Homeಮುಖಪುಟಗುಜರಾತ್‌ನಲ್ಲಿ ಬಿಪೊರ್‌ಜಾಯ್ ಚಂಡಮಾರುತದಿಂದ ಭೂಕುಸಿತ ಸಾಧ್ಯತೆ: 74,000ಕ್ಕೂ ಹೆಚ್ಚು ಜನರ ಸ್ಥಳಾಂತರ

ಗುಜರಾತ್‌ನಲ್ಲಿ ಬಿಪೊರ್‌ಜಾಯ್ ಚಂಡಮಾರುತದಿಂದ ಭೂಕುಸಿತ ಸಾಧ್ಯತೆ: 74,000ಕ್ಕೂ ಹೆಚ್ಚು ಜನರ ಸ್ಥಳಾಂತರ

- Advertisement -
- Advertisement -

ಬಿಪೊರ್‌ಜಾಯ್ ಚಂಡಮಾರುತವು ಗುರುವಾರ ಸಂಜೆ ಭೂಕುಸಿತವನ್ನು ಉಂಟುಮಾಡುವ ಸಾಧ್ಯತೆ ಹಾಗಾಗಿ 74,000ಕ್ಕೂ ಹೆಚ್ಚು ಜನರನ್ನು ಗುಜರಾತ್‌ನ ಅಧಿಕಾರಿಗಳು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಚಂಡಮಾರುತವು ಗುಜರಾತ್ ಕರಾವಳಿಯಲ್ಲಿ ಸಂಜೆ 4 ರಿಂದ ರಾತ್ರಿ 8 ರ ನಡುವೆ ಭೂಕುಸಿತವನ್ನು ಉಂಟುಮಾಡುವ ನಿರೀಕ್ಷೆಯಿದೆ. ಇದು ಅತ್ಯಂತ ತೀವ್ರವಾದ ಚಂಡಮಾರುತವಾಗಿ ಕರಾವಳಿಯನ್ನು ಅಪ್ಪಳಿಸಲಿದ್ದು, ಗಾಳಿಯ ವೇಗ ಗಂಟೆಗೆ 125 ರಿಂದ 135 ಕಿಲೋಮೀಟರ್ ತಲುಪಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮುಂಜಾನೆ 5.30 ಗಂಟೆಗೆ ಬಿಪೊರ್‌ಜಾಯ್ ಚಂಡಮಾರುತವು ಗುಜರಾತ್‌ನ ಜಖೌ ಬಂದರಿನಿಂದ 180 ಕಿಲೋಮೀಟರ್ ಮತ್ತು ಪಾಕಿಸ್ತಾನದ ಕರಾಚಿಯಿಂದ 270 ಕಿಲೋಮೀಟರ್ ದೂರದಲ್ಲಿದೆ.

ಚಂಡಮಾರುತದಿಂದಾಗಿ ಕಚ್, ದ್ವಾರಕಾ ಮತ್ತು ಜಾಮ್‌ನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿರುವುದಾಗಿ ಪಿಟಿಐ ಹೇಳಿದೆ.

ಈ ಬಗ್ಗೆ ರಾಜ್ಯ ಆರೋಗ್ಯ ಸಚಿವ ರುಶಿಕೇಶ್ ಪಟೇಲ್ ಮಾತನಾಡಿ, ”72 ಗ್ರಾಮಗಳು ಕಚ್‌ನ ಕರಾವಳಿಯಿಂದ 5 ಕಿಲೋಮೀಟರ್‌ಗಳ ಒಳಗೆ ಮತ್ತು ಇನ್ನೂ 48 ಹಳ್ಳಿಗಳು ಸಮುದ್ರ ತೀರದಿಂದ 5 ಕಿಲೋಮೀಟರ್ ಮತ್ತು 10 ಕಿಲೋಮೀಟರ್ ನಡುವೆ ಇವೆ. ನಾವು ಈ ಕರಾವಳಿ ಗ್ರಾಮಗಳಿಂದ ಸುಮಾರು 40,000 ಜನರನ್ನು ಸ್ಥಳಾಂತರಿಸಿದ್ದೇವೆ” ಎಂದು ಅವರು ಹೇಳಿದರು.

ಅಧಿಕೃತ ಹೇಳಿಕೆಯ ಪ್ರಕಾರ, ”74,345 ಜನರನ್ನು ಕರಾವಳಿ ಜಿಲ್ಲೆಗಳಾದ ಕಚ್, ಜಾಮ್‌ನಗರ, ಮೊರ್ಬಿ, ರಾಜ್‌ಕೋಟ್, ದ್ವಾರಕಾ, ಜುನಾಗಢ್, ಪೋರಬಂದರ್ ಮತ್ತು ಗಿರ್ ಸೋಮನಾಥ ಜಿಲ್ಲೆಗಳಲ್ಲಿ ತಾತ್ಕಾಲಿಕ ಆಶ್ರಯಕ್ಕೆ ಸ್ಥಳಾಂತರಿಸಲಾಗಿದೆ” ಎಂದು ತಿಳಿದುಬಂದಿದೆ.

ಕರಾವಳಿ ಜಿಲ್ಲೆಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ 15 ತಂಡಗಳು, ರಾಜ್ಯ ವಿಪತ್ತು ನಿರ್ವಹಣಾ ಪಡೆಯ 12 ತಂಡಗಳು, ರಸ್ತೆ ಮತ್ತು ಕಟ್ಟಡ ಇಲಾಖೆಯ 115 ತಂಡಗಳು ಮತ್ತು ವಿದ್ಯುತ್ ಇಲಾಖೆಯ 397 ತಂಡಗಳನ್ನು ನಿಯೋಜಿಸಲಾಗಿದೆ.

ದಿ ಹಿಂದೂ ಪ್ರಕಾರ, 50ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಲಾಗಿದೆ. ಕೆಲವು ಜಿಲ್ಲೆಗಳಲ್ಲಿ ಗುಜರಾತ್ ರಾಜ್ಯ ರಸ್ತೆ ಸಾರಿಗೆ ಸೇವೆಗೆ ಸೇರಿದ ಬಸ್‌ಗಳನ್ನು ಸಹ ರದ್ದುಗೊಳಿಸಲಾಗಿದೆ.

ದ್ವಾರಕಾದಲ್ಲಿರುವ ದ್ವಾರಕಾಧೀಶ ದೇವಾಲಯ ಮತ್ತು ಗಿರ್ ಸೋಮನಾಥ ಜಿಲ್ಲೆಯ ಸೋಮನಾಥ ದೇವಾಲಯವನ್ನು ಗುರುವಾರ ಮುಚ್ಚಲಾಗುವುದು.

ಬಿಪೊರ್‌ಜಾಯ್, ಬಂಗಾಳಿ ಭಾಷೆಯಲ್ಲಿ ವಿಪತ್ತು ಎಂದರ್ಥ, 25 ವರ್ಷಗಳ ನಂತರ ಜೂನ್‌ನಲ್ಲಿ ಗುಜರಾತ್‌ಗೆ ಅಪ್ಪಳಿಸುವ ಮೊದಲ ಚಂಡಮಾರುತ ಎಂದು ಹೇಳಲಾಗುತ್ತಿದೆ. ಜೂನ್ 1998ರಲ್ಲಿ, ಅತ್ಯಂತ ತೀವ್ರವಾದ ಚಂಡಮಾರುತವು ಕಚ್ ಮತ್ತು ಸೌರಾಷ್ಟ್ರದ ಕರಾವಳಿ ಪ್ರದೇಶಗಳಿಗೆ ಅಪ್ಪಳಿಸಿತು, ಸುಮಾರು 3,000 ಜನರು ಸಾವಿಗೀಡಾಗಿದ್ದರು.

ಪಾಕಿಸ್ತಾನದಲ್ಲಿ 62,000 ಜನರನ್ನು ಸ್ಥಳಾಂತರ

ಚಂಡಮಾರುತದ ದೃಷ್ಟಿಯಿಂದ ಪಾಕಿಸ್ತಾನದ ಅಧಿಕಾರಿಗಳು 64,107 ಜನರನ್ನು ಹೆಚ್ಚಿನ ಅಪಾಯದ ಪ್ರದೇಶಗಳಿಂದ ಸ್ಥಳಾಂತರಿಸಿದ್ದಾರೆ. ಅವರನ್ನು 75 ಪರಿಹಾರ ಶಿಬಿರಗಳಲ್ಲಿರಲು ವ್ಯವಸ್ಥೆ ಮಾಡಲಾಗಿದೆ ಎಂದು ಸಿಂಧ್ ಮಾಹಿತಿ ಸಚಿವ ಶಾರ್ಜೀಲ್ ಮೆಮನ್ ಹೇಳಿದ್ದಾರೆ. ಈ ಬಗ್ಗೆ  ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

ಸ್ಥಳಾಂತರಗೊಂಡವರನ್ನು ಸರ್ಕಾರಿ ಶಾಲೆಗಳು ಮತ್ತು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಥಟ್ಟಾ, ಕೇತಿ ಬಂದರ್, ಸುಜಾವಲ್, ಬಾದಿನ್, ಉಮರ್ಕೋಟ್, ಥಾರ್ಪಾರ್ಕರ್, ಶಹೀದ್ ಬೆನಜಿರಾಬಾದ್, ತಂಡೋ ಮುಹಮ್ಮದ್ ಖಾನ್, ತಂಡೋ ಅಲ್ಲ್ಯಾರ್ ಮತ್ತು ಸಂಘರ್ ಜಿಲ್ಲೆಗಳಲ್ಲಿ ತೆರವು ಮಾಡಲಾಗಿದೆ ಎಂದು ಸಚಿವರು ಹೇಳಿದರು.

ಶೆರ್ರಿ ರೆಹಮಾನ್, ಪಾಕಿಸ್ತಾನದ ಫೆಡರಲ್ ಮಂತ್ರಿ ಹವಾಮಾನ ಬದಲಾವಣೆ ಬಗ್ಗೆ ಮಾತನಾಡಿ, ”ಕರಾಚಿಯು ಸಧ್ಯಕ್ಕೆ ಅಪಾಯದಲ್ಲಿಲ್ಲ. ಆದರೆ ಮಳೆ ಮತ್ತು ಬಲವಾದ ಗಾಳಿಯನ್ನು ಎದುರಿಸಲು ತುರ್ತು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ” ಎಂದು ಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...