Homeಮುಖಪುಟತೌಕ್ತೆ ಚಂಡಮಾರುತ: ರಾಜ್ಯದಲ್ಲಿ ಮುಂದಿನ 3 ದಿನ ಭಾರಿ ಮಳೆ, ಗುಜರಾತ್‌ನಲ್ಲಿ 1 ಲಕ್ಷ ಜನರ...

ತೌಕ್ತೆ ಚಂಡಮಾರುತ: ರಾಜ್ಯದಲ್ಲಿ ಮುಂದಿನ 3 ದಿನ ಭಾರಿ ಮಳೆ, ಗುಜರಾತ್‌ನಲ್ಲಿ 1 ಲಕ್ಷ ಜನರ ಸ್ಥಳಾಂತರ

- Advertisement -
- Advertisement -

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ತೌಕ್ತೆ ಚಂಡಮಾರುತ ಅತ್ಯಂತ ತೀವ್ರವಾಗಿದ್ದು, ಗುಜರಾತ್‌ನಲ್ಲಿ ರಾತ್ರಿ 8 ರಿಂದ 11 ಗಂಟೆಯ ನಡುವೆ ಕರಾವಳಿಯನ್ನು ದಾಟಲಿದ್ದು, ಭಾವನಗರದಲ್ಲಿ ರಾತ್ರಿ 10 ರಿಂದ ರಾತ್ರಿ 11 ಗಂಟೆಯಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಚಂಡಮಾರುತವು ಗಂಟೆಗೆ 165 ಕಿ.ಮೀ ವೇಗದಲ್ಲಿ ಗಾಳಿ ಬೀಸುತಿದ್ದು, ರಾಜ್ಯದಲ್ಲಿ ಮೇ 20 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ. ರಾಜ್ಯದಲ್ಲಿ ಹವಾಮಾನ ಇಲಾಖೆ ಆರೆಂಜ್ ಮತ್ತು ಹಳದಿ ಅಲರ್ಟ್ ಘೋಷಣೆ ಮಾಡಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಕರ್ನಾಟಕ ಮತ್ತು ಕೇರಳದ ಕರಾವಳಿ ಪ್ರದೇಶದಿಂದ ಗುಜರಾತ್ ಕಡಲ ತೀರಕ್ಕೆ ತಲುಪಲಿದ್ದು, ಗುಜರಾತ್ ತೀರದ ತಗ್ಗು ಪ್ರದೇಶಗಳಿಂದ ಸುಮಾರು 1 ಲಕ್ಷದ 50 ಸಾವಿರ ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ.

ಇದನ್ನೂ ಓದಿ: ಹರಿಯಾಣ ಮುಖ್ಯಮಂತ್ರಿ ವಿರುದ್ಧ ಪ್ರತಿಭಟನೆ ನಡೆಸಿದ ರೈತರ ಮೇಲೆ ಲಾಠಿಚಾರ್ಜ್- ಹಲವರಿಗೆ ಗಾಯ

ಸಂಜೆ 4 ಗಂಟೆಯವರೆಗೆ ಮುಂಬೈ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದ್ದು, ಬಾಂದ್ರಾ-ವರ್ಲಿ ಸಮುದ್ರ ಸಂಪರ್ಕವನ್ನು ಮುಚ್ಚಲಾಗಿದೆ. ಪ್ರತಿ 24 ವಾರ್ಡ್‌ಗಳಲ್ಲಿ ತಾತ್ಕಾಲಿಕ ಆಶ್ರಯವನ್ನು ಸ್ಥಾಪಿಸಲಾಗಿದ್ದು, ಮೂರು ಎನ್‌ಡಿಆರ್‌ಎಫ್ ತಂಡಗಳು ನಿಯೋಜಿಸಲಾಗಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಈಗಾಗಲೇ ತುರ್ತು ಕೆಲಸಗಳಿಗೆ 100 ತಂಡಗಳನ್ನು ಕೇರಳ, ಕರ್ನಾಟಕ, ತಮಿಳುನಾಡು, ಗುಜರಾತ್, ಗೋವಾ ಮತ್ತು ಮಹಾರಾಷ್ಟ್ರ ಭಾಗಗಳಲ್ಲಿ ನಿಯೋಜಿಸಿದೆ. ಇವುಗಳ ಪೈಕಿ 65 ತಂಡಗಳನ್ನು ಸಕ್ರಿಯಗೊಳಿಸಲಾಗಿದೆ.

ಈವರೆಗೆ ಸುಮಾರು 7,000 ಮೀನುಗಾರಿಕೆ ದೋಣಿಗಳನ್ನು ಬಂದರಿಗೆ ವಾಪಸ್ ಕಳುಹಿಸಲಾಗಿದೆ. ಗುಜರಾತ್‌ನಿಂದ ಸುಮಾರು 2,200 ಮತ್ತು ಮಹಾರಾಷ್ಟ್ರದಿಂದ 4,500 ಮೀನುಗಾರಿಕೆ ದೋಣಿಗಳನ್ನು ಬಂದರಿಗೆ ಮರಳಿಸಲಾಗಿದೆ. ಇದಲ್ಲದೆ 300 ಕ್ಕೂ ಹೆಚ್ಚು ವ್ಯಾಪಾರಿ ಹಡಗುಗಳಿಗೆ ಎಚ್ಚರಿಕೆ ನೀಡಲಾಗಿದೆ.

ತೌಕ್ತೆ ಚಂಡಮಾರುತ ಕರ್ನಾಟಕ, ಕೇರಳ ಮತ್ತು ಗೋವಾ ತೀರಗಳಲ್ಲಿ ಭಾನುವಾರ ಭಾರಿ ಅನಾಹುತ ಸೃಷ್ಟಿಸಿದ್ದು, ಆರು ಮಂದಿ ಸಾವನ್ನಪ್ಪಿದರು. ಕರಾವಳಿ ಪ್ರದೇಶಗಳಲ್ಲಿ ಮನೆಗಳು, ರಸ್ತೆಗಳು ಮತ್ತು ವಿದ್ಯುತ್ ಕಂಬಗಳು ಹಾನಿಗೊಳಗಾಗಿವೆ. ಭಾರಿ ಮಳೆ, ಗಾಳಿಯಿಂದಾಗಿ ಲಕ್ಷಾಂತರ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.


ಇದನ್ನೂ ಓದಿ: ಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿ ಇದ್ದಿದ್ದರೆ ಪರಿಸ್ಥಿತಿ ನಿರ್ವಹಣೆ ಕಷ್ಟವಾಗುತ್ತಿತ್ತು- ನಳೀನ್ ಕುಮಾರ್‌ ಕಟೀಲ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

0
ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯಪತ್ರ'ದ ಕುರಿತು ಪ್ರಧಾನಿ ಮೋದಿ ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದು, ಈ ಹಿನ್ನೆಲೆ ಪ್ರಣಾಳಿಕೆಯ ಕುರಿತು ವಿವರಿಸಲು ಸಮಯ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಖರ್ಗೆ...