Homeಮುಖಪುಟಇಂದು ಕರಾವಳಿಗೆ ಅಪ್ಪಳಿಸಲಿರುವ ಮೊಂಥಾ ಚಂಡಮಾರುತ : ಆಂಧ್ರ, ಒಡಿಶಾದಲ್ಲಿ ಹೈ ಅಲರ್ಟ್

ಇಂದು ಕರಾವಳಿಗೆ ಅಪ್ಪಳಿಸಲಿರುವ ಮೊಂಥಾ ಚಂಡಮಾರುತ : ಆಂಧ್ರ, ಒಡಿಶಾದಲ್ಲಿ ಹೈ ಅಲರ್ಟ್

- Advertisement -
- Advertisement -

ಬಂಗಾಳಕೊಲ್ಲಿಯಲ್ಲಿ ‘ಮೊಂಥಾ’ ಚಂಡಮಾರುತ ತೀವ್ರಗೊಳ್ಳುತ್ತಿದ್ದು, ಇಂದು (ಅ.28, ಮಂಗಳವಾರ) ಸಂಜೆ ಅಥವಾ ರಾತ್ರಿ ಆಂಧ್ರ ಪ್ರದೇಶದ ಕಾಕಿನಾಡ ಬಳಿ ಕರಾವಳಿಗೆ ಅಪ್ಪಳಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆ ಒಡಿಶಾ ಮತ್ತು ಆಂಧ್ರ ಪ್ರದೇಶ ಸರ್ಕಾರಗಳು ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿವೆ. ಅಪಾಯಕಾರಿ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸುತ್ತಿವೆ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ರಕ್ಷಣಾ ತಂಡಗಳನ್ನು ನಿಯೋಜಿಸಿವೆ.

ಒಡಿಶಾ ಸರ್ಕಾರ ಸೋಮವಾರ ದಕ್ಷಿಣದ ಎಂಟು ಜಿಲ್ಲೆಗಳಾದ ಮಲ್ಕನ್‌ಗಿರಿ, ಕೊರಾಪುಟ್, ನಬರಂಗ್‌ಪುರ, ರಾಯಗಡ, ಗಜಪತಿ, ಗಂಜಾಂ, ಕಲಹಂಡಿ ಮತ್ತು ಕಂಧಮಲ್‌ಗಳ ತಗ್ಗು ಮತ್ತು ಗುಡ್ಡಗಾಡು ಪ್ರದೇಶಗಳಿಂದ 1,496 ಗರ್ಭಿಣಿಯರು ಸೇರಿದಂತೆ ಸುಮಾರು 3,000 ಜನರನ್ನು ಸ್ಥಳಾಂತರಿಸಿದೆ, ಅಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

“ಒಟ್ಟು 32,528 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಗರ್ಭಿಣಿಯರು, ವೃದ್ಧರು ಮತ್ತು ಅಂಗವಿಕಲರ ಸ್ಥಳಾಂತರಕ್ಕೆ ಆದ್ಯತೆ ನೀಡಲಾಗಿದೆ. 1,445 ಚಂಡಮಾರುತ ಆಶ್ರಯ ಕೇಂದ್ರಗಳನ್ನು ಅಥವಾ ಗಂಜಿ ಕೇಂದ್ರಗಳನ್ನು ತೆರೆದಿದ್ದೇವೆ. ಸಾಕು ಪ್ರಾಣಿಗಳಿಗೆ ಆಹಾರ, ಔಷಧ, ಬೆಳಕು ಮತ್ತು ಆರೈಕೆಯ ವ್ಯವಸ್ಥೆ ಮಾಡಿದ್ದೇವೆ” ಎಂದು ಸೋಮವಾರ ಸಂಜೆ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಒಡಿಶಾದ ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಸುರೇಶ್ ಪೂಜಾರಿ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

“ಎನ್‌ಡಿಆರ್‌ಎಫ್‌, ಒಡಿಆರ್‌ಎಫ್‌ ಮತ್ತು ಅಗ್ನಿಶಾಮಕ ಸೇವೆಯಿಂದ ಒಟ್ಟು 140 ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ. ಚಂಡಮಾರುತ ಅಪ್ಪಳಿಸಿದ 24 ಗಂಟೆಗಳ ಒಳಗೆ ವಿದ್ಯುತ್ ಪುನಃಸ್ಥಾಪಿಸಲು ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಆಸ್ಪತ್ರೆಗಳು ಮತ್ತು ಕುಡಿಯುವ ನೀರಿನ ಘಟಕಗಳಲ್ಲಿ ವಿದ್ಯುತ್ ಬ್ಯಾಕಪ್ ಸಿದ್ಧವಾಗಿದೆ” ಎಂದು ಒಡಿಶಾದ ವಿಶೇಷ ಪರಿಹಾರ ಆಯುಕ್ತ (ಎಸ್‌ಆರ್‌ಸಿ) ಡಿ.ಕೆ ಸಿಂಗ್ ತಿಳಿಸಿದ್ದಾರೆ.

ಭುವನೇಶ್ವರ ಸೇರಿದಂತೆ ದಕ್ಷಿಣ ಮತ್ತು ಕರಾವಳಿ ಒಡಿಶಾದ ಕೆಲವು ಭಾಗಗಳಲ್ಲಿ ಈಗಾಗಲೇ ಮಳೆ ಆರಂಭವಾಗಿದ್ದು, ಅಕ್ಟೋಬರ್ 28 ಮತ್ತು 29 ರಂದು ಮಳೆ ತೀವ್ರಗೊಳ್ಳಲಿದೆ ಎಂದು ಸಚಿವ ಪೂಜಾರಿ ಮಾಹಿತಿ ನೀಡಿದ್ದಾರೆ.

ಗುಡ್ಡಗಾಡು ಗಜಪತಿ ಜಿಲ್ಲೆಯಲ್ಲಿ ಭೂಕುಸಿತ ಪ್ರಮುಖ ಆತಂಕವಾಗಿದೆ. ಅಲ್ಲಿ 139 ಅಪಾಯಕಾರಿ ಪ್ರದೇಶಗಳನ್ನು ಗುರುತಿಸಲಾಗಿದೆ. ಅಕ್ಟೋಬರ್ 30 ರವರೆಗೆ ಸರ್ಕಾರಿ ನೌಕರರ ರಜೆಯನ್ನು ರದ್ದುಗೊಳಿಸಲಾಗಿದೆ. ಅಲ್ಲದೆ, ಅಲ್ಲಿಯವರೆಗೆ ಒಂಬತ್ತು ಜಿಲ್ಲೆಗಳಲ್ಲಿನ ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ ಎಂದು ಪೂಜಾರಿ ಹೇಳಿದ್ದಾರೆ.

“ಒಡಿಶಾದ ಎಲ್ಲಾ ಬಂದರುಗಳಲ್ಲಿ ದೂರದ ಎಚ್ಚರಿಕೆ ಸಿಗ್ನಲ್ ನಂ-ಐ ಅನ್ನು ತೋರಿಸಲಾಗಿದೆ. ಮೀನುಗಾರರು ಅಕ್ಟೋಬರ್ 29 ರವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಹೆಚ್ಚಿನ ಮೀನುಗಾರರು ಈಗಾಗಲೇ ಮರಳಿದ್ದಾರೆ. ಗಂಜಾಂ ಜಿಲ್ಲೆಯಲ್ಲಿ 100ಕ್ಕೂ ಹೆಚ್ಚು ಆಂಧ್ರದ ಮೀನುಗಾರರಿಗೆ ಆಶ್ರಯ ನೀಡಲಾಗಿದೆ. ಅವರು ಹವಾಮಾನ ಸಾಮಾನ್ಯಗೊಂಡ ನಂತರ ಮನೆಗೆ ಮರಳಲಿದ್ದಾರೆ” ಎಂದು ಎಸ್‌ಆರ್‌ಸಿ ತಿಳಿಸಿದೆ.

ಸೋಮವಾರ ರಾತ್ರಿ 8.30ಕ್ಕೆ ಬಿಡುಗಡೆಯಾದ ಇತ್ತೀಚಿನ ಐಎಂಡಿ ಬುಲೆಟಿನ್ ಪ್ರಕಾರ, “ಥಾಯ್ ಭಾಷೆಯಲ್ಲಿ ‘ಪರಿಮಳಯುಕ್ತ ಹೂವು’ ಎಂಬ ಅರ್ಥವನ್ನು ನೀಡುವ ಚಂಡಮಾರುತ ಮೊಂಥಾ, ಸಂಜೆ 5.30ಕ್ಕೆ ಪಶ್ಚಿಮ-ಮಧ್ಯ ಮತ್ತು ಪಕ್ಕದ ನೈಋತ್ಯ ಬಂಗಾಳ ಕೊಲ್ಲಿಯ ಮೇಲೆ ಕೇಂದ್ರೀಕೃತವಾಗಿತ್ತು. ಕಾಕಿನಾಡದಿಂದ ಆಗ್ನೇಯಕ್ಕೆ ಸುಮಾರು 450 ಕಿ.ಮೀ, ವಿಶಾಖಪಟ್ಟಣದಿಂದ ದಕ್ಷಿಣಕ್ಕೆ 500 ಕಿ.ಮೀ ಮತ್ತು ಗೋಪಾಲಪುರದಿಂದ ದಕ್ಷಿಣಕ್ಕೆ 670 ಕಿ.ಮೀ ದೂರದಲ್ಲಿತ್ತು”.

“ಗಾಳಿಯು ಸುಮಾರು 15 ಕಿ.ಮೀ ವೇಗದಲ್ಲಿ ವಾಯುವ್ಯಕ್ಕೆ ಚಲಿಸುತ್ತಿದ್ದು, ಮಂಗಳವಾರ ಬೆಳಿಗ್ಗೆ ವೇಳೆಗೆ ತೀವ್ರ ಚಂಡಮಾರುತವಾಗಿ ರೂಪುಗೊಳ್ಳುವ ನಿರೀಕ್ಷೆಯಿದೆ. ಅಕ್ಟೋಬರ್ 28ರ ಸಂಜೆ ಅಥವಾ ರಾತ್ರಿ, ಕಾಕಿನಾಡ ಬಳಿಯ ಮಚಲಿಪಟ್ನಂ ಮತ್ತು ಕಳಿಂಗಪಟ್ನಂ ನಡುವೆ ಆಂಧ್ರ ಪ್ರದೇಶದ ಕರಾವಳಿಗೆ ಚಂಡಮಾರುತ ಅಪ್ಪಳಿಸುವ ನಿರೀಕ್ಷೆಯಿದೆ. ಈ ಸಂದರ್ಭದಲ್ಲಿ ಗಂಟೆಗೆ 90-100 ಕಿ.ಮೀ ಅಥವಾ ಗಂಟೆಗೆ 110 ಕಿ.ಮೀ. ಗರಿಷ್ಠ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ”.

ಮಂಗಳವಾರ ಸಂಜೆಯಿಂದ ಒಡಿಶಾದ ದಕ್ಷಿಣ ಕರಾವಳಿ ಪ್ರದೇಶಗಳಲ್ಲಿ ಗಾಳಿಯ ವೇಗ ಗಂಟೆಗೆ 60–70 ಕಿ.ಮೀ. ತಲುಪಿ, ಗಂಟೆಗೆ 80 ಕಿ.ಮೀ. ವೇಗದಲ್ಲಿ ಬೀಸಬಹುದು. ಅಕ್ಟೋಬರ್ 28 ಮತ್ತು 29 ರಂದು ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ನಂತರ ಈ ವಾತಾವರಣ ದುರ್ಬಲಗೊಂಡು ಚಂಡಮಾರುತವಾಗಿ ಛತ್ತೀಸ್‌ಗಢದ ಕಡೆಗೆ ಚಲಿಸುವ ನಿರೀಕ್ಷೆಯಿದೆ.

ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಕರೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಕೇಂದ್ರದರಿಂದ ಸಾಧ್ಯವಿರುವ ಎಲ್ಲಾ ಸಹಾಯ ಒದಗಿಸುವ ಭರವಸೆ ಕೊಟ್ಟಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ನಾಯ್ಡು ಅವರು ರಿಯಲ್ ಟೈಮ್ ಗವರ್ನೆನ್ಸ್ ಸಿಸ್ಟಮ್ (ಆರ್‌ಟಿಜಿಎಸ್) ಮೂಲಕ ಉನ್ನತ ಮಟ್ಟದ ಸಭೆ ನಡೆಸಿ, ಕಾಲುವೆ ದಂಡೆಗಳನ್ನು ಬಲಪಡಿಸಲು, ಪ್ರವಾಹಕ್ಕೆ ಸಿದ್ಧರಾಗಲು ಮತ್ತು ಪ್ರತಿ ಗಂಟೆಯೂ ಚಂಡಮಾರುತದ ಚಲನೆಯನ್ನು ಮೇಲ್ವಿಚಾರಣೆ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ವರದಿ ಹೇಳಿದೆ.

“ಎಲ್ಲಾ ಮೀನುಗಾರರನ್ನು ಮರಳಿ ದಡಕ್ಕೆ ಕರೆತರಲಾಗಿದೆ. ಚಂಡಮಾರುತದ ನಂತರದ ಪರಿಹಾರ ಕಾರ್ಯಾಚರಣೆಗಾಗಿ ವೈದ್ಯಕೀಯ ತಂಡಗಳು, ಎನ್‌ಡಿಆರ್‌ಎಫ್ ಘಟಕಗಳು ಮತ್ತು ಇಂಜಿನಿಯರಿಂಗ್ ವಿಭಾಗಗಳು ಸಿದ್ಧವಾಗಿವೆ” ಎಂದು ಅಧಿಕೃತ ಪ್ರಕಟಣೆಯನ್ನು ಉಲ್ಲೇಖಿಸಿ ಪಿಟಿಐ ತಿಳಿಸಿದೆ.

ಪರಿಹಾರ ಶಿಬಿರಗಳಲ್ಲಿರುವ ಪ್ರತಿ ಕುಟುಂಬಕ್ಕೆ 3,000 ರೂ. ನಗದು, 25 ಕೆಜಿ ಅಕ್ಕಿ ಮತ್ತು ಇತರ ಅಗತ್ಯ ವಸ್ತುಗಳನ್ನು ಘೋಷಿಸಲಾಗಿದೆ. ಕೃಷ್ಣ ಜಿಲ್ಲೆಯಲ್ಲಿ ತೀವ್ರ ಮಳೆಯಾಗುವ ಮುನ್ಸೂಚನೆ ಇದ್ದು, ಮುಂದಿನ ಎರಡು ದಿನಗಳಲ್ಲಿ ಗುಂಟೂರು, ಬಾಪಟ್ಲಾ, ಎನ್‌ಟಿಆರ್, ಪಲ್ನಾಡು ಮತ್ತು ಪಶ್ಚಿಮ ಗೋದಾವರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ವಾಲ್ಟೇರ್ ಪ್ರದೇಶ ಮತ್ತು ಪಕ್ಕದ ಮಾರ್ಗಗಳಲ್ಲಿ ಕಾರ್ಯನಿರ್ವಹಿಸುವ ಕೆಲವು ರೈಲುಗಳನ್ನು ರದ್ದುಪಡಿಸುವುದು, ತಿರುಗಿಸುವುದು ಮತ್ತು ಅಲ್ಪಾವಧಿಗೆ ಸ್ಥಗಿತಗೊಳಿಸುವುದಾಗಿ ಪೂರ್ವ ಕರಾವಳಿ ರೈಲ್ವೆ ಘೋಷಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಆಂಧ್ರಪ್ರದೇಶದ ಕರಾವಳಿಯಲ್ಲಿ ನೆಲ್ಲೂರಿನಿಂದ ಶ್ರೀಕಾಕುಳಂವರೆಗೆ 2 ರಿಂದ 4.7 ಮೀಟರ್ ಎತ್ತರದ ಅಲೆಗಳು ಏಳಲಿವೆ ಎಂದು ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ಸೇವೆಗಳ ಕೇಂದ್ರ (INCOIS) ಮತ್ತು ಭಾರತ ಹವಾಮಾನ ಇಲಾಖೆ (IMD)ಸೋಮವಾರ ಮುನ್ಸೂಚನೆ ನೀಡಿವೆ.

ಅಕ್ಟೋಬರ್ 27 ರಂದು ಸಂಜೆ 5.30ರಿಂದ ರಾತ್ರಿ 11.30 ರವರೆಗೆ ಆರು ಗಂಟೆಗಳ ಕಾಲ ಎತ್ತರದ ಅಲೆಗಳು ಅಪ್ಪಳಿಸುವ ನಿರೀಕ್ಷೆಯಿದೆ. ಸಾಮಾನ್ಯ ಉಬ್ಬರವಿಳಿತಕ್ಕಿಂತ ಸುಮಾರು ಒಂದು ಮೀಟರ್ ಎತ್ತರದ ಅಲೆಗಳು ಅಪ್ಪಳಿಸಿ ಆಂಧ್ರ ಪ್ರದೇಶ ಮತ್ತು ಯಾನಂನ ತಗ್ಗು ಪ್ರದೇಶಗಳನ್ನು ಮುಳುಗಿಸಬಹುದು ಎಂದು ಜಂಟಿ ಹೇಳಿಕೆಯಲ್ಲಿ ಎರಡೂ ಸಂಸ್ಥೆಗಳು ಎಚ್ಚರಿಸಿದ್ದವು.

ಪ್ರತ್ಯೇಕ ಬೆಳವಣಿಗೆಯಲ್ಲಿ, ಪೂರ್ವ-ಮಧ್ಯ ಅರೇಬಿಯನ್ ಸಮುದ್ರದ ಮೇಲೆ ವಾಯುಭಾರ ಕುಸಿತ ಉಂಟಾಗಿದ್ದು, ಅಕ್ಷಾಂಶ 16.7°N ಮತ್ತು ರೇಖಾಂಶ 67.3°E ಬಳಿ ಸ್ಥಿರವಾಗಿದೆ – ವೆರಾವಲ್ (ಗುಜರಾತ್) ನಿಂದ ನೈಋತ್ಯಕ್ಕೆ ಸುಮಾರು 570 ಕಿ.ಮೀ ಮತ್ತು ಮುಂಬೈನಿಂದ ಪಶ್ಚಿಮ-ನೈಋತ್ಯಕ್ಕೆ 650 ಕಿ.ಮೀ ದೂರದಲ್ಲಿದೆ. ಮೊಂಥಾ ಚಂಡಮಾರುತದಿಂದ ಭಿನ್ನವಾಗಿರುವ ಈ ಹವಾಮಾನ ಪರಿಸ್ಥಿತಿಯು ಮುಂದಿನ 48 ಗಂಟೆಗಳಲ್ಲಿ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದಾದ್ಯಂತ ಉತ್ತರ-ಈಶಾನ್ಯಕ್ಕೆ ಚಲಿಸುವ ಸಾಧ್ಯತೆಯಿದೆ.

ಮೊಂಥಾ ಚಂಡಮಾರುತವು ಪ್ರಬಲವಾಗುತ್ತಿದ್ದರೂ, ತಮಿಳುನಾಡಿನ ಹೆಚ್ಚಿನ ಭಾಗಗಳಲ್ಲಿ ಸೋಮವಾರ ಒಣ ಹವೆಯಿತ್ತು. ಆದಾಗ್ಯೂ, ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರ (ಆರ್‌ಎಂಸಿ) ಮಂಗಳವಾರ ತಿರುವಲ್ಲೂರು ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಿದೆ. ಚೆನ್ನೈ, ಚೆಂಗಲ್ಪಟ್ಟು, ಕಾಂಚಿಪುರಂ, ರಾಣಿಪೇಟೆ, ಥೇಣಿ, ತೆಂಕಾಸಿ ಮತ್ತು ಕನ್ಯಾಕುಮಾರಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ತಮಿಳುನಾಡು ಕರಾವಳಿಯಿಂದ ಚಂಡಮಾರುತ ದೂರ ಸರಿಯುವುದರಿಂದ, ಮಂಗಳವಾರ ಉತ್ತರ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ ಮತ್ತು ಬುಧವಾರ ಚಂಡಮಾರುತ ಅಪ್ಪಳಿಸಿದ ನಂತರ ಗಣನೀಯವಾಗಿ ಕಡಿಮೆಯಾಗಬಹುದು ಎನ್ನಲಾಗಿದೆ.

ಚೆನ್ನೈನ ಕೆಲವು ಪ್ರದೇಶಗಳಲ್ಲಿ ಸಾಮಾನ್ಯ ಮಳೆಯಾದ ವರದಿಯಾಗಿದ್ದರೆ, ಹೆಚ್ಚಿನ ಒಳನಾಡಿನ ಜಿಲ್ಲೆಗಳು ಒಣಹವೆಯಿಂದ ಕೂಡಿವೆ. ತಮಿಳುನಾಡು ಮತ್ತು ದಕ್ಷಿಣ ಆಂಧ್ರ ಕರಾವಳಿಯ ಮೀನುಗಾರರಿಗೆ ಬಲವಾದ ಗಾಳಿ ಮತ್ತು ಸಮುದ್ರದ ಪ್ರಕ್ಷುಬ್ಧತೆಯ ಬಗ್ಗೆ ಎಚ್ಚರಿಕೆ ನೀಡಲಾಗಿದೆ.

ಛತ್ ಪೂಜೆಗಾಗಿ ಪ್ರಧಾನಿಗೆ ಫಿಲ್ಟರ್ ನೀರಿನ ‘ನಕಲಿ’ ಯಮುನಾ ಘಾಟ್ ನಿರ್ಮಾಣ: ಎಎಪಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...