Homeಮುಖಪುಟಪ್ರವಾದಿ ನಿಂದನೆ: ಪಿ.ನವೀನ್ ತಲೆಗೆ 51 ಲಕ್ಷ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಪ್ರವಾದಿ ನಿಂದನೆ: ಪಿ.ನವೀನ್ ತಲೆಗೆ 51 ಲಕ್ಷ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

- Advertisement -
- Advertisement -

ಪುಲಕೇಶಿನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಸೋದರಳಿಯ ಪಿ.ನವೀನ್ ತಲೆಗೆ ಬಹುಮಾನ ಘೋಷಿಸಿದ ಆರೋಪದ ಮೇಲೆ ಸಮಾಜವಾದಿ ಪಕ್ಷದ ಮಾಜಿ ನಾಯಕನನ್ನು ನಿನ್ನೆ ಬಂಧಿಸಲಾಗಿದೆ.

ಮೀರತ್‌ನ ಫಲ್ವಾಡಾ ಪಟ್ಟಣದ ರಸೂಲ್‌ಪುರ ಗ್ರಾಮದ ನಿವಾಸಿ ಶಹಜೇಬ್ ರಿಜ್ವಿ ವಾಟ್ಸ್‌ಆ್ಯಪ್‌ನಲ್ಲಿ ವಿಡಿಯೋವೊಂದನ್ನು ಪ್ರಸಾರ ಮಾಡಿ, ಫೇಸ್‌ಬುಕ್ ನಲ್ಲಿ ಪ್ರವಾದಿ ಮೊಹಮ್ಮದರ ಬಗ್ಗೆ ಅವಹೇಳನಕಾರಿ ಕಾಮೆಂಟ್ ಹಾಕಿದ್ದಕ್ಕಾಗಿ ಪಿ ನವೀನ್ ತಲೆಗೆ 51 ಲಕ್ಷ ರೂ.ಗಳ ಮೊತ್ತವನ್ನು ಘೋಷಿಸಿದ್ದಾರೆ. ಪ್ರಸ್ತುತ ವಿಡಿಯೋ ವೈರಲ್ ಆದ ನಂತರ ಆತನನ್ನು ಬಂಧಿಸಲಾಗಿದೆ.

“ಕಾಂಗ್ರೆಸ್ ಶಾಸಕರ ಸೋದರಳಿಯ ಹಾಕಿರುವ ಸಾಮಾಜಿಕ ಜಾಲತಾಣದ ಪೋಸ್ಟ್‌ನಿಂದಾಗಿ ಮುಸ್ಲಿಂ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿದೆ. ಯಾರು ಅವರ ಸೋದರಳಿಯನ ತಲೆಯನ್ನು ತರುತ್ತಾರೋ ಅದಕ್ಕೆ ಪ್ರತಿಯಾಗಿ 51 ಲಕ್ಷ ರೂ ನೀಡುತ್ತೇನೆ” ಎಂದು ರಿಜ್ವಿ ವೀಡಿಯೊದಲ್ಲಿ ಹೇಳುವುದನ್ನು ಕೇಳಬಹುದಾಗಿದೆ.

ಮೀರತ್‌ನ ಪೊಲೀಸ್ ವರಿಷ್ಠಾಧಿಕಾರಿ ಅವಿನಾಶ್ ಪಾಂಡೆ, ”ಶಹಜೇಬ್ ರಿಜ್ವಿ ವಿರುದ್ಧ 153 ಎ (ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 505 (2) (ಒಂದು ಸಮುದಾಯವನ್ನು ಇನ್ನೊಂದರ ವಿರುದ್ಧ ಪ್ರಚೋದಿಸುವ ಉದ್ದೇಶ) ) ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಕೇಸು ದಾಖಲಿಸಲಾಗಿದೆ ಎಂದು ಹೇಳಿದ್ದಾರೆ ಎಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ.

ಶಹಜೇಬ್ ರಿಜ್ವಿ ಈ ಹಿಂದೆ ಸಮಾಜವಾದಿ ಪಕ್ಷದ (ಎಸ್‌ಪಿ) ಅಲ್ಪಸಂಖ್ಯಾತ ಘಟಕದೊಂದಿಗೆ ಸಂಬಂಧ ಹೊಂದಿದ್ದರು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಎಸ್‌ಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು.

ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಸೋದರಳಿಯ ಪಿ.ನವೀನ್ ಫೇಸ್‌ಬುಕ್‌ನಲ್ಲಿ ಪ್ರವಾದಿ ಮೊಹಮ್ಮದರ ವಿರುದ್ದ ಅವಹೇಳನಕಾರಿಯಗಿ ಪ್ರತಿಕ್ರಿಯೆ ನೀಡಿದ ನಂತರ ಬೆಂಗಳೂರಿನಲ್ಲಿ ಹಿಂಸಾಚಾರ ಪ್ರಾರಂಭವಾಯಿತು.

ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿಗಳಲ್ಲಿ ಬೃಹತ್ ಜನಸಮೂಹ ಜಮಾಯಿಸಿ ಪ್ರತಿಭಟನೆ ನಡೆಸಿತ್ತು. ಇದರ ನಂತರ ಭುಗಿಲೆದ್ದ ಹಿಂಸಾಚಾರದಲ್ಲಿ ಉದ್ರಿಕ್ತ ಜನರು ಪೊಲೀಸ್ ಠಾಣೆ, ಶ್ರೀನಿವಾಸ್ ಮೂರ್ತಿ ಅವರ ನಿವಾಸ ಮತ್ತು ನವೀನ್ ಮನೆ ಸೇರಿದಂತೆ ಹಲವಾರು ವಾಹನಗಳಿಗೆ ಹಾನಿ ಮಾಡಿದ್ದಾರೆ.

ನ್ಯೂಸ್ ಮಿನಿಟ್ ವರದಿಯಂತೆ ನಾಗವರ ಮೂಲದ ಬಿಬಿಎಂಪಿ ಕಾರ್ಪೊರೇಟರ್ ಪತಿ ಕಲೀಮ್ ಪಾಷಾ ಸೇರಿದಂತೆ ಗಲಭೆಗೆ ಸಂಬಂಧಿಸಿದ 206 ಜನರನ್ನು ಈವರೆಗೆ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.


ಓದಿ: ಡಿ.ಜೆ. ಹಳ್ಳಿ ಗಲಭೆ: ಹಿಂದೂ ವಿರೋಧಿ ಪೋಸ್ಟ್‌ಗೆ ಉತ್ತರವಾಗಿ ಪಿ. ನವೀನ್ ಪ್ರವಾದಿ ನಿಂದನೆ ಪೋಸ್ಟ್ ಹಾಕಿದ್ದನೆ?


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...