Homeಮುಖಪುಟಡಿಸಿಎಂ ಸ್ವಕ್ಷೇತ್ರದಲ್ಲಿ ದಲಿತ ಯುವಕನ ಕೈ ಕತ್ತರಿಸಿದ ಬಲಾಢ್ಯ ಜಾತಿ ಗುಂಪು; ಗಡಿಪಾರಾಗಿದ್ದ ರೌಡಿಶೀಟರ್‌ನಿಂದ ದುಷ್ಕೃತ್ಯ

ಡಿಸಿಎಂ ಸ್ವಕ್ಷೇತ್ರದಲ್ಲಿ ದಲಿತ ಯುವಕನ ಕೈ ಕತ್ತರಿಸಿದ ಬಲಾಢ್ಯ ಜಾತಿ ಗುಂಪು; ಗಡಿಪಾರಾಗಿದ್ದ ರೌಡಿಶೀಟರ್‌ನಿಂದ ದುಷ್ಕೃತ್ಯ

- Advertisement -
- Advertisement -

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸ್ವಕ್ಷೇತ್ರವಾದ ಕನಕಪುರ ತಾಲೂಕಿನ ಮಾಳಗಾಳು ಗ್ರಾಮದಲ್ಲಿ ಪ್ರಬಲ (ಒಕ್ಕಲಿಗ) ಜಾತಿ ಯುವಕರ ಗುಂಪೊಂದು, ಭಾನುವಾರ ತಡರಾತ್ರಿ ಪರಿಶಿಷ್ಟ ಸಮುದಾಯದ ಯುವಕ ಅನೀಶ್ ಮೇಲೆ ಹಲ್ಲೆ ನಡೆಸಿ ಮುಂಗೈ ಕತ್ತರಿಸಿದ್ದಾರೆ. ಸಂತ್ರಸ್ತನ ಕುಟುಂಬದ ಏಳು ಜನರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಘಟನೆ ನಡೆದ ಗ್ರಾಮ ವಿಧಾನಪರಿಷತ್ ಕಾಂಗ್ರೆಸ್ ಸದಸ್ಯ ಎಸ್. ರವಿಯವರ ಸ್ವಗ್ರಾಮವಾಗಿದೆ.

ಗಾಯಾಳು ಅನೀಶ್ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕನಕಪುರದಲ್ಲಿ ಕಾಂಗ್ರೆಸ್ ಮುಖಂಡರಾಗಿದ್ದಾರೆ. ಅನೀಶ್ ಎಡಗೈ ತುಂಡಾಗಿದ್ದು, ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಕುಟುಂಬದ ಇತರೆ ಸದಸ್ಯರು ತೀವ್ರವಾಗಿ ಗಾಯಗೊಂಡಿದ್ದು, ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗಾಯಾಳು ಅನೀಶ್ ಮಾವ ಪಿ.ಎಲ್‌.ಡಿ. ಬ್ಯಾಂಕ್ ಉದ್ಯೋಗಿಯಾಗಿರುವ ಲಕ್ಷ್ಮಣ, ಸಂಬಂಧಿ ಗೋವಿಂದರಾಜು ಅವರ ಮೇಲೆ ಕೂಡ ಗುಂಪು ಹಲ್ಲೆ ಮಾಡಿದೆ. ಜೊತೆಗೆ, ಮನೆಯಲ್ಲಿದ್ದ ಮಹಿಳೆಯರು ಸೇರಿದಂತೆ 7 ಜನರ ಮೇಲೆ ಈ ಗುಂಪು ಹಲ್ಲೆ ನಡೆಸಿದ್ದು, ಮನೆಯ ಮುಂದೆ ನಿಲ್ಲಿಸಿದ್ದ ಎರಡು ಆಟೋಗಳನ್ನು ಜಖಂಗೊಳಿಸಿದ್ದಾರೆ.

ಒಕ್ಕಲಿಗ ಸಮುದಾಯಕ್ಕೆ ಸೇರಿದ ಹರ್ಷ, ಕರುಣೇಶ್, ರಾಹುಲ್, ಶಿವ, ಶಶಾಂಕ, ದರ್ಶನ್ ಸೇರಿದಂತೆ ಇತರರ ವಿರುದ್ಧ ಎಸ್‌ಸಿ-ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ, ಕೊಲೆ ಯತ್ನ ಆರೋಪದಡಿ ಕನಕಪುರ ಟೌನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎನ್ನಲಾಗಿದ್ದು, ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಘಟನೆ ನಂತರ ಗ್ರಾಮದಲ್ಲಿ ಆತಂಕ ಮನೆ ಮಾಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕಾರ್ತಿಕ್ ರೆಡ್ಡಿ ಗ್ರಾಮಕ್ಕೆ ನೀಡಿ ಮಾಹಿತಿ ಪಡೆದಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ಕೈ ಕತ್ತರಿಸಿದ ಗುಂಪು:

ಆರೋಪಿ ಹರ್ಷ ಮತ್ತು ಸಂಗಡಿಗರು ಅಪರಾಧ ಹಿನ್ನೆಲೆ ಉಳ್ಳವರಾಗಿದ್ದು, 7 ಗಂಟೆಗೆ ನಡೆದ ಸಣ್ಣ ಗಲಾಟೆಗೆ ಪ್ರತೀಕಾರವಾಗಿ, ರಾತ್ರಿ ಒಂಬತ್ತು ಗಂಟೆಗೆ ಮಾರಕಾಸ್ತ್ರಗಳೊಂದಿಗೆ ಬಂದು ಹಲ್ಲೆ ನಡೆಸಿದ್ದಾರೆ.

ಭಾನುವಾರ ಸಂಜೆ ದಲಿತ ಸಮುದಾಯದ ಯುವಕರಿಬ್ಬರು ರಸ್ತೆಯಲ್ಲಿ ಮಾತನಾಡುತ್ತಾ ನಿಂತಿದ್ದರು. ಅದೇ ರಸ್ತೆಯಲ್ಲಿ ಹೊರಟಿದ್ದ ಒಕ್ಕಲಿಗ ಸಮುದಾಯದ ಯುವಕರ ಗುಂಪೊಂದು ರಸ್ತೆಯಲ್ಲಿ ಏಕೆ ನಿಂತಿದ್ದೀರಿ ಎಂದು ಜಗಳ ತೆಗೆದಿದ್ದಾರೆ. ನಂತರ, ರಾತ್ರಿ ದಲಿತರ ಎನ್.ಕೆ. ಕಾಲೊನಿಗೆ ನುಗ್ಗಿದ ಒಕ್ಕಲಿಗ ಸಮುದಾಯದ ಯುವಕರ ಗುಂಪು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ.

ಪ್ರಮುಖ ಆರೋಪಿ ಹರ್ಷ ರೌಡಿಶೀಟರ್ ಆಗಿದ್ದು, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ರಾಮನಗರ ಜಿಲ್ಲೆಯಿಂದ ಆತನನ್ನು ತುಮಕೂರಿಗೆ ಗಡಿಪಾರು ಮಾಡಲಾಗಿತ್ತು. ಈಗಲೂ ಆತನ ಮೇಲೆ ಗಡೀಡಿಪಾರು ಆದೇಶ ಚಾಲ್ತಿಯಲ್ಲಿದೆ ಎನ್ನಲಾಗಿದ್ದು, ಆಗಾಗ ಊರಿಗೆ ಬಂದು ಹೋಗುತ್ತಿದ್ದ. ಆತನೇ ತನ್ನ ಸಹಚರರೊಂದಿಗೆ ಈ ಕೃತ್ಯ ಎಸಗಿದ್ದಾನೆ ಎಂದು ಹಲ್ಲೆಗೊಳಗಾದ ಲಕ್ಷ್ಮಣ್‌ ದೂರಿನಲ್ಲಿ ತಿಳಿಸಿದ್ದಾರೆ.

ಪರಿಶಿಷ್ಟರೆ ಇವರ ಟಾರ್ಗೆಟ್: ಬಿಎಸ್‌ಪಿ ಮುಖಂಡ

ಪ್ರಕರಣ ಸಂಬಂಧ ಸಂತ್ರಸ್ತರ ಬೆಂಬಲಕ್ಕೆ ನಿಂತಿರುವ ಜಿಲ್ಲಾ ಬಿಎಸ್‌ಪಿ ಮುಖಂಡರಾದ ಮಲ್ಲಿಕಾರ್ಜುನ್ ಮಾತನಾಡಿ, “ಘಟನೆ ಹಿಂದೆ ಅತಿ ದೊಡ್ಡ ಜಾತಿ ವೈಷಮ್ಯ ಇದೆ; ಈಗ ಗಾಯಗೊಂಡಿರುವ ಕುಟುಂಬದ ಮೇಲೆ ಮಾತ್ರ ಹಲ್ಲೆ ನಡೆದಿಲ್ಲ. ಅಪರಾಧ ಎಸಗಿರುವ ಹರ್ಷ ಅಲಿಯಾಸ್ ಕೈಮ, ಕನ್ನು, ಪಿಂಗಿ ಮತ್ತು ಇತರೆ ಆರೋಪಿಗಳು ಪರಿಶಿಷ್ಟರನ್ನು ಟಾರ್ಗೆಟ್ ಮಾಡಿಕೊಂಡಿದ್ದಾರೆ. ರಾಜಕೀಯವಾಗಿ ಮುಂಚೂಣಿಯಲ್ಲಿರುವ ಸುಮಾರು ಹತ್ತಕ್ಕೂ ಹೆಚ್ಚು ಕುಟುಂಬಗಳನ್ನು ಗುರಿಯಾಗಿಸಿಕೊಂಡು ಹಲ್ಲೆ ನಡೆಸಿದ್ದಾರೆ” ಎಂದರು.

“ಹರ್ಷನನ್ನು ತುಮಕೂರು ಮತ್ತು ಶಿವಮೊಗ್ಗ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ; ಅಲ್ಲಿ ಆತ ಜಿಲ್ಲಾ ಎನ್‌ಡಿಪಿಎಸ್‌ ಮುಂದೆ ಪ್ರತಿದಿನ ಹಾಜರಾಗಿ, ಬೆಳಗ್ಗೆ-ಸಂಜೆ ಸಹಿ ಮಾಡಬೇಕು. ಅದನ್ನೆಲ್ಲಾ ಆತ ಧಿಕ್ಕರಿಸಿ ಜಿಲ್ಲೆಗೆ ಬಂದು ಅಪರಾಧ ಕೃತ್ಯಗಳನ್ನು ಎಸಗುತ್ತಿದ್ದಾನೆ. ಆತನ ಮೇಲೆ ಈಗಲೂ ಗಡಿಪಾರು ಆದೇಶ ಚಾಲ್ತಿಯಲ್ಲಿದ್ದು, ಸ್ಥಳೀಯ ಪೊಲೀಸರು ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಮೂಡುತ್ತಿದೆ. ಗಡಿಪಾರಾಗಿರುವ ಆರೋಪಿಯೊಬ್ಬ ಮೂರು ಜಿಲ್ಲೆಗಳನ್ನು ದಾಟಿಕೊಂಡು ಬಂದು ಅಪರಾಧ ಎಸಗುತ್ತಾನೆ ಎಂದರೆ ಇದರ ಅರ್ಥ ಏನು” ಎಂದು ಪ್ರಶ್ನಿಸಿದರು.

“ಹರ್ಷ ಮತ್ತು ಸಂಗಡಿಗರು ಇದೇ ಕಾಲೋನಿಯ ಹಲವು ವ್ಯಕ್ತಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಇವರು ಇಡೀ ಜಿಲ್ಲೆಯ ಪೊಲೀಸ್ ಇಲಾಖೆಗೆ ತೊಡಕಾಗಿದ್ದಾರೆ; ಅವರಿಗೆ ಯಾವುದೇ ಭಯವಿಲ್ಲ. ಇವೆಲ್ಲದರ ಮಧ್ಯೆ ಜೀವ ಹೋಗುತ್ತಿರುವುದು ಪರಿಶಿಷ್ಟರದ್ದು, ಇಡೀ ಗ್ರಾಮದಲ್ಲಿ ಆತಂಕದ ವಾತಾವರಣ ಇದೆ” ಎಂದು ಹೇಳಿದರು.

ಇದನ್ನೂ ಓದಿ; ನೀಟ್ ಪರೀಕ್ಷೆ ವಿವಾದ: ಡಿಲಿಮಿಟೇಶನ್ ವಿರುದ್ಧದ ನಿರ್ಣಯಕ್ಕೆ ಒಪ್ಪಿಗೆ ಕೊಟ್ಟ ಕ್ಯಾಬಿನೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...