ತಮಿಳುನಾಡು, ಪಾಂಡಿಚೇರಿಗಳಲ್ಲಿ ನಾಳೆ (ನವೆಂಬರ್ 25) ಸಂಜೆ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ನಿವಾರ್ ಚಂಡಮಾರುತ ಅಪ್ಪಳಿಸಲಿದೆ ಎಂಬ ಹವಾಮಾನ ಇಲಾಖೆ ಎಚ್ಚರಿಕೆ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಬುಧವಾರ ತಮಿಳುನಾಡಿನಲ್ಲಿ ಸಾರ್ವಜನಿಕ ರಜಾದಿನವನ್ನು ಘೋಷಿಸಿದೆ. ಕೇವಲ ಅಗತ್ಯ ಸೇವೆಗಳು ಮಾತ್ರ ನಾಳೆ ಕಾರ್ಯನಿರ್ವಹಿಸುತ್ತವೆ ಎಂದು ತಿಳಿಸಿದೆ.
ನಿವಾರ್ ಚಂಡಮಾರುತವು ಆರ್ಭಟಿಸುತ್ತಿದ್ದು, ಎಚ್ಚರಿಕೆಯಿಂದ ಇರುವಂತೆ ಕರಾವಳಿ ಭಾಗದ ಜನರಿಗೆ ಸೂಚನೆ ನೀಡಿಲಾಗಿದೆ. ಇನ್ನು ಚಂಡಮಾರುತ ಗಂಟೆಗೆ 145 ಕಿಲೋ ಮೀಟರ್ ವೇಗದಲ್ಲಿ ಬೀಸುತ್ತಿದ್ದು, ತಮಿಳುನಾಡು ಮತ್ತು ಪುದುಚೇರಿಯಲ್ಲಿ ರೆಡ್ ಅಲರ್ಟ್, ಆಂಧ್ರಪ್ರದೇಶ ಮತ್ತು ತೆಲಂಗಾಣಗಳ ಕರಾವಳಿ ಭಾಗಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಮತ್ತು ಉತ್ತರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್‌ಗಳಲ್ಲಿ ನ. 24 ರಿಂದ ನ.26ರ ವರೆಗೆ, ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಮತ್ತು ರಾಯಲ್ ಸೀಮಾ ಮತ್ತು ಆಗ್ನೇಯ ತೆಲಂಗಾಣದಲ್ಲಿ ನ.25 ಮತ್ತು ನ.26 ರಂದು ವ್ಯಾಪಕ ಗುಡುಗು ಸಹಿತ ಮಳೆ ಬೀಳಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: ನವೆಂಬರ್ 26 ರ ಅಖಿಲ ಭಾರತ ಮುಷ್ಕರಕ್ಕೆ ವಿದ್ಯಾರ್ಥಿ ಸಂಘಟನೆಗಳ ಬೆಂಬಲ
Flash Flood Guidance Outlook for next 24 hours and subsequent 12 hours issued by IMD valid till 25th November 2020 1130 hours for various watersheds in Coastal Tamilnadu and South Coastal Andhra Pradesh is appended. pic.twitter.com/E51w71gAqy
— Central Water Commission Official Flood Forecast (@CWCOfficial_FF) November 24, 2020
ಸೈಕ್ಲೋನ್ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ತಮಿಳುನಾಡು ಹಾಗೂ ಪುದುಚೇರಿಗೆ ಎಲ್ಲಾ ಸಹಕಾರ ನೀಡುಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
Spoke to Tamil Nadu CM Shri @EPSTamilNadu and Puducherry CM Shri @VNarayanasami regarding the situation in the wake of Cyclone Nivar. Assured all possible support from the Centre. I pray for the safety and well-being of those living in the affected areas.
— Narendra Modi (@narendramodi) November 24, 2020
“ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಮತ್ತು ಪುದುಚೇರಿ ಮುಖ್ಯಮಂತ್ರಿ ವಿ ನಾರಾಯಣಸಾಮಿ ಅವರೊಂದಿಗೆ ಮಾತನಾಡಿದ್ದೇನೆ. ಕೇಂದ್ರದಿಂದ ಸಾಧ್ಯವಿರುವ ಎಲ್ಲಾ ಸಹಕಾರ ನೀಡುವ ಭರವಸೆ ನೀಡಲಾಗಿದೆ. ನಿವಾರ್ ಸೈಕ್ಲೋನ್ ಪೀಡಿತ ಪ್ರದೇಶಗಳಲ್ಲಿ ವಾಸಿಸುವವರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.
ತಮಿಳುನಾಡಿನ 7 ಜಿಲ್ಲೆಗಳಲ್ಲಿ ಬಸ್ಗಳ ಓಡಾಟ ನಿರ್ಬಂಧಿಸಲಾಗಿದೆ. ಪುದುಕೊಟ್ಟಲ್, ತಂಜಾವೂರು, ನಾಗಪಟ್ಟಣಂ, ಮೈಲಾಡುತುರೈ ಮತ್ತು ತಿರುವಾರೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಆಂಧ್ರಪ್ರದೇಶ ಮತ್ತು ಪುದುಚೇರಿಯಲ್ಲಿ ಸುಮಾರು 1,200 ರಾಷ್ಟ್ರೀಯ ವಿಪತ್ತು ಪಡೆಯ (ಎನ್‌ಡಿಆರ್‌ಎಫ್) ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ನಿವಾರ್ ಚಂಡಮಾರುತದ ದೃಷ್ಟಿಯಿಂದ 800 ಮಂದಿಯನ್ನು ಸಿದ್ದಗೊಳಿಸಲಾಗಿದೆ.
“ನಿವಾರ್ ಅತ್ಯಂತ ತೀವ್ರವಾದ ಚಂಡಮಾರುತವಾಗಿದ್ದು, ಬುಧವಾರ ಸಂಜೆ ಭೂಕುಸಿತ ಉಂಟಾಗುವ ನಿರೀಕ್ಷೆಯಿದೆ ಎಂದು ಎನ್‌ಡಿಆರ್‌ಎಫ್ ಮುಖ್ಯಸ್ಥ ಎಸ್.ಎನ್ ಪ್ರಧಾನ್ ಮಾಹಿತಿ ನೀಡಿದ್ದಾರೆ.



Lord save the people of Tamilnadu, Telangana, Andra.