟೆಬಲ್‌ಗಳಾದ ನಾಗಭೂಷಣ ಗೌಡ, ನಾಗರಾಜ್ ಬಿ.ಎನ್ ಮತ್ತು ಶಿವಕುಮಾರ್ ಹೆಚ್ ಎಂಬುವವರನ್ನು ಅಮಾನತುಗೊಳಿಸಲಾಗಿದೆ. ಈ ಪ್ರಕರಣವನ್ನು ಪಿಎಫ್‌ಐ ಬೆಳಕಿಗೆ ತಂದು ನ್ಯಾಯಕ್ಕಾಗಿ ಆಗ್ರಹಿಸಿತ್ತು.


ಇದನ್ನೂ ಓದಿ: ಬೆಂಗಳೂರು: ಯುವಕನ ಬಲಗೈ ಕಟ್ ಆಗುವಂತೆ ಚಿತ್ರಹಿಂಸೆ ನೀಡಿದ್ದ ಮೂವರು ಪೊಲೀಸರ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...