Homeಕರ್ನಾಟಕಈ ವರೆಗಿನ ಅತೀ ದೊಡ್ಡ ಸೈಬರ್ ವಂಚನೆ ಪ್ರಕರಣ ಬೇಧಿಸಿದ ರಾಜ್ಯ ಪೊಲೀಸ್; 9 ನೇ...

ಈ ವರೆಗಿನ ಅತೀ ದೊಡ್ಡ ಸೈಬರ್ ವಂಚನೆ ಪ್ರಕರಣ ಬೇಧಿಸಿದ ರಾಜ್ಯ ಪೊಲೀಸ್; 9 ನೇ ತರಗತಿ ಡ್ರಾಪೌಟ್‌ ಆಗಿದ್ದ ಆರೋಪಿ!

- Advertisement -
- Advertisement -

ನಕಲಿ ಇಮೇಲ್ ಐಡಿ ಮೂಲಕ ಸಂಸ್ಥೆಯೊಂದಕ್ಕೆ 2.11 ಕೋಟಿ ರೂಪಾಯಿ ವಂಚಿಸಿದ್ದ ಮಧ್ಯಪ್ರದೇಶದ 23 ವರ್ಷದ ಯುವಕನನ್ನು ಬಳ್ಳಾರಿ ಸೈಬರ್ ಕ್ರೈಮ್ ಪೊಲೀಸರು ಇತ್ತೀಚೆಗೆ ಬಂಧಿಸಿದ್ದಾರೆ. ಪೊಲೀಸರು 1.48 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿದ್ದು, ಇದು ಸೈಬರ್ ಕ್ರೈಮ್ ಪ್ರಕರಣಗಳಲ್ಲಿ ರಾಜ್ಯದ ಪೊಲೀಸರು ವಶಕ್ಕೆ ಪಡೆದ ಅತಿದೊಡ್ಡ ಪ್ರಕರಣಗಳಲ್ಲಿ ಒಂದಾಗಿದೆ ಎಂದು ವರದಿಗಳು ಉಲ್ಲೇಖಿಸಿವೆ.ಸೈಬರ್ ವಂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆರೋಪಿಯನ್ನು ಮಧ್ಯಪ್ರದೇಶದ ರೇವಾ ಜಿಲ್ಲೆಯ ನಿವಾಸಿ ಅಜಯ್ ಕುಮಾರ್ ಜೈಸ್ವಾಲ್ ಎಂದು ಗುರುತಿಸಲಾಗಿದ್ದು, ಆತನನ್ನು ಬಂಧಿಸಿರುವುದಾಗಿ ಬಳ್ಳಾರಿಯ ಪೊಲೀಸ್ ವರಿಷ್ಠಾಧಿಕಾರಿ ಶೋಭಾ ರಾಣಿ ಬುಧವಾರ ಪ್ರಕಟಿಸಿದ್ದಾರೆ. ಆರೋಪಿ ಜೈಸ್ವಾಲ್ ಆಗಸ್ಟ್ 21ರಿಂದ ಮತ್ತು ಸೆಪ್ಟೆಂಬರ್ 2 ರ ನಡುವೆ ಹಿಂದೂಸ್ತಾನ್ ಕ್ಯಾಲ್ಸಿನ್ಡ್ ಮೆಟಲ್ಸ್ ಪ್ರೈವೇಟ್ ಲಿಮಿಟೆಡ್ (HCMPL)ಗೆ ಮೋಸ ಮಾಡಲು ನಕಲಿ ಇಮೇಲ್ ಐಡಿಯನ್ನು ಸೃಷ್ಟಿದ್ದನು ಎಂದು ಆರೋಪಿಸಲಾಗಿದೆ.

ಇದನ್ನೂಓದಿ: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಆತ್ಮಹತ್ಯೆ ತಡೆಗೆ ಮಾರ್ಗಸೂಚಿ | ಸರ್ಕಾರ ನಿರ್ಧಾರ

ಎಚ್‌ಸಿಎಂಪಿಎಲ್ ಕಳೆದ ಏಳೆಂಟು ವರ್ಷಗಳಿಂದ ಬಳ್ಳಾರಿಯ ಅಗರ್ವಾಲ್ ಕೋಲ್ ಕಾರ್ಪೊರೇಷನ್ ಪ್ರೈವೇಟ್ ಲಿಮಿಟೆಡ್ (ಎಸಿಸಿಪಿಎಲ್) ನಿಂದ ಕಲ್ಲಿದ್ದಲು ಖರೀದಿಸುತ್ತಿದೆ. ಕಂಪೆನಿಯು ತನ್ನ ವಹಿವಾಟುಗಳನ್ನು ಆನ್‌ಲೈನ್‌ನಲ್ಲಿ ಮಾಡುತ್ತಿದೆ.

9 ನೇ ತರಗತಿಯ ನಂತರ ಶಾಲೆಯನ್ನು ತೊರೆದ ಜೈಸ್ವಾಲ್, ಡೇಟಾ ಎಂಟ್ರಿ ಆಪರೇಟರ್ ಆಗಿದ್ದು, ಕೆಲಸದ ನಿಮಿತ್ತ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ವಾಸಿಸುತ್ತಿದ್ದಾನೆ. ಆರೋಪಿ ಎಸಿಸಿಪಿಎಲ್‌ನ ಅಧಿಕೃತ ಇಮೇಲ್ ಐಡಿಯನ್ನು ಹೋಲುವ ಇಮೇಲ್ ಐಡಿಯನ್ನು ರಚಿಸಿ, ಕಂಪನಿಯ ಬ್ಯಾಂಕ್ ಖಾತೆ ಸಂಖ್ಯೆಯನ್ನು ಬದಲಾಯಿಸಲಾಗಿದೆ ಎಂದು ಇಮೇಲ್ ಕಳುಹಿಸಿ ಮತ್ತು ನಮೂದಿಸಿದ ಬ್ಯಾಂಕ್ ಖಾತೆ ಸಂಖ್ಯೆಗೆ ಬಾಕಿ ಪಾವತಿಸಲು ಎಚ್‌ಸಿಎಂಪಿಎಲ್ ಅನ್ನು ಕೇಳಿದ್ದಾನೆ. ಸೈಬರ್ ವಂಚನೆ

ಈ ವೇಳೆ ಕ್ರಾಸ್-ಚೆಕಿಂಗ್ ಮಾಡದೆ HCMPL ಕಂಪೆನಿಯವರು ಆರು ವಹಿವಾಟುಗಳ ಹಣವನ್ನು ವರ್ಗಾಯಿಸಿದೆ. ಮೊದಲ ವಹಿವಾಟು ಆಗಸ್ಟ್ 21 ರಂದು ನಡೆದಿದ್ದರೂ, ಸೆಪ್ಟೆಂಬರ್‌ 2ರಂದು ಎಸಿಸಿಪಿಎಲ್‌ನ ಪ್ರತಿನಿಧಿಯೊಬ್ಬರು HCMPL ಜೊತೆಗೆ ಬಾಕಿ ಹಣ ಕೇಳಿದಾಗ ಇದು ಬೆಳಕಿಗೆ ಬಂದಿತ್ತು.

ಇದನ್ನೂಓದಿ: ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಿಂದ ಆಕ್ಷೇಪಾರ್ಹ ಹೇಳಿಕೆ : ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್

ಇದರ ನಂತರ ಸೆಪ್ಟೆಂಬರ್ 3ರಂದು ಬಳ್ಳಾರಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು. ಹಾಗಾಗಿ ಡಿಎಸ್ಪಿ ಸಂತೋಷ್ ಚೌಹಾಣ್ ನೇತೃತ್ವದ ತಂಡ ಮಧ್ಯಪ್ರದೇಶಕ್ಕೆ ತೆರಳಿ ಆರೋಪಿ ಜೈಸ್ವಾಲ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಜೈಸ್ವಾಲ್ ಖಾತೆಗೆ ವರ್ಗಾಯಿಸಲಾದ ಹಣವನ್ನು ಆತ 18 ವಿವಿಧ ಖಾತೆಗಳಿಗೆ ವರ್ಗಾಯಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಜೈಸ್ವಾಲ್ 1.21 ಕೋಟಿ ರೂಪಾಯಿಗಳನ್ನು ಬ್ಯಾಂಕ್‌ನಿಂದ ಪಡೆದಿದ್ದು, 27.97 ಲಕ್ಷ ರೂಪಾಯಿಗಳನ್ನು ವಿವಿಧ ಖಾತೆಗಳಲ್ಲಿ ಇಡಲಾಗಿದೆ. ನಾವು ಈ ಹಣವನ್ನು ವಶಪಡಿಸಿಕೊಂಡಿದ್ದೇವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜೈಸ್ವಾಲ್ ದೆಹಲಿಯ ಕೆಲವು ಸೈಬರ್ ಕ್ರಿಮಿನಲ್‌ಗಳೊಂದಿಗೆ ಸಂಪರ್ಕದಲ್ಲಿದ್ದು, ಅವರು ಕಂಪನಿಗಳಿಂದ ಹಣವನ್ನು ವಂಚಿಸಲು ಆಕರ್ಷಕ ಕಮಿಷನ್‌ಗಳನ್ನು ನೀಡಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆರೋಪಿ 1.21 ಕೋಟಿ ಬ್ಯಾಂಕ್‌ನಿಂದ ವಿತ್‌ಡ್ರಾ ಮಾಡಿ ತಮ್ಮ ಮನೆಯಲ್ಲಿ ಇಟ್ಟುಕೊಂಡು ದೆಹಲಿ ತಂಡಕ್ಕೆ ಹಸ್ತಾಂತರಿಸಲು ಬಯಸಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. “ಇದು ಅವನ ಮೊದಲ ಸೈಬರ್ ಕ್ರೈಮ್ ಎಂದು ತೋರುತ್ತಿದೆ ಮತ್ತು ನಾವು ಆತನ ಹಿಂದಿನ ದಾಖಲೆಗಳನ್ನು ಪರಿಶೀಲಿಸುತ್ತಿದ್ದೇವೆ” ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ವಿಡಿಯೊ ನೋಡಿ: ಗೌರಿ ನೆನಪು ಕಾರ್ಯಕ್ರಮದಲ್ಲಿ ರಾಮಕುಮಾರ್ ಅವರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...