Homeಕರ್ನಾಟಕಡಿ.ಜೆ. ಹಳ್ಳಿ ಗಲಭೆ: ಹಿಂಸೆಗಿಳಿದವರು ಮಾಡಿದ್ದು ಕೂಡಾ ಪ್ರವಾದಿ ನಿಂದನೆಯೇ ಎಂದ ಮುಸ್ಲಿಂ ಧಾರ್ಮಿಕ ಮುಖಂಡರು

ಡಿ.ಜೆ. ಹಳ್ಳಿ ಗಲಭೆ: ಹಿಂಸೆಗಿಳಿದವರು ಮಾಡಿದ್ದು ಕೂಡಾ ಪ್ರವಾದಿ ನಿಂದನೆಯೇ ಎಂದ ಮುಸ್ಲಿಂ ಧಾರ್ಮಿಕ ಮುಖಂಡರು

ಪ್ರಚೋದನಾತ್ಮಕ ಹೇಳಿಕೆಗಳಿಗೆ ವಿವೇಕಯುತವಾಗಿ ಪ್ರತಿಕ್ರಿಯಿಸಬೇಕು. ಹಿಂಸಾತ್ಮಕವಾಗಿ ವರ್ತಿಸಿದರೆ ಪ್ರಚೋದಿಸಿದರ ದುರುದ್ದೇಶ ಈಡೇರುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

- Advertisement -
- Advertisement -

ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿ ಮತ್ತು ಕಾವಲ್ ಬೈರಸಂದ್ರದಲ್ಲಿ ನಿನ್ನೆ ರಾತ್ರಿ ನಡೆದ ಗಲಭೆಯನ್ನು ಖಂಡಿಸಿರುವ ಮುಸ್ಲಿಂ ಸಂಘಟನೆಗಳು, ಕಾನೂನನ್ನು ಕೈಗೆತ್ತಿಕೊಂಡು ಪೋಲೀಸರ ವಿರುಧ್ಧ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯುಂಟು ಮಾಡುವುದು ಪ್ರವಾದಿಯ ಹಿಂಬಾಲಕರ ಶೈಲಿಯಲ್ಲ ಎಂದು ಹೇಳಿದ್ದು ಸಮಸ್ಯೆಯನ್ನು ಕಾನೂನು ಮೂಲಕ ಬಗೆಹರಿಸಬೇಕು ಎಂದು ಹೇಳಿದ್ದಾರೆ.

ಪುಲಿಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಸಂಬಂಧಿ ಎನ್ನಲಾದ ನವೀನ್ ಎಂಬವರು ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದರೆ ಎಂದು ಆರೋಪಿಸಿ ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿ ಮತ್ತು ಕಾವಲ್ ಬೈರಸಂದ್ರದಲ್ಲಿ ನಿನ್ನೆ ರಾತ್ರಿ ಭುಗಿಲೆದ್ದ ಘರ್ಷಣೆಯಲ್ಲಿ ಇದುವರೆಗೂ ಮೂವರು ಮೃತಪಟ್ಟಿದ್ದು, 110 ಜನರನ್ನು ಬಂಧಿಸಲಾಗಿದೆ.

ಘಟನೆಯ ಬಗ್ಗೆ ಕರ್ನಾಟಕ ಮುಸ್ಲಿಂ ಜಮಾಅತ್ ಕಾರ್ಯಾದರ್ಶಿ ಮೌಲಾನಾ ಶಾಪಿ ಸಅದಿ, “ಜಗತ್ತಿಗೆ ಮಾನವೀಯತೆ ಮತ್ತು ಸುಸಂಸ್ಕೃತಿಯ ಸಂದೇಶ ನೀಡಿದ ಪೈಗಂಬರ್ ಮುಹಮ್ಮದ್ ಸ್ವಲ್ಲಲ್ಲಾಹು ಅಲೈಹಿವಸಲ್ಲಮ್ ಜಾಗತಿಕ ಮುಸಲ್ಮಾನರ ಹೃದಯ ಸಿಂಹಾಸನದ ರಾಜಕುಮಾರ. ಅವರನ್ನು ನಿಂದನೆ ಮಾಡಿದ ಕಿಡಿಗೇಡಿಗೆ ಗರಿಷ್ಠ ಶಿಕ್ಷೆಯಾಗಲಿ ಎಂದು ಆಗ್ರಹಿಸಿರುವ ಅವರು, ಕಾನೂನು ಕೈಗೆತ್ತಿಕೊಳ್ಳುವುದು ಸಾರ್ವಜನಿಕ ಆಸ್ತಿಪಾಸ್ತಿ ನಾಶ ಮಾಡುವುದನ್ನು ಖಂಡಿಸಿದ್ದಾರೆ. ಕಾನೂನಾತ್ಮಕ ಹೋರಾಟದಲ್ಲಿ ನಂಬಿಕೆಯುಳ್ಳವರಾಗಬೇಕು ಎಂದಿರುವ ಅವರು ಎಲ್ಲರೂ ಶಾಂತಿ ಕಾಪಾಡಬೇಕು ಎಂದು ಆಗ್ರಹಿಸಿದ್ದಾರೆ.

ಘಟನೆಯನ್ನು ಖಂಡಿಸಿರುವ ಜಮಾತೆ ಇಸ್ಲಾಮಿ ಹಿಂದ್ ನ ರಾಜ್ಯಾಧ್ಯಕ್ಷ ಡಾ.ಬೆಲಗಾಮಿ ಪ್ರವಾದಿಯನ್ನು ನಿಂದನೆ ಮಾಡಿರುವ ವ್ಯಕ್ತಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಸಿದೆ. ಶಾಂತಿ ಸ್ಥಾಪನೆಗೆ ನಾವು ಕಟಿಬದ್ದರಾಗಿದ್ದೇವೆ, ಪೊಲೀಸರು ನಿಷ್ಪಕ್ಷವಾಗಿ ಕೆಲಸ ಮಾಡಬೇಕು ಅಲ್ಲದೆ ಮಾಧ್ಯಮಗಳು ಕೂಡಾ ಇದನ್ನು ಪ್ರಚೋದನೆ ಮಾಡಬಾರದು, ಸಂವೇಶನಶೀಲವಾಗಿ ವರದಿ ಮಾಡಬೇಕು. ಮುಸ್ಲಿಂ ಯುವಕರು ಶಾಂತಿಯಿಂದ ವರ್ತಿಸಬೇಕು ಯಾರು ಕೂಡಾ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಹೇಳಿದ್ದಾರೆ.

DJ Halli incident. Kannada statement of Dr. Belgami Muhammad Saad, State President, Jamaat e Islami Hind Karnataka.

Posted by Jamaat-e-Islami Hind Karnataka on Wednesday, August 12, 2020

ಕರ್ನಾಟಕ ಮುಸ್ಲಿಂ ಮುತ್ತಹಿದಾ ಮಹಾಝ್ ಇದರ ಅಬ್ದುಲ್ ಖಾದಿರ್‍, “ಪ್ರವಾದಿ ಮೊಹಮ್ಮದ್‌ರ ಅವಹೇಳನವನ್ನು ಸಾಮಾನ್ಯವಾಗಿ ಯಾವ ಮುಸ್ಲಿಂ ಕೂಡಾ ಸಹಿಸಿಕೊಳ್ಳುವುದಿಲ್ಲ. ಇದರ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರು ಕೂಡಾ ತುಸು ತಡಮಾಡಿದ್ದಾರೆ, ಇದು ಸೇರಿರುವ ಜನರಿಗೆ ಇನ್ನಷ್ಟು ಕೋಪ ಉಂಟು ಮಾಡಿದೆ ಎನ್ನಲಾಗುತ್ತಿದೆ. ಆದರೆ ಕಾನೂನನ್ನು ಕೈಗೆ ತೆಗೆದುಕೊಳ್ಳುವುದು ತಪ್ಪೇ ಆಗಿದೆ. ಏನೇ ಸಮಸ್ಯೆಗಳಿದ್ದರು ಕಾನೂನಿನ ಮೂಲಕವೆ ಬಗೆಹರಿಸಬೇಕು. ಈಗ ಪ್ರವಾದಿಯನ್ನು ಅವಹೇಳನ ಮಾಡಿದ ವ್ಯಕ್ತಿಯನ್ನು ಶಿಕ್ಷಿಸುವುದರ ಜೊತೆಗೆ ಗಲಭೇಕೋರರನ್ನು ಕೂಡಾ ಪತ್ತೆ ಹಚ್ಚಿ ಶಿಕ್ಷಿಸಬೇಕಾಗಿದೆ, ಈ ಹೆಸರಲ್ಲಿ ಅಮಾಯಕರು ಬಲಿಯಾಗದಿರಲಿ” ಎಂದು ಹೇಳಿದ್ದಾರೆ.

ಅಲ್‌ಅನ್ಸಾರ್‍ ವಾರಪತ್ರಿಕೆಯ ಸಂಪಾದಕ ಕೆ. ಎಂ. ಸಿದ್ದೀಕ್ ಮೋಂಟುಗೋಳಿ ಮಾತನಾಡಿ, ಪ್ರವಾದಿ ನಿಂದನೆಯ ವಿರುದ್ಧ ಹಿಂಸೆಗಿಳಿಯುವುದೂ ಪ್ರವಾದಿ ನಿಂದನೆಯೆ ಆಗಿದೆ ಎಂದು ಹೇಳಿದ್ದಾರೆ.

ಪ್ರವಾದಿ ನಿಂದನೆಯ ವಿರುದ್ಧ ಹಿಂಸೆಗಿಳಿದವರು ಮಾಡಿದ್ದು ಕೂಡ ಪ್ರವಾದಿ ನಿಂದನೆಯೆ?

Posted by Km Siddeeq on Wednesday, August 12, 2020

“ಮುಸ್ಲಿಮರು ಅತ್ಯಂತ ಗೌರವಿಸುವ ಪ್ರವಾದಿಗಳನ್ನು ನಿಂದಿಸಿ ಜಾಲತಾಣಗಳಲ್ಲಿ ವಿಕೃತಿ ಮೆರೆದವರನ್ನು ಬಂಧಿಸುವಂತೆ ಪ್ರಜಾಸತ್ತಾತ್ಮಕ ಹೋರಾಟ ನಡೆಸುವುದು ಬಿಟ್ಟು ಹಿಂಸಾತ್ಮಕ ಪ್ರತಿಭಟನೆಗಳಿಗೆ ಇಳಿದಿರುವುದನ್ನು ಸಮುದಾಯ ಎಂದೂ ಕ್ಷಮಿಸುವುದಿಲ್ಲ. ಪ್ರವಾದಿಯ ನಿಂದನೆ ಹಿಂದಿನಿಂದಲೂ ನಡೆಯುತ್ತ ಬಂದಿದೆ. ಸೈದ್ಧಾಂತಿಕವಾಗಿ ಅವರ ಸಿದ್ಧಾಂತಗಳನ್ನು ಎದುರಿಸಲಾಗದವರು ಮಾತ್ರ ನಿಂದನೆಗಿಳಿಯುತ್ತಾರೆ. ಮುಸ್ಲಿಮರನ್ನು ಪ್ರಚೋದಿಸಿ ಅವರನ್ನು ಸಂಘರ್ಷಕ್ಕೆ ಹಚ್ಚುವ ಷಡ್ಯಂತ್ರ ನಡೆಯುತ್ತಲೇ ಇದೆ. ಇದನ್ನರಿತು ಸಮುದಾಯ ಸಂಯಮದಿಂದ ವರ್ತಿಸಬೇಕು. ಇದೀಗ ಮಾಧ್ಯಮಗಳು ಕೂಡ ಹಸಿದ ನಾಯಿಗೆ ಎಲುಬು ಸಿಕ್ಕಂತೆ ಸಂಭ್ರಮಿಸಿ ಪ್ರಕರಣವನ್ನು ದೀರ್ಘಕಾಲ ಜೀವಂತವಿಡಲು ಪ್ರಯತ್ನಿಸುತ್ತಿರುವುದು ವಿಷಾದನೀಯ” ಎಂದು ಸಿದ್ದೀಕ್ ಹೇಳಿದ್ದಾರೆ.

ಪ್ರವಾದಿ ನಿಂದನೆಯ ಫೇಸ್‌ಬುಕ್ ಪೋಸ್ಟ್ ಹಾಗೂ ಹಿಂಸಾಚಾರಗಳೆರಡೂ ಖಂಡನಾರ್ಹ ಎಂದಿರುವ ಸುನ್ನಿ ಸ್ಟೂಡೆಂಟ್ ಫಡರೇಷನ್ (ಎಸ್ಸೆಸ್ಸೆಫ್) ಕರ್ನಾಟಕ ರಾಜ್ಯ ಸಮಿತಿ, “ಸಾಮಾಜಿಕ ಜಾಲತಾಣಗಳಲ್ಲಿ ಕೋಮುಪ್ರಚೋದಕ ಪೋಸ್ಟ್ ಹಂಚುವ ಮೂಲಕ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಯಾರೇ ಆದರೂ ಶಿಕ್ಷಾರ್ಹರು. ಅದೇ ರೀತಿ ಕಾನೂನು ಕೈಗೆತ್ತಿಕೊಂಡು ಹಿಂಸಾಚಾರಕ್ಕಿಳಿಯುವುದು ಕೂಡ ವಿಶ್ವ ಪ್ರವಾದಿಯವರ ಬೋಧನೆಗೆ ಮಸಿಬಳಿಯುವ ಪ್ರಯತ್ನವಾಗಿದೆ”‌ ಎಂದು ಅಭಿಪಪ್ರಾಯ ಪಟ್ಟಿದೆ.

“ಯಾವುದೇ ಪ್ರಚೋದನಾತ್ಮಕ ಹೇಳಿಕೆಗಳಿಗೆ ವಿವೇಕಯುತವಾಗಿ ಪ್ರತಿಕ್ರಿಯಿಸಬೇಕು. ಹಿಂಸಾತ್ಮಕವಾಗಿ ವರ್ತಿಸಿದರೆ ಪ್ರಚೋದಿಸಿದರ ದುರುದ್ದೇಶ ಈಡೇರುತ್ತದೆ. ಇದಕ್ಕೆ ಯಾರೂ ಅವಕಾಶ ಕೊಡಬಾರದು‌ ಎಂದು ಎಸ್ಸೆಸ್ಸೆಫ್ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಈ ಹಿಂದೆಯೂ ಕೆಲವು ದುಷ್ಕರ್ಮಿಗಳು ಅನಗತ್ಯವಾಗಿ ಪ್ರವಾದಿಯವರನ್ನು ಅವಮಾನಕರವಾಗಿ ಚರ್ಚೆಗೆ ಎಳೆದು ತರುವ ಪ್ರಯತ್ನವನ್ನು ಮಾಡಿದ್ದರು. ಅಂತಹ ದುಷ್ಕರ್ಮಿಗಳ ವಿರುದ್ಧ ಇನ್ನೂ ಕ್ರಮ ಕೈಗೊಳ್ಳದಿರುವುದು ಖೇದಕರ‌. ಇನ್ನು ಇಂತಹ ದುಷ್ಕೃತ್ಯಗಳು ಪುನರಾವರ್ತನೆಯಾಗದಂತೆ ರಾಜ್ಯ ಗೃಹ ಇಲಾಖೆಯು ಎಚ್ಚರ ವಹಿಸಬೇಕು” ಎಂದು ಎಸ್ಸೆಸ್ಸೆಫ್ ಪ್ರಕಟನೆಯಲ್ಲಿ ಆಗ್ರಹಿಸಿದೆ.

ಸ್ಟುಡೆಂಟ್ ಇಸ್ಲಾಮಿಕ್ ಆರ್ಗನೈಸೇಷನ್(ಎಸ್‌ಐಒ), ” ಕೋಟ್ಯಾಂತರ ಮುಸ್ಲಿಮರು ಗೌರವಯುತವಾಗಿ ಕಾಣುವ ಪ್ರವಾದಿಯ ನಿಂದನೆ ಖಂಡನಾರ್ಹ, ಆದರೆ ಇಂತಹ ಸಮಸ್ಯೆಗಳಿಗೆ ಕಾನೂನಾತ್ಮಕ ಪರಿಹಾರ ಹುಡುಕಬೇಕೆ ವಿನಃ ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ. ನೆಲದ ಕಾನೂನಿಗೆ ಗೌರವ ನೀಡುವುದು ನಮ್ಮ ಮೊದಲ ಆದ್ಯತೆಯಾಗಬೇಕು. ನಿನ್ನೆ ಗಲಭೆಯಲ್ಲಿ ಭಾಗಿಯಾದವನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆ ನೀಡಬೇಕು” ಎಂದು ಪ್ರಕಟಣೆಯಲ್ಲಿ ತಿಳಿಸಿದೆ.


ಓದಿ: ಕೇವಲ ವಾಸ್ತವಾಂಶಗಳನ್ನು ಮಾತ್ರ ವರದಿ ಮಾಡಿ: ಮಾಧ್ಯಮಗಳಿಗೆ ‘ನಾವು ಭಾರತೀಯರು’ ಮನವಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...