Homeಮುಖಪುಟತೌಕ್ತೆ ಚಂಡಮಾರುತ: ಸಂತ್ರಸ್ತರ ನೆರವಿಗೆ ನಿಲ್ಲಿ ಎಂದು ಕಾರ್ಯಕರ್ತರಲ್ಲಿ ರಾಹುಲ್ ಗಾಂಧಿ ಮನವಿ

ತೌಕ್ತೆ ಚಂಡಮಾರುತ: ಸಂತ್ರಸ್ತರ ನೆರವಿಗೆ ನಿಲ್ಲಿ ಎಂದು ಕಾರ್ಯಕರ್ತರಲ್ಲಿ ರಾಹುಲ್ ಗಾಂಧಿ ಮನವಿ

- Advertisement -
- Advertisement -

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ತೌಕ್ತೆ ಚಂಡಮಾರುತದಿಂದ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಕಾಂಗ್ರೆಸ್ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ‘ತೌಕ್ತೆ’ (Tauktae) ಚಂಡಮಾರುತ ಭೀತಿ ಹಿನ್ನೆಲೆಯಲ್ಲಿ ಕರ್ನಾಟಕ, ಕೇರಳ, ತಮಿಳುನಾಡು, ಗುಜರಾತ್ ಮತ್ತು ಮಹಾರಾಷ್ಟ್ರದ ಕರಾವಳಿ ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF)ಯ 53 ತಂಡಗಳನ್ನು ಈಗಾಗಲೇ ನಿಯೋಜಿಸಲಾಗಿದೆ.

“ಕೇರಳ, ಮಹಾರಾಷ್ಟ್ರ, ಗೋವಾ, ತಮಿಳುನಾಡು, ಗುಜರಾತ್ ಮತ್ತು ಕರ್ನಾಟಕದಲ್ಲಿ ಸೈಕ್ಲೋನ್ ಅಲರ್ಟ್ ನೀಡಲಾಗಿದೆ. ತೌಕ್ತೆ ಚಂಡಮಾರುತದಿಂದಾಗಿ ಈಗಾಗಲೇ ಅನೇಕ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದೆ. ಅಗತ್ಯವಿರುವವರಿಗೆ ನಿಮ್ಮಿಂದ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ನಾನು ಕಾಂಗ್ರೆಸ್ ಕಾರ್ಯಕರ್ತರಿಗೆ ಮನವಿ ಮಾಡುತ್ತೇನೆ. ದಯವಿಟ್ಟು ಸುರಕ್ಷಿತವಾಗಿರಿ” ಎಂದು ವಯನಾಡ್ ಸಂಸದ ರಾಹುಲ್ ಗಾಂಧಿ ಟ್ವೀಟ್ ಮಾಡಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ತೌಕ್ತೆ ಚಂಡಮಾರುತ ಭೀತಿ: ಕರ್ನಾಟಕ ಸೇರಿ ಐದು ರಾಜ್ಯಗಳಲ್ಲಿ NDRF ತಂಡ ನಿಯೋಜನೆ

ಭಾರತ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ಅರಬ್ಬಿ ಸಮುದ್ರದ ಮೇಲೆ ವಾಯುಭಾರ ಕುಸಿತ ಉಂಟಾಗಿದ್ದು, ಮೇ 16 ರ ಹೊತ್ತಿಗೆ ಕ್ರಮೇಣ ಪೂರ್ವ-ಮಧ್ಯ ಅರಬ್ಬಿ ಸಮುದ್ರದ ಮೇಲೆ ಚಂಡಮಾರುತವಾಗಿ ಬದಲಾಗಬಹುದು. ಮುಂದಿನ 12 ಗಂಟೆಗಳಲ್ಲಿ ಚಂಡಮಾರುತ ತೀವ್ರಗೊಳ್ಳುತ್ತದೆ ಎಂದಿದೆ.

ಕರ್ನಾಟಕ, ಕೇರಳ, ತಮಿಳುನಾಡು, ಗುಜರಾತ್ ಮತ್ತು ಮಹಾರಾಷ್ಟ್ರದ ಕರಾವಳಿ ಪ್ರದೇಶಗಳಲ್ಲಿ ಚಂಡಮಾರುತದ ಪರಿಣಾಮ ಉಂಟಾಗಲಿದೆ ಎಂದು  53 ತಂಡಗಳ ಪೈಕಿ 24 ತಂಡಗಳನ್ನು ಈ ಮೊದಲೇ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ. ಉಳಿದ ತಂಡಗಳನ್ನು ಕಾರ್ಯಾಚಣೆಗೆ ಸಿದ್ಧವಾಗಿ ಇರಿಸಲಾಗಿದೆ ಎಂದು ಎನ್‌ಡಿಆರ್‌ಎಫ್ ಮಹಾನಿರ್ದೇಶಕ ಎಸ್.ಎನ್. ಪ್ರಧಾನ್ ಹೇಳಿದ್ದಾರೆ.

ಉತ್ತರ-ವಾಯುವ್ಯ ಗುಜರಾತ್ ಮತ್ತು ಪಕ್ಕದ ಪಾಕಿಸ್ತಾನ ತೀರಗಳನ್ನು ತೌಕ್ತೆ ಚಂಡಮಾರುತ ಅಪ್ಪಳಿಸಲಿದ್ದು, ಮೇ 18 ರ ಸಂಜೆ ಗುಜರಾತ್ ಕರಾವಳಿಯನ್ನು ತಲುಪುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ  ತಿಳಿಸಿದೆ.


ಇದನ್ನೂ ಓದಿ: ಪೊಲೀಸ್ ವಿಚಾರಣೆಗೆ ಹೆದರುವುದಿಲ್ಲ, ಸಹಾಯ ಕೆಲಸ ಮುಂದುವರೆಸುತ್ತೇವೆ: IYC ಅಧ್ಯಕ್ಷ ಬಿ.ವಿ ಶ್ರೀನಿವಾಸ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ತಮಿಳುನಾಡಿನ ಬಗ್ಗೆ ಸುಳ್ಳು ಸುದ್ದಿ ಹರಡಿ ಬಂಧಿಸಲ್ಪಟ್ಟಿದ್ದ ಯೂಟ್ಯೂಬರ್ ಕಶ್ಯಪ್ ಬಿಜೆಪಿಗೆ ಸೇರ್ಪಡೆ

0
ಯೂಟ್ಯೂಬರ್ ಮನೀಶ್ ಕಶ್ಯಪ್ ಬಿಜೆಪಿ ಸಂಸದ ಮನೋಜ್ ತಿವಾರಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬಿಹಾರ ಮೂಲದ ಯೂಟ್ಯೂಬರ್ ಕಶ್ಯಪ್ ಕಳೆದ ವರ್ಷ ನಕಲಿ ಮಾಹಿತಿ ಹರಡಿದ್ದಕ್ಕಾಗಿ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ...