Homeಮುಖಪುಟಕಾವೇರಿ ವಿವಾದ: ತಮಿಳುನಾಡಿಗೆ ಮತ್ತೆ ನೀರು ಹರಿಸಲು ಕರ್ನಾಟಕಕ್ಕೆ ಸೂಚನೆ

ಕಾವೇರಿ ವಿವಾದ: ತಮಿಳುನಾಡಿಗೆ ಮತ್ತೆ ನೀರು ಹರಿಸಲು ಕರ್ನಾಟಕಕ್ಕೆ ಸೂಚನೆ

- Advertisement -
- Advertisement -

ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ. ನವೆಂಬರ್ 23ರಿಂದ ಡಿಸೆಂಬರ್ 23ರವರೆಗೆ ತಮಿಳುನಾಡಿಗೆ ಪ್ರತಿನಿತ್ಯ 2,700 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ (CWRC) ಸೂಚನೆ ನೀಡಿದೆ.

ಕಾವೇರಿ ನ್ಯಾಯಾಧೀಕರಣ ಮತ್ತು ಸುಪ್ರೀಂ ಕೋರ್ಟ್‌ನ ಅಂತಿಮ ತೀರ್ಪು ಪಾಲಿಸುವಂತೆ ಸಮಿತಿ ಕರ್ನಾಟಕ ಸರ್ಕಾರಕ್ಕೆ ಆದೇಶಿಸಿದೆ.

ಇಂದು ನವದೆಹಲಿಯಲ್ಲಿ ವಿಡಿಯೋ ಕಾನ್ಪರೆನ್ಸ್ ಮೂಲಕ ನಡೆದ ಸಮಿತಿಯ ಸಭೆಯಲ್ಲಿ 17 ಟಿಎಂಸಿ ನೀರು ಹರಿಸುವಂತೆ ತಮಿಳುನಾಡು ಸರ್ಕಾರ ವಾದ ಮುಂದಿಟ್ಟಿತ್ತು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಕರ್ನಾಟಕ, ನಮ್ಮಲ್ಲಿ ಮಳೆ ಕೊರತೆ, ಬರ ಪರಿಸ್ಥಿತಿಯಿಂದಾಗಿ ಅಷ್ಟೊಂದು ನೀರು ಹರಿಸಲು ಸಾಧ್ಯವೇ ಇಲ್ಲ. ಮುಂದೆ ಮಳೆಯೂ ಬರುವ ಸಾಧ್ಯತೆ ಇಲ್ಲದ ಹಿನ್ನೆಲೆ 17 ಟಿಎಂಸಿ ನೀರು ಕೇಳುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದೆ.

ನವೆಂಬರ್‌ 3ರಂದು ನಡೆದ ಸಭೆಯಲ್ಲಿ ತಮಿಳುನಾಡಿಗೆ ಪ್ರತಿನಿತ್ಯ 2,600 ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿತ್ತು. ಇದೀಗ ಮತ್ತೆ ಒಂದು ತಿಂಗಳು ನೀರು ಹರಿಸಲು ಸೂಚಿಸಿದೆ.

ಇದನ್ನೂ ಓದಿ : ಸಲಿಂಗ ವಿವಾಹಕ್ಕೆ ಮಾನ್ಯತೆ ನಿರಾಕರಣೆ: ಮರು ಪರಿಶೀಲನೆ ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ಕಿರುಕುಳ ಆರೋಪಿ ಬ್ರಿಜ್ ಭೂಷಣ್ ಸಿಂಗ್ ಬದಲಿಗೆ ಮಗನಿಗೆ ಟಿಕೆಟ್ ಕೊಟ್ಟ ಬಿಜೆಪಿ

0
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಹೊತ್ತಿರುವ ಉತ್ತರ ಪ್ರದೇಶದ ಕೈಸರ್‌ಗಂಜ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಕೈಬಿಟ್ಟು, ಪುತ್ರ ಕರಣ್ ಭೂಷಣ್ ಸಿಂಗ್‌ಗೆ...